ವೇತನ ಬಾಕಿ ಕೊಡಿಸಲು ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಗ್ರಾಮ ಪಂಚಾಯ್ತು ಆಂದೋಲನ

0

ಬೆಳ್ತಂಗಡಿ; ಪ್ರತಿ 1000 ಬೀಡಿ ಕಟ್ಟಿದ್ದಕ್ಕೆ ನಿಗದಿಯಾಗಿರುವ ಕಾನೂನು ಬದ್ದ ಕನಿಷ್ಟ ವೇತನದಲ್ಲಿ ತಲಾ ರೂ 40 ರಂತೆ ಕಡಿತ ಮಾಡಿದ ವೇತನ ವರ್ಷದಲ್ಲಿ 1 ಲಕ್ಷ ಬೀಡಿ ತಯಾರಿಸಿದ್ದವರಿಗೂ 2015 ರ ತುಟ್ಟಿ ಭತ್ತೆ ಬಾಕಿ ಸೇರಿ ತಲಾ ರೂ 60,000 ವೇತನ ಬಾಕಿ ಮಾಡಿದ ಬೀಡಿ ಮಾಲಕರ ವಿರುದ್ದ ಕ್ರಮ ಕೈಗೊಳ್ಳದ ಸರಕಾರ ನಡೆ ಖಂಡನೀಯ ಮತ್ತು ಕಾರ್ಮಿಕ ವಿರೋದಿ ದೋರಣೆಯಾಗಿದೆ ಎಂದು ದ.ಕ. ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷರಾದ ನ್ಯಾಯವಾದಿ ಬಿ.ಎಂ.ಭಟ್ ಹೇಳಿದರು. ಅವರು ಇಂದು ಕಳೆಂಜ ಪಂಚಾಯತು...

ಬನ್ನೆಂಗಳ ಪಿಲಿಗೂಡು ಬಾರ್ಯ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

0

ಬೆಳ್ತಂಗಡಿ;  ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನ ವಾಗೀ ರಚನೆ ಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಕೊಡ ಮಾಡಿದ ಎರಡು ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ 1 ಜಿಲ್ಲಾ ಶ್ರೀ ಮಹಾಬಲ ಕುಲಾಲ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರುತಾಲೂಕು ಜನಜಾಗೃತಿಕಾರ್ಯಕಾರಿಣಿ ಸಮಿತಿ ಸದಸ್ಯರೂ ಹಾಗೂ ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಗುಣಕರ್ ಅಗ್ನಾಡಿ,...

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

0

ಸರಳಿಕಟ್ಟೆ: ಇಲ್ಲಿನ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಲಾಯಿತು. ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು ಸೇರಿದಂತೆ 175 ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸರಳಿಕಟ್ಟೆ ಗೈಸ್ ಅತ್ಯಂತ ಪುಣ್ಯದ ಮತ್ತು ಗೌರವದ ಕಾರ್ಯವನ್ನು ನೆರವೇರಿಸಿದೆ. ಸರಳಿಕಟ್ಟೆ ಊರಿನ ಉದ್ಯಮಿಗಳ,ದಾನಿಗಳ ನೆರವಿನಿಂದ ಸರಳಿಕಟ್ಟೆ ಗೈಸ್ ಜಮಾಅತ್ ವ್ಯಾಪ್ತಿಯ ಸದಸ್ಯರ...

ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್ ಬದ್ಯಾರು ಗ್ರಾಮದ ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು,...

ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ  ರಾಣಿಜರಿ ಪರಿಸರದಲ್ಲಿ ಬೆಂಕಿ

0

ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ. ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು ಅರಣ್ಯ ಪ್ರದೇಶದ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್ ಎಫ್ ಒ ಶರ್ಮಿಷ್ಠಾ...

ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಕ್ಷಿತ್ ಪಣೆಕರ ಆಯ್ಕೆ

0

ಕಣಿಯೂರು: ಫೆ 28 ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಪಾಂಜಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಡೀಕಯ್ಯ ಗೌಡ,ನಾರಾಯಣ ಗೌಡ, ಉದಯ ಭಟ್, ರುಕ್ಮಯ್ಯ ಗೌಡ ಯಾನೆ ಪ್ರಭಾಕರ ಗೌಡ, ಪ್ರಸಾದ್ ಎ, ಉದಯ ಬಿ.ಕೆ, ಶೀಲಾವತಿ, ಶಾರದಾ ಆರ್ ರೈ, ಚಂದನ್ ಕುಮಾರ್ ಎ, ದಿನೇಶ್ ನಾಯ್ಕ ಇವರುಗಳು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂನ್...

ಕರಾವಳಿಯ ಅಭಿವೃದ್ಧಿಗೆ 500ಕೋಟಿ ಅನುದಾನದ ಬೇಡಿಕೆ: ಐವಾನ್ ಡಿಸೋಜ

0

ಬೆಳ್ತಂಗಡಿ: ಕರಾವಳಿ ಪ್ರದೇಶದ ಅಭಿವೃದ್ದಿಗೆ ಸೂಕ್ತ ಅನುದಾನ‌ ಒದಗಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಸಲ್ಲಿಸಿದ್ದು ಈ ಬಾರಿಯ ಬಜೆಡ್ ನಲ್ಲಿ ಸೂಕ್ತ ಅನುದಾನ ಲಭಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದರು.ಅವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರಾವಳಿ ಅಭಿವೃದ್ಧಿ ಮಂಡಳಿಯ ಮೂಲಕ 500ಕೋಟಿ ಅನುದಾನದ ಬೇಡಿಕೆಯನ್ನು ಮುಂದಿಡಲಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ, ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಸರಕಾರದ ಗಮನಸೆಳೆಯಲಾಗಿದೆ ಎಂದರು.ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿದೆ ಅದರ ಈಡೇರಿಕೆಗೆ ಪ್ರಯತ್ನಿಸಲಾಗುವುದು ಈ...

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ. ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ  ಮನವಿ.

0

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ...

ಚಾರ್ಮಾಡಿ ಘಾಟಿಯಲ್ಲಿ ತಿರುವಿನಲ್ಲಿಯೇ ಬಸ್ ನ ಸ್ಟೇರಿಂಗ್ ಜಾಯಿಂಟ್ ಕಟ್ .. ತಪ್ಪಿದ ಭಾರೀ ದುರಂತ

0

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ.ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

0

ಬೆಳ್ತಂಗಡಿ.ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು.ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು. ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.