ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಗುರುವಾಯನಕೆರೆ; ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ : ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೊರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ಜು.1 ರಂದು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪ್ರಥಮ ಪುತ್ರ ಮುಸ್ತಾಕ್ (27)ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಮೃತ ದುರ್ದೈವಿ ಚಾಲಕ ವೃತ್ತಿ ನಡೆಸುತ್ತಿದ್ದು ಜೂ. 30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನ್ನು...
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು ಮನೆಯ ಸಮಿಪವಿರುವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
ಮಂಗಳೂರು; ಭಾರೀ ಮಳೆಗೆ ಕುಸಿದ ಮನೆ ಮೂವರು ಮೃತ್ಯು
ಮಂಗಳೂರು, ಜು. 1: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಮನೆ ಕುಸಿದ ಸಂದರ್ಭದಲ್ಲಿ ಒಟ್ಟು ಆರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಘಟನೆಯ ಬಳಿಕ ಕೈಗೊಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಒಬ್ಬ ಪುರುಷ ಹಾಗು ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ, ಅವಶೇಷಗಳಡಿ ಸಿಲುಕಿದ್ದ ಮಹಿಳೆಯೊಬ್ಬರು ಮತ್ತು ಇಬ್ಬರು ಬಾಲಕಿಯರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯ...
ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ
ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಗ್ರಾಮಾಂತರ ಸಾರಿಗೆ, KA 19 F 3219 ಸಂಖ್ಯೆಯ ಸರ್ಕಾರಿ ಬಸ್ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.ಪಾದಾಚಾರಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ವೇಳೆ ಭಾರೀ ಮಳೆ ಸುರಿಯುತ್ತಿತ್ತು. ಘಟನಾ...
ಬೆಳ್ತಂಗಡಿ; ಗ್ಯಾಸ್ ದರ ಏರಿಕೆ ಖಂಡಿಸಿ ಮಹಿಳಾ ಸಂಘದಿಂದ ಪ್ರತಿಭಟನೆ
ಬೆಳ್ತಂಗಡಿ; ಜನರು ನಿತ್ಯ ಉಪಯೋಗಿಸುವ ಆಹಾರ ವಸ್ತುಗಳು, ಗ್ಯಾಸ್ ಮೊದಲಾದವುಗಳ ದರ ವಿಪರೀತ ಏರಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನಡೆ ಅತ್ಯಂತ ಜನ ವಿರೋದಿಯೂ, ಮಹಿಳಾ ವಿರೋದಿಯೂ ಆಗಿದೆ ಎಂದು ಜೆ.ಎಂ.ಎಸ್ ದ.ಕ. ಜಿಲ್ಲಾಧ್ಯಕ್ಷರಾದ ಕಿರಣಪ್ರಭಾ ಅವರು ಹೇಳಿದರು.ಅವರು ಇಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ಜನವಾದಿ ಮಹಿಳಾ ಸಂಘಟನೆ (ಜೆ.ಎಂಎಸ್) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಲೆ ಏರಿಕೆ ವಿರೋದಿಸಿ ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾಡುತ್ತಿದ್ದರು. ಸರಕಾರವು ತೈಲ ಬೆಲೆಗಳ ವಿಪರೀತ ಏರಿಸಿ ತೈಲ ಕಂಪೆನಿಗಳಿಗೆ...
ಸುರತ್ಕಲ್ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ ಅಪಹರಿಸಿದ ಕಾರು ಬಂಟ್ವಾಳದಲ್ಲಿ ಪತ್ತೆ ಹಚ್ಚಿದ ಪೊಲೀಸರು
ಮಂಗಳೂರು: ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂ.29 ರಂದು ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಸಿನಿಮಾ ಶೈಲಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದರೋಡೆಕೋರರ ಗುಂಪೊಂದು, ಕುಟುಂಬಸ್ಥರನ್ನು ಬೆದರಿಸಿ ಸುಮಾರು ₹20 ಲಕ್ಷ ಮೌಲ್ಯದ ಚಿನ್ನ ಮತ್ತು ನಗದನ್ನು ದೋಚಿ ಪರಾರಿಯಾಗಿತ್ತು. ಇದೀಗ ದರೋಡೆಕೋರರು ಕೊಂಡೊಯ್ದಿದ್ದ ಚಿನ್ನದ ವ್ಯಾಪಾರಿಯ ವಿಕಾಸ್ ಗೆ ಸೇರಿದ ಸ್ವಿಫ್ಟ್ ಡಿಸೈರ್ ಕಾರು ಬಂಟ್ವಾಳ ತಾಲೂಕಿನ ಕಲ್ಪನೆ ಎಂಬಲ್ಲಿ ಜೂನ್ 30 ರಂದು ಪತ್ತೆಯಾಗಿದೆ. ಇನ್ನು ಸೀಟ್ ಕವರ್‌ಗಳನ್ನೂ ಸಹ ಹರಿದು ಹಾಕಿ ದರೋಡೆಕೋರರು...
ಎ.ಸಿ ಹಾಗೂ ಇತರ ಅಧಿಕಾರಿಗಳಿಂದ ನಡ ಮಲೆಯಡ್ಕದ ಮುಗ್ರೋಡಿ ಕಂಪೆನಿಯ ಹಾಟ್ ಮಿಕ್ಸ್ ಘಟಕ ಪರಿಶೀಲನೆ
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗ, ದೂರು ಅರ್ಜಿ ಸಲ್ಲಿಕೆಯಾಗಿದ್ದು ಸದ್ರಿ ಸ್ಥಳವನ್ನು ಪರಿಶೀಲನೆ ನಡೆಸಲು ಪುತ್ತೂರು ವಿಭಾಗ ಆಯುಕ್ತರಾದ ಸ್ಟೇಲ್ಲಾ ವರ್ಗಿಸ್ ಸೇರಿದ್ದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮುಗ್ರೋಡಿ ಅವರ ಘಟಕಕ್ಕೆ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದ ಘಟನೆ ಜೂ.30 ರಂದು ಮಧ್ಯಹ್ನಾ 3:30 ಗಂಟೆಗೆ ನಡೆದಿದೆ. ಈ ಬಗ್ಗೆ ದೆಹಲಿಯ...
ಅಡ್ಡ ಮತದಾನ ವಿವಾದ:ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಅಣೆ ಪ್ರಮಾಣ
ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್ ಚುನವಾಣೆಯಲ್ಲಿ ಬಿಜೆಪಿ ಪಾಳದಲ್ಲಿ ನಡೆದ ಅಡ್ಡ ಮತದಾನ ತೀವ್ರ ಚರ್ಚೆಯಾಗುತ್ತಿದ್ದಿ, ಬಿಜೆಪಿಯ ಶಾಸಕರು ನಾನಲ್ಲ ನಾನಲ್ಲ ಎನ್ನುತ್ತಿರುವ ವೇಳೆ ಹಾಸನ ಜಿಲ್ಲೆಯ ಬೇಲೂರು ಶಾಸಕ ಹುಲ್ಲಹಳ್ಳಿ ಕೆ.ಸುರೇಶ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ನನ್ನ ಮೇಲೆ ಅಪಪ್ರಚಾರ ಮಾಡಿದವರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿ ತನ್ನ ನಂಬಿದ ಜನತೆ ಹಾಗೂ ಆರೋಪಕ್ಕೆ ಸಲುವಾಗಿ ಕಾಣಿಕೆಯನ್ನು ಹುಂಡಿ ಹಾಕಿದರು. ನಾನು ಪಕ್ಷ ದ್ರೋಹ ಮಾಡಿಲ್ಲ, ಬಿಜೆಪಿಯ ನಿಷ್ಟವಾಂತ ಪ್ರಾಮಾಣಿಕ ಕಾರ್ಯಕರ್ತ....
ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ರಸ್ತೆಗೆ ಉರುಳಿದ ಹೆಮ್ಮರ ಸಂಚಾರ ವ್ಯತ್ಯಯ
ಬೆಳ್ತಂಗಡಿ:ಚಾರ್ಮಾಡಿ ಘಾಟಿಯ 10ನೇ ತಿರುವಿನ ಸಮೀಪ ಮರವೊಂದು ರಸ್ತೆಗೆ ಉರುಳಿ ಸುಮಾರು ಒಂದು ತಾಸು ಕಾಲ ಸಂಚಾರ ವ್ಯತ್ಯಯ, ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ರಾತ್ರಿ ನಡೆದಿದೆ .ಸಂಜೆ 7 ಗಂಟೆಗೆ ಸುಮಾರಿಗೆ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿ ಇಕ್ಕೆಲಗಳಲ್ಲೂ ಒಂದೂವರೆ ತಾಸಿನಷ್ಟು ಕಾಲ ವಾಹನಗಳು ಸಾಲುಗಟ್ಟಿ ನಿಂತವು.ಜೋರಾಗಿ ಸುರಿಯುತ್ತಿದ್ದ ಮಳೆ, ಮಂಜುಕವಿದ ವಾತಾವರಣ, ಬೆಳಕಿನ ಅಭಾವ ತ್ವರಿತವಾಗಿ ಮರ ತೆರವುಗೊಳಿಸಲು ಅಡ್ಡಿಯಾಯಿತು.ಉಪವಲಯ ಅರಣ್ಯಾಧಿಕಾರಿ ರಂಜಿತ್, ಸಿಬ್ಬಂದಿಗಳಾದ ಗೋಪಾಲ, ಮನೋಹರ್, ಇಸ್ಮಾಯಿಲ್, ವಾಹನ ಸವಾರರು ಹಾಗೂ ಮತ್ತಿತರರು...















