ಭಾರೀ ಮಳೆ ಮುನ್ಸೂಚನೆ; ಮೇ 23ರವರೆಗೂ ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ, ಬೆಳಗ್ಗಿನಿಂದಲೇ ಆರಂಭವಾದ ಮಳೆ
ಬೆಳ್ತಂಗಡಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲಾಡಳಿತ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲಿಯೇ ಜಿಲ್ಲೆಯಾದ್ಯಂತ ಭಾರೀ ಮಳೆ ಆರಂಭಗೊಂಡಿದೆ.ಮೇ 23 ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಮಂಗಳವಾರ ಬೆಳಗ್ಗಿನಿಂದಲೇ ಭಾರೀ ಮಳೆ;ಬೆಳ್ತಂಗಡಿ ತಾಲೂಕಿನಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ನಿರಂತರ ಮಳೆ ಸುರಿಯುತ್ತಿದೆ. ಸೋಮವಾರ ರಾತ್ರಿಯೇ ಮಳೆ ಆರಂಭಗೊಂಡಿದ್ದು ಮಂಗಳವಾರ ಬೆಳಗ್ಗಿನ ವೇಳೆಗೆ ಬಿರುಸು ಪಡೆದುಕೊಂಡಿದೆ. ಮೇ 21 ಹಾಗೂ 22 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಅಪಾಯವಿದೆ.ಮಳೆ ಮುನ್ಸೂಚನೆ...
ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸ ಸುರೇಂದ್ರ ಆರೋಪ
ಬೆಳ್ತಂಗಡಿ; ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್ ಆರೋಪಿಸಿದ್ದಾರೆ.ಆಕಾಂಕ್ಷ ಸಾವನ್ನಪ್ಪಿದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಂದೆ ಹಾಗು ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಹಜ ಸಾವಜನ ಬಗ್ಗೆ ಅನುಮಾನವಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು.ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆರ್ ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ...
ಪಂಜಾಬಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷ ಆತ್ಮಹತ್ಯೆ; ಪೊಲೀಸ್ ತನಿಖೆಯಲ್ಲಿ ಬಹಿರಂಗ
ಬೆಳ್ತಂಗಡಿ : ಧರ್ಮಸ್ಥಳ ಮೂಲದ ಏರೋನಾಟಿಕ್ಸ್ಇಂಜಿನಿಯರ್ ನಿಗೂಢ ಸಾವು ಪ್ರಕರಣ ಇದೀಗ ಬಿಗ್ ಟ್ವಿಸ್ಟ್ ಪಡೆದಿದ್ದು ಆಕೆ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ. ಧರ್ಮಸ್ಥಳದ ಬೋಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿ ಮಗಳು ಆಕಾಂಕ್ಷ ಎಸ್ ನಾಯರ್ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ ಯುವತಿ. ಮೇ 17ರಂದು ಪಂಜಾಬ್ ನ ಯುನಿವರ್ಸಿಟಿ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂಬ ಮಾಹಿತಿ ಲಭ್ಯವಾಗುತ್ತಿದ್ದು ಎಲ್ ಪಿ ಯುನಿವರ್ಸಿಟಿಯ ಪ್ರೊಫೆಸರ್...
ಯುವ ವಾಹಿನಿ ವೆಣೂರು ಘಟಕದಿಂದ ಸೇವಾ ನಿಧಿ ಹಸ್ತಾಂತರ
ಬೆಳ್ತಂಗಡಿ; ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಅಂಡಿಂಜೆ ಗ್ರಾಮದ ಕೋಡಿ ದರ್ಖಾಸು ಮನೆಯ ಸುಜಿತ್ ಪೂಜಾರಿಯವರು ಕಾಶೀಪಟ್ಣ ದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿ ತಲೆಗೆ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತಿದ್ದು, ಘಟಕದ ವತಿಯಿಂದ ಸೇವಾ ನಿಧಿ ರೂಪಾಯಿ 10,000ಯನ್ನು ಅಧ್ಯಕ್ಷರಾದ ಶುಭಕರ್ ಪೂಜಾರಿ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್, ನಾಮನಿದೇಶನ ಸದಸ್ಯರಾದ ಸುರೇಶ್ ಅಂಡಿಂಜೆ, ಬೆಳ್ತಂಗಡಿ ಯುವವಾಹಿನಿ...
ವಾಯುಭಾರ ಕುಸಿತ; ದ.ಕ ಸೇರಿದಂತೆ 11 ಜಿಲ್ಲೆಗಳಲ್ಲಿ ಮೇ19 ರಿಂದ 22ರ ವರೆಗೆ ಭಾರೀ ಮಳೆ ನಿರೀಕ್ಷೆ; ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯಾದ್ಯಾಂತ ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಬೆಂಗಳೂರು ವಿಭಾಗ ಮಾಹಿತಿ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕರಾವಳಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೇ 18 ರಿಂದ 22ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೇ 18 ರಿಂದ...
ಗುಂಡ್ಯ ಕೆ.ಎಸ್.ಆರ್. ಟಿ.ಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ
ಬೆಳ್ತಂಗಡಿ; ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ. ಬೆಳಾಲು ನಿವಾಸಿಯಾಗಿರುವ ಬಸ್ ಚಾಲಕ, ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವಿವರ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು, ಗುಂಡ್ಯ ಪೇಟೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಅಪಾಯಕಾರಿ ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು...
ಚಾರ್ಮಾಡಿ ಜಲಾಲಿಯ್ಯ ನಗರ ಮದ್ರಸದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ
ಚಾರ್ಮಾಡಿ. ಮನುಷ್ಯರನ್ನು ಪೈಶಾಚಿಕ ಪ್ರವೃತ್ತಿಗಳ ದಾಸರಾಗಿಸುತ್ತಿರುವ ಮಾದಕ ದ್ರವ್ಯಗಳ ವಿರುದ್ಧದ ಹೋರಾಟ ಆಡಳಿತ ವರ್ಗದ ಕಣ್ಣು ತೆರೆಸುವಷ್ಟು ತೀಕ್ಷ್ಣ ರೀತಿಯಲ್ಲಿ ನಡೆಯಬೇಕಾದದ್ದು ಇಂದಿನ ಅನಿವಾರ್ಯತೆಗಳಲ್ಲೊಂದಾಗಿದೆ ಎಂದು ಚಾರ್ಮಾಡಿ ಜಲಾಲಿಯ್ಯ ನಗರ ಮುಖ್ಯ ಅಧ್ಯಾಪಕರಾದ ಹಾರಿಸ್ ಹನೀಫಿ ಕುಂಡಡ್ಕ ಹೇಳಿದ್ದಾರೆ.ಅವರುಚಾರ್ಮಾಡಿ ಇಝ್ಝತುಲ್ ಇಸ್ಲಾಂ ಮದ್ರಸ ವತಿಯಿಂದ ನಡೆದ ಮಾದಕ ದ್ರವ್ಯ ವಿರೋಧಿ ಅಭಿಯಾನದಲ್ಲಿ ಮಾತನಾಡುತ್ತಿದ್ದರು. ಸಣ್ಣ ಪ್ರಾಯದ ಮಕ್ಕಳು ವಿದ್ಯಾರ್ಥಿಗಳು ಮತ್ತು ಯುವ ಜನತೆ ಮಾದಕ ವಸ್ತುಗಳ ಹಿಂದೆ ಬಿದ್ದು ಮನೆಗೂ ಊರಿಗೂ ಸವಾಲಾಗಿ ಪರಿಣಮಿಸಿದ್ದು ಎಲ್ಲಾ ಮಸೀದಿ, ಮಂದಿರ,ಚರ್ಚ್ ಗಳು ಸಹಿತ ಎಲ್ಲಾ ಸಂಘ...
ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು...
ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ. 17ರಂದು ಬೆಳಿಗ್ಗಿನ ಸಮಯ ಮಲಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಘಾನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
ನಿಡ್ಲೆ ನಿವಾಸಿ ಎಸ್.ಕೆ. ಡಿ.ಆರ್ ಡಿ. ಪಿ ಉದ್ಯೋಗಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಮಕ್ಕಳು ತಾಯಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.














