ಬೆಳ್ತಂಗಡಿ :ಅಪ್ರಾಪ್ತ ಬಾಲಕಿಯ ಅತ್ಯಾಚಾರ & ಗರ್ಭಿಣಿ ಪ್ರಕರಣ; ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

0

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ...

ಮುಂಡಾಜೆಯಲ್ಲಿ ಚರಂಡಿಗೆ ಇಳಿದ ಬಸ್ ಹಲವರಿಗೆ ಗಾಯ

0

ಬೆಳ್ತಂಗಡಿ: ಧರ್ಮಸ್ಥಳದಿಂದ ಕಡಿರುದ್ಯಾವರ ಗ್ರಾಮದ ಆಲಂದಡ್ಕ ಸಾಗುವ ಸಾರಿಗೆ ಬಸ್ ಮುಂಡಾಜೆ ಸಮೀಪದ ಸೋಮಂತಡ್ಕದಲ್ಲಿ ಚರಂಡಿಗೆ ಸರಿದ ಘಟನೆ ಜ. 28ರ ಮಂಗಳವಾರ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಮಾರ್ಗವಾಗಿ ಮುಂಡಾಜೆ ಮೂಲಕ ಕಡಿರುದ್ಯಾವರದಿಂದ ಆಲಂದಡ್ಕ ಸಾಗುವ ಬಸ್ ಸುಮಾರು 4.30 ಕ್ಕೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳೇ ಇದ್ದು ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಮೋರಿ ಅಳವಡಿಸಲಾಗಿದೆ. ಈ ಸ್ಥಳದಲ್ಲಿ ಬಸ್ ನ ಸ್ಟೇರಿಂಗ್ ಕಟ್ ಅಥವಾ ಬ್ರೇಕ್ ಫೈಲ್ ನಿಂದಾಗಿ ಬಸ್ ಸಮೀಪದ ಮೋರಿಗೆ...

ಇಂದಬೆಟ್ಟು: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

0

ಬೆಳ್ತಂಗಡಿ; ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಶಿಬಿರವನ್ನು ಇಂದಬೆಟ್ಟಿನ ಸಂತ ಫ್ರಾನ್ಸಿಸ್ ಕ್ಲೀವಿಯ‌ರ್ ಚರ್ಚ್ ಸಭಾಂಗಣದಲ್ಲಿ ತಾಲೂಕು ಸಮಿತಿಯ ಅಧ್ಯಕ್ಷ ಬಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರದ ಈ ಮಹತ್ವದ ಯೋಜನೆಯನ್ನು ತಾಲೂಕಿನಲ್ಲಿ ಅತ್ಯಂತ ಉತ್ತಮವಾದ ರೀತಿಯಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ವಿವಿಧ ಕಾರಣಗಳಿಂದಾಗಿ ಯೋಜನೆಯಿಂದ ವಂಚಿತರಾದವರಿಗೆ ಯೋಜನೆಯ ಪ್ರಯೋಜನ ತಲುಪಿಸುವ ಉದ್ದೇಶದಿಂದ ಈ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.ಇಂದಬೆಟ್ಟು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಆಶಾಲತರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು...

ಎಸ್.ಡಿ.ಎಂ.ಕಾಲೇಜಿನಲ್ಲಿ ರಕ್ತದಾನ ಶಿಬಿರ

0

ಉಜಿರೆ : ಉಜಿರೆಯ ಶ್ರೀ ಧ. ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್, ಮಂಗಳೂರು , ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ , ರೋಟರಿ ಕ್ಲಬ್, ಬೆಳ್ತಂಗಡಿ , ಲಯನ್ಸ್ ಕ್ಲಬ್, ಬೆಳ್ತಂಗಡಿಯ ಸಹಯೋಗದೊಂದಿಗೆ ಕಾಲೇಜಿನಲ್ಲಿ ರಕ್ತ ದಾನ ಶಿಬಿರವನ್ನು ಜನವರಿ 27 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ‌ ಉದ್ಘಾಟನೆ‌ ನೆರವೇರಿಸಿದ ಲಯನ್ಸ್ ಕ್ಲಬ್, ಬೆಳ್ತಂಗಡಿಯ ಅಧ್ಯಕ್ಷರಾದ ಲಯನ್. ದೇವದಾಸ್ ಶೆಟ್ಟಿ ಹಿಬರೋಡಿ ಮಾತನಾಡಿ " ನಮ್ಮಲ್ಲಿ ಹಲವರು ದಾನಗಳಿದ್ದರೂ , ರಕ್ತದಾನ ಅದರಲ್ಲಿ ಶ್ರೇಷ್ಠ ದಾನವಾಗಿದೆ....

ಕೊಕ್ಕಡ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ; ಎಲ್ಲ ಕ್ಷೇತ್ರಗಳಲ್ಲೂ ಸಹಕಾರ ಭಾರತಿಗೆ ಗೆಲುವು

0

ಬೆಳ್ತಂಗಡಿ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.27ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದ ಪಿ. ಕುಶಾಲಪ್ಪ ಗೌಡ, ವಿಠಲ ಬಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಮಹಾಬಲ ಶೆಟ್ಟಿ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಸುನಿಲ್, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ರವಿಚಂದ್ರ ಪಿ., ಸಾಲಗಾರರ ಮಹಿಳಾ ಮೀಸಲು ಕ್ಷೇತ್ರದಿಂದ...

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ ನಾಲ್ವರಿಗೆ ಗಂಭೀರ ಗಾಯ

0

ಬೆಳ್ತಂಗಡಿ:ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಭಾನುವಾರ ತಡರಾತ್ರಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ(70), ಮಂಜುಳಾ(50) ಮತ್ತು ರೇಣುಕಾ(26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ; ಕಾಜೂರು ತಂಙಳ್ ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ

0

ಬೆಳ್ತಂಗಡಿ; ಧರ್ಮ ಮತ್ತು ಆಧ್ಯಾತ್ಮಿಕತೆ ಒಳಗೊಂಡಿರುವ ಬದುಕು ಸೌಹಾರ್ದತೆಯ ನಾಡಿಗೆ ಪ್ರೇರಣೆ. ಹಿಂದೂ ಕ್ರೈಸ್ತ ಮುಸಲ್ಮಾನ ಜೈನ್ ಬೌದ್ದ ಯಾವುದೇ ಧರ್ಮವಿರಲಿ ಅದರ ಆಚಾರ್ಯರು, ಮುನಿಗಳು ಮತ ಪಂಡಿತರು ಕಲಿಸಿಕೊಡುವಮೂಲತತ್ವ ಕಲಿಯದೆ ಸ್ವತಂತ್ರವಾಗಿ ಬದುಕಲು ಆರಂಭಿಸಿದ್ದರಿಂದಲೇ ಇಲ್ಲಿ ಸಂಘರ್ಷ ಗಳಿಗೆ ಕಾರಣವಾಗುತ್ತಿದೆ.ಆದ್ದರಿಂದ ಧರ್ಮದ ತಿರುಳನ್ನು, ಧರ್ಮ ವಿಜ್ಞಾನವನ್ನು ತಮ್ಮ ಅನುಯಾಯಿಗಳಿಗೆ ಕಲಿಸಿಕೊಡಬೇಕಾದುದು ಧರ್ಮಶ್ರೇಷ್ಠರುಗಳ ಜವಾಬ್ಧಾರಿಯಾಗಿದೆ. ಹಾಗಿದ್ದರೆ ಮಾತ್ರ ಸುಂದರ ಭಾರತ ನೋಡಲು ಸಾಧ್ಯ ಎಂದು ಸಯ್ಯಿದ್ ಕಾಜೂರು ತಂಙಳ್ ಹೇಳಿದರು. ಕಾಜೂರು ಮಖಾಂ ಶರೀಫ್ ನಲ್ಲಿ ಆರಂಭಗೊಂಡ 2025 ನೇ ಉರೂಸ್ ಸಂಭ್ರಮ ಉದ್ಘಾಟಿಸಿ...

ಕಕ್ಕಿಂಜೆ ವೃದ್ಧ ದಂಪತಿಯರ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆಯಲ್ಲಿ ಮನೆಗೆ ನುಗ್ಗಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ದರೋಡೆ ಗೈದ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2016ರ ನವೆಂಬರ್ 10ರಂದು ರಾತ್ರಿ ಕಕ್ಕಿಂಜೆ ಹೈಸ್ಕೂಲ್ ನ ಹಿಂಬದಿಯ ಮನೆಯಲ್ಲಿ ವಾಸಿಸುತ್ತಿದ್ದ ವೃದ್ದ ದಂಪತಿಯರಾದ ವರ್ಕಿ ಹಾಗೂ ಏಲಿಕುಟ್ಟಿ ಅವರ ಕೊಲೆಯಾಗಿತ್ತು‌. ಕೊಲೆ ಪ್ರಕರಣದ ಅಪರಾಧಿಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ದರ್ ಎಂಬಾತ ಅಪರಾಧಿ ಎಂಬುದು ಸಾಬೀತಾಗಿದ್ದು ಅವನಿಗೆ...

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕ್ರೆ ಅರಣ್ಯ ಬೆಂಕಿಗೆ ಆಹುತಿ

0

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಉರಿಯುತ್ತಿದ್ದು, ಅಗ್ನಿಶಾಮಕ‌ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿಲಿನಲ್ಲಿಯೇ ಹರಸಾಹಸ ಮಾಡಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿದರು. ಸತತ ಪ್ರಯತ್ನದಿಂದ ಬೆಂಕಿ ಹತೋಟಿಗೆ ಬಂದಿದ್ದು ಇನ್ನು ಕಾರ್ಯಾಚರಣೆ ಮುಂದುವರಿದಿದೆ. ಸಿಬ್ಬಂದಿಗಳು ಕಡಿದಾದ ಬೆಟ್ಟವನ್ನೇರಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಚಾರ್ಮಾಡಿ ಅರಣ್ಯದಲ್ಲಿ ಎರಡನೇ ಸಲ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ನಿಧನ

0

ಬೆಳ್ತಂಗಡಿ; ತೋಟತ್ತಾಡಿ ನಿವಾಸಿ ವಿ.ಒ ಜೋಸೆಫ್ ಕುರುಪ್ಪನಾಟ್ (92) ವಯೋಸಹಜ ಅನಾ ರೋಗ್ಯದಿಂದ ಜ 24 ರಂದು ನಿಧನರಾಗಿದ್ದಾರೆ‌ಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಶಾಜನ್, ಬಿನ್ಸಿ ರೆಜಿ, ಸೊಸೆ ಶೀನಾ ಬಿಜು, ಆಳಿಯಂದಿರಾದ ಶಾಜನ್ ಪ್ಲಾಕಾಟ್, ರೆಜಿ ಎಮ್ಮಾನುವೆಲ್, ಮೊಮ್ಮಕ್ಕಳಾದ ನಿಮಯಾ, ದಿವಿನ್, ದಿಯಾ, ಡೋನಾ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಜ 29 ಬುಧವಾರ 10.30 ಕ್ಕೆ ತೋಟತ್ತಾಡಿ ಸೈಂಟ್ ಆಂಟನ್ ಆಂಟನಿ ಚರ್ಚ್ ನಲ್ಲಿ ನಡೆಯಲಿದೆ