ಕೋಟೆಕಾರು ದರೋಡೆ ಪ್ರಕರಣ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡಿನ ದಾಳಿ

0

ಮಂಗಳೂರು: ತನಿಖೆಯ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ ನಡೆದಿದೆ.ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ...

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

0

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ, ಸದಸ್ಯರಾಗಿ, ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ಕೋಟ್ಯಾನ್, ಶಿವಾನಂದ, ಪುರಂದರ ಗೌಡ, ರಮೇಶ್ ನಾಯ್ಕ್ , ಶ್ರೀಮತಿ ಬೇಬಿ ಕೇಶವ ಪೂಜಾರಿ, ಶ್ರೀಮತಿ ಸುಮಿತ್ರ ಹರೀಶ್ ಪೂಜಾರಿ, ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

0

ಬೆಳ್ತಂಗಡಿ. ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ,ಬೆಳ್ತಂಗಡಿತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷರಾದ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷರಾದ ರಮಾನಂದ ಸಾಲಿಯನ್ ಮುಂಡೂರು...

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಹೈಕೋರ್ಟ್ ಆದೇಶ

0

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಸೂಚನೆ ನೀಡಿರುವ ಹೈಕೋರ್ಟ್‌, ಒಂದೊಮ್ಮೆ ಅವರು ಹೇಳಿಕೆ ನೀಡಿ ಅದು ಮಾನಹಾನಿಕಾರಕ ಮತ್ತು ಅಪರಾಧವೆಂದು ತಿಳಿದು ಬಂದರೆ ಪೊಲೀಸರು ಕಾನೂನು ಕ್ರಮ ಜರಗಿಸಬೇಕು ಎಂದು ನಿರ್ದೇಶನ ನೀಡಿದೆ. ಡಾ| ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ಹೇಳಿಕೆ ನೀಡುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿಗೆ ವಿರುದ್ಧ ಕಾನೂನು ಕ್ರಮ ಜರಗಿಸಲು...

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚುನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

0

ಬೆಳ್ತಂಗಡಿ:ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ. ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಸಂಭವವಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.ದಕ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ.ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ...

ಕೋಟೆಕಾರು ಬ್ಯಾಂಕ್‌ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

0

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸೋಮವಾರ ಮಾಹಿತಿ ನೀಡಿದ್ದಾರೆ. ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.ಬಂಧಿತ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, ತಲವಾರು, ಪಿಸ್ತೂಲುಗಳು ಮತ್ತು ಇತರ ವಸ್ತುಗಳನ್ನು ಕೂಡ ವಶ ಪಡಿಸಿಕೊಂಡಿರುವ ಬಗ್ಗೆ...

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

0

ಬೆಳ್ತಂಗಡಿ: ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಗಣಕಯಂತ್ರ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷರು, ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ನೇರವೇರಿಸಿ‌ ಶುಭ ಹಾರೈಸಿದರು.ಭದ್ರತಾ ಕೊಠಡಿ ಉದ್ಘಾಟನೆಯನ್ನು ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ...

ಬೆಳ್ತಂಗಡಿ; ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ, ಸೇಫ್ಟಿ ರೈಡ್ ಜಾಗೃತಿ ಅಭಿಯಾನ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್‌ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು ಜ.19ರಂದು ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಡೆಯಿತು.ಮಂಗಳೂರಿನಿಂದ ಚಾರ್ಮಾಡಿವರೆಗೆ ಸಾಗಿದ ಈ ಮೋಟಾರು ಸೈಕಲ್ ರ್‍ಯಾಲಿಯು ಬೆಳಗ್ಗೆ ಉಜಿರೆ ತಲುಪಿದ್ದು, ಅಲ್ಲಿಂದ ಚಾರ್ಮಾಡಿ ಘಾಟ್‌ನಲ್ಲಿರುವ ಬೆಳ್ತಂಗಡಿ ತಾಲೂಕಿನ ಗಡಿ ಭಾಗದವರೆಗೂ ಸಾಗಿ ಬಳಿಕ ಮತ್ತೆ ಸಂಜೆ ವೇಳೆಗೆ ಬೆಳ್ತಂಗಡಿ ನಗರದ ಮೂಲಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಲುಪಿತು.ರ್‍ಯಾಲಿಯುದ್ದಕ್ಕೂ ಯುವಕರಿಗೆ ಮೋಟಾರು...

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ: ದಿನೇಶ್ ಗುಂಡೂರಾವ್

0

ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ವಿಸ್ತೃತ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು."ಗ್ರಾಮೀಣ ಪ್ರದೇಶದಲ್ಲಿ ಉನ್ನತ ಮಟ್ಟದ ಆಸ್ಪತ್ರೆಗಳ ಬೇಡಿಕೆ ಹೆಚ್ಚುತ್ತಿದ್ದು, ಬೆನಕ ಆಸ್ಪತ್ರೆ ಇದಕ್ಕೆ ಉತ್ತಮವಾಗಿ ಸ್ಪಂದಿಸಿದೆ. ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ರಿಯಾಯಿತಿ ದರದ ಸೇವೆ ಸಿಗುವಂತಾಗಲಿ. ಬೆನಕ ಆಸ್ಪತ್ರೆಯ ಸೇವೆ, ರೋಗಿಗಳ ಕಾಳಜಿ,...

ನಿರಂತರ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ; ಡಾ.ಡಿ ವೀರೇಂದ್ರ ಹೆಗ್ಗಡೆಯವರು. ಧರ್ಮಸ್ಥಳದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ,

0

ಬೆಳ್ತಂಗಡಿ; ವಾಲಿಬಾಲ್ ಬಹಳ ಪ್ರಮುಖವಾದ ಕ್ರೀಡೆ ಆಟಗಾರರು ನಿರಂತರ ಅಭ್ಯಾಸದಿಂದ ಮಾತ್ರ ಉತ್ತಮ ಆಟಗಾರನಾಗಲು ಸಾಧ್ಯ, ನಿರಂತರವಾದ ತಲ್ಲೀನತೆ, ತೊಡಗಿಸಿಕೊಳ್ಳುವಿಕೆ ಅಗತ್ಯವಾಗಿದೆ, ಆಟ ಕೇವಲ ಒಂದು ದಿನಕ್ಕಾಗಿ ಆಗಬಾರದು ಸ್ಥಳೀಯ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರಸ್ಪೆಕ್ಟ್ರಮ್ ಧರ್ಮಸ್ಥಳ ಇದರ ವತಿಯಿಂದ ಧರ್ಮಸ್ಥಳ ದಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿ ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು...