ಉಜಿರೆ; ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು
ಬೆಳ್ತಂಗಡಿ; ಉಜಿರೆಯಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಉಜಿರೆ ನಿವಾಸಿ ಜಯಂತ್ (56) ಎಂಬವರಾಗಿದ್ದಾರೆ.ಇವರು ಮಾ.7ರಂದು ರಾತ್ರಿಯ ವೇಳೆ ಉಜಿರೆಯಿಂದ ಬಂದು ಭಾರತ್ ಶೋರೂಮ್ ಬಳಿ ಅಜಿತ್ ನಗರದ ರಸ್ತೆಗೆ ತಿರುಗಿಸುವ ವೇಳೆ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಜಯಂತ್ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ಬೈಕ್ ಸವಾರ ಸಣ್ಣ...
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿರೋಡಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ಸಾರ್ವಜನಿಕ ಸಭೆಗಳಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ದವಾಗಿ, ಅವರ ಕುಟುಂಬ ಸಂಸ್ಥೆಗಳ ಬಗ್ಗೆ ಅಪಪ್ರಚಾರ ಅಥವಾ ಮನಹಾನಿಕರವಾಗಿ ಮಾತನಾಡಬಾರದು ಎಂಬ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾಷಣ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.ಫೆ.8 ರಂದು ಬೆಳ್ತಂಗಡಿ ತಾಲೂಕಿನ ಬೆದ್ರಬಟ್ಟುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನೀಡಿರುವ ಹೇಳಿಕೆಗಳು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಹಾಗೂ ಸಮಾಜದಲ್ಲಿ ಅಶಾಂತಿಯನ್ನು...
ಗೇರುಕಟ್ಟೆ; ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
ಬೆಳ್ತಂಗಡಿ;ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಗೇರುಕಟ್ಟೆ ಸಂಬೋಳ್ಯ ಸಮೀಪದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಟ್ರಕ್ಕ್ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಸಂಭವಿಸಿದೆ.ಅಪಘಾತದಲ್ಲಿ ಟ್ರಕ್ ನ ಮುಂಭಾಗ ನುಜ್ಜುಗುಜ್ಜಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ; ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ
ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ - ಕೊಲ್ಲಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಬೆಳ್ತಂಗಡಿ ಕಡೆಗೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಅಶೋಕ್ ಲೈಲಾಂಡ್ ಕಂಪನಿಯ KA-19-AE-6067 ಸಂಖ್ಯೆಯ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ(FMS) ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿದ್ದು ತಕ್ಷಣ ಕಾರ್ಯಾಚರಣೆಗಿಳಿದ ತಂಡ ಮಾ.6...
ಅಭಿವೃದ್ಧಿಗೆ ಒತ್ತು ನೀಡದ ಸಾಲದ ಹೊರೆ ಹೆಚ್ಚಿಸುವ ಅಲ್ಪಸಂಖ್ಯಾತರ ಓಲೈಕೆಯ ಬಜೆಟ್; ಪ್ರತಾಪ ಸಿಂಹ ನಾಯಕ್
ಬೆಳ್ತಂಗಡಿ: ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಟೀಕಿಸಿದ್ದಾರೆ.ಸಾಲ ಮಾಡಿ ಬಜೆಟ್ ಗಾತ್ರವನ್ನು ಹಿಗ್ಗಿಸಲಾಗಿದೆ. ಶಾಶ್ವತ ಯೋಜನೆಗಳನ್ನು ಆಯವ್ಯಯದಿಂದ ತೆಗೆದುಹಾಕಲಾಗಿದೆ. ಮತಬ್ಯಾಂಕ್ ಆಧಾರಿತ, ರಾಜ್ಯದ ಆರ್ಥಿಕ ಶಿಸ್ತನ್ನು ಹಾಳುಗೆಡುವ ಬಜೆಟ್ ಇದಾಗಿದೆ.ಕೌಶಲ್ಯ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಕಡೆಗೆಣಿಸಲಾಗಿದ್ದು ಮತ್ತು ರೈತ ವಿರೋಧಿಯಾಗಿದ್ದು, ಸಾಂಸ್ಕೃತಿಕ ವಲಯ, ಪ್ರವಾಸೋದ್ಯಮವನ್ನು ನಿರ್ಲಕ್ಷಿಸಲಾಗಿದೆ. ಎಸ್.ಸಿ, ಎಸ್.ಟಿ., ಮತ್ತು ಓಬಿಸಿ ಗಳು ತಮ್ಮ ಆರ್ಥಿಕ ಸದೃಢತೆಯತ್ತ ಸಾಗಲು ನೀರಸ ಬಂಡವಾಳ ಒದಗಿಸಲಾಗಿದೆ. ವಕ್ಭ ಆಸ್ತಿಯ...
ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್,: ರಕ್ಷಿತ್ ಶಿವರಾಂ
ಬೆಳ್ತಂಗಡಿ; 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.ಈ ಬಾರಿಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ...
ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್; ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್ ಸರ್ಕಾರಕ್ಕೆ ನಕ್ಸಲ್ ಚಟುವಟಿಕೆ ಬಗ್ಗೆ ಪೂರ್ಣ ಅರಿವಿದ್ದಂತೆ ಕೇವಲ ಆರು ಜನರ ನಕ್ಸಲರ ಶರಣಗಾತಿಯಿಂದ ನಕ್ಸಲ್ ನಿಗ್ರಹ ಪಡೆಯನ್ನೇ ವಿಸರ್ಜಿಸಿ 10 ಕೋಟಿ ವಿಶೇಷ ಪ್ಯಾಕೇಜ್ ನೀಡಿದ್ದನ್ನು ಗಮನಿಸಿದರೆ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಯಿತೋ ಎಂಬಂತಿದೆ. ಯೋಜನಾಬದ್ಧವಲ್ಲದ ಯೋಚನೆಗಳಿಂದ ಕರ್ನಾಟಕ ರಾಜ್ಯದ ವಿತ್ತೀಯ ಶಿಸ್ತು ಹಳಿತಪ್ಪಿ...
ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳಿಗೆ ಮನವಿ
ಬೆಳ್ತಂಗಡಿ; ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂಧರ್ಭ ವಿಧಾನ...
ಮುಂಡಾಜೆ ಪ್ಯಾಕ್ಸ್ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್,ಉಪಾಧ್ಯಕ್ಷರಾಗಿ ರಾಘವ ಗೌಡ ಕುಡುಮಡ್ಕ ಆಯ್ಕೆ
ಬೆಳ್ತಂಗಡಿ; ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗಳಿಸಿ ಅಧಿಕಾರವನ್ನು ಪಡೆದುಕೊಂಡಿದ್ದಾರೆ.ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕಳೆದ ಅವಧಿಯ ಉಪಾಧ್ಯಕ್ಷ,ಬೆಳ್ತಂಗಡಿ ರೋಟರಿ ಕ್ಲಬ್ ಪೂರ್ವ ಕಾರ್ಯದರ್ಶಿ,ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಜಿಲ್ಲಾ ಸಂಘಟಕ,ಯುವ ನಾಯಕ ಪ್ರಕಾಶ್ ನಾರಾಯಣ ರಾವ್ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ,ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾಗಿ ಕಜೆ...
ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ
ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯರಾಗಿದ್ದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು. ಮಾಜಿ ಶಾಸಕ ಕೆ.ವಸಂತ ಬಂಗೇರರ ಆತ್ಮೀಯ ಸಲಹೆ ಗಾರರೂ ಮಾರ್ಗದರ್ಶಕರೂ ಆಗಿದ್ದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು. ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆಮಾಣಿಂಜರವ ದೂರದೃಷ್ಟಿ ಚಿಂತನೆ ಮತ್ತು ಪ್ರಯತ್ನ ಮಹತ್ತರವಾದದು.ಸರಳ,...















