ಧರ್ಮಸ್ಥಳ; ಹತ್ತನೇ ತರಗತಿ ವಿಧ್ಯಾರ್ಥಿ ಹೃದಯಾಘಾತದಿಂದ ನಿಧನ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ಜೋಡುಸ್ಥಾನ‌ ನಿವಾಸಿ ಹತ್ತನೇ ತರಗತಿಯ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಬಾಲಕ ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16ವ) ಎಂಬಾತನಾಗಿದ್ದಾನೆ.ಮೇ 4 ಭಾನುವಾರದು ಮಧ್ಯಾಹ್ನದ ವೇಳೆ ಮನೆಯ ಸಮೀಪ‌ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಸಮಾಜಿಕಜಾಲತಾಣದಲ್ಲಿ ಕೋಮುಪ್ರಚೋದನೆ  ಯುವಕನ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ. ಧನುಷ್, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ಧಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ದಿನಾಂಕ:04-05-2025 ರಂದು ಆತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1) (A), 353(1)(C) BNS-2023 3 ರಂತೆ ಪ್ರಕರಣ‌ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಶಾಸಕ‌ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು

0

ಉಪ್ಪಿನಂಗಡಿ: ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ಷೇಷ ಭಾಷಣವನ್ನು ಮಾಡಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ಶಾಸಕ ಹರೀಶ್ ಪೂಂಜ‌ವಿರುದ್ದ ಪ್ರಕರಣ‌ದಾಖಲಿಸಿಕೊಂಡಿದ್ದಾರೆ.ದ್ವೇಷ ಭಾಷಣ ಸಂಬಂಧ ಸ್ಥಳೀಯ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಯಾರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು, ದೂರಿನ‌ ಅನ್ವಯಬಿಎನ್ ಎಸ್ ಕಾಯ್ದೆ ಕಲಂ 196, 353(2) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ತೆಕ್ಕಾರು...

ಸುಹಾಸ್ ಕೊಲೆ ಪ್ರಕರಣ; ಫಾಜಿಲ್ ಸಹೋದರ ಸೇರಿ ಎಂಟು ಮಂದಿ ಬಂಧನ

0

ಮಂಗಳೂರು: ಬಜಪೆಯ ಸುಹಾಸ್‌ ಶೆಟ್ಟಿ ಕೊಲೆಗೆ ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್‌ನ ಸಹೋದರ ಸಹಾಯ ಮಾಡಿದ್ದ ಎಂಬ ವಿಚಾರವನ್ನು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬಹಿರಂಗಪಡಿಸಿದ್ದಾರೆ. ಮೇ 1ರ ರಾತ್ರಿ ಆರು ಜನ ಸೇರಿ ಸುಹಾಸ್ ಶೆಟ್ಟಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಹತ್ಯೆಯ ಪ್ರಮುಖ ಆರೋಪಿ ಸಫ್ವಾನ್. ಆತನ ಮೇಲೆ 2023ರಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು, ಇದರ ಪ್ರತೀಕಾರಕ್ಕೆ ಫಾಜಿಲ್‌ ನ ತಮ್ಮನ ಸಹಾಯ ಪಡೆದು ಸುಹಾಸ್‌ ನ ಕೊಲೆ ಮಾಡಿದ್ದ ಎಂದರು. ಪೇಜಾವರ ಶಾಂತಿಗುಡ್ಡೆ ನಿವಾಸಿ,‌ ಬಜಪೆ ಕಿನ್ನಿಪದವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಡ್ರೈವರ್...

ನಂದ ಸ್ಟುಡಿಯೋ ಮಾಲಕ ನಂದಕುಮಾರ್ ನಿಧನ

0

ಉಜಿರೆ : ಉಜಿರೆ ನಂದ ಸ್ಟುಡಿಯೋ ಮಾಲಕ ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ (52 ವರ್ಷ )ಅಲ್ಪ ಕಾಲದ ಅಸೌಖ್ಯದಿಂದ ಮೇ 3 ರಂದು ನಿಧನರಾದರು. ಇವರು ಉಜಿರೆ ಹಳೆಪೇಟೆ ನಿವಾಸಿ ಯಾಗಿದ್ದು ಕಳೆದ ಕೆಲವು ವರ್ಷದ ಹಿಂದೆ ಉಜಿರೆ ಬಾಕ್ರೋಟ್ಟು ಎಂಬಲ್ಲಿ ಮನೆ ಕಟ್ಟಿ ವಾಸವಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಬೆಳ್ತಂಗಡಿ: ತಾಲೂಕಿನಲ್ಲಿ ಬಂದ್ ಗೆ ಜನಜೀವನ ಅಸ್ತವ್ಯಸ್ತ, ಬಸ್ಸಿಗೆ ಕಲ್ಲು, ಟಯರ್ ಗೆ ಬೆಂಕಿ

0

ಬೆಳ್ತಂಗಡಿ; ತಾಲೂಕಿನಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು ಖಾಸಗಿ ವಾಹನಗಳು ಎಂದಿನಂತೆ ಓಡಾಟ ನಡೆಸಿದವು.ತಾಲೂಕಿನಲ್ಲಿ ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಂದ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಕಕ್ಕಿಂಜೆ, ಮುಂಡಾಜೆ, ಹಾಗೂ ಗೇರುಕಟ್ಟೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿದ್ದಾರೆ.ಬಸ್ಸಿಗೆ ಕಲ್ಲು;ಗುರುವಾಯನಕೆರೆ ಜೈನ್ ಪೇಟೆ ಸಮೀಪ ಖಾಸಗಿ ಬಸ್ಸಿಗೆ ಕಲ್ಲು ಹೊಡೆಯಲಾಗಿದ್ದು ಬಸ್ಸಿನ ಮುಂದಿನ ಗಾಜು ಸಂಪೂರ್ಣ ಒಡೆದು ಹೋಗಿದೆ.ಉಳಿದಂತೆ ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ, ಮಡಂತ್ಯಾರು, ಅಳದಂಗಡಿ, ಕೊಕ್ಕಡ ಧರ್ಮಸ್ಥಳ ಸೇರಿದಂತೆ ಬಹುತೇಕ ಪ್ರದೇಶ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಒತ್ತಯಾ

0

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲಿಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್ ಆಗ್ರಹಿಸಿದ್ದಾರೆ.ರಾತ್ರಿ ಹೊತ್ತು ತನ್ನ ಸ್ನೇಹಿತರ ಜೊತೆ ಬರುತ್ತಿದ್ದ ಸುಹಾಸ್ ಶೆಟ್ಟಿಯವರನ್ನು ದುಷ್ಕರ್ಮಿಗಳ ತಂಡ ರಸ್ತೆಯಲ್ಲಿ ಮಾರಾಕಾಯುಧಗಳಿಂದ ಹಲ್ಲೆ ನಡೆಸಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಒಬ್ಬ ಹಿಂದೂ ಕಾರ್ಯಕರ್ತನನ್ನು ವಿನಾಕಾರಣ ಹತ್ಯೆ ಮಾಡಿರುವಂತಹದ್ದು ಖಂಡಿತ ಹಿಂದೂ...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಎನ್.ಐ.ಎ ಗೆ ಒಪ್ಪಿಸಿ ಶಾಸಕ ಹರೀಶ್ ಪೂಂಜ ಒತ್ತಾಯ

0

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯಕ್ಕೆ ನೇರ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರ ಕಾರಣ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ. ಸುಹಾಸ್ ಮತ್ತು ಸಂಗಡಿಗರ ವಾಹನವನ್ನು ಪ್ರತೀ ನಿತ್ಯ ತಪಾಸಣೆಯನ್ನು ಮಾಡಿ, ಅವರಲ್ಲಿ ಯಾವುದೇ ರೀತಿಯಾದಂತಹ ಆತ್ಮ ರಕ್ಷಣೆಗಾಗಿ ಬೇಕಾದಂತಹ ವಸ್ತುವನ್ನು ಇಡದ ರೀತಿಯಲ್ಲಿ ಪೊಲೀಸ್ ಇಲಾಖೆ ಕಳೆದ ಒಂದು ತಿಂಗಳಿನಿಂದ...

ಮಂಗಳೂರು: ಜಿಲ್ಲೆಯಲ್ಲಿ ಮದ್ಯದಂಗಡಿಗಳು ಬಂದ್; ಜಿಲಾಧಿಕಾರಿ‌ ಆದೇಶ

0

ಸುಹಾಸ್ ಶೆಟ್ಟಿ ಕೊಲೆ ಹ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಕೊಲೆಯಾದ ಸುಹಾಸ್ ಶೆಟ್ಟಿ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿದ್ದಾರೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದೆ. ಆದ್ದರಿಂದ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು...

ಕೊಲೆ ಸಮರ್ಥನೀ ಯವೂ ಅಲ್ಲ, ಅನುಕರಣೀಯವೂ ಅಲ್ಲ. ರಕ್ಷಿತ್ ಶಿವರಾಂ

0

ಬೆಳ್ತಂಗಡಿ. ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು,ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕೆಪಿಸಿಸಿ ಪ್ರಾಧನಾ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.