ಬೆಳ್ತಂಗಡಿ ಪಟ್ಟಣ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ

0

ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳವಾರ ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನಡೆದ ಸಭೆಯಲ್ಲಿ ಶರತ್ ಕುಮಾರ್ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರನ್ನು ಶಾಸಕ ಹರೀಶ್ ಪೂಂಜ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಹಾಗೂ ಇತರರು ಅಭಿನಂದಿಸಿದರು.

ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನ್ ಪುದುವೆಟ್ಟು ನಿಧನ

0

ಬೆಳ್ತಂಗಡಿ: ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಇವರು ಕಳೆದ ಕೆಲ ತಿಂಗಳುಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದರು,ಭಾನುವಾರ ಅನಾರೋಗ್ಯ ಉಂಟಾದ ಕಾರಣ ಮೂಡಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರೆ ಇಂದು ಚಿಕಿತ್ಸೆ ಫಲಾಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ನಿವಾಸಿಯಾದ ಇವರು ಪತ್ನಿ ಇಬ್ಬರು ಪುಟ್ಟ ಮಕ್ಕಳು...

ಕಾರ್ಕಳದಲ್ಲಿ ಎನ್ಕೌಂಟರ್; ನಕ್ಸಲ್ ನಾಯಕ್ ವಿಕ್ರಂ ಗೌಡ ಹತ್ಯೆ

0

ಕಾರ್ಕಳ: ಹೆಬ್ರಿ ಪರಿಸರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕರ್ನಾಟಕದ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ ನಡುವೆ ಎಎನ್ ಎಫ್, ನಕ್ಸಲರ‌ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ...

ಕೊಕ್ಕಡ; ಗ್ರಾಹಕನ ಸೋಗಿನಲ್ಲಿ ಬಂದು ಅಡಿಕೆ ಅಂಗಡಿಯಿಂದ ಎರಡು ಲಕ್ಷ ನಗದು ಅಪಹರಣ

0

ಬೆಳ್ತಂಗಡಿ; ಕೊಕ್ಕಡದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿ ಇರಿಸಿದ್ದ ರೂ ಎರಡು ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದುವೀ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕೊಕ್ಕಡ ಪೇಟೆಯಲ್ಲಿ ಅಡಿಕೆ, ಬಾಳೆಕಾಯಿ, ಹಾಗೂ ಇತರೆ ವ್ಯಾಪಾರ ನಡೆಸುತ್ತಿರುವ ಕೌಕ್ರಾಡಿ ಗ್ರಾಮದ ನಿವಾಸಿ ಇಸುಬು ಎಂಬವರೇ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ.ನ15ರಂದು ಘಟನೆ ನಡೆದಿದ್ದು ಇಸುಬು ಅವರು ಮದ್ಯಾಹ್ನ ಮಸೀದಿಗೆ ಹೋಗಲು ಅಂಗಡಿಗೆ ಬಾಗಿಲು ಹಾಕುತ್ತಿದ್ದ ವೇಳೆ ಬಂದ ಅಪರಿಚಿತ ವ್ಯಕ್ತ ಬಾಳೆಕಾಯಿ ಕೇಳಿದ್ದು ಅದನ್ನು ತೆಗೆಯುತ್ತಿದ್ದ ವೇಳೆ ಉಪಾಯವಾಗಿ ಆತ ನಗದು...

ಗ್ರಾಮಾಭಿವೃದ್ದಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಪರಿವರ್ತನೆ; ದುಗ್ಗಪ್ಪ ಗೌಡ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಇಂದು ಗ್ರಾಮೀಣ ಪ್ರದೇಶಗಳಲ್ಲಿ ಮಹತ್ತರ ಪರಿವರ್ತನೆಯಾಗಿದ್ದು ಕಟ್ಟಕಡೇಯ ಕುಟುಂಬವೂ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದು ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಗುಂಪಿನ ಮೂಲಕ ಉಳಿತಾಯದ ಮನೋಬಾವನೆ ಬೆಳೆದಿದೆ, ಗುಂಪುಗಳು ಮಿನಿ ಬ್ಯಾಂಕ್ ಗಳಾಗಿ ಪರಿವರ್ತನೆಯಾಗಿದೆ. ಬಡವರನ್ನು ಗುರುತಿಸಿ ಅವರಿಗೆ ಆರ್ಥಿಕ...

ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆ; ಅಧ್ಯಕ್ಷರಾಗಿ ಜಯರಾಜ್ ಜೈನ್ ಎರಡನೇ ಬಾರಿಗೆ ಆಯ್ಕೆ

0

ಬೆಳ್ತಂಗಡಿ: ತಾಲೂಕಿನಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ತಾಲೂಕು ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನ.16ರಂದು ಬೆಳ್ತಂಗಡಿ ಏಕತಾ ಸೌಧದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್‌ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಗೆ ಒಟ್ಟು 7 ಮಂದಿ ಅಂತಿಮ ಅಭ್ಯರ್ಥಿಗಳು ಕಣದಲ್ಲಿದ್ದರು.ಅಧ್ಯಕ್ಷ ಸ್ಥಾನಕ್ಕೆ ಸರಕಾರಿ ಪ್ರಾಥಮಿಕ ಶಾಲೆಗಳ ವಿಭಾಗದಿಂದ ಜಯರಾಜ ಜೈನ್ ಹಾಗೂ ಗ್ರಾಮೀಣಾಭಿವೃದ್ಧಿ ಪಟ್ಟಣ ಪಂಚಾಯತ್ ರಾಜ್‌ ಇಲಾಖೆಯ ಪ್ರಶಾಂತ್ ಡಿ. ಬಳಂಜ ನಾಮಪತ್ರ ಸಲ್ಲಿಸಿದ್ದರು.ವಿವಿಧ ಇಲಾಖೆಗಳಿಂದ...

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವತಿಯಿಂದ ಮಾದಕ ವಸ್ತುಗಳ ವಿರುದ್ದ ಬ್ರಹತ್ ಜನಜಾಗೃತಿ ಅಭಿಯಾನ ಹಾಗೂ ಮ್ಯಾರಥಾನ್ ಓಟ

0

ಮುಂಡಾಜೆ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಿರೋಮಲಬಾರ್ ಯೂತ್ ಮೂವ್ಮೆಂಟ್ ಇದರ ನೇತ್ರತ್ವದಲ್ಲಿ ಡಿ. ಕೆ. ಆರ್. ಡಿ. ಎಸ್.(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜನಜಾಗೃತಿ ಮೂಡಿಸುವ ಅಂಗವಾಗಿ ಮಾಹಿತಿ ಕಾರ್ಯಕ್ರಮ, ಮ್ಯಾರಥಾನ್ ಒಟ, ಜನಜಾಗೃತಿ ರಾಲಿ ಹಾಗೂ ಬೀದಿ ನಾಟಕ ಮುಂತಾದ ಕಾರ್ಯಕ್ರಮಗಳನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿಮುಖ್ಯ ಅತಿಥಿಯಾಗಿ ಆಗಮಿಸಿದ ಮಂಜುನಾಥ ಆರ್. ಜಿ., ಕೆ ಎಸ್ ಪಿ ಎಸ್, ಡಿ ವೈ ಎಸ್ ಪಿ, ಸೆನ್ ಪಿ ಎಸ್ ದಕ್ಷಿಣ ಕನ್ನಡ ಅವರು ಮಾತನಾಡಿ"ಮಾದಕ ವಸ್ತಗಳ ದುಷ್ಪರಿಣಾಮದ ಕುರಿತು...

ನೆಲ್ಯಾಡಿ; ಕಾರು ಅಪಘಾತ ಕುಂಬ್ರ ನಿವಾಸಿ ಸ್ಥಳದಲ್ಲಿಯೇ‌ ಸಾವು

0

ನೆಲ್ಯಾಡಿ : ನೆಲ್ಯಾಡಿ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ ಪುತ್ತೂರು ಕುಂಬ್ರ ಮೂಲದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸೇತುವೆಯಲ್ಲಿ ನಡೆದಿದೆ. ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಮೃತರು ಕುಂಬ್ರ ನಿವಾಸಿ ಎನ್ನಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಉಜಿರೆ ಡಿವೈಡರ್ ಏರಿದ ಲಾರಿ

0

ಬೆಳ್ತಂಗಡಿ:ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೇರಿ ನಿಂತ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಭಾನುವಾರ ನಡೆದಿದೆ.ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ನಲ್ಲಿ ಅಳವಡಿಸಲಾಗಿದ್ದ ಬೀದಿ ದೀಪಗಳ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿಯಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಚಾರ್ಮಾಡಿ; ಬೆಳಗ್ಗಿನ ಜಾವ ಒಂಟಿ ಸಲಗನ ಓಡಾಟ: ಜನರಲ್ಲಿ ಆತಂಕ

0

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ. ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.ಪದೇ ಪದೇ ಆನೆಯ ದಾಳಿಯಾಗುತ್ತಲೇ ಇರುವರಿಂದ ಪ್ರದೇಶದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.