ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಬೇಟಿ
ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಬೇಟಿ ನೀಡಿದರು.ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.ರಕ್ತ ಪರೀಕ್ಷಾ ಕೇಂದ್ರ,ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲಿಸಿದರು.ವೈದ್ಯಾಧಿಕಾರಿ ಡಾ.ರಮೇಶ್ ರವರನ್ನು ಬೇಟಿ ಮಾಡಿ ತಾಲೂಕಿನಾಧ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಮುಂಜಾಗೃತಾ ಕ್ರಮವಹಿಸುವಂತೆ ತಿಳಿಸಿದರು. ತಾಲೂಕಿನಲ್ಲಿ 19 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು. ರೋಗಿಗಳಿಗೆ ನೀಡಲು ಔಷದ ಕೊರತೆಯ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಕೊರತೆ ಇಲ್ಲ ಹೆಚ್ಚುವರಿಯಾಗಿ ತರಿಸಿದ್ದೇವೆ ಎಂದು ತಿಳಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ...
ಬೆಳ್ತಂಗಡಿ : ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಅಯ್ಕೆ
ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.
ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ
ಬೆಳ್ತಂಗಡಿ; ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಸಭೆ, ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 20.06.25 ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇಲಾಖಾ ಭೇಟಿ ಮೂಲಕ ಜಾಲಬಂಧ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಒಕ್ಕೂಟದ ಅಧ್ಯಕ್ಷರಾದ ಮಂಜುಳಾರವರು ಒಕ್ಕೂಟದ ವತಿಯಿಂದ ಮಾಡಬಹುದಾದ ಕೆಲಸಗಳ ಬಗ್ಗೆ ತಿಳಿಸಿದರು. ಬಳಿಕ ಸಮೂದಾಯ ಆರೋಗ್ಯ ಕೇಂದ್ರ...
ಉಪ್ಪಿನಂಗಡಿ; ನದಿ ದಡದಲ್ಲಿ ಕಾಣಿಸಿಕೊಂಡ ಮೊಸಳೆ, ನೋಡಲು ಹೋದ ಜನರತ್ತ ನುಗ್ಗಿದ ಮೊಸಳೆ
ಉಪ್ಪಿನಂಗಡಿ; ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದ್ದು ಮೊಸಳ ನೋಡಲು ಹೋದವರನ್ನು ಕಂಡು ಮೊಸಳೆಯು ಬಾಯಗಲಿಸಿ ಆಕ್ರಮಣಕಾರಿಯಂತೆ ಇವರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಇಂದು ಸಂಜೆ ನಡೆದಿದೆ. ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ಮಕ್ಕಳು ದೂರದಿಂದ ಕಂಡಿದ್ದರು ನದಿ ದಡದಲ್ಲಿ ಏನೋ ಮಲಗಿದೆ ಎಂದು ಮಕ್ಕಳು ಸ್ಥಳೀಯ ನಿವಾಸಿಗಳಾದ ಅಝೀಝ್ ಪಿಟಿ ಹಾಗೂ ಇತರರಲ್ಲಿ ತಿಳಿಸಿದ್ದು ಅವರು ಅದೇನೆಂದು...
ಬೆಳ್ತಂಗಡಿ : ಓಡಿನ್ನಾಳದಲ್ಲಿ ಜುಗಾರಿ ಆಟ; 9 ಮಂದಿ ಬಂಧನ
ಬೆಳ್ತಂಗಡಿ : ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಗೆ ಜೂ.17 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ. ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ...
ಬೆಳ್ತಂಗಡಿ; ಪತ್ನಿಯೊಂದಿಗೆ ಜಗಳ ಪತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ತೆಂಕ ಕಾರಂದೂರು ಕಾಪಿನಡ್ಕದ ಓಡದಕರಿಯ ಎಂಬಲ್ಲಿ ವ್ಯಕ್ತಿಯೊಬ್ಬ ಮನೆಯೊಳಗೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ಧರ್ಣಪ್ಪ ಕನಡ (64)ಎಂಬಾತನಾಗಿದ್ದಾನೆ. ಈಬಗ್ಗೆ ಈತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದು ಪತಿ ಧರ್ಣಪ್ಪ ಎಂಬವರು ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದು ಜೂನ್ 17ರಂದು ಸಂಜೆ 4ಗಂಟೆಯ ಸುಮಾರಿಗೆ ವಿಪರೀತ ಶರಾಬು ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಗಲಾಟೆ ಮಾಡಿ ಹೆಂಡತಿಯನ್ನು ಮನೆಯಿಂದ ಹೊರಹಾಕಿ ಬೀಗ ಹಾಕಿಕೊಂಡಿದ್ದಾರೆ. ಸಂಜೆಯ...
ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ನೇಮಕ
ಬೆಳ್ತಂಗಡಿ; ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಐ.ಎ.ಎಸ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಡಾ.ಹೆಗ್ಗಡೆಯವರಿಂದ ಚಾಲನೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು.ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ೯೬ ತಾಲ್ಲೂಕುಗಳಲ್ಲಿ 44119 ರೈತರನ್ನು ಪ್ರೇರೆಪಿಸಿ 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದರು.
ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮದರಸ ನಿರ್ಮಾಣ ಯೋಜನೆಯಡಿಯಲ್ಲಿ ಗುರುವಾಯನಕೆರೆ ಸಮೀಪದ ಪೆರಳ್ದರಕಟ್ಟೆಯ ಕಾಂತಿಜಾಲ್ ಎಂಬಲ್ಲಿ ನಿರ್ಮಾಣಗೊಂಡ ಎಸ್ ಎಂ ಎ 3ನೇ ಮದರಸದ ಉದ್ಘಾಟನೆ ನಡೆಯಿತು.ಎಸ್ ಎಂ ಎ ರಾಜ್ಯ ಸಮಿತಿಯ ಅಧ್ಯಕ್ಷರಾದ ಸೆಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ನೂತನ ಮದರಸ ಕಟ್ಟಡವನ್ನು ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ಉದ್ಘಾಟಿಸಿದರು. ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ ಜೆ...
ಬಂದಾರು; ಮುಂಡೂರಿನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ; ಶಾಸಕ ಹರೀಶ್ ಪೂಂಜ ಭೇಟಿ
ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು ಮರ, ಹಾಗೂ ಗುಡ್ಡ ಕುಸಿದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ,ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,...















