ಬೆಳ್ತಂಗಡಿ; ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಅಂಬುಲೆನ್ಸ್ ಲೋಕಾರ್ಪಣೆ ಸಾಧಕರಿಗೆ ಸನ್ಮಾನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ 'ಟ್ರಸ್ಟ್‌ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಸಂಭ್ರಮದಿಂದ ನಡೆಯಿತು. ಮಂಗಳೂರು ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡುತ್ತಾ ರಾಜ್ಯದಲ್ಲಿ ಒಕ್ಕಲಿಗ ಸಮಾಜ ದೊಡ್ಡ ಸಮುದಾಯವಾಗಿದೆ ಸಮುದಾಯಸ್ವಾಭಿಮಾನ ಬೆಳೆಸಿಕೊಂಡು ವ್ಯಕ್ತಿಯ ಚಿಂತನೆ, ಸಮಾಜದ ಚಿಂತನೆ ಸಮಾಜಮುಖಿಯಾಗಿ...

ಸಿ.ಇ.ಟಿ ಫಲಿತಾಂಶ; ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

0

ಬೆಳ್ತಂಗಡಿ;  ಇಂಜಿನಿಯರಿಂಗ್ , ನ್ಯಾಚುರೋಪತಿ, ಫಾರ್ಮಸಿ, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ - ಸಿ ಇ ಟಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.ಪ್ರವಣ್ ಪೊನ್ನಪ್ಪ - 18, ನಿಶಾನ್ ಜೈನ್- 160, ಕೃಪಾ ಸಾಂಚಿ ಮೌರ್ಯ - 436,ಅನುಷ್ ಬಿ - 482, ಸಫ್ವಾನ್ -572 ,ಅನುಜ್ ಕೆ ಎಸ್ - 596, ಪ್ರತೀಕ್ಷಾ ಎಸ್ - 616, ಶಾಂತವ್ವ...

ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ಉತ್ಸವ

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು.ಧ್ವಜಮರ ಅವರೋಹಣ ನಡೆಯಿತು.ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.ಧರ್ಮಸ್ಥಳ ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ಶನಿವಾರ ಸಂಜೆ ಬಿಡಾರದ ಮಣೆಗಾರರ ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.ಕ್ಷೇತ್ರದ ಆನೆಗಳು, ಬಸವ, ಹೂವಿನ ಕೋಲು, ವಾದ್ಯ ಮೇಳ, ಚೆಂಡೆ ಮೇಳ, ಶಂಖ-ಜಾಗಟೆ ವಾದನ ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿತು.ದೇವಸ್ಥಾನದ ಎದುರು ದರ್ಶನ ಸೇವೆ ನಡೆಸಿದ ಬಳಿಕ...

ಬೆಳ್ತಂಗಡಿ; ತಾಲೂಕಿನಲ್ಲಿ ಭಾರೀ ಮಳೆ; ಪಾರಂಕಿಯಲ್ಲಿ ತಡೆಗೋಡೆ ಕುಸಿತ ಮನೆಗೆ ಹಾನಿ

0

ಬೆಳ್ತಂಗಡಿ; ತಾಲೂಕಿನಾದ್ಯಂತ ಶನಿವಾರ  ಭಾರೀ ಮಳೆ ಸುರಿಯುತ್ತಿದೆ.ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು ಇಂದು ಮಳೆಯ ತೋವ್ರತೆ ಹೆಚ್ಚಾಗಿದೆ.ಭಾರೀ ಮಳೆಗೆ ಪಾರೆಂಕಿ ಗ್ರಾಮದ ಹುಪ್ಪ ಎಂಬಲ್ಲಿನನಿವಾಸಿ ನಝೀರ್ ಎಂಬವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದ್ದು ಮನೆಯ ಸುತ್ತ ಮಣ್ಣು ತುಂಬಿಕೊಂಡಿದೆ. ಸಮೀಪದ ಮನೆಗಳಿಗೂ ಸಮಾಸ್ಯೆಯುಂಟಾಗಿದೆ ಘಟನಾ ಸ್ಥಳಕ್ಕೆ  ಇಲಾಖಾಧಿಕಾರಿಗಳು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ; ಹವಾಮಾನ ಇಲಾಖೆ ಮಾಹಿತಿ

0

ಹೊಸದಿಲ್ಲಿ: ಮಾಮೂಲಿಗಿಂತ ಮೊದಲೇ ಈ ಬಾರಿ ಮುಂಗಾರು ಪ್ರವೇಶ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್‌ ಪ್ರವೇಶಿಸಲಿದೆ. ಮಾನ್ಸೂನ್ ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ಅಭಿವೃದ್ಧಿಗೊಂಡಿದ್ದು, ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. 2001 ಮತ್ತು 2009ರಲ್ಲಿ ಮೇ ಅಂತ್ಯದೊಳಗೆ ಕೇರಳಕ್ಕೆ ಮುಂಗಾರು...

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿಯಾಗಿ ನಮಿತಾ ಪೂಜಾರಿ ನೇಮಕ

0

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.

ಉಜಿರೆ; ಅನುಗ್ರಹ ಶಾಲೆಯ ವಿಧ್ಯಾರ್ಥಿನಿ ಶಾರಾನ್ ಡಿಸೋಜ ರಾಜ್ಯಕ್ಕೆ ದ್ವಿತೀಯ ರ್ಯಾಂಕ್

0

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾರಾನ್ ಡಿಸೋಜಾ ಎಸ್.ಎಸ್.ಎಲ್.ಸಿ ಯಲ್ಲಿ625ರಲ್ಲಿ623 ಅಂಕಗಳಿಸಿದ್ದರು. ಮರು ಮೌಲ್ಯಮಾಪನದಲ್ಲಿ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಹೆಚ್ಚುವರಿ ಪಡೆದು624 ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ರಾಂಕ್ ಪಡೆದಿದ್ದಾರೆ. ರಾಜ್ಯಕ್ಕೆ ತೃತೀಯ ರ್ಯಾಂಕ್ ತಾಲೂಕಿಗೆ ಪ್ರಥಮ ರಾಂಕ್ ಪಡೆದಿದ್ದ ಈಕೆ ಇದೀಗ ರಾಜ್ಯಕ್ಕೆ ದ್ವಿತೀಯ ಬ್ಯಾಂಕ್, ತಾಲೂಕಿಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇವರ ಅಮೋಘ ಸಾಧನೆಗೆ ಶಾಲಾ ಸಂಚಾಲಕರಾದ ಫಾ.ಅಬೇಲ್ ಲೋಬೊ, ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ರಿಕ್ಷಾ-ಪಿಕಪ್ ಡಿಕ್ಕಿ ಇಬ್ಬರಿಗೆ ಗಂಭೀರ ಗಾಯ

0

ಬೆಳ್ತಂಗಡಿ;  ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ಲು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ರಿಕ್ಷಾ ಮತ್ತು ಪಿಕಪ್ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ರಿಕ್ಷಾ ಚಾಲಕ ಮುಂಡಾಜೆ ಗ್ರಾಮದ ಮೂಲಾರು ನಿವಾಸಿ ಕುಶಾಲಪ್ಪ ದೇವಾಂಗ( 42) ಅವರ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪಿಕಪ್ ನಲ್ಲಿದ್ದ ಕೊಕ್ಕಡದ ಡೀಕಯ್ಯ (43) ಎಂಬವರಿಗೆ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ...

ಶಿಬಾಜೆ; ಜಾತಿನಿಂದನೆ ಮಾಡಿ ಕೊಲೆಬೆದರಿಕೆ, ಆರೋಪಿಗಳಿಬ್ಬರ ಬಂಧನ

0

ಬೆಳ್ತಂಗಡಿ; ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಎಂಬವರಾಗಿದ್ದಾರೆ.ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೆಲೆ ಸ್ಥಳೀಯ ನಿವಾಸಿ ಪ್ರವೀಣ್ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಹಾಗೂ ತಿಮ್ಮಪ್ಪ ಪೂಜಾರಿ ಕಬ್ಬಿಣದ ಸಲಾಕೆಯನ್ನು ಹಿಡಿದು ಕೊಂಡು ಅವಾಚ್ಯವಾಗಿ ನಿಂದಿಸಿ ಜಾತಿ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ವಿರುದ್ದದ ಎಫ್.ಐ.ಆರ್ ಹೈಕೋರ್ಟ್ ನಿಂದ ತಾತ್ಕಾಲಿಕ ತಡೆ

0

ಬೆಂಗಳೂರು; ಕೋಮು ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೇಲಿನ ಆದೇಶ ನೀಡಿದೆ. ವಿಚಾರಣೆ ವೇಳೆ ಹರೀಶ್ ಪೂಂಜಾ ಪರ ವಕೀಲರು ವಾದ ಮಂಡಿಸಿ, ಇಡೀ ದೂರನ್ನು ಓದಿದರೆ ದಾಖಲಿಸಿರುವ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ. ಧರ್ಮಗಳ ನಡುವೆ ದ್ವೇಷ ಹರಡುವಂಥ ಕೆಲಸವನ್ನು ಪೂಂಜಾ ಅವರು ಮಾಡಿಲ್ಲ....