ಬೆಳ್ತಂಗಡಿ : ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

0

ಧರ್ಮಸ್ಥಳ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್ (79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಜೂ.29ರಂದು ಮಧ್ಯಾಹ್ನ ಕಾರ್ಯತಡ್ಕ ಸಿ.ಎ ಬ್ಯಾಂಕ್ ಗೆ ಕೆಲಸ ನಿಮ್ಮಿತ ಬಂದಿದ್ದ ಸಂದರ್ಭ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾದರೂ ಸಹ ಚಿಕಿತ್ಸೆ ಫಲಿಸದೆ ಮೃತ ಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಓರ್ವೆ ಪುತ್ರಿ ಜಾನ್ಸಿ, ಈರ್ವರು ಪುತ್ರರಾದ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿರುವ ಬೆನ್ನಿಚ್ಚನ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಬೆಳ್ತಂಗಡಿ;  ಮಳೆಗೆ ಮತ್ತೆ ಕೊಚ್ಚಿಹೋದ ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ತಾತ್ಕಲಿಕ ಸೇತುವೆ

0

ಬೆಳ್ತಂಗಡಿ : ಉಜಿರೆ ಗುರಿಪಳ್ಳ ರಸ್ತೆಯ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ವಾಗುತ್ತಿದ್ದು. ಇಲ್ಲಿ ತಾತ್ಕಾಲಿಕವಾಗಿ ಮೋರಿ ಅಳವಡಿಸಿ ನಿರ್ಮಿಸಲಾಗಿದ್ದ ರಸ್ತೆ ಜೂ. 29ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದೆ.ಜೂನ್ ಆರಂಭದಲ್ಲಿ ಸುರಿದ ಮಳೆಗೆ ಅಂಬಡಬೆಟ್ಟು ಎಂಬ ಪ್ರದೇಶದಲ್ಲಿ ಹರಿಯುವ ನದಿಗೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಕೊಚ್ಚಿ ಹೋಗಿತ್ತು.ಕನ್ಯಾಡಿ-1 ಗ್ರಾಮ ವ್ಯಾಪ್ತಿಯ ಪ್ರದೇಶದ ಜನರಿಗೆ ಉಜಿರೆ ಹಾಗೂ ಇತರೆಡೆಯ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಉಜಿರೆ, ನಿಡಿಗಲ್ ಮೂಲಕ ನಡ, ಇಂದಬೆಟ್ಟು ಕೊಲ್ಲಿ, ಗುರಿಪಳ್ಳ, ಪಡ್ಡು, ಕಯ್ಯಂಗು ಮೊದಲಾದ ಪ್ರದೇಶದ ಸಾವಿರಾರು ಕುಟುಂಬಗಳಿಗೆ...

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

0

ಬೆಳ್ತಂಗಡಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಗೌರವ ಸನ್ಮಾನವು ಭಾನುವಾರ ಉಜಿರೆ,ಲಾಯಿಲ ಮತ್ತು ಅಳದಂಗಡಿಯಲ್ಲಿ ಜರುಗಿತು.ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿ,ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಈ ಗೌರವ ಇನ್ನುಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು.ವಿದ್ಯಾರ್ಥಿಗಳು,ಯುವ ಜನತೆ ದುಶ್ಚಟಗಳಿಗೆ ಬಲಿಯಾಗದೆ,ಪೋಷಕರ ಆಶಯಕ್ಕೆ ಪೂರಕವಾಗಿ...

ಸಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ತೆಗೆ ದಕ್ಕೆಯಾಗುವ ಪೋಸ್ಟ್;  ಸನಾತನಿ ಸಿಂಹ ಫೇಸ್ ಬುಕ್ ಪೇಜ್ ನ ಆನಂದ ಬಂಧನ

0

ಮಂಗಳೂರು : ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, 'ಸನಾತನಿ ಸಿಂಹ' ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಪ್ರಕರಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರ ನಿವಾಸಿ ಆನಂದ.ಎ ಎಂಬಾತನನ್ನು ದಿನಾಂಕ: ದಿನಾಂಕ 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ...

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಬಂಧನ

0

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವೇಣೂರು ಪೊಲೀಸರು ಮೂಡಬಿದಿರೆ ಬಳಿ ಬಂಧಿಸಿದ್ದಾರೆ. 2023 ರಲ್ಲಿ ಸಂತ್ರಸ್ತ ಬಾಲಕಿ 5.6 ವರ್ಷದ ಸಂದರ್ಭ ಈ ಕೃತ್ಯ ನಡೆದಿದ್ದು ಸಂತ್ರಸ್ತ ಮಗುವಿನ ಸಂಬಂಧಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಹಾಗೂ ಸ್ಥಳೀಯ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ  ಜೊತೆಗೂಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ. ಆರೋಪಿಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವ ಬಾಲಕನನ್ನು(16) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಕಾನೂನು ಸಂಘರ್ಷಕ್ಕೆ...

ಉಪ್ಪಿನಂಗಡಿ; 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಕಳ್ಳತನ ಪ್ರಕರಣದಲ್ಲಿ ಸುಮಾರು 16 ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ತಮಿಳುನಾಡು ರಾಜ್ಯದ ತಿರುಣವೇಲಿ ತಾಲೂಕಿನ ಅಲಕುಳಂ ಗ್ರಾಮದ ಮಾರ್ಕಲಕುಳಂ ನಿವಾಸಿ ಷಣ್ಮುಗಯ್ಯನ ಮಗ ಮಾಡ ಸ್ವಾಮಿ (48) ಎಂಬಾತನನ್ನು ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಾಗರಾಜ್.ಇ.ಪಿ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಸುತೇಶ್.ಕೆ.ಪಿ ತಂಡದ ಸಿಬ್ಬಂದಿ ಶಿವರಾಮ್ ರೈ ಮತ್ತು ಗಜೇಂದ್ರರವರು ಜೂ.27 ರಂದು ಪುತ್ತೂರು ತಾಲೂಕಿನ ಕೃಷ್ಣ ನಗರ ಎಂಬಲ್ಲಿಂದ ಬಂಧಿಸಿ...

ಬೆಳ್ತಂಗಡಿ; ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ‌ ಆಚರಣೆ

0

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗರ ಗೌಡರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ಸಹಭಾಗಿತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಜೂ.27 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ...

ಬೆಳ್ತಂಗಡಿ; ತಲೆಮರೆಸಿ ಕೊಂಡಿರುವ ವಿಠಲಗೌಡನಿಗಾಗಿ ಪೊಲೀಸರಿಂದ‌ ವಿವಿದೆಡೆ ಶೋಧ

0

ಬೆಳ್ತಂಗಡಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾದ ಬಳಿಕ ತಲೆ ಮರೆಸಿಕೊಂಡಿರುವ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರ ಬಂಧನಕ್ಕೆ ಪೊಲೀಸರು ಜೂ.27ರಂದು ಬೆಳ್ತಂಗಡಿ ತಾಲೂಕಿನ ವಿವಿದೆಡೆ ವ್ಯಾಪಕ ಶೋಧ ನಡೆಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಾತಾಡಿದ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಒಂದು ತಿಂಗಳ ಸಜೆ ವಿಧಿಸಿ ನಾಲ್ಕು ತಿಂಗಳ...

ಬೆಳ್ತಂಗಡಿ; ಸಂತ ಲಾರೆನ್ಸ್ ಪ್ರಧಾನ ದೇವಾಲಯದ ಮಾತೃವೇದಿ ವತಿಯಿಂದ ಪಡಂಗಡಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಹಾಯಧನ ವಿತರಣೆ

0

ಬೆಳ್ತಂಗಡಿ: ಸೀರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಥಮಿಕ ಶಾಲೆ ಪಡಂಗಡಿಯಲ್ಲಿ "ವಿದ್ಯಾದೀಪ" ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ ನಡೆಯಿತು.ಶಾಲೆಯ ವಿದ್ಯಾರ್ಥಿಗಳ ಸಮವಸ್ತ್ರ ಸಹಾಯಧನವಾಗಿ ರೂ 12,000 ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾತೃವೇದಿ ಸಂಘಟನೆಯ ನಿರ್ದೇಶಕರಾದ ಫಾ. ಜೋಬಿ ಪುಲ್ಲಾಟ್, ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇಲ್ಲಿನ ಧರ್ಮಗುರುಗಳಾದ ಫಾ.ಜೋಸ್ ಆಯಾಂಕುಡಿ ಹಾಗೂ ಮಾತೃವೇದಿ ಸಂಘಟನೆಯ ಪದಾಧಿಕಾರಿಗಳು,ಶಾಲಾ ಮುಖ್ಯೋ ಪಾಧ್ಯಾಯರು, ಎಸ್.ಡಿ.ಎಂ ಸಿ ಸದಸ್ಯರು ಶಿಕ್ಷಕರು ಉಪಸ್ಥಿತರಿದ್ದರು.

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ

0

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆಯ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜೂ. 27ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.ಲಾಯಿಲ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ಅಧ್ಯಕ್ಷ ಕೆ. ಗಂಗಾಧರ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೆಂಪೇಗೌಡರ ದೂರದೃಷ್ಟಿ ಸ್ಮರಿಸುವುದರ ಜೊತೆಗೆ ಸಮಾಜಮುಖಿ ಕಾರ್ಯಗಳ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಕುಮಾ‌ರ್ ಅಂತರ...