ಕೋಟೆಕಾರು ಬ್ಯಾಂಕ್‌ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

0

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸೋಮವಾರ ಮಾಹಿತಿ ನೀಡಿದ್ದಾರೆ. ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.ಬಂಧಿತ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, ತಲವಾರು, ಪಿಸ್ತೂಲುಗಳು ಮತ್ತು ಇತರ ವಸ್ತುಗಳನ್ನು ಕೂಡ ವಶ ಪಡಿಸಿಕೊಂಡಿರುವ ಬಗ್ಗೆ...

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

0

ಬೆಳ್ತಂಗಡಿ: ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉದ್ಘಾಟಿಸಿದರು. ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಗಣಕಯಂತ್ರ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಸನ್ನ ಶಿಕ್ಷಣ ಸಂಸ್ಥೆ ಅಧ್ಯಕ್ಷರು, ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ನೇರವೇರಿಸಿ‌ ಶುಭ ಹಾರೈಸಿದರು.ಭದ್ರತಾ ಕೊಠಡಿ ಉದ್ಘಾಟನೆಯನ್ನು ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ...

ಬೆಳ್ತಂಗಡಿ; ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ, ಸೇಫ್ಟಿ ರೈಡ್ ಜಾಗೃತಿ ಅಭಿಯಾನ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್. ಯತೀಶ್ ಅವರ ನೇತೃತ್ವದಲ್ಲಿ ಹೊಂಡಾ ಬಿಗ್‌ವಿಂಗ್ ಮಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಸೇಪ್ಟಿ ರೈಡ್ ಎಂಬ ಜಾಗೃತಿ ಅಭಿಯಾನವು ಜ.19ರಂದು ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಡೆಯಿತು.ಮಂಗಳೂರಿನಿಂದ ಚಾರ್ಮಾಡಿವರೆಗೆ ಸಾಗಿದ ಈ ಮೋಟಾರು ಸೈಕಲ್ ರ್‍ಯಾಲಿಯು ಬೆಳಗ್ಗೆ ಉಜಿರೆ ತಲುಪಿದ್ದು, ಅಲ್ಲಿಂದ ಚಾರ್ಮಾಡಿ ಘಾಟ್‌ನಲ್ಲಿರುವ ಬೆಳ್ತಂಗಡಿ ತಾಲೂಕಿನ ಗಡಿ ಭಾಗದವರೆಗೂ ಸಾಗಿ ಬಳಿಕ ಮತ್ತೆ ಸಂಜೆ ವೇಳೆಗೆ ಬೆಳ್ತಂಗಡಿ ನಗರದ ಮೂಲಕ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಲುಪಿತು.ರ್‍ಯಾಲಿಯುದ್ದಕ್ಕೂ ಯುವಕರಿಗೆ ಮೋಟಾರು...

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ: ದಿನೇಶ್ ಗುಂಡೂರಾವ್

0

ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ವಿಸ್ತೃತ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು."ಗ್ರಾಮೀಣ ಪ್ರದೇಶದಲ್ಲಿ ಉನ್ನತ ಮಟ್ಟದ ಆಸ್ಪತ್ರೆಗಳ ಬೇಡಿಕೆ ಹೆಚ್ಚುತ್ತಿದ್ದು, ಬೆನಕ ಆಸ್ಪತ್ರೆ ಇದಕ್ಕೆ ಉತ್ತಮವಾಗಿ ಸ್ಪಂದಿಸಿದೆ. ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ರಿಯಾಯಿತಿ ದರದ ಸೇವೆ ಸಿಗುವಂತಾಗಲಿ. ಬೆನಕ ಆಸ್ಪತ್ರೆಯ ಸೇವೆ, ರೋಗಿಗಳ ಕಾಳಜಿ,...

ನಿರಂತರ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ; ಡಾ.ಡಿ ವೀರೇಂದ್ರ ಹೆಗ್ಗಡೆಯವರು. ಧರ್ಮಸ್ಥಳದಲ್ಲಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ,

0

ಬೆಳ್ತಂಗಡಿ; ವಾಲಿಬಾಲ್ ಬಹಳ ಪ್ರಮುಖವಾದ ಕ್ರೀಡೆ ಆಟಗಾರರು ನಿರಂತರ ಅಭ್ಯಾಸದಿಂದ ಮಾತ್ರ ಉತ್ತಮ ಆಟಗಾರನಾಗಲು ಸಾಧ್ಯ, ನಿರಂತರವಾದ ತಲ್ಲೀನತೆ, ತೊಡಗಿಸಿಕೊಳ್ಳುವಿಕೆ ಅಗತ್ಯವಾಗಿದೆ, ಆಟ ಕೇವಲ ಒಂದು ದಿನಕ್ಕಾಗಿ ಆಗಬಾರದು ಸ್ಥಳೀಯ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಶನಿವಾರಸ್ಪೆಕ್ಟ್ರಮ್ ಧರ್ಮಸ್ಥಳ ಇದರ ವತಿಯಿಂದ ಧರ್ಮಸ್ಥಳ ದಲ್ಲಿ ನಡೆದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿ ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು...

ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವ ದನೇಶ್ ಗುಂಡೂರಾವ್

0

ಬೆಳ್ತಂಗಡಿ; ತಾಲೂಕು ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರೂ ತಿಂಗಳಿಗೆ ಕೇವಲ 15ಹೆರಿಗೆಗಳು ಮಾತ್ರ ಆಗುತ್ತಿದೆ. ಉಚಿತ ವ್ಯವಸ್ಥೆ ಇದ್ದರೂ ಯಾಕೆ ಜನ ಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ವೈದ್ಯರುಗಳನ್ಬು ಪ್ರಶ್ನಿಸಿದರು.ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಘಟಕಗಳ ಉದ್ಘಾಟನೆಗೆಂದು ಆಗಮಿಸಿದ ವೇಳೆ ಆಸ್ಪತ್ರೆಯ ಪ್ರಗತಿಯ ಬಗ್ಗೆ ಪ್ರಶ್ನಿಸಿ ವೈದ್ಯರುಗಳನ್ನು ತರಾಟೆಗೆ ತೆಗೆದುಕೊಂಡರು.ತಾಲೂಕು ಆಸ್ಪತ್ರೆಯಲ್ಲಿ ತಿಂಗಳಿಗೆ 15ಹೆರಿಗೆಗಳು ಮಾತ್ರ ನಡೆಯುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಸಚಿವರು ತಜ್ಞ ವೈದ್ಯರು, ಅನಸ್ತೇಷಿಯಾ ಸ್ಪೆಷ್ಯಲಿಸ್ಟ್ ಎಲ್ಲರೂ ಇದ್ದಾರೆ ಆದರೆ ಜನ ಯಾಕೆ...

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ

0

ಬೆಳ್ತಂಗಡಿ;  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಜೈನ ಸಮುದಾಯದ ಮುಖಂಡರುಗಳು ಭೇಟಿಯಾಗಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯನ್ನು ನೀಡಲಾಯಿತು ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ...

ಮಚ್ಚನ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ತಾ.ಪಂ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇದರ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಇದರ 4ಕೋಟಿ ವೆಚ್ಚದ  ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ಮಚ್ಚಿನದಲ್ಲಿ ನಡೆಯಿತು.ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ನೆರವೇರಿಸಿ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿದ್ದರು, ವೇದಿಕೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಪುತ್ತೂರು...

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

0

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಜನವರಿ 24ರಿಂದ ಆರಂಭಗೊಂಡು ಫೆಬ್ರವರಿ 2 ರ ವರೆಗೆ ನಡೆಯಲಿದ್ದು, ಇದರ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆಯು ಜನವರಿ 17ರಂದು ಕಾಜೂರಿನ ಆಡಳಿತ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅವರು ಮಾತನಾಡಿ, ಕಾಜೂರು ಉರೂಸ್ ಸಂಭ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ...

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

0

ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಶುಕ್ರವಾರ ನಡೆಯಿತು. ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ...