ಕೊಲೆಯಾದ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಮಂಗಳವಾರ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ ಪ್ರಮುಖರು ನಾಳ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಬಳಿಕ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್ ಮತ್ತು ಮನೆಯವರಿಗೆ ಸಾಂತ್ವನ ಹೇಳಿ, ಯಾವುದೇ ಸಮಯದಲ್ಲೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು. ಅಲ್ಲದೆವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ...

ಎಸ್‌ಡಿಪಿಐ ನಾವೂರು ಗ್ರಾಮ ಸಮಿತಿಯ ನೂತನ ಕಛೇರಿ ಮತ್ತು ಮಾಹಿತಿ ಕೇಂದ್ರ ಉದ್ಘಾಟನೆ

0

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾವೂರು ಗ್ರಾಮ ಸಮಿತಿಯ ನೂತನ ಕಛೇರಿ ಮತ್ತು ಮಾಹಿತಿ ಕೇಂದ್ರ ಉದ್ಘಾಟನೆ ಸಾದಿಕ್ ನಾವೂರು ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಪಕ್ಷದ ಕಛೇರಿ ಉದ್ಘಾಟನೆಯನ್ನು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಅನುಗ್ರಹ ಟ್ರೈನಿಂಗ್ ಕಾಲೇಜು ಪ್ರಾಂಶುಪಾಲರಾದ ಅಬ್ದುಲ್ ಖಾದರ್ ನಾವೂರು, ಕ್ಷೇತ್ರ ಕಾರ್ಯದರ್ಶಿಗಳಾದ ರಶೀದ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಮುಸ್ತಫಾ ಜಿ.ಕೆ ಹಾಗೂ ಮಹಮ್ಮದ್ ಆಲಿ ಉಜಿರೆ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ...

ಧರ್ಮಸ್ಥಳ ಪ್ರಕರಣ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರಗಳು ಕೊನೆಗೂ FSL ಗೆ ರವಾನೆ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ವಿಠಲ ಗೌಡ ನೀಡಿದ ಮಾಹಿತಿಯಂತೆ ಹುಡುಕಾಟ ನಡೆಸಿದಾಗ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಐದು ಅಸ್ಥಿಪಂಜರ ಮತ್ತು ಸೆ.18 ರಂದು ಎರಡು ಅಸ್ಥಿಪಂಜರ ಸೇರಿ ಒಟ್ಟು ಏಳು ಅಸ್ಥಿಪಂಜರಗಳನ್ನು ವಶಪಡಿಸಿಕೊ‌ಡಿದ್ದರು. ಇದೀಗ ಜ.20 ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಎಫ್.ಎಸ್.ಎಲ್ ಕಚೇರಿಗೆ ಅಸ್ತಿಪಂಜರಗಳನ್ನು ರವಾನೆ...

ನೆರಿಯ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ನೀಲಯ್ಯ ಮಲೆಕುಡಿಯ ನಿಧನ

0

ಬೆಳ್ತಂಗಡಿ;  ತಾಲೂಕಿನ ನೆರಿಯ ಗ್ರಾಮದ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೈಗೂಡಿಸಿಕೊಂಡು , ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದ ಅವರು ನೆರಿಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ , ಕರ್ನಾಟಕ ಸರ್ಕಾರದ ಭೂ ನ್ಯಾಯ ಮಂಡಳಿ ಮಾಜಿ ಸದಸ್ಯರಾಗಿ , ಮಲೆಕುಡಿಯ ಸಮುದಾಯದ ಹಿರಿಯ ಸದಸ್ಯರಾಗಿ , ಕೊಯ್ಯುರು ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಚಾರಕರಾಗಿ ಸೇವೆ...

ಪುತ್ತೂರು 106 ಕಿಲೋ ಗ್ರಾಂ ಗಾಂಜಾ ವಶ; ಚಾರ್ಮಾಡಿಯ ಇಬ್ಬರ ಬಂಧನ

0

ಬೆಳ್ತಂಗಡಿ; ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಸದ್ರಿ ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಲಾಗಿರುತ್ತದೆ. ಕಾರಿನ ಚಾಲಕನಲ್ಲಿ ವಿಚಾರಿಸಲಾಗಿ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ...

ಬೆಳ್ತಂಗಡಿ; ಮುಂದುವರಿದ ಚಿರತೆ ಹಾವಳಿ ಭಯದಲ್ಲಿ ನಾಗರಿಕರು

0

ಬೆಳ್ತಂಗಡಿ; ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು ಭಾನುವಾರ ತಡ ರಾತ್ರಿ ನಡ ಕನ್ಯಾಡಿಯಲ್ಲಿ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ. ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ.ನಡ ಗ್ರಾಮದ ಕನ್ಯಾಡಿಯಲ್ಲಿ ಭಾನುವಾರ ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ನಡೆದಿದೆ.ಮಲವಂತಿಗೆ ಗ್ರಾಮದ ದಿಡುಪೆ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಭಾನುವಾರ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ. ಚಿರತೆಯ ಓಡಾಟ ಜನರಲ್ಲಿ ಭಯ ಹೆಚ್ಚಿಸಿದೆ.

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

0

ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಮಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದೆ.ಭಾನುವಾರ ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದುಬಂದಿಲ್ಲ.

ಧರ್ಮಸ್ಥಳ ಮತ್ತು ಡಾ ಹೆಗ್ಗಡೆಯವರ ವಿರುದ್ಧ ನಿಂದನೆ ಮಾಡದಂತೆ ನ್ಯಾಯಾಲಯದ ಆದೇಶ ಉಲ್ಲಂಘನೆ ಸೌಜನ್ಯ ಮಾವ ವಿಠ್ಠಲ ಗೌಡನಿಗೆ 30 ದಿನಗಳ ಕಾರಾಗ್ರಹ ಶಿಕ್ಷೆ  ವಿಧಿಸಿದ ಸಿಟಿ ಸಿವಿಲ್ ಕೋರ್ಟ್

0

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ನ್ಯಾಯಾಲಯದ ಅಧೇಶವನ್ನು ಪದೇ ಪದೇ ಉಲ್ಲಂಘಿಸಿದ  ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದ್ದು ಸೌಜನ್ಯ ಮಾವ ವಿಠಲ ಗೌಡ ಅವರಿಗೆ ೩೦ ದಿನಗಳ ಸಿವಿಲ್ ಬಂಧನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ...

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರಿಸಿದ ರಕ್ಷಿತ್ ಶಿವರಾಂ

0

ಬೆಳ್ತಂಗಡಿ. ಉಜಿರೆಯಲ್ಲಿ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಬಸ್ಸು ಡಿಕ್ಕಿ ಹೊಡೆದು ಗುರಿಪಳ್ಳ ನಿವಾಸಿ ಮಂಚ ಮುಗೇರ ಇವರಿಗೆ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಭೇಟಿಯಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಇವರ ಆರೋಗ್ಯ ವಿಚಾರಿಸಿ, ವಾಟರ್ ಬೆಡ್ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ವೈದ್ಯರಿಂದ ರೋಗಿಯ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು. ಈ ಸಂಧರ್ಭದಲ್ಲಿ ಪತ್ನಿ ಗಿರಿಜಾ, ಮಗ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ...

ಕಳಿಯ ಕೊಲೆಯಾದ ಬಾಲಕ ಸುಮಂತ್ ಮನೆಗೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ,ಸುಮಂತ್ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮುಂಜಾನೆ ಧನುಪೂಜೆಗೆ ತೆರಳಿದ್ದ ಸಂದರ್ಭದಲ್ಲಿ,ಅಸಹಜವಾಗಿರೀತಿಯಲ್ಲಿ ಸಾವನ್ನಪ್ಪಿದ್ದು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.ಮೃತ ಬಾಲಕನ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಹೆತ್ತವರು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ ಬಿ, ಶ್ರೀಮತಿ ಶ್ವೇತಾ , ಶ್ರೀಮತಿ ಮರಿಟಾ ಪಿಂಟೋ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್...