9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016, ಕಲಂ 379 ಐಪಿಸಿ ಹಾಗೂ 42, 42, 44 MMRD ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಖಚಿತ ಮಾಹಿತಿ ಆಧರಿಸಿ ಪುಂಜಾಲಕಟ್ಟೆ ಠಾಣೆಯ ಹೆಚ್‌ಸಿ 1023 ರಾಜೇಶ್, ಸಿಪಿಸಿ 2276 ಚೋಳಪ್ಪ ಸಂಶಿ ಹಾಗೂ ಸಿಪಿಸಿ...
ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿಯಲ್ಲಿ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಕೆ .ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನೆರವೇರಿತು. ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಲಯನ್ಸ್ ಸಂಸ್ಥೆಯ...
ಅಳದಂಗಡಿ: ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ಬೆಳ್ತಂಗಡಿ ಡಿವೈಎಸ್ ಪಿ ರೋಹಿಣಿ ಸಿ.ಕೆ ಭೆಟಿ ಪರಿಶೀಲನೆ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಭೂಮಾಲೀಕರೊಬ್ಬರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ...
ಪಿಂಚಣಿಗೆ ಆದಾಯ ಮಿತಿ ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ ಐತಿಹಾಸಿಕ ತೀರ್ಮಾನ — ರಕ್ಷಿತ್ ಶಿವರಾಂ
ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ನೆಮ್ಮದಿ ನೀಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಪೈಕಿ 23,14,544 ಫಲಾನುಭವಿಗಳ ದಾಖಲೆಗಳು ಸಂಶಯಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಮೊಬೈಲ್ ಆ್ಯಪ್ ಮೂಲಕ ಭೌತಿಕ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ...
ಪುತ್ತೂರು; ದರ್ಬೆ ಗಲಾಟೆ ಪ್ರಕರಣ: ಪ್ರತ್ಯೇಕ ಮೂರು ಪ್ರಕರಣ ದಾಖಲು; ಓರ್ವನ ಬಂಧನ
ಪುತ್ತೂರು: ಪುತ್ತೂರು ನಗರದ ದರ್ಬೆ ಜಂಕ್ಷನ್‌ನಲ್ಲಿರುವ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಆರೋಪಿ ಸುದರ್ಶನ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ದಾಖಲಾತಿ ಹಾನಿ ವಿಚಾರದಲ್ಲಿ ಗಲಾಟೆ ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಅವರು ನೀಡಿದ ದೂರಿನಂತೆ, ಆಗಸ್ಟ್ 21ರಂದು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಬಂದಿದ್ದ ವೇಳೆ...
ಸುಮಂತ್ ನಿಗೂಢ ಸಾವು ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಮಂಪರು ಪರೀಕ್ಷೆ.
ಬೆಳ್ತಂಗಡಿ:ತಾಲೂಕಿನ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್(15) ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆ ಪತ್ತೆಹಚ್ಚುವ ನಿಟ್ಟಿನಲ್ಲಿ ನ್ಯಾಯಾಲಯದ ಪೂರ್ವಾನುಮತಿ ಪಡೆದು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್ ಎಸ್ ಎಲ್) ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕುಟುಂಬದ ಐವರನ್ನು ಈಗಾಗಲೇ ಬೆಂಗಳೂರಿನ ಎಫ್ ಎಸ್ ಎಲ್ ಗೆ ಕರೆದೊಯ್ದು ಮೊದಲ ಹಂತದ ತನಿಖೆ ನಡೆಸಲಾಗಿದೆ […]
ಅಳದಂಗಡಿ ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ ಪರಿಶೀಲನೆ
ಬೆಳ್ತಂಗಡಿ; ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಬೆಳ್ತಂಗಡಿ ತಹಶೀಲ್ದಾರ್ ಎನ್.ಎಸ್ ನರಗುಂದ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಭೂಮಾಲೀಕರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು , ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು...
ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಜಯಶ್ರೀ ಡಿ.ಎಂ ಗೌಡ ನಿಧನ
ಬೆಳ್ತಂಗಡಿ; ಉಜಿರೆ ವಿದ್ಯಾನಗರ ನಿವಾಸಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ನಿರ್ದೇಶಕಿ ಜಯಶ್ರೀ ಡಿ.ಎಂ ಗೌಡ( 75) ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.ಇವರು ಮಹಿಳಾ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿದ್ದು ಉಜಿರೆ ರಬ್ಬರ್ ಸೊಸೈಟಿಯ ನಿರ್ದೇಶಕಿಯಾಗಿ ಕಳೆದ 26 ವರ್ಷಗಳಿಂದಸೇವೆ ಸಲ್ಲಿಸುತ್ತಿದ್ದರು. ಇವರು ಪತಿ ಡಿ.ಎಂ ಗೌಡ, ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳ್ತಂಗಡಿ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಆರೋಪಿ ಬಂಧನ
ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿ, ಬಳಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಮಾಲುದ್ದೀನ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಸಂತ್ರಸ್ತ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳಿ ಬರುತ್ತಿದ್ದಳು. ಈ ವೇಳೆ ಆರೋಪಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಹೆದರಿದ ಬಾಲಕಿ ಈ...
ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹35 ಸಾವಿರ ದಂಡ
ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಅವರಿಗೆ 5 ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. 12/2020ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆ–2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು...















