ಅಕ್ರಮ ಜಾನುವಾರು ಸಾಗಾಟ. ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ; ಅಕ್ರಮವಾಗಿ ಮೂರು ಜಾನುವಾರುಗಳನ್ನು ಹಿಂಸಾತ್ನಕವಾಗಿ ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಲೂಕಿನ ನಾಲ್ಕೂರು ಗ್ರಾಮದ ಕುಕ್ಕನಡ್ಕ ಎಂಬಲ್ಲಿ ಬಳಂಜ –ಪೆರ್ಮುಡ - ವೇಣೂರು ಸಾರ್ವಜನಿಕ ರಸ್ತೆಯಲ್ಲಿ ರೌಂಡ್ಸ್ ಕರ್ತವ್ಯ ನಿರತರಾಗಿದ್ದಾಗ ಆರೋಪಿತರಾದ ಬೆಳ್ತಂಗಡಿ ಕೋರ್ಟ್ ರಸ್ತೆ ಸಂಜಯನಗರ ನಿವಾಸಿ ಇಮ್ತೀಯಾಜ್ ( 29) ಮತ್ತು ಪಡಂಗಡಿ ಗ್ರಾಮದ ಪಾದೆ ಮನೆ ) ರಮ್ಲ ಯಾನೆ ಆಸೀಪ್ (26) ಎಂಬಿಬ್ಬರು ಕ್ಯಾರಿ ಟರ್ಬೋ ವಾಹನದಲ್ಲಿ ಯಾವುದೇ ಪರವಾಣಿಗೆ ಇಲ್ಲದೇ...
ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ
ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಈ ಕೂಡಲೇ ಸಂಪೂರ್ಣ ಕಡಿವಾಣ ಹಾಕಿ ರಾಜ್ಯದ ವಿದ್ಯಾರ್ಥಿಗಳು ಹಾಗೂ ಯುವಜನತೆಯನ್ನು ಕಾಪಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಸಭಾಪತಿಗಳನ್ನು ಕೋರಿದ್ದಾರೆ.ರಾಜ್ಯದಲ್ಲಿ ಡೆಡ್ಲಿ ಆನ್‌ಲೈನ್ ಗೇಮ್‌ಗೆ ಯುವಜನರು ಪ್ರತಿನಿತ್ಯ ಆಹುತಿಯಾಗುತ್ತಿದ್ದಾರೆ. ಕಳೆದ 4-5...
ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್...
ಬೆಳ್ತಂಗಡಿ : ಬೆಳಾಲಿನಲ್ಲಿ ನಾಲ್ಕು ತಿಂಗಳ ಮಗುವನ್ನು ರಸ್ತೆಯ ಪಕ್ಕ ಬಿಟ್ಟು ಹೋದ ದುರುಳರು
ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು.ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇನ್ನೂ ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ
ಕನ್ಯಾಡಿ;ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು ರಕ್ಷಿತ್ ಶಿವರಾಂ
ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ರೂ ಮೂರು ಕೋಟಿ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ 3 ಕೋಟಿ ಅನುದಾನ ಮಂಜೂರು ಗೊಳಿಸಿದ್ದಾರೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿರಕ್ಷಿತ್ ಶಿವರಾಂ ತಿಳಿಸಿದ್ದಾರೆ
ಧರ್ಮಸ್ಥಳ ; ಸೌಜನ್ಯ ಅತ್ಯಾಚಾರ ಕೊಲೆಪ್ರಕರಣದ ಬಗ್ಗೆ ಸಮೀರ್ ವೀಡಿಯೋ ಡಿಲೀಟ್ ಮಾಡಲು ನ್ಯಾಯಾಲಯ ಆದೇಶ
ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತಂತೆ ಪ್ರಕಟವಾಗಿದ್ದ ಯೂಟ್ಯೂಬ್ ವಿಡಿಯೋವನ್ನು ಯೂಟ್ಯೂಬ್ ನಿಂದ ಡಿಲಿಟ್ ಮಾಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಎ.ಎಸ್.ಸುಕೇಶ್ ಮತ್ತು ಶೀನಪ್ಪ ಎಂಬವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಎಂ.ಡಿ.ಸಮೀರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬಸ್ಥರ ವಿರುದ್ಧವಾಗಿ ಯಾವುದೇ ತರಹದ ಆಧಾರರಹಿತ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ನಿರ್ಬಂಧಕಾಜ್ಞೆ...
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಗುರುವಾರ, ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು. ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ,...
ಮಡಂತ್ಯಾರು; ಕ್ಯಾಥೋಲಿಕ್ ಸಭಾ ಬೆಳ್ತಂಗಡಿ ವಲಯದ ಕುಟುಂಬ ಸಹಮಿಲನ
ಬೆಳ್ತಂಗಡಿ; ಕ್ಯಾಥೋಲಿಕ್ ಸಭಾ ಮಂಗಳೂರು ಪ್ರಧೇಶ್ (ರೀ ) ಬೆಳ್ತಂಗಡಿ ವಲಯ ಕಾರ್ಯಕಾರಿ ಕುಟುಂಬ ಸಹಮಿಲನ ಮಡಂತ್ಯಾರ್ ಘಟಕ ದಲ್ಲಿ ಅದ್ದೂರಿ ಯಾಗಿ ನೆರವೇರಿತು. ಕಾರ್ಯಕ್ರಮಧ ಉದ್ಘಾಟನೆ ಯನ್ನು ವಲಯ ಆಧ್ಯಾತ್ಮಿಕ ನಿರ್ದೇಶಕರು ಅತೀ ವಂಧನಿಯಾ ಸ್ವಾಮಿ ವಾಲ್ಟರ್ ಡಿ ಮೆಲ್ಲೋ ಮೇಲ್ಲೋ ಉದ್ಘಾಟಿಸಿ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ತಕ್ಷತೆಯನ್ನು ಅದ್ಯಾಕ್ಷರಾದ ಲಿಯೋ ರೋಡ್ರಿಗಸ್ ಅವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೆಂಟ್ರಲ್ ಕಮಿಟಿ ಯ ಮಾಜಿ ಅಧ್ಯಕ್ಷರಾದ ಫ್ಲೇವಿ ಡಿಸೋಜ ನಾಯಕತ್ವ ಬೆಳೆಸಿಕೊಳ್ಳುವ ಬಗ್ಗೆ ಮಾಹಿತಿನೀಡಿದರು. ಮಡಂತ್ಯಾರ್ ಚರ್ಚ್ ನಾ ಪ್ರಧಾನ...
ಗೇರುಕಟ್ಟೆ ಜಾರಿಗೆ ಬೈಲಿನಲ್ಲಿ ಬೈಕ್ ಮೇಲೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬೆಳ್ತಂಗಡಿ; ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25)ಎಂಬವರಾಗಿದ್ದಾರೆಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ ಮರದ ಗೆಲ್ಲು ಮುರಿದು ಅವರ ಬೈಕ್ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ...
ಬೆಳ್ತಂಗಡಿ; ಅಕ್ರಮ ಸಕ್ರಮ ಜಮೀನು ಮಂಜೂರು ಮಾಡಿಸುವುದಾಗಿ ರೂ 4.95ಲಕ್ಷ ಪಡೆದು ವಂಚನೆ; ಮೂಡು ಕೋಡಿ ವಿ.ಎ ಸುದೇಶ್ ಕುಮಾರ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಅಕ್ರಮ ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.95 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಮೂಡುಕೋಡಿ ಗ್ರಾಮದ ಗ್ರಾಮಕರಣಿಕ ಸುದೇಶ್ ಕುಮಾರ್ ಹಾಗೂ ಅವರ ಪತ್ನಿ ಮೀನಾಕ್ಷಿ ಅವರ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸ್ಥಳೀಯ ನಿವಾಸಿ ರೋಯಿ ವರ್ಗೀಸ್ ಎಂಬವರೇ ದೂರು ನೀಡಿದವರಾಗಿದ್ದಾರೆ.ರೋಯಿ ವರ್ಗೀಸ್ ಅವರು ಮೂಡುಕೋಡಿ ಗ್ರಾಮದಲ್ಲಿ ಪಟ್ಟಾ ಜಮೀನು ಹೊಂದಿದ್ದು ಅದಕ್ಕೆ ತಾಗಿಕೊಂಡಿರುವ ಕುಮ್ಕಿ ಜಮೀನಿಗೆ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಗ ಅಳತೆ ಮಾಡಿದ ಸುದೇಶ್ ಕುಮಾರ್ ಅವರು ಕಡತ...















