ಕಡಿರುದ್ಯಾವರ; ಬೈಕ್ ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

0

ಬೆಳ್ತಂಗಡಿ;  ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದಅಂತರ ಲೋಕಪ್ಪ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.ಗಾಯಾಳುವಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಳ್ತಂಗಡಿ; ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

0

ಬೆಳ್ತಂಗಡಿ; ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಸುಳ್ಯ ತಾಲೂಕಿನ ತೊಡಿಕಾನದ ಅಂಡ್ಯಡ್ಕ ನಿವಾಸಿ ರಾಜ(64) ಶಿಕ್ಷೆಗೆ ಒಳಗಾದ ಆರೋಪಿ. ಕಮಲಾ ಕೊಲೆಯಾದ ಮಹಿಳೆ.ರಾಜ ತನ್ನ ಪತ್ನಿ ಕಮಲಾ ಜೊತೆ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಾ ಇರುತ್ತಿದ್ದ. ದಿನಾಂಕ: 04-09-2022 ರಂದು ರಾಜ ಮತ್ತು ಪತ್ನಿ ಕಮಲಾರವರು ರಬ್ಬರ್ ಟ್ಯಾಪಿಂಗ್ ಕೆಲಸ ಕೇಳುತ್ತಾ ಬೆಳ್ತಂಗಡಿ ತಾಲೂಕು ಕೊಯ್ಯರು ಗ್ರಾಮದ ಅಲೆಕ್ಕಿ ಎಂಬಲ್ಲಿನ ಧರ್ಣಪ್ಪ ಗೌಡ ನೇಯವರ ಮನೆಗೆ ತೆರಳಿ ಕೆಲಸ ಕೇಳಿದಾಗ...

ದಿಡುಪೆ; ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

0

ಬೆಳ್ತಂಗಡಿ; ಕಾರು ಅಪಘಾತವಾಗಿ ವ್ಯಕ್ತಿ ಮೃತಪಟ್ಟ ಘಟನೆ ದಿಡುಪೆ ಬಳಿ ಬುಧವಾರ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಪುತ್ತಾಕ (ಇಬ್ರಾಹಿಂ )(67) ಎಂಬವರೆಂದು ಗುರುತಿಸಲಾಗಿದೆ. ಸಹೋದರ ಮನೆಯ ಶುಭ ಕಾರ್ಯ ನಿಮಿತ್ತ ಮಾತುಕತೆಗಾಗಿ ಬಂಧುಗಳು ಜೊತೆಯಾಗಿ ದಿಡುಪೆಗೆ ಹೋಗಿದ್ದರು. ಕಾರಿನಿಂದ ಇಳಿದ ಮುಂದಕ್ಕೆ ಚಲಿಸುತ್ತಿದ್ದಂತೆ ಹಠಾತ್ತನೆ ಕಾರು ಮುಂದಕ್ಕೆ ಚಲಿಸಿ ಈ ಅವಘಡ ಸಂಭವಿಸಿದೆ. ಹಕೀಂ ಎಂಬವರು ವಾಹನ ಚಲಾಯಿಸುತ್ತಿದ್ದರೆಂದು ತಿಳಿದು ಬಂದಿದ್ದು ಅವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಪುತ್ತಾಕ ಅವರನ್ನುತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ...

ಚಾರ್ಮಾಡಿ ಘಾಟಿಯಲ್ಲಿ ಲಾರಿ ತಡೆದು ದರೋಡೆ ಪ್ರಕರಣ ದಾಖಲು

0

ಬೆಳ್ತಂಗಡಿ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ಮಧ್ಯರಾತ್ರಿ ಎರಡು ಬೈಕ್ ನಲ್ಲಿ ಬಂದ ಅಪರಿಚಿತರು ಮೀನು ಸಾಗಾಟದ ಲಾರಿ ತಡೆದು ನಗದು ದೋಚಿದ ಘಟನೆ ವರದಿಯಾಗಿದೆ. ಲಾರಿ ಚಾಲಕನ ಬದಿಯ ಗ್ಲಾಸ್ ಒಡೆದು ಚಾಲಕನಿಗೆ ಥಳಿಸಿ 1.61 ಲಕ್ಷ ರೂ. ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ವಾಹನದ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿದ್ದಾನೆ. ಬಣಕಲ್ ಪೊಲೀಸರು ಪ್ರಕರಣದ ಪರಿಶೀಲನೆ ನಡೆಸುತ್ತಿದ್ದಾರೆ

ಕೋಮು ವೈಷಮ್ಯ ಬಿತ್ತುವ ಶಿಕ್ಷಕನ ಭಾಷಣ ರದ್ದುಗೊಳಿಸಿದ ಸಮಾಜ ಕಲ್ಯಾಣ ಇಲಾಖೆ :ಅರುಣ್ ಉಳ್ಳಾಲನನ್ನು ಭಾಷಣಕ್ಕೆ ಕರೆದು ಪೇಚಿಗೆ ಸಿಲುಕಿದ ಪ್ರಾಂಶುಪಾಲ !!

0

ಬೆಳ್ತಂಗಡಿ, ಫೆ- 6 : ಬಹಿರಂಗ ವೇದಿಕೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹೊಂದಿರುವ ಅರುಣ್ ಉಳ್ಳಾಲ್ ಎಂಬವರನ್ನು ಸರಕಾರಿ ಶಾಲೆಯೊಂದು ಭಾಷಣಕ್ಕೆ ಆಹ್ವಾನಿಸಿ ಪೇಚಿಗೆ ಸಿಲುಕಿ, ಕೊನೆ ಕ್ಷಣದಲ್ಲಿ ಕಾರ್ಯಕ್ರಮವನ್ನೇ ರದ್ಧುಗೊಳಿಸಿದ ಘಟನೆ ಗುರುವಾರ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿಯ ಇಂದಿರಾಗಾಂಧಿ ಸರಕಾರಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಅರುಣ್ ಉಳ್ಳಾಲ್ ಎಂಬವರ ಭಾಷಣ ಏರ್ಪಡಿಸಲಾಗಿತ್ತು.ಸದರಿ ಶಾಲೆಯು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೊಳಪಟ್ಟ ವಸತಿ ಶಾಲೆಯಾಗಿದೆ.ಕೋಮು ವೈಷಮ್ಯ ಬಿತ್ತುವ ಭಾಷಣದ ಆರೋಪಿಯನ್ನು ಮಕ್ಕಳಿಗೆ ಉಪದೇಶ ನೀಡಲು ಆಹ್ವಾನಿಸಿರುವುದರ ವಿರುದ್ಧ ಪೋಷಕರು...

ಸವಣಾಲು : ಬಸದಿಯಲ್ಲಿ ಧಾಮ ಸಂಪ್ರೋಕ್ಷಣ ಮಹೋತ್ಸವ

0

ಬೆಳ್ತಂಗಡಿ: ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯು ಊರ ಹಾಗೂ ಪರವೂರ ದಾನಿಗಳಿಂದ ಜೀರ್ಣೋದ್ಧಾರಗೊಂಡಿದ್ದು, ಧಾಮ ಸಂಪ್ರೋಕ್ಷಣ ಮಹೋತ್ಸವವು ಫೆ. 28 (ಶುಕ್ರವಾರ) ಹಾಗೂ ಮಾರ್ಚ್ 1 (ಶನಿವಾರ) ಮತ್ತು 2 ರಂದು (ಭಾನುವಾರ) ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಸದಿಯ ಆಡಳಿತ ಮಂಡಳಿ ಅಧ್ಯಕ್ಷರಾದ ಕಿಶೋರ್ ಹೆಗ್ಡೆ, ಎರ್ಮೆದೋಡಿ ಗುತ್ತು ಮತ್ತು ಕಾರ್ಯದರ್ಶಿ ಸುರೇಶ್ ಕುಮಾರ್, ಉಜಿರೆ ತಿಳಿಸಿದ್ದಾರೆ.ಫೆ:೨28 ಶುಕ್ರವಾರ: ಬೆಳಿಗ್ಯೆ ಗಂಟೆ 8 ರಿಂದ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತು ಉದ್ಘಾಟನೆ.ಅಪರಾಹ್ನ ಗಂಟೆ 2.30ರಿಂದ ನಾಂದಿಮಂಗಲ...

ವೇಣೂರು; ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ

0

ವೇಣೂರು; ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ - ಕಾಲೇಜು ನಿಟ್ಟಡೆ ವೇಣೂರಿನಲ್ಲಿ ವುದ್ಯಾರ್ಥಿನಿಯರಿಗೆ ಹದಿಯರಯದ ವಿಚಾರಗಳಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಎ ಜೆ ಆಸ್ಪತ್ರೆಯ ಡಾಕ್ಟರ್ ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು. ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ...

ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

0

ಬೆಳ್ತಂಗಡಿ;  ವಿಶ್ವ ಕ್ಯಾನ್ಸರ್ ದಿನ. ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಅಂತೆಯೇ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಸಂಪದ ಉಡುಪಿ, ಜೇಸಿಐ ಬೈಂದೂರು ಸಿಟಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇವುಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನವು ಬೈಂದೂರು ಪೇಟೆಯಲ್ಲಿ ಫೆ. 4 ರಂದು ಆಯೋಜಿಸಲಾಯಿತು. ಬೈಂದೂರು ಸಿಟಿಯ...

ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಬೆಳ್ತಂಗಡಿ;  ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ಸಾಮಾಜಿಕ ಬದ್ಧತೆಯ ಅಂಗವಾಗಿ ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ(ರಿ) ಮತ್ತು ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ “ಸಮೃದ್ಧಿ ಸಭಾಭವನ” ದಲ್ಲಿ ಉಚಿತ ಆರೋಗ್ಯ ಶಿಬಿರವು ದಿನಾಂಕ 08-02-2025 ನೇ ಶನಿವಾರ ನಡೆಯಲಿದೆ.ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶಾಸಕರಾದ ಮಾನ್ಯ ಶ್ರೀ.ಹರೀಶ್ ಪೂಂಜಾ ಅವರು...

ಬೆಳಾಲು; ಡಿ.ಪಿ ಸ್ಪೋಟ್ಸ್ ಕ್ಲಬ್ ವತಿಯಿಂದ ವಾಲಿಬಾಲ್ ಪಂದ್ಯಾಟ

0

ಬೆಳಾಲು : ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಬೆಳಾಲು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗ ಹಗ್ಗಜಗ್ಗಾಟ ಕಾರ್ಯಕ್ರಮದ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ 02 ರಂದು ದೊಂಪದಪಲ್ಕೆ ಕ್ರೀಡಾಂಗಣದಲ್ಲಿ ನಡೆಯಿತು.ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಯಶವಂತ್ ಗೌಡ, ಸಭಾಧ್ಯಕ್ಷತೆ ವಹಿಸಿದ್ದರು, ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ,...