ಉಜಿರೆ ಡಿವೈಡರ್ ಏರಿದ ಲಾರಿ

0

ಬೆಳ್ತಂಗಡಿ:ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೇರಿ ನಿಂತ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಭಾನುವಾರ ನಡೆದಿದೆ.ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ನಲ್ಲಿ ಅಳವಡಿಸಲಾಗಿದ್ದ ಬೀದಿ ದೀಪಗಳ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಲಾರಿಯಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಚಾರ್ಮಾಡಿ; ಬೆಳಗ್ಗಿನ ಜಾವ ಒಂಟಿ ಸಲಗನ ಓಡಾಟ: ಜನರಲ್ಲಿ ಆತಂಕ

0

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸ್ಥಳದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ. ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.ಪದೇ ಪದೇ ಆನೆಯ ದಾಳಿಯಾಗುತ್ತಲೇ ಇರುವರಿಂದ ಪ್ರದೇಶದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್ ಮರು ಆಯ್ಕೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆದು ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯರಾಜ್ ಜೈನ್ ಮರು ಆಯ್ಕೆಯಾಗಿದ್ದಾರೆ. ನ.16ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮಾರಿಗುಡಿ ಸಮೀಪದ ಏಕತಾ ಸೌಧದಲ್ಲಿ ಚುನಾವಣೆ ನಡೆಯಿತು. ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್‌ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಗೆ ಒಟ್ಟು 7 ಮಂದಿ ಅಂತಿಮ ಅಭ್ಯರ್ಥಿಗಳು ಕಣದಲ್ಲಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸರಕಾರಿ ಪ್ರಾಥಮಿಕ ಶಾಲೆಗಳ ಜಯರಾಜ ಜೈನ್ ಹಾಗೂ ಗ್ರಾಮೀಣಾಭಿವೃದ್ಧಿ ಪಟ್ಟಣ ಪಂಚಾಯತ್ ರಾಜ್‌ ಇಲಾಖೆಯ ಪ್ರಶಾಂತ್ ಡಿ. ಬಳಂಜ...

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಭೇಟಿ

0

ಬೆಳ್ತಂಗಡಿ; ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ರಾಜೇಶ್‌ರೈ, ಕೈರಂಗಳ ಅಭಿಪ್ರಾಯಪಟ್ಟಿದ್ದಾರೆ. ಅವರು ನ. 16 ರಂದು ಬೆಳ್ತಂಗಡಿ ವಕೀಲರ ಸಂಘಕ್ಕೆ ಭೇಟಿ ನೀಡಿ ವಕೀಲರನ್ನುದ್ದೇಶಿ ಮಾತನಾಡುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ವಕೀಲರುಗಳು ಅದ್ಯಯನಶೀಲತೆಯ ಮೂಲಕ ಪಾಂಡಿತ್ಯ ಹೊಂದಿದ್ದು ನ್ಯಾಯಂಗದಲ್ಲಿ ತಮ್ಮದೇ ಆದ ಗೌರವವನ್ನು ಹೊಂದಿದ್ದಾರೆ ಎಂದವರು ಈ ಸಂಧರ್ಭದಲ್ಲಿ ಹೇಳಿದರು. ಯುವ ವಕೀಲರು ನ್ಯಾಯಲಯದ ಕಲಾಪಗಳಲ್ಲಿ ಉತ್ಸಾಹದಿಂದ...

ಉಜಿರೆಯ ರಬ್ಬರ್ ಸೊಸೈಟಿಯಿಂದ ಮಾದರಿ ಸೇವಾಕಾರ್ಯ:

0

ಬೆಳ್ತಂಗಡಿ ತಾಲೂಕು, ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನಅಧ್ಯಕ್ಷರಾದ ಶ್ರೀಧರ್ ಬಿಢೆ, ಉಪಾಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಸೊಸೈಟಿಯಿಂದ ರೂ. 50,000 ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

test

0

test

ಮುಳಿಯ ಜುವೆಲ್ಲರ್ಸ್‌, ಬೆಳ್ತಂಗಡಿ ಇವರಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

0

ಬೆಳ್ತಂಗಡಿ; ದಯಾ ವಿಶೇಷ ಶಾಲೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಳಿಯ ಜುವೆಲ್ಲರ್ಸ್‌ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ದಯಾ ವಿಶೇಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಮುಳಿಯ ಜುವೆಲ್ಲರ್ಸ್‌ ವತಿಯಿಂದ ಸಿಬ್ಬಂದಿಗಳು ಆಗಮಿಸಿ ಶಾಲೆಯ ನಿರ್ದೇಶಕರಾದ ವಂ.ಫಾ.ವಿನೋದ್‌ ಮಸ್ಕರೇನಸ್‌ ರವರನ್ನು ಸನ್ಮಾನಿಸಿ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ ವಿಕಲಚೇತನ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅವರ ಸರ್ವತೋಮುಖ ಏಳಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶಾಲೆಯನ್ನು ಪ್ರಶಂಸಿದರು. ವಂ.ಫಾ.ವಿನೋದ್‌ ಮಸ್ಕರೇನಸ್‌ ರವರು ಮಾತನಾಡಿ ಮುಳಿಯ ಜುವೆಲ್ಲರ್ಸ್‌ ರವರು ನಮ್ಮ ಶಾಲಾ ವಾರ್ಷಿಕೋತ್ಸವದ ವೇಳೆ...

ಕಲ್ಮಂಜ; ಕಾಡಾನೆ ದಾಳಿ ವ್ಯಾಪಕವಾದ ಕೃಷಿ ಹಾನಿ

0

ಬೆಳ್ತಂಗಡಿ; ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಮಂಗಳವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡಿದ‌ ಘಟನೆ ಸಂಭವಿಸಿದೆ.ಇಲ್ಲಿನ ನಿವಾಸಿಗಳಾದ ಎಂ.ಎಸ್.ಪ್ರಕಾಶ್ಮತ್ತು ಶ್ರೀನಿವಾಸ ನಾಯ್ಕ ಎಂಬವರಿಗೆ ಸೇರಿದ ತೋಟಗಳಿಗೆ ಕಾಡಾನೆಗಳು ನುಗ್ಗಿದೆ. ತೋಟದಲ್ಲಿ ಸುಮಾರು ನೂರಕ್ಕಿಂತ ಅಧಿಕ ಬಾಳೆ ಗಿಡ, 15 ಕ್ಕೂ ಅಧಿಕ ಅಡಿಕೆ ಗಿಡ, ಮತ್ತು ತೆಂಗಿನ ಮರಗಳನ್ನು ನಾಶಪಡಿಸಿದೆ. ಕಾಡಾನೆಗಳಗುಂಪಿನಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಇರಬಹುದೆಂದು ಶಂಕಿಸಲಾಗಿದೆ.ಘಟನೆಯ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಬೆಳ್ತಂಗಡಿ; ಕಸ್ತೂರಿ ರಂಗನ್ ವರದಿ ವಿರುದ್ದ ಸಿ.ಪಿ.ಎಂ ನೇತೃತ್ವದಲ್ಲಿ ಪ್ರತಿಭಟನೆ

0

ಬೆಳ್ತಂಗಡಿ; ರೈತರ ಹಿತ ಕಾಪಾಡುವುದೇ ಜನಪರ ಸರಕಾರಗಳ ಆದ್ಯತೆಯಾಗಬೇಕು ರೈತರು ದೇಶದ ಬೆನ್ನೆಲುಬು, ರೈತರ ಹಿತ ಕಾಪಾಡಲು ಅಸಮರ್ಥರಾದ ಸರಕಾರ ದೇಶವನ್ನು ಆಳಲು ಅಯೋಗ್ಯವಾಗಿದೆ ಎಂದು ಹಿರಿಯ ರೈತ ಮುಖಂಡರಾದ ಕರ್ನಾಟಕ ಪ್ರಾಂತ ರೈತ ಸಂಘ ಬೆಳ್ತಂಗಡಿ ತಾಲೂಕು ಅದ್ಯಕ್ಷರಾದ ಪಾಂಗಳ ಲಕ್ಷ್ಮಣ ಗೌಡ ಹೇಳಿದರು.ಅವರು ಮಂಗಳವಾರ ಕರ್ನಾಟಕಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಅರಣ್ಯ ಕಾಯ್ದೆಗೆ ತಿದ್ದುಪಡಿ ತರಬೇಕು, ಕಸ್ತೂರಿ ರಂಗನ್ ವರದಿ ಜಾರಿಗೆ ತರಬಾರದು, ರೈತರ ಭೂಮಿ ಉಚಿತ ಪ್ಲಾಟಿಂಗ್ ಮಾಡಬೇಕು, ಅಡಿಕೆ ಆಮದು ನಿಷೇದಿಸಬೇಕು, ರೈತರಿಗೆ ಮನೆ ಕಟ್ಟಲು ಕನ್ವರ್ಶನ್...

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

0

ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ಗೌಡ ರವರ ಪತ್ನಿ ಕುಸುಮ ಈಶ್ವರ ಗೌಡ ಮಂಗಳವಾರ ನಾಮಪತ್ರ ಸಲ್ಲಿಸಿದರು.ಈ ಸಂಧರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಮಾಯಿಲತೋಡಿ, ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ,...