ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ತಿರಂಗಾ ಯಾತ್ರೆ ಪಂಜಿನ ಮೆರವಣಿಗೆ

0

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ ತಿರಂಗ ಯಾತ್ರೆ ಪಂಜಿನ ಮೆರವಣಿಗೆ ನಡೆಯಿತು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಮೆರವಣಿಗೆಯಲ್ಲಿ ಪಾಲ್ಗೊಂಡು ಮೂರು ಮಾರ್ಗ ಸ್ಮಾರಕದ ಬಳಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಸಲ್ಲಿಸಿದರು, ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್...

ಬೆಳ್ತಂಗಡಿ : ಗಾಂಜಾ ಪ್ರಕರಣದ ಆರೋಪಿ ಮದಡ್ಕ ರಫೀಕ್ ನನ್ನು ಬಂಧಿಸಿದ ಪೊಲೀಸರು

0

ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಪೊಲೀಸು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌. ಆರೋಪಿ ಮದಡ್ಕ ರಫೀಕ್ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು CEN ಪೊಲೀಸ್...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಪಾಯಿಂಟ್ 17 ರಲ್ಲಿ ಸಿಗದ ಅಸ್ಥಿಪಂಜರ

0

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ದೂರುದಾರ ಗುರುತಿಸಿದ 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ ಅಳ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. 12:30 ರಿಂದ 3:50 ರವೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಗುಂಡಿಯನ್ನು ಮುಚ್ಚುಸುತ್ತಿದ್ದಾರೆ. ಇಂದಿನ ಕಾರ್ಯಾಚರಣೆ ಅಂತ್ಯ ಮಾಡಿ ವಾಪಸ್ ತೆರಳಿರುವ ಅಧಿಕಾರಿಗಳು.

ತೋಟತ್ತಾಡಿ: ಹಾಡು ಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು

0

ಬೆಳ್ತಂಗಡಿ: ಹಾಡು ಹಗಲೇ ಮನೆಯೊಂದರ ಬಾಗಿಲ ಬೀಗವನ್ನು ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿ ಇರಿಸಲಾಗಿದ್ದ 1.30 ರೂ. ಲಕ್ಷದ ಚಿನ್ನಾಭರಣ ಕಳವುಗೈದ ಘಟನೆ ಆ.12ರಂದು ತೋಟತ್ತಾಡಿಯಲ್ಲಿ ನಡೆದಿದೆ. ತೋಟತ್ತಾಡಿ ಗ್ರಾಮದ ವೆನ್ನಾಯಿಲ್‌ ಮನೆ ನಿವಾಸಿ ಕುಂಞಿ ಕೃಷ್ಣನ್‌ ಎಂಬವರ ಪುತ್ರ ನಿಧೀಶ್‌ ವಿ.ಕೆ. ಎಂಬವರ ದೂರಿನಂತೆ ಮನೆಯಲ್ಲಿ ತಂದೆ ಕುಂಞಿ ಕೃಷ್ಣನ್‌ಒಬ್ಬರೇ ಇದ್ದು, ಆ.12 ರಂದು ಬೆಳಿಗ್ಗೆ 9 ಗಂಟೆಗೆ ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗಿದ್ದರು.ಮಧ್ಯಾಹ್ನ 1ಗಂಟೆಯ ಸುಮಾರಿಗೆ ಊಟಕ್ಕೆಂದು ಮನೆಗೆ ಬಂದಾಗ ಮನೆಯ ಬಾಗಿಲ ಬೀಗವನ್ನು ಮುರಿದಿರುವುದು,ಹಾಗೂ...

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬರಹ ಗಿರೀಶ್ ಮಟ್ಟಣ್ಣನವರ್ ಲಾಯರ್ ಜಗದೀಶ್, ನವೀನ್ ಜೈನ್ ವಿರುದ್ದ ಸೇರಿದಂತೆ ಆರು ಪ್ರಕರಣಗಳು ದಾಖಲು

0

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಬರಹಗಳ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು ಗಿರೀಶ್ ಮಟ್ಟಣ್ಣನವರ್ ಕುಡ್ಲ ರಾಂ ಪೇಜ್ ಗೆ ನೀಡಿದ ಸಂದರ್ಶನದಲ್ಲಿ ಜೈನರ ಬಗ್ಗೆ ತುಚ್ಚವಾಗಿ ಮಾತನಾಡಿ ಜೈನಧರ್ಮ ದವರ ಭಾವನೆಗಳಿಗೆ ಅವಮಾನ ಮಾಡುವ ಕಾರ್ಯ ಮಾಡಿರುವ ಬಗ್ಗೆ ದೂರು ನೀಡಿದ್ದು ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂ ಪೇಜ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ.ಅದೇರೀತಿ ಬೆಳ್ತಂಗಡಿ ನಿವಾಸಿ ವಿಜಯ ಎಂಬವರ ದೂರಿನಂತೆ "ವಿಕಾಸ್...

ಎಸ್.ಡಿ.ಎಂ ಕಾಳೆಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಉದ್ಘಾಟನೆ; ವಿದ್ಯಾರ್ಥಿಗಳು ದೃಢಸಂಕಲ್ಪ ಮತ್ತು ಪ್ರಬಲ ಇಚ್ಛಾಶಕ್ತಿಯೊಂದಿಗೆ  ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.

0

ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮ ತಾಯಿ-ತಂದೆ ಹಾಗೂ ಗುರು-ಹಿರಿಯರಿಂದ ಮಾರ್ಗದರ್ಶನ ಮತ್ತು ಪ್ರೇರಣೆ ಪಡೆದು ದೃಢಸಂಕಲ್ಪ ಮತ್ತು ಪ್ರಬಲ ಇಚ್ಛಾಶಕ್ತಿಯೊಂದಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹಿರಿಯ ವಿದ್ವಾಂಸ ಎನ್.ಆರ್. ದಾಮೋದರ ಶರ್ಮ ಬಾರ್ಕೂರು ಹೇಳಿದರು. ಅವರು ಬುಧವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನಾ ಸಮಾರಮಭದಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ “ಚಿಗುರು” ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಮಾಜದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ಆತ್ಮವಿಶ್ವಾಸದ ಮೂಲಕ ಆದರ್ಶ ನಾಯಕತ್ವ ಗುಣದೊಂದಿಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ನಮ್ಮ ಸನಾತನಧರ್ಮ,...

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ. ರಕ್ಷಿತ್ ಶಿವರಾಂ

0

ಬೆಳ್ತಂಗಡಿ; ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ. ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ , ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಗಣತೆ, ಗೌರವವನ್ನು ಕಾಪಾಡುತ್ತದೆ. ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್...

ಗುರುವಾಯನಕೆರೆ ಇ‌ನ್ನೋವಾ ಕಾರಿನಲ್ಲಿ ಅಕ್ರಮ‌ದನ ಸಾಗಾಟ ಪತ್ತೆ

0

ಬೆಳ್ತಂಗಡಿ; ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಇದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ. ಚಾರ್ಮಾಡಿ ಕಡೆಯಿಂದ ಅತಿಯಾದ ವೇಗದಲ್ಲಿ ಬಂದ ಇನ್ನೋವಾ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದ್ದು ಗುರುವಾಯಕೆರೆಯಲ್ಲಿ ವಾಹನವನ್ನು ತಡೆದಿದ್ದಾರೆ. ಟ್ರಾಫಿಕ್ ಪೊಲೀಸರು ಇದ್ದು ವಾಹನವನ್ನು ತಡೆಯಲಾಗಿದೆ ಈ ವೇಳೆ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಸಿಕ್ಕಿಬಿದ್ದವನ ಮೇಲೆ...

ಪುದುವೆಟ್ಟು; ಬಿಜೆಪಿ ಗ್ರಾ.ಪಂ ಮಟ್ಟದ ಅಭ್ಯಾಸ ವರ್ಗ

0

ಪುದುವೆಟ್ಟು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 11 ರಂದು ನಡೆದ ಪುದುವೆಟ್ಟು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸವರ್ಗ ಸಭೆ ನಡೆಯಿತು. ಹಿರಿಯ ಕಾರ್ಯಕರ್ತರಾದ ದಿವಾಕರ ಗೌಡ ಮುಚ್ಚಾರು,ಪುಟ್ಟ ಗೌಡ ಬರಮೇಲು, ನಾರಾಯಣ ಪೂಜಾರಿ ಕಾಯರಂಡ ಇವರುಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಡಲ ಉಪಾಧ್ಯಕ್ಷರು ಅಭ್ಯಾಸವರ್ಗ ಸಂಚಾಲಕರಾದ ಕೊರಗಪ್ಪ ಗೌಡ ಚಾರ್ಮಾಡಿ ಉದ್ಘಾಟನ ಭಾಷಣ ನೆರವೇರಿಸಿದರು. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ...

ಬೆಳ್ತಂಗಡಿ : ಅಪ್ರಾಪ್ತೆಯನ್ನು ಬೆದರಿಸಿ ಗರ್ಭವತಿಯಾಗಿಸಿದ ಪ್ರಕರಣ; ಪೋಕ್ಸೋ ಪ್ರಕರಣದಡಿ ಆರೋಪಿಯ ಬಂಧನ 

0

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಧರ್ಮಸ್ಥಳ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.ಬಂಧಿತ ಆರೋಪಿ ಪುದುವೆಟ್ಟು ಗ್ರಾಮದ ನಿವಾಸಿ ದಿನೇಶ್ ಗೌಡ ಎಂಬಾತನಾಗಿದ್ದಾನೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವುದಲ್ಲದೆ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದು‌. ಕೆಲವು ದಿನಗಳ ಬಳಿಕ ಬಾಲಕಿ ಹೊಟ್ಟೆ ನೋವು ಎಂದು ಮನೆಯವರಿಗೆ ತಿಳಿಸಿದಾಗ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪೋಷಕರು...