ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ

0

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಮಾಲಾಡಿ; ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

0

ಬೆಳ್ತಂಗಡಿ: ಮಾಲಾಡಿ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ‌. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಯರ್ತಡ್ಕ; ಅಕ್ರಮ ದನ ಸಾಗಾಟ ಪತ್ತೆ ಇಬ್ಬರ ಬಂಧನ

0

ಬೆಳ್ತಂಗಡಿ; ತಾಲೂಕಿನ ಕಾಯರ್ತಡ್ಕದಲ್ಲಿ ಅಟೋ ರಿಕ್ಷಾ ದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳದ ದನ ಸಾಗಾಟಕ್ಕೆ ಉಪಯೋಗಿಸಿದ ರಿಕ್ಷಾ ಹಾಗೂ ದನಗಳನ್ನು ವಶಕ್ಕೆ ಪಡೆಯಲಾಗಿದೆ‌. ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

0

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು,ಸದಸ್ಯರಾಗಿ ಹರಿಶ್ಚಂದ್ರ ಹೆಗ್ಡೆ, ಶ್ರೀಮತಿ ನೀತಾ ಮಹೇಶ್ ಕುಮಾರ್, ಶ್ರೀಮತಿ ಪುಷ್ಪಾ ಶೆಟ್ಟಿ, ಅಶೋಕ್ ಕುಮಾರ್ ಕೊಡಕ್ಕಲ್, ರುಕ್ಮಯ ನಾಯ್ಕ, ರಮೇಶ್ ದೇವಾಡಿಗ, ಪುರಂದರ ಆಚಾರ್ಯ ಮತ್ತು ಅರ್ಚಕರಾಗಿ ಅರವಿಂದ ಭಟ್ ನೇಮಕವಾಗಿದ್ದಾರೆ.

ನೆರಿಯ; ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

0

ಬೆಳ್ತಂಗಡಿ; ನೆರಿಯ ಗ್ರಾಮದ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ. ಫಾತಿಮತ್ ರಂಝೀನ್ ರವರ ದೂರಿನಂತೆ ಧರ್ಮಸ್ಥಳ ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ.ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೊಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿರುವುದುಕಂಡುಬಂದಿದೆ. ಗೋದ್ರೆಜ್...

ತಣ್ಣೀರುಪಂತ; ಏಳನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ; 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ತಾಲೂಕಿನ ತಣ್ಣೀರು ಪಂಥ ಗ್ರಾಮದಲ್ಲಿ ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಫೆಬ್ರವರಿ 18ರಂದು ರಾತ್ರಿ ಮಲಗುವ ಕೋಣೆಯಲ್ಲಿ ಒಳಗಿನಿಂದ ಚಿಲಕ ಹಾಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮನೆಯವರು ಇದನ್ನು ಗಮನಿಸಿದ್ದು ಕೊಠಡಿಯ ಬಾಗಿಲನ್ನು ಒಡೆದು ಬಾಲಕನನ್ನು ನೇಣಿನಿಂದ ಕೆಳಗಿಳಿಸಿ ಆಸ್ಪತ್ರಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ...

ನಗರ ಪ್ರದೇಶದ ಜನರಿಗೆ ನೆರವಾಗಲು, ‘ಬಿ’ ಖಾತಾ ನೀಡುವ ರಾಜ್ಯ ಸರಕಾರದ ಐತಿಹಾಸಿಕ ನಿರ್ಧಾರ; ರಕ್ಷಿತ್ ಶಿವರಾಂ

0

ಬೆಳ್ತಂಗಡಿ : ‘ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆ ಹಾಗೂ ಭೂ ಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡುವ ಐತಿಹಾಸಿಕ ನಿರ್ಧಾರವನ್ನು ಸಿದ್ದರಾಮಯ್ಯ ಸರ್ಕಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಮತ್ತೆ ಬಡವರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದೆ. ಇದರಿಂದ ರಾಜ್ಯದ 33 ಲಕ್ಷ ಕುಟುಂಬಗಳ ಜತೆ ಬೆಳ್ತಂಗಡಿ ನಗರ ವಾಸಿಗಳ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...

ನೆರಿಯ; ಸುಂದರ ಮಲೆಕುಡಿಯ ಕೈ ಕಡಿದ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಬೆಳ್ತಂಗಡಿ: ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗೋಪಾಲ ಗೌಡ ಯಾನೆ ಗೋಪಾಲಕೃಷ್ಣ ಗೌಡ, ಮಂಗಳೂರಿನ ಕುಡುಪು ಪಾಲ್ಡನೆಯ ಎ.ದಮಯಂತಿ, ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ವಸಂತ ಗೌಡ ಯಾನೆ ರಾಮಣ್ಣ ಗೌಡ, ನೆರಿಯ ಗ್ರಾಮದ ಪುಷ್ಪಲತಾ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.ಆರೋಪಿ ಗೋಪಾಲ...

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

0

ಬೆಳ್ತಂಗಡಿ;  ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ, ಕೆ ಪೀ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೊ, ವಕೀಲರ ಸಂಘದ ಉಪಾಧ್ಯಕ್ಷರಾದ ಅಶೋಕ್ ಕರಿಯನೆಲ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ,...

ಗ್ರಾಮ ಆಡಳಿತಾ ಧಿಕಾರಿಗಳ ಬೇಡಿಕೆಗಳನ್ನು ಸರಕಾರ ಕೂಡಲೇ ಸ್ಪಂದಿಸಬೇಕು; ಬಿ.ಎಂ ಭಟ್

0

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ 10.02.2025 ರಿಂದ ಹೋರಾಟ ನಡಸುತ್ತಿದ್ದರೂ, ಸರಕಾರ ತನ್ನ ಜಾಣ ಮೌನವನ್ನು ಅನುಸರಿಸುತ್ತಿರವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಅಭಿಪ್ರಾಯ ಪಡಿಸಿದೆ ಎಂದು ಪಕ್ಷದ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆಗ್ರಾಮ ಆಡಳಿತಾದಿಕಾರಿಗಳ ಹೋರಾಟವನ್ನು ಬೆಂಬಲಿಸಿ ಹೇಳಿಕೆ ನೀಡಿದ ಅವರು ಕಂದಾಯ ಇಲಾಖೆಯ ಬಹುಮುಖ್ಯ ಅಂಗವಾದ ಗ್ರಾಮ ಆಡಳಿತಾದಿಕಾರಿಗಳು ಮುಷ್ಕರ ನಡೆಸುತ್ತಿರುವುದರಿಂದ ಜನರ ದಿನ ನಿತ್ಯದ ಅಗತ್ಯ ಸೇವೆಗಳಿಗೆ ಸಮಸ್ಯೆಗಳಾಗಿವೆ. ಜನರ ಈ ಸಮಸಗಯೆಗಳಿಗೆ ಸರಕಾರದ ನಿರ್ಲಕ್ಷತನವೇ ಕಾರಣವಾಗಿದೆ ಎಂದವರು...