ಧರ್ಮಸ್ಥಳ; ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ವಿದ್ಯುತ್ ಲೈನಿನ ಮೇಲೆ ಮರಗಳನ್ನು ಮುರಿದು ಹಾಕಿದ ಕಾಡಾನೆಗಳು
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಉಜಿರೆ- ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾಡಾನೆಗಳು ಮರವೊಂದನ್ನು ವಿದ್ಯುತ್ ಲೈನಿನ ಮೇಲೆ ಉರುಳಿಸಿದ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿದೆ. ಬೊಳಿಯಾರು ಸಮೀಪ ರಸ್ತೆಬದಿಯಲ್ಲಿದ್ದ ಮರವನ್ನು ಕಾಡಾನೆ ನೆಲಕ್ಕೆ ಉರುಳಿಸಿದೆ. ಮರ ಧರ್ಮಸ್ಥಳ- ಶಿಶಿಲ 11 ಕೆ.ವಿ ವಿದ್ಯುತ್ ಲೈನಿನ ಮೇಲೆ ಬಿದ್ದಿದ್ದು ವಿದ್ಯುತ್ ಲೈನ್ ತುಂಡಾಗಿದೆ. ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರ ಸಮೀಪವೇ ಹಾದು ಹೋಗುವ ಸ್ಥಳೀಯ ಸಂಪರ್ಕ ನೀಡುವ ವಿದ್ಯುತ್ ಲೈನಿಗೂ ಹಾನಿ ಸಂಭವಿಸಿದೆ.ಮೆಸ್ಕಾಂ ಇಲಾಖೆಯವರು ಮಾಹಿತಿ ತಿಳಿದು ಸ್ಥಳಕ್ಕೆ...
ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಲ ನೇಮಕ ವಾಗಿದ್ದಾರೆ . ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್ ಟಿ, ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ , ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.
ಗ್ರಾಮ ಆಡಳಿತಾ ಧಿಕಾರಿಗಳ ಧರಣಿ; ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರವು ಬೆಳ್ತಂಗಡಿ ಆಡಳಿತ ಸೌಧದ ಎದುರು ನಡೆಯುತ್ತಿದ್ದು, ಧರಣಿ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಶುಕ್ರವಾರ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕ ಹರೀಶ್ ಪೂಂಜರಿಗೆ ಸಲ್ಲಿಸಿದರು. ಈ ಹಿಂದೆ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ...
ರುಡ್ ಸೆಟ್ ಸಂಸ್ಥೆಯಲ್ಲಿ ಲಭಿಸುವ ತರಬೇತಿಗಳು ಬದುಕಿಗೆ ದಾರಿ ದೀಪವಾಗಲಿದೆ; ಡಿ. ಹರ್ಷೇಂದ್ರ ಕುಮಾರ್
ಉಜಿರೆ : ಕಲಿಕೆ ಚೆನ್ನಾಗಿದ್ದರೆ ಗಳಿಕೆಯೂ ಚೆನ್ನಾಗಿರುತ್ತದೆ. ಕಲಿಕೆಯ ಸಂದರ್ಭದಲ್ಲಿ ಹೆತ್ತವರ ಶ್ರಮ, ಗಳಿಕೆಯ ಸಂದರ್ಭ ನಿಮ್ಮ ಪರಿಶ್ರಮ ನಿಮ್ಮ ಜೀವನವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ರುಡ್ ಸೆಟ್ ಸಂಸ್ಥೆಯಲ್ಲಿ ಕಲಿತ ತರಬೇತಿಗಳು ನಿಮ್ಮ ಬದುಕಿಗೆ ದಾರಿ ದೀಪವಾಗಲಿ, ವೃತಿಯಲ್ಲಿ ಯಾವುದೇ ಕಾರಣಕ್ಕೂ ಅಡಗಿಸಿಕೊಳ್ಳಬೇಡಿ, ಹೆಚ್ಚು ತೊಡಗಿಸಿಕೊಳ್ಳಿ. ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಟಿ.ವಿ. ಟೆಕ್ನಿಷಿಯನ್ ತರಬೇತಿ ಮತ್ತು 13 ದಿನಗಳ ಕಾಲ...
ಚಾರ್ಮಾಡಿ ಕಾಡಾನೆ ಸಾವು ಪ್ರಕರಣ; ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು; ಅರಣ್ಯ ಇಲಾಖೆ ಮಾಹಿತಿ
ಬೆಳಂಗಡಿ; ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಕಾಡಾನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಲಾಯಿತು. 25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು ಆನೆಯ ದೇಹದ ಹೊರಭಾಗದಲ್ಲಿ ಯಾವುದೇ ಗಾಯಗಳಿರಲಿಲ್ಲ. ಆನೆ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನು ಅಪ್ಪಿರುವುದಾಗಿ ಮರಣೋತ್ತರ ಪರೀಕ್ಷೆಯ ವೇಳೆ ಕಂಡು ಬಂದಿರುವುದಾಗಿ ಡಿಎಫ್‌ಓ ಅಂತೋಣಿ ಮರಿಯಪ್ಪ ಮಧ್ಯಮಗಳಿಗೆ ಮಾಹಿತಿ ನೀಡಿದರು.ಆನೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಸಮರ್ಪಕವಾಗಿ ಆಹಾರ ಸೇವಿಸುತ್ತಿರಲಿಲ್ಲ. ಇದರಿಂದಾಗಿ ಸಂಪೂರ್ಣ ನಿತ್ರಾಣಕ್ಕೆ ಈಡಾಗಿತ್ತು ಎಂದು ಮಾಹಿತಿ ನೀಡಿದ ಅವರು ಗುರುವಾರ...
ಬೆಳ್ತಂಗಡಿ; ಚಾರ್ಮಾಡಿ ಕತ್ತರಿಗುಡ್ಡೆ ಸಮೀಪ ಕಾಡಾನೆ ಸಾವು
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಂಡು ಬಂದ ಕಾಡಾನೆ ಸಾವನ್ನಪ್ಪಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.ಅರಣ್ಯ ಇಲಾಖೆ ಅಧಿಕಾರಿ,ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.ಸಂಪೂತ್ಣವಾಗಿಬಳಲಿರುವಂತೆ...
ಊರಿಗೆ ಮರಳಲು ವಿಮಾನ ನಿಲ್ದಾಣಕ್ಕೆ ತೆರಳಿದ್ದ ವೇಳೆ ಹೃದಯಾಘಾತ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು.ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ...
ಚಾರ್ಮಾಡಿ; ಅರೆಪ್ರಜ್ಞಾವಸ್ತೆಯಲ್ಲಿ ಕಾಡಾನೆ ಪತ್ತೆ
ಬೆಳ್ತಂಗಡಿ:ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಗುರುವಾರ ಕಾಡಾನೆ ಪತ್ತೆಯಾಗಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿ,ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡಲಾಗಿದ್ದು ಸದ್ಯ ಆನೆ ಅದೇ ಸ್ಥಳದಲ್ಲಿದೆ.ಬಳಲಿರುವಂತೆ ಕಂಡುಬಂದಿರುವ...
ನಿವೃತ್ತ ಶಿಕ್ಷಕ, ಕೃಷಿ ತಜ್ಞ, ರತ್ನಮಾನಸದ ಪಾಲಕ ಕಾಶ್ಮೀರ್ ಮಿನೇಜಸ್ ನಿಧನ
ಉಜಿರೆ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಆಶ್ರಯದಲ್ಲಿ ಉಜಿರೆಯಲ್ಲಿ ನಡೆಸಲ್ಪಡುತ್ತಿರುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೀವನಶಿಕ್ಷಣ ನೀಡುವ ರತ್ನಮಾನಸ’’ ವಿದ್ಯಾರ್ಥಿನಿಲಯದ ನಿವೃತ್ತ ವಾರ್ಡನ್ ಕಾಶ್ಮಿರ್ ಮಿನೆಜಸ್ (80) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನಲ್ಲಿ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಶಾಲಾ ಶಿಕ್ಷಣದ ಜೊತೆಗೆ ಕೃಷಿ, ಹೈನುಗಾರಿಕೆ, ತೋಟಗಾರಿಕೆ, ಅಡುಗೆತಯಾರಿ ಮೊದಲಾದ ವಿಷಯಗಳಲ್ಲಿ ವಿಶೇಷ ತರಬೇತಿ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಜೀವನಶಿಕ್ಷಣ ನೀಡುವರತ್ನಮಾನಸ’’ ವಿದ್ಯಾರ್ಥಿನಿಲಯವನ್ನು 1972 ರಲ್ಲಿ ಪ್ರಾರಂಭಿಸಿದಾಗ ಕಾಶ್ಮಿರ್...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು , ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಗೌಡ, ಸುರೇಶ್ ಬಿ, ಸತೀಶ್ ಕಾಮತ್, ಶ್ರೀಮತಿ ಉಮೇಶ್ವರಿ, ಶ್ರೀಮತಿ ಹರಿಣಿ, ಪೂವಪ್ಪ ಎಂ ಕೆ ಮತ್ತು ಅರ್ಚಕರಾಗಿ ಶ್ರೀಧರ್ ಭಟ್ ನೇಮಕವಾಗಿದ್ದಾರೆ.















