ಬೆಳ್ತಂಗಡಿ; ಅಕ್ರಮ ಸಕ್ರಮ ಜಮೀನು ಮಂಜೂರು ಮಾಡಿಸುವುದಾಗಿ ರೂ 4.95ಲಕ್ಷ ಪಡೆದು ವಂಚನೆ; ಮೂಡು ಕೋಡಿ ವಿ.ಎ ಸುದೇಶ್ ಕುಮಾರ್ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ; ಅಕ್ರಮ ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.95 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಮೂಡುಕೋಡಿ ಗ್ರಾಮದ ಗ್ರಾಮ‌ಕರಣಿಕ ಸುದೇಶ್ ಕುಮಾರ್ ಹಾಗೂ ಅವರ ಪತ್ನಿ ಮೀನಾಕ್ಷಿ ಅವರ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸ್ಥಳೀಯ ನಿವಾಸಿ ರೋಯಿ ವರ್ಗೀಸ್ ಎಂಬವರೇ ದೂರು ನೀಡಿದವರಾಗಿದ್ದಾರೆ.ರೋಯಿ ವರ್ಗೀಸ್ ಅವರು ಮೂಡುಕೋಡಿ ಗ್ರಾಮದಲ್ಲಿ ಪಟ್ಟಾ ಜಮೀನು ಹೊಂದಿದ್ದು ಅದಕ್ಕೆ ತಾಗಿಕೊಂಡಿರುವ ಕುಮ್ಕಿ ಜಮೀನಿಗೆ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಗ ಅಳತೆ ಮಾಡಿದ ಸುದೇಶ್ ಕುಮಾರ್ ಅವರು ಕಡತ...

ನಿಟ್ಟಡೆ; ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ; ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರವಿ ಪೂಜಾರಿ ಎಂಬವರಾಗಿದ್ದಾರೆ. ಇವರು ಮನೆಯ ಸಮೀಪ ಇರುವ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರ ತಿಳಿದು ಬಂದಿಲ್ಲ ಘಟನಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯ ಬ್ಯಾಗ್ ಎಳೆದು ಅವಾಚ್ಯ ಶಬ್ದಗಳಿಂದ ನಿಂದನೆ: ದೂರು ದಾಖಲು

0

ಬೆಳ್ತಂಗಡಿ: ವಿದ್ಯಾರ್ಥಿನಿ ಯೊಬ್ಬಳನ್ನು ಹಿಂಬಾಲಿಸಿ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ವೇಣೂರು ಠಾಣೆಗೆ ದೂರು ದಾಖಲಾಗಿದ್ದು ಪ್ರಕರಣ‌ ದಾಖಲಿಸಲಾಗಿದೆ.ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಗೆ ಪರಿಚಯಸ್ಥ ವೇಣೂರು ಗ್ರಾಮದ ಶಿವಾಜಿನಗರ ಕಾಲೋನಿ ನಿವಾಸಿ ಆಸ್ಪಕ್ (27) ಎಂಬಾತನೇ ಕಿರುಕುಳ ನೀಡಿದ ಆರೋಪಿಯಾಗಿದ್ದಾನೆ. ಬುಧವಾರ ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತುಕೊಂಡು ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ದೂರಿನಲ್ಲಿ ತಿಳಿಸಲಾಗಿದೆ. ಈತ ವಿದ್ಯಾರ್ಥಿ ನಿಗೆ ಪರಿಚಯಸ್ಥನಾಗಿದ್ದು ಕಾಣಸಿಕ್ಕಿದಾಗ...

ಧರ್ಮಸ್ಥಳ: ನೇರ್ತನೆಯಲ್ಲಿ 5ಲಕ್ಷ ವೆಚ್ಚದಲ್ಲಿ ಆನೆ ಕಂದಕ ನಿರ್ಮಾಣ

0

ಬೆಳ್ತಂಗಡಿ;  ಕಳೆದ ಎರಡು-ಮೂರು ವರ್ಷಗಳಿಂದ ಕಾಡಾನೆಯ ನಿರಂತರ ಉಪಟಳದಿಂದ ಬೇಸತ್ತು ಹೋಗಿದ್ದ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಇದೀಗ ರಾಜ್ಯ ಸರಕಾರ ಆನೆ ಕಂದಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಮಂಜೂರುಗೊಳಿಸಿದ್ದು ಆನೆ ಕಂದಕದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಹಿಂಡು ನಿರಂತರವಾಗಿ ಓಡಾಟ ನಡೆಸುತ್ತಾ ಕೃಷಿ ಭೂಮಿಗೆ ನುಗ್ಗಿ ಕೃಷಿಗೆ ಹಾನಿಯುಂಟು ಮಾಡುತ್ತಿತ್ತು. ಆನೆಯನ್ನು ಅರಣ್ಯಕ್ಕೆ ಓಡಿಸಿದರೆ ಎರಡೇ ದಿನದಲ್ಲಿ ಅದು ಮತ್ತೆ ಬಂದು ಕೃಷಿಗೆ ಹಾನಿ ಯುಂಟು ಮಾಡುತ್ತಿದೆ. ಇಲ್ಲಿ ಕಳೆದ ಎರಡು ವರ್ಷಗಳಲ್ಲಿ ಲಕ್ಷಾಂತರ ಮೌಲ್ಯದ...

ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು

0

ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಗ್ರಾ.ಪಂ.ನ 14 ಮಂದಿ ಸದಸ್ಯರಲ್ಲಿ 12 ಮಂದಿ ಸದಸ್ಯರು ಅವಿಶ್ವಾಸದ ನಿರ್ಣಯ ಸೂಚನಾ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದು ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಕಳೆದ ಫೆ.20ರಂದು ಇಳಂತಿಲ ಗ್ರಾ.ಪಂ. ಸದಸ್ಯರಾದ ವಸಂತ ಕುಮಾರ್, ವಿಜಯಕುಮಾರ್, ಚಂದ್ರಿಕಾ ಭಟ್, ಉಷಾ...

ಬೆಳ್ತಂಗಡಿ;  ಸುಲ್ಕೇರಿ ಮೊಗ್ರುವಿನ ಆದಿವಾಸಿ ಕುಟುಂಬಗಳು ಸೇರಿ 25ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ.

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್...

ಕೊಕ್ಕಡ; ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ

0

ಬೆಳ್ತಂಗಡಿ;  ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ ದಕ್ಷಿಣ ಕನ್ನಡ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ತಾಲೂಕು ಪಂಚಾಯತ್ ಬೆಳ್ತಂಗಡಿ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ (ರಿ.)ಬೆಳ್ತಂಗಡಿ, ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಕೊಕ್ಕಡ ಗ್ರಾಮ ಪಂಚಾಯತ್ ಇವುಗಳ ಜಂಟಿ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ ಮಾರ್ಚ್ 15ರಂದು ಶನಿವಾರ ಕೊಕ್ಕಡದ ಸೌತಡ್ಕ ಶ್ರೀ ಮಹಾ ಗಣಪತಿ...

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ.

0

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು. ವೀಕ್ಷಕರಾಗಿ ಆಗಮಿಸಿದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಸಮಾರೋಪ ಮಾತುಗಳನ್ನಾಡಿದರು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾದ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

0

ಬೆಳಾಲು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿರುತ್ತಾರೆ. ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವೀಲ್ ಚೇರ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾಪ್ರತಿನಿದಿ ಪ್ರಮೀಳಾ, ಸೇವಾಪ್ರತಿನಿದಿ ತಾರನಾಥ,...

ಲಾಯಿಲ ನಿವಾಸಿ ಮಾಯಿಲ(ರಮೇಶ್) ನಿಧನ

0

ಬೆಳ್ತಂಗಡಿ;  ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್ 15 ರಂದು ಶನಿವಾರ ಸ್ವಗೃಹದಲ್ಲಿ ನಿಧನರಾದರು. ಹಿರಿಯ ಸೆಂಟ್ರಿಂಗ್ ಮೇಸ್ತ್ರಿಯಾಗಿದ್ದ ಅವರು ದಲಿತ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಸುನಂದಾ , ಪುತ್ರ ಸುದೀಪ್ , ಪುತ್ರಿ ಸುಪ್ರಿಯಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಹಿರಿಯ ಉದ್ಯಮಿ , ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ನಡ...