ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ ಎಂ ಸಿ ವೇಣುಗೋಪಾಲ್

0

ಬೆಳ್ತಂಗಡಿ .ಬ್ಲಾಕ್ ಕಾಂಗ್ರೆಸ್ ಗೆಕೆಪಿಸಿಸಿ ಉಪಾಧ್ಯಕ್ಷರು,ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು ಕಾರ್ಯಕರ್ತರ ಚುನಾವಣೆ, ಇಂದಿನಿಂದಲೇ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವ ಮೂಲಕ ಪಕ್ಷದ ಅಭ್ಯರ್ಥಿಯ ಗೆಲುವಿಗೆ, ನಾಯಕರು ಕಾರ್ಯಕರ್ತರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು, ಎಂದರು,ಉಸ್ತುವಾರಿ ಎಂ ಸಿ ವೇಣುಗೋಪಾಲ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್...

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

0

ಬೆಳ್ತಂಗಡಿ:ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.ಪಾದಯಾತ್ರಿಗಳಿಗೆ ಅಡುಗೆ,ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು,ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಮಹಾಬಲ ಕುಲಾಲ್, ಯೋಜನಾಧಿಕಾರಿ ಸುರೇಂದ್ರ, ಸುರೇಶ ಮೊಯ್ಲಿ, ಜನಜಾಗೃತಿ ವೇದಿಕೆಯ ತಾಲೂಕು ಮಾಜಿ ಅಧ್ಯಕ್ಷ ವೆಂಕಟ್ರಾಯ ಅಡೂರು, ಶ್ರೀ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ...

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ  ವಾರ್ಷಿಕ ಮಹಾಸಭೆ

0

ಬೆಳ್ತಂಗಡಿ;  ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್ ವಹಿಸಿದ್ದರು.ಸಭೆಯ ವೀಕ್ಷಕರಾಗಿ ಇಬ್ರಾಹಿಂ ಕಕ್ಕಿಂಜೆ, ವಿಷಯ ಮಂಡನೆಯನ್ನು ಗುರುವಾಯನಕೆರೆ ಖತೀಬ್ ಎ.ಕೆ.ರಝಾ ಅಮ್ಜದಿ ನಡೆಸಿಕೊಟ್ಟರು.ವೇದಿಕೆಯಲ್ಲಿ ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್.,ಉಸ್ಮಾನ್ ಸಖಾಫಿ ಲಾಡಿ,ಹಮೀದ್ ಮುಸ್ಲಿಯಾರ್ ಉಳ್ತೂರು, ಮದ್ದಡ್ಕ ಮಸೀದಿ ಅಧ್ಯಕ್ಷರಾದ ಅಶ್ರಫ್ ಚಿಲಿಂಬಿ,ಅಬ್ಬೋನು ಮದ್ದಡ್ಕ,ಉಮ್ಮರ್ ಮಾಸ್ಟರ್ ಮದ್ದಡ್ಕ, ಉಮ್ಮರಬ್ಬ ಮದ್ದಡ್ಕ,ಪರಪ್ಪು ಮಸೀದಿ ಅಧ್ಯಕ್ಷರಾದ...

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ

0

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಮಾಲಾಡಿ; ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

0

ಬೆಳ್ತಂಗಡಿ: ಮಾಲಾಡಿ ಕೊಲ್ಪದ ಬೈಲು ಸಮೀಪದ ತಿರುವಿನಲ್ಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದ ಘಟನೆ ಫೆ 21ರಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ‌. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಯರ್ತಡ್ಕ; ಅಕ್ರಮ ದನ ಸಾಗಾಟ ಪತ್ತೆ ಇಬ್ಬರ ಬಂಧನ

0

ಬೆಳ್ತಂಗಡಿ; ತಾಲೂಕಿನ ಕಾಯರ್ತಡ್ಕದಲ್ಲಿ ಅಟೋ ರಿಕ್ಷಾ ದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳದ ದನ ಸಾಗಾಟಕ್ಕೆ ಉಪಯೋಗಿಸಿದ ರಿಕ್ಷಾ ಹಾಗೂ ದನಗಳನ್ನು ವಶಕ್ಕೆ ಪಡೆಯಲಾಗಿದೆ‌. ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

0

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು,ಸದಸ್ಯರಾಗಿ ಹರಿಶ್ಚಂದ್ರ ಹೆಗ್ಡೆ, ಶ್ರೀಮತಿ ನೀತಾ ಮಹೇಶ್ ಕುಮಾರ್, ಶ್ರೀಮತಿ ಪುಷ್ಪಾ ಶೆಟ್ಟಿ, ಅಶೋಕ್ ಕುಮಾರ್ ಕೊಡಕ್ಕಲ್, ರುಕ್ಮಯ ನಾಯ್ಕ, ರಮೇಶ್ ದೇವಾಡಿಗ, ಪುರಂದರ ಆಚಾರ್ಯ ಮತ್ತು ಅರ್ಚಕರಾಗಿ ಅರವಿಂದ ಭಟ್ ನೇಮಕವಾಗಿದ್ದಾರೆ.

ನೆರಿಯ; ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

0

ಬೆಳ್ತಂಗಡಿ; ನೆರಿಯ ಗ್ರಾಮದ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ. ಫಾತಿಮತ್ ರಂಝೀನ್ ರವರ ದೂರಿನಂತೆ ಧರ್ಮಸ್ಥಳ ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ.ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೊಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿರುವುದುಕಂಡುಬಂದಿದೆ. ಗೋದ್ರೆಜ್...

ತಣ್ಣೀರುಪಂತ; ಏಳನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ; 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ತಾಲೂಕಿನ ತಣ್ಣೀರು ಪಂಥ ಗ್ರಾಮದಲ್ಲಿ ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಫೆಬ್ರವರಿ 18ರಂದು ರಾತ್ರಿ ಮಲಗುವ ಕೋಣೆಯಲ್ಲಿ ಒಳಗಿನಿಂದ ಚಿಲಕ ಹಾಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮನೆಯವರು ಇದನ್ನು ಗಮನಿಸಿದ್ದು ಕೊಠಡಿಯ ಬಾಗಿಲನ್ನು ಒಡೆದು ಬಾಲಕನನ್ನು ನೇಣಿನಿಂದ ಕೆಳಗಿಳಿಸಿ ಆಸ್ಪತ್ರಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ...

ನಗರ ಪ್ರದೇಶದ ಜನರಿಗೆ ನೆರವಾಗಲು, ‘ಬಿ’ ಖಾತಾ ನೀಡುವ ರಾಜ್ಯ ಸರಕಾರದ ಐತಿಹಾಸಿಕ ನಿರ್ಧಾರ; ರಕ್ಷಿತ್ ಶಿವರಾಂ

0

ಬೆಳ್ತಂಗಡಿ : ‘ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆ ಹಾಗೂ ಭೂ ಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡುವ ಐತಿಹಾಸಿಕ ನಿರ್ಧಾರವನ್ನು ಸಿದ್ದರಾಮಯ್ಯ ಸರ್ಕಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಮತ್ತೆ ಬಡವರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದೆ. ಇದರಿಂದ ರಾಜ್ಯದ 33 ಲಕ್ಷ ಕುಟುಂಬಗಳ ಜತೆ ಬೆಳ್ತಂಗಡಿ ನಗರ ವಾಸಿಗಳ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...