ಡಾ.ಗೋಪಾಲಕೃಷ್ಣ ಮತ್ತು ಡಾ ಭಾರತಿ ದಂಪತಿಗಳ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ
ಬೆಳ್ತಂಗಡಿ; ಉಜಿರೆಯ ಬೆನಕ ಆಸ್ಪತ್ರೆಗೆ ದಿನಾಂಕ13.01.2025ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಮುಂದೆಯೂ ಇದೆ ರೀತಿ ನೆಡಿಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ...
ಉಜಿರೆ ಎಸ್ ಡಿಎಂ ಕಾಲೇಜು ಜ.17 ಹಾಗೂ 18ರಂದು ‘ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತ ಅಂತರಾಷ್ಟ್ರೀಯ ವಿಚಾರ ಸಂಕಿರಣ
ಬೆಳ್ತಂಗಡಿ; "ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆ ಪಾತ್ರ ಎಂಬ ವಿಚಾರದ ಬಗ್ಗೆ ಉಜಿರೆಯ ಎಸ್ ಡಿ ಎಂ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗವು ಜ. 17 ಹಾಗೂ 18ರಂದು ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಿದೆ" ಎಂದು ಕಾಲೇಜಿನ ಪ್ರಿನ್ಸಿಪಾಲ್ ಡಾ. ಬಿ.ಎ. ಕುಮಾರ ಹೆಗ್ಡೆ ಹೇಳಿದರು.ಸೋಮವಾರ ಕಾಲೇಜಿನಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು "ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಜ.17ರಂದು ಬೆಳಿಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಆಸ್ಟ್ರೇಲಿಯಾ ನ್ಯಾಷನಲ್ ವಿಶ್ವವಿದ್ಯಾಲಯದ ಡಾ. ಕಾಲಿಯಪ್ಪ ಕಾಲಿರಾಜನ್ ಹಾಗೂ ಎಸ್ ಡಿಎಂ...
ಕಡಿರುದ್ಯಾವರ; ಕಾಡಾನೆ ದಾಳಿ ಕೃಷಿ ಹಾನಿ
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದಲ್ಲಿ ಕಾಡಾನೆಗಳು ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟು ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.ಇಲ್ಲಿನ ಪಣಿಕಲ್ಲು ನಿವಾಸಿ ಕೃಷ್ಣ ಭಟ್ ಎಂಬವರ ತೋಟಕ್ಕೆ ಕಾಡಾನೆಗಳು ನುಗ್ಗಿದ್ದು ಗೋಟದಲ್ಲಿದ್ದ ಬಾಳೆ ಗಿಡಗಳನ್ನು ಪುಡಿ ಗೈದಿದೆ. ಐದು ಅಡಿಕೆಮರಗಳನ್ನು ಮುರಿದು ಹಾಕಿದೆ. ತೋಟದಲ್ಲಿ ನೀರಿನ ಪೈಪ್ ಹಾಗೂ ಸ್ಪ್ರಿಂಕ್ಲರ್ ಗಳನ್ನು ಹಾನಿಗೊಳಿಸಿದೆ.
ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ.ತಾಲೂಕು ಯುವಜನ ಒಕ್ಕೂಟದ ಮಹಾಸಭೆಯು ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಒಕ್ಕೂಟದ ಅಧ್ಯಕ್ಷರಾದ ರಮನಂದ ಸಾಲಿಯನ್ ಮುಂಡೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025 -26 ನೇ ಸಾಲಿನ ನೂತನ ಅಧ್ಯಕ್ಷರು ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಇಡ್ಯಾ, ಕೋಶಾಧಿಕಾರಿಯಾಗಿ ಪ್ರಶಾಂತ್ ಮಚ್ಚಿನ, ಉಪಾಧ್ಯಕ್ಷರಾಗಿ ಸದಾಶಿವಾ ಹೆಗ್ಡೆ, ಸೌಮ್ಯ ಲಾಯಿಲ, ಜತೆ ಕಾರ್ಯದರ್ಶಿಯಾಗಿ ಸುಧಾಮಣಿ ಆರ್, ಕ್ರೀಡಾ ಸಂಚಾಲಕರಾಗಿ ಹರೀಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶೇಖರ್ ಲಾಯಿಲ, ಸಂಘಟನಾ ಕಾರ್ಯದರ್ಶಿಗಳಾಗಿ ಮಹಮದ್ ಸಿದ್ದಿಕ್ ಮಲೆಬೆಟ್ಟು, ...
ಹೊಸಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ
ಹೊಸಂಗಡಿ:ಜಿ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರಪ್ರಸಾದ್ (45) ಮೂಡಬಿದ್ರೆ ಖಾಸಾಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಇಂದು ಬೈಕ್ ನಲ್ಲಿ ಕೆಲಸ ನಿಮಿತ್ತ ತೆರಳುತ್ತಿರುವಾಗ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಕೂಡಲೇ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು ಎಂದು ತಿಳಿದು ಬಂದಿದೆ.
ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ
ಕೀರ್ತಿಶೇಷ ಮಾಜಿ ಶಾಸಕ ವಸಂತ ಬಂಗೇರರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಸಮಿತಿ ವತಿಯಿಂದ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆಯುವ ಬೃಹತ್ ರಕ್ತದಾನ ಶಿಬಿರ ಮತ್ತು ಬಂಗೇರ ಬ್ರಿಗೇಡ್ ವತಿಯಿಂದ ಮದ್ದಡ್ಕದ ಬಂಡಿಮಠ ಮೈದಾನದಲ್ಲಿ ನಡೆಯಲಿರುವ ಕಬಡ್ಡಿ ಪಂದ್ಯಾಟಗಳಲ್ಲಿ ಬಂಗೇರರ ಅಭಿಮಾನಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ವಸಂತ ಬಂಗೇರರ ಹಿರಿಯ ಪುತ್ರಿ ಪ್ರೀತಿತಾ ಬಂಗೇರ ಮನವಿ ಮಾಡಿದ್ದಾರೆ. ಅವರು ಅಭಿಮಾನಿ ಸಮಿತಿಯ ವತಿಯಿಂದ ನಡೆದ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಸಭೆಯಲ್ಲಿ ಸಮಿತಿ ಅಧ್ಯಕ್ಷ...
ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ಸರ್ಕಾರ ರಚಿಸಿದೆ. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೂಲ್ಯ ಕೊಂಡೆ ಮಾರ್, ಸದಸ್ಯರಾಗಿ ಬಿ ಗೋಪಿನಾಥ ನಾಯಕ್ ಕುವೆಟ್ಟು, ಸತೀಶ್ ಬಂಗೇರ ಕುವೆಟ್ಟು, ಹರಿಪ್ರಸಾದ್ ಇರ್ವತ್ರಾಯ ಓಡಿಲ್ನಾಳ, ಧನಂಜಯ್ ರಾವ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ಶ್ರೀಮತಿ ಶಾಂಭವಿ ಪಿ ಬಂಗೇರ ಬೆಳ್ತಂಗಡಿ, ಶ್ರೀಮತಿ ಸವಿತಾ ಸೋಣಂದೂರು, ಹಾಗೂ ಪ್ರಧಾನ ಅರ್ಚಕರಾಗಿ, ಎನ್ ರಾಘವೇಂದ್ರ ಭಟ್ ಕುವೆಟ್ಟು ನೇಮಕವಾಗಿದ್ದಾರೆ. ಆಡಳಿತ ಅಧಿಕಾರಿ...
ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ: ಸಿದ್ದರಾಮಯ್ಯ ಘೋಷಣೆ
ಬೆಳ್ತಂಗಡಿ; ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತಡೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಇದೀಗ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆರು ಮಂದಿ ನಕ್ಸಲ್ ಹೋರಾಟಗಾರರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ರಾಯಚೂರಿನ ಮಾರೆಪ್ಪ ಅರೋಲಿ ಸರ್ಕಾರದ ಎದುರು ತಮ್ಮ ವಸ್ತ್ರಗಳನ್ನು ಒಪ್ಪಿಸಿದ್ದು. ಪ್ರಜಾತಾಂತ್ರಿಕ...
ಕುತ್ಲೂರಿನ ಸುಂದರಿ ಸೇರಿದಂತೆ ಆರು ಮಂದಿ ನಕ್ಸಲರ ಶರಣಾಗತಿ
ಬೆಳ್ತಂಗಡಿ: ಹಲವು ದಶಕಗಳಿಂದ ಭೂಗತರಾಗಿದ್ದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಬುಧವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಮಂತ್ರಿ ಡಾ.ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಶರಣಾಗತರಾಗಿ ಮುಖ್ಯವಾಹಿನಿಗೆ ಬಂದಿದ್ದಾರೆ. ರಾಜ್ಯದ ನಾಲ್ವರು ಹಾಗೂ ಕೇರಳ, ತಮಿಳುನಾಡು ಮೂಲದ ಇಬ್ಬರು ನಕ್ಸಲರು ನಕ್ಸಲ್ ಶರಣಾಗತಿ ಸಮಿತಿ ಹಾಗೂ ಶಾಂತಿಗಾಗಿ ನಾಗರಿಕ ವೇದಿಕೆಯವರು ನಡೆಸಿದ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬುಧವಾರ 6 ಮಂದಿ ನಕ್ಸಲರು ಮುಖ್ಯವಾಹಿನಿಗೆ ಮರಳಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ,...
ಹರೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಮುಖಂಡರ ಸ್ಪಷ್ಟನೆ
ಬೆಳ್ತಂಗಡಿ: ಕಾಂಗ್ರೇಸ್ ಪಕ್ಷದ ದ.ಕ.ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುಳ್ಳುಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕಜಾಲತಾಣದಲ್ಲಿ ಹಾಕಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ. ಇದು ವಿಪಕ್ಷದವರ ಪಿತೂರಿಯಾಗಿದೆ ಎಂದು ಕೆ.ಪಿ.ಸಿ.ಸಿ. ಸದಸ್ಯ ಕೇಶವ ಪಿ. ಬೆಳಾಲು ಹೇಳಿದ್ದಾರಲ್ಲದೆ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.ಪತ್ರಿಕಾಭವನದಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿದರು.ಹರೀಶ್ ಕುಮಾರ್ ಅವರು ಪಕ್ಷದ ಕೆಲಸವನ್ನು ಚಾಚೂ ತಪ್ಪದೆ ನಿಷ್ಠೆಯಿಂದ ಮಾಡಿದವರಾಗಿದ್ದಾರೆ. 1978 ರಲ್ಲಿ ಇಂದಿರಾಗಾಂಧಿಯವರು ಚಿಕಮಗಳೂರಿನಿಂದ ಸ್ಪರ್ಧಿಸಿದಾಗ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಅವರು ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದರು. ಬ್ಲಾಕ್...















