ಬಂದಾರು; ಕುರಾಯ ದೇವಸ್ಥಾನದ ಬಳಿ ಗೇರು ತೋಟಕ್ಕೆ ಬೆಂಕಿ

0

ಬಂದಾರು; ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಇಂದು ಮದ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ ಘಟನೆ ಸಂಭವಿಸಿದೆ.ವಿಷಯ ತಿಳಿದ ತಕ್ಷಣ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಹಾಗೂ ಸ್ಥಳೀಯ ನಿವಾಸಿಗಳಾದ ಶ್ರೀಧರ ಗೌಡ ಕುಂಬುಡಂಗೆ , ಶ್ರೀತಿಕ್ ಗೌಡ ಕುಂಬುಡಂಗೆ, ರಾಘವ ಗೌಡ ಕುರಾಯ, ಕಾವ್ಯ ಕುರಾಯ , ಮಾಲತಿ ಕುರಾಯ, ಕುಸುಮ ಕುರಾಯ,...

16ನೇ ಬೆಂಗಳೂರು ಅಂತರ್ ರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾದ “ದಸ್ಕತ್” ತುಳು ಚಿತ್ರ

0

ಬೆಂಗಳೂರು ಅಂತರ್ ರಾಷ್ಟ್ರೀಯ ಫೀಲಂ ಫೆಸ್ಟಿವಲ್ ಮಾ 1 ರಿಂದ 8 ರವರೆಗೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿರುವ ಪಿವಿಆರ್ ಥೀಯೇಟರ್ ನಲ್ಲಿ ನಡೆಯಲಿದೆ.ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬಂದಿದ್ದು ಈಗಾಗಲೇ ಜನಮನ್ನಣೆಗಳಿಸಿದ ದಸ್ಕತ್ ತುಳು ಚಿತ್ರವು ಬೆಂಗಳೂರುನಲ್ಲಿ ನಡೆಯಲಿರುವ 16ನೇ ಅಂತರ್ ರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾಗಿದೆಇದು ತುಳುನಾಡು ಹೆಮ್ಮೆ ಪಡುವ ವಿಷಯ. ರಾಘವೇಂದ್ರ ಕುಡ್ವ ನಿರ್ಮಾಪಕರಾಗಿದ್ದಾರೆ.ಹಲವಾರು ತುಳುನಾಡಿನ ಕಲಾವಿದರ ತಂಡ ಈ ಚಿತ್ರದಲ್ಲಿರೋದು ತುಳುನಾಡಿಗೆ ಹೆಮ್ಮೆಯ ವಿಚಾರ.

ಮುಗೇರಡ್ಕದಲ್ಲಿ ಅಕ್ರಮ ಮರಳು ಗಣಿಗಾರಿಕೆ ಆರೋಪ:ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಯವರಿಗೆ ಬಿ.ಎಂ ಭಟ್ ಅವರಿಂದ ದೂರು

0

ಬೆಳ್ತಂಗಡಿ; ತಲೂಕಿನ ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ಮತ್ತೆ ಅಕ್ರಮ ಮರಳುಗಣಿಗಾರಿಕೆ ಆರಂಭಗೊಂಡಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಿಪಿಐಎಂ ಮುಖಂಡ‌ ಬಿ.ಎಂ ಭಟ್ ಅವರು ಜಿಲ್ಲಾಧಿಕಾರಿಗಳು ಹಾಗೂ ಹಾಗೂ ಇತರ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಎರಡು ವರ್ಷಗಳ ಹಿಂದೆ ಏತ ನೀರಾವರಿ ಯೋಜನೆಯ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗಿತ್ತು. ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೂಗೊಳ್ಳಲಾಗಿರಲಿಲ್ಲ. ಇದೀಗ ಮತ್ತೆ ಇಲ್ಲಿ ರಾಜಾರೋಷವಾಗಿ ಅಕ್ರಮ ಮರಳು ಗಣಿಗಾರಿಕೆಯನ್ನು ಆರಂಭಿಸಲಾಗಿದೆ....

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಯುವಕನಿಗೆ ಗಂಭಿರ ಗಾಯ

0

ಬೆಳ್ತಂಗಡಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಬುಧವಾರ ಸಂಜೆ ನಡೆದಿದೆ.ಮುಂಡಾಜೆ- ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.ಬೈಕ್ ಸವಾರನ ಬಳಿ ದೊರೆತ ಆಧಾರ್ ಕಾರ್ಡ್ ನಲ್ಲಿರುವ ವಿಳಾಸದಂತೆ ಆತನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ವಿನಯ ಕೆ.(22) ಎಂದು ಗುರುತಿಸಲಾಗಿದೆ.ಗಾಯಾಳುವನ್ನು ಸ್ಥಳೀಯರು ಉಜಿರೆಯ ಖಾಸಗಿ...

ಗುರುವಾಯನಕೆರೆ ಬಳಿ ಡಿವೈಡರ್‌ಗೆಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

0

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ- ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ.೧೨ರಂದು ರಾತ್ರಿ ಸಂಭವಿಸಿದೆ.ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (೩೦ವ) ಈ ದುರ್ಘಟನೆಯಲ್ಲಿ ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ...

“ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ…” ಕೊಯ್ಯೂರು ಪಿಜಕಳದಲ್ಲೊಂದು ವಿಶೇಷ ಬ್ಯಾನರ್

0

ಬೆಳ್ತಂಗಡಿ :'ಎಚ್ಚರಿಕೆ', "ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ, ಅವರನ್ನು ಕೂಡ ನಾವು ಚೆನ್ನಾಗಿ ನೋಡಿ ಕೊಳ್ಳುತ್ತೇವೆ.(ನಾಯಿಗಳನ್ನು ಸಾಕಲು ಯೋಗ್ಯತೆ ಇಲ್ಲದವರು ದಯವಿಟ್ಟು ನಾಯಿಗಳನ್ನು ಸಾಕಬೇಡಿ.),ನಾಯಿಗೆ ಹಳಸಿದ ಅನ್ನ ಮಣ್ಣಿನಲ್ಲಿ ಹಾಕಿದರೂ ಕೂಡ ತಿಂದು ನಿಯತ್ತಿನಲ್ಲಿರುತ್ತದೆ." ಇದು'ಎಚ್ಚರಿಕೆ' ಎಂಬ ತಲೆಬರಹದೊಂದಿಗೆ ರಸ್ತೆ ಬದಿಯಲ್ಲಿ ಹಾಕಲಾಗಿರುವ ಫ್ಲೆಕ್ಸ್ ನಲ್ಲಿರುವ ಆಕ್ರೋಶದ ವಾಕ್ಯಗಳು. ಇದು ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಪಿಜಕ್ಕಳ ಬಸ್ ನಿಲ್ದಾಣದ ಬಳಿ ದೊಂಬದಪಲ್ಕೆ ರಸ್ತೆ ಬದಿಯಲ್ಲಿ ಈ ಫ್ಲೆಕ್ಸ್ ಹಾಕಲಾಗಿದೆ.ಸುಡು ಬಿಸಿಲಿನ ಬೇಗೆಯಲ್ಲಿ ಬಾಯಾರಿ ಬೀದಿಯಲ್ಲಿ...

ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣ ಕಾಯ್ದೆಗೆ ರಾಜ್ಯಪಾಲರ ಅಂಗೀಕಾರ

0

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿಗಳನ್ನು ತಡೆ ಗಟ್ಟಲು ಉದ್ದೇಶಿಸಿ ರಾಜ್ಯ ಸರಕಾರ ಕಳುಹಿಸಿ ಕೊಟ್ಟಿದ್ದ ಮಹತ್ವದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಅಂಕಿತ ಹಾಕಿದ್ದಾರೆ. ಈ ಹಿಂದೆ ರಾಜ್ಯ ಸರಕಾರ ಕಳುಹಿಸಿಕೊಟ್ಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೆ, ಕೆಲವು ಸ್ಪಷ್ಟನೆ ಹಾಗೂ ಸಲಹೆಗಳೊಂದಿಗೆ ಕಡತವನ್ನು ವಾಪಸ್‌ ಕಳಿಸಿದ್ದರು. ಹೀಗಾಗಿ ರಾಜ್ಯ ಸರಕಾರ ಮತ್ತೊಮ್ಮೆ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಅಂತಿಮವಾಗಿ ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ. ಅಲ್ಲದೆ, ಸಲಹೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ...

ಪುಲಾಬೆ ಮಸ್ಜಿದ್‌ನಲ್ಲಿ ಸರ್ವಧರ್ಮೀಯರ ಸಂಗಮ; ಆಸ್ತಿಕಪ್ರಧಾನ ಭಾರತ ದೇಶದಲ್ಲಿ ಸೌಹಾರ್ದತೆ ಭದ್ರಗೊಳ್ಳಲಿ; ಡಾ. ಝೈನಿ ಕಾಮಿಲ್ ಸಖಾಫಿ

0

ಬೆಳ್ತಂಗಡಿ; ದೇಶದ ಸ್ವಾತಂತ್ರ್ಯ ಸಂಗ್ರಾಮ ದೇಶದ ಸರ್ವ ಜನರ ಐಕ್ಯತೆಯ ಸಂಕೇತವಾಗಿತ್ತು. ಅದರ ಹಿಂದೆ ರಾಷ್ಟ್ರ ಕಟ್ಟುವ ಉದ್ದೇಶವಿತ್ತು. ನಮ್ಮ ದೇಶದ ಬಹು ಸಂಸ್ಕೃತಿ, ಆರಾಧ ನಾಲಯಗಳೇ ನಮ್ಮ ಶಕ್ತಿ. ಅವುಗಳು ಉಳಿಯಬೇಕು. ಆಸ್ತಿಕಪ್ರಧಾನ‌ವಾದ ಭಾರತದಲ್ಲಿ ಸೌಹಾರ್ದತೆ ಇನ್ನಷ್ಟು ಗಟ್ಟಿಗೊಳ್ಳಲಿ ಎಂದು ಖ್ಯಾತ ವಾಗ್ಮಿ ಡಾ. ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ ಹೇಳಿದರು. ಹೊಸಂಗಡಿ ಗ್ರಾಮದ ಪುಲಾಬೆಯಲ್ಲಿ ನವೀಕೃತಗೊಂಡು ಉದ್ಘಾಟನೆಗೊಂಡ ಬದ್ರಿಯಾ ಮಸ್ಜಿದ್ ಮತ್ತು ಮದರಸ ಇದರ ಉದ್ಘಾಟನಾ ಸಮಾರಂಭದ ಪ್ರಯುಕ್ತ ಫೆ.9 ರಂದು ನಡೆದ ಸರ್ವಧರ್ಮೀಯ ಸಂಗಮದಲ್ಲಿ ಅವರು ದಿಕ್ಸೂಚಿ...

ಮಹಾ ಕುಂಭ ಮೇಳದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

0

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಾಲ್ಗೊಂಡು ಮಾಘ ಹುಣ್ಣಿಮೆಯ, ಪವಿತ್ರ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ಕಳಿಯ; ಕಳಿಯ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಬೆಂಕಿ

0

ಬೆಳ್ತಂಗಡಿ; ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಸಮೀಪದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ್ ಕೊರೆಯ ಎಂಬವರು ಗಮನಿಸಿದ್ದು ಕೂಡಲೇ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆವರು ಕೂಡಲೇ ಅಗ್ನಿಶಾಮಕ ದಳದವರಿಗೆ,ಅರಣ್ಯ ಇಲಾಖೆಯವರಿಗೆ,ಗ್ರಾಮ ಪಂಚಾಯತ್ ಗೆ ತಿಳಿಸಿದ್ದು ಕೂಡಲೇ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ‌ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿದರು. ಸ್ಥಳೀಯರೂ ಇಲಾಖೆಯವರೊಂದಿಗೆ ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು.