ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ.

0

ಉಜಿರೆ ಆ .16 ರಂದು ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಧಾರ್ಮಿಕ ಚಿಂತಾಕರಾಗಿರುವ ವೇದಮೂರ್ತಿ ಡಾ ಶ್ರೀ ಕೃಷ್ಣ ಉಪಾಧ್ಯಾಯ ಇವರು ಮಾತನಾಡಿ ಹಿಂದಿನ ಕಾಲದಲ್ಲಿ ಜನರು ಆಟಿ ತಿಂಗಳಿಗೆ ವಿಶೇಷ ಗಮನ ಇಟ್ಟು ವಿವಿಧ ಬಗೆಯ ಸೊಪ್ಪುಗಳ ತಿನಿಸುಗಳನ್ನು ಮಾಡಿ ಆಚರಣೆ ಮಾಡುತ್ತಿದ್ದರು. ಆಟಿ ತಿಂಗಳಲ್ಲಿ ಮಾಡುವಂತಹ ಆಹಾರಗಳು ಮನುಷ್ಯನಿಗೆ ಬಹಳ ಉಪಯುಕ್ತವಾಗಿದೆ ಹಾಗೂ ಔಷಧೀಯ ಗುಣಗಳನ್ನು ಹೊಂದಿದೆ ಎಂದು ತಿಳಿಸಿದರು .ಇಂತಹ ಸಂಸ್ಕೃತಿಯನ್ನು ಬೆಳೆಸಬೇಕು ಮತ್ತು ಮುಂದಿನ ಪೀಳಿಗೆಗೆ ಕಲಿಸಬೇಕು ಎಂದು ಹೇಳಿದರು....

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಸವಿತಾ ಸಂದೇಶ್ ಪ್ರಾರ್ಥನೆ ನೆರವೇರಿಸಿದರು. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ ಭಜನಾ ಕಮ್ಮಟದ ವಿವಿಧ ಕಾರ್ಯಕ್ರಮಗಳ ಕುರಿತು ಭಜನಾ ಪರಿಷತ್ ರಾಜ್ಯ ಸಂಚಾಲಕ ಶ್ರೀ ಜಿ. ಸುಬ್ರಹ್ಮಣ್ಯ ಪ್ರಸಾದ್ ಅವರು ಮಾಹಿತಿ ನೀಡಿದರು. ರಾಜ್ಯದಾದ್ಯಂತ ಭಜನಾ ಪರಿಷತ್‌ನ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಅಭಿನಂದಿಸಿದ ಅವರು, ಕಮ್ಮಟದ ಸಂಪೂರ್ಣ...

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಬಂಧನ

0

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಕೇರಳ‌ಮೂಲದ ನಿತಿನ್ ಕೃಷ್ಣನ್ (27) ಎಂಬಾತನನ್ನು ಬಂಧಿಸಲಾಗಿದೆ.ಕದ್ರಿ ಗ್ರಾಮದ ಪದವು ಮೈದಾನದ ಬಳಿಯ ಆಯುರ್ವೇದ ಕ್ಲಿನಿಕ್‌ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆತನಿಂದ ₹60 ಸಾವಿರ ಮೌಲ್ಯದ ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.ಗಾಂಜಾ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆಶ್ವಿನ್ ಕ್ಸೇವಿಯರ್ (24)ನ ವಿಚಾರಣೆ ವೇಳೆ ದೊರೆತ ಮಾಹಿತಿಯ ಆಧಾರದ ಮೇಲೆ ನಿತಿನ್ ಕೃಷ್ಣನ್‌ನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ...

ಡಿ.ಸಿ ಮನ್ನಾ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

0

ಬೆಳ್ತಂಗಡಿ;  ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವ , ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ , ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ ಖಾದರ್ ಅವರನ್ನು ಬೆಂಗಳೂರಿನ ವಿಧಾನಸೌಧದ ಅವರ ಕಚೇರಿಯಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ರವರ ನೇತೃತ್ವದಲ್ಲಿ ತಾಲೂಕಿನ ದಲಿತ ನಾಯಕರು ಭೇಟಿಯಾದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ...

ಕಳೆಂಜ ಹಾಗೂ ರೆಖ್ಯದ ಅರಣ್ಯ ಸಮಸ್ಯೆಗಳ ಪರಿಹಾರಕ್ಕೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳಿಗೆ ಮನವಿ

0

ಬೆಳ್ತಂಗಡಿ;  ಬೆಂಗಳೂರಿನ ವಿಕಾಸ ಸೌಧಕ್ಕೆ ತೆರಳಿKPCC ಪ್ರಧಾನ ಕಾರ್ಯದರ್ಶಿ ಶ್ರೀ ರಕ್ಷಿತ್ ಶಿವರಾಂ ನಿರ್ದೇಶನದಲ್ಲಿ , ಉಸ್ತುವಾರಿ ಸಚಿವರಾದ ಮಾನ್ಯ ಯು. ಟಿ. ಖಾದರ್ ಸೂಚನೆ ಮೇರೆಗೆ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಅಂಜುಂ ಪರ್ವೇಜ್ (IAS) ಅವರನ್ನು ಭೇಟಿ ಮಾಡಿ, ರೆಕ್ಯ ಗ್ರಾಮದ ಸರ್ವೇ ನಂ. 69/1ಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿ ಮನವಿಯನ್ನು ಸಲ್ಲಿಸಲಾಯಿತು. ಅದೇ ಸಂದರ್ಭದಲ್ಲಿ  ಕಳೆoಜಗ್ರಾಮದ ಸರ್ವೇ ನಂ.  309ಕ್ಕೆ ಸಂಬಂಧಿಸಿದ ಜಂಟಿ ಸರ್ವೇಯ ವರದಿಯಂತೆ ಪಹಣಿ ದಾಖಲಿಸಲು...

ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ‌ ವಿಚಾರ ಕೆ.ಪಿ.ಸಿ.ಸಿ‌ ಅಧ್ಯಕ್ಷ‌ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ‌‌ ತಾಲೂಕಿನ ದಲಿತ ಮುಖಂಡರು

0

ಬೆಳ್ತಂಗಡಿ;  ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ರವರ ನೇತೃತ್ವದಲ್ಲಿ ತಾಲೂಕಿನ ದಲಿತ ನಾಯಕರು ಭೇಟಿಯಾದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಪ್ರಣಾಳಿಕೆಯ ಭಾಗವಾಗಿರುವ ಡಿಸಿ...

ಇ-ಸ್ವತ್ತು ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಪಿಡಿಒ ಗಳಿಗೆ  ಅವಕಾಶ ಕಲ್ಪಿಸುವಂತೆ ಪಂಚಾಯತ್ ರಾಜ್ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

0

ಬೆಳ್ತಂಗಡಿ. ಇ-ಸ್ವತ್ತು ತಂತ್ರಾಂಶದಲ್ಲಿ ||ಎ ಮತ್ತು 11ಬಿ ತಿದ್ದುಪಡಿಯಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅನುಮೋದನೆ ಪಡೆದು ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರ ಲಾಗಿನ್ ನಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ತಂತ್ರಾಂಶದಲ್ಲಿ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ತಿದ್ದುಪಡಿಗೆ ಅವಕಾಶವಿರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜಮೀನನ್ನು ಭೂಪರಿವರ್ತನೆಗೊಳಿಸಿ ವಿನ್ಯಾಸ ಅನುಮೋದನೆ ಪಡೆದು ಮೂಲ ಸರ್ವೆ ನಂಬರ್ ನಮೂದಿಸಿ ನಮೂನೆ 11ಎ ಮತ್ತು 11ಬಿ ನೀಡಲಾಗುತ್ತಿದೆ. ಆದರೆ, ಭೂ ಪರಿವರ್ತನೆ ನಂತರ ಪೋಡಿಯಾಗಿ ಸೃಜಿಸಲಾದ ಹೊಸ...

ಬೆಳ್ತಂಗಡಿ; ಉಮೇಶ್ ಮದ್ದಡ್ಕ‌ ಅವರಿಗೆ ಛಾಯಾ ರತ್ನ ಪ್ರಶಸ್ತಿ

0

ಬೆಳ್ತಂಗಡಿ;  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಗೆ ಮದ್ದಡ್ಕ ಮನು ಸ್ಟುಡಿಯೋ ಮಾಲಕರಾದ ಉಮೇಶ್ ಮದ್ದಡ್ಕ ಅವರನ್ನು ಬ್ರಹ್ಮಾವರ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ. ಪ್ರಮೋದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆ.18ರಂದು ರೋಟರಿ ಕ್ಲಬ್ ಬ್ರಹ್ಮಾವರದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.ಈ ಸಂಧರ್ಭ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಶನ್ ಬ್ರಹ್ಮಾವರ ವಲಯದ ಅಧ್ಯಕ್ಷರಾದ ಆಲ್ವಿನ್ ಅಂದ್ರಾದೆ, ಕಾರ್ಯದರ್ಶಿ ಪ್ರತೀಷ್...

ಬೆಳ್ತಂಗಡಿ : ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ; ಪರಾರಿಯಾದ ಟಿಪ್ಪರ್ ಚಾಲಕನ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಬೊಳ್ಳೂರುಬೈಲು ಎಂಬಲ್ಲಿ ಆ18 ರಂದು ಬೆಳ್ತಂಗಡಿ ಪೊಲೀಸರು ನಿಂತಿದ್ದ ವೇಳೆ KA-21-B-3670 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿ ಪೊಲೀಸ್ ಜೀಪನ್ನು ಕಂಡ ತಕ್ಷಣ ಟಿಪ್ಪರ್ ಚಾಲಕ ಲಾರಿಯನ್ನು ಸೇತುವೆ ಮೇಲೆ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಅನುಮಾನಗೊಂಡ ಪೊಲೀಸರು ಟಿಪ್ಪರ್ ಪರಿಶೀಲಿಸಿದಾಗ ಅದರಲ್ಲಿ ಮರಳು ತುಂಬಿರುವುದು ಪತ್ತೆಯಾಗಿದೆ. ಟಿಪ್ಪರ್‌ನಲ್ಲಿದ್ದ ಮರಳಿನ ಅಂದಾಜು ಮೌಲ್ಯ...

ವಿಟ್ಲ; ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ‌ ಆರೋಪಿ ಬಂಧನ

0

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬಂಧಿತ ಆರೋಪಿ‌ ವಿಟ್ಲ ಕೊಡಂಗಾಯಿ ನಿವಾಸಿ ಉಮೇಶ್ (53) ಎಂಬಾತನಾಗಿದ್ದಾನೆ.ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್‌ ನಿಲ್ದಾಣದಿಂದ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಪ್ರಯಾಣಿಸುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಮನೆಗೆ...