ಪುದುವೆಟ್ಟು ಅಕ್ರಮ ಮರಳು ಗಣಿಗಾರಿಕೆಗೆ ಪೊಲೀಸ್ ದಾಳಿ
ಬೆಳ್ತಂಗಡಿ : ಯಾವುದೇ ಪರವಾನಿಗೆ ಪಡೆಯದೆಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಶುಕ್ರವಾರ ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ...
ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ನಾರಾಯಣ ಆಚಾರ್ ನಿಧನ
ಬೆಳ್ತಂಗಡಿ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ, ಕುವೆಟ್ಟು ನಿವಾಸಿನಾರಾಯಣ ಆಚಾರ್ (55ವ) ಅವರು ಶುಕ್ರವಾರ ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನುಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.ಮೃತರು ತಂದೆ, ತಾಯಿ,ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ನವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ
ಧರ್ಮಸ್ಥಳ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಗುರುವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕುಮಾರಿ ಸುಪ್ರೀತಾ ಧರ್ಮಸ್ಥಳ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.ಮೃದಂಗ ವಾದಕರಾಗಿ ವಿದ್ವಾನ್ ಪುತ್ತೂರು ನಿಕ್ಷಿತ್ ಮತ್ತು ಮಾ. ವರ್ಚಸ್ ಧರ್ಮಸ್ಥಳ, ವಯಲಿನ್ ವಾದಕರಾಗಿ ವಿದ್ವಾನ್ ನಿಶಾಂತ್ ರಾವ್, ಬೆಂಗಳೂರು, ಘಟವಾದಕರಾಗಿ ವಿದ್ವಾನ್ ಫಣೀಂದ್ರ ಬೆಂಗಳೂರು ಹಾಗೂ ಖಂಜಿರದಲ್ಲಿ ಅತ್ಯುಲ್ಯತೇಜ, ವೇಣೂರು ಸಹಕರಿಸಿದರು.ಕಂಚಿಮಾರು ಟೈಗರ್ಸ್ ತಂಡದವರಿಂದ ಹುಲಿವೇಷ ಪ್ರದರ್ಶನ ನಡೆಯಿತು.
ಪುದುವೆಟ್ಟು ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದಿದ್ದಾರೆ. ತಕ್ಷಣ ಅಲ್ಲಿದ್ದವರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅದರೆ ಆವೇಳೆಗೆ ಅವರು ಮೃತ ಪಟ್ಟಿದ್ದಾರೆ. ಮೃತರಿಗೆ ಮದುವೆಯಾಗಿದ್ದು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.ಘಟನೆಯ...
ಮಲವಂತಿಗೆ, ಅಕ್ರಮ ಗೋಸಾಗಾಟ ಪತ್ತೆ; ನಾಲ್ವರು ಆರೋಪಿಗಳ ಬಂಧನ
ಬೆಳ್ತಂಗಡಿ; ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36), ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂಬವರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಗುರುವಾರ. ರಾತ್ರಿ ವೇಳೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ.
ಬೆಳ್ತಂಗಡಿ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳನ್ನು ನೇಮಿಸಲಾಗಿರುವುದಾಗಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. ನಾರಾವಿ ಜಿಲ್ಲಾ ಪಂಚಾಯತ್ಧರಣೇಂದ್ರ ಕುಮಾರ್ಅಳದಂಗಡಿ ಜಿಲ್ಲಾ ಪಂಚಾಯತ್ಶೇಖರ್ ಕುಕ್ಕೆಡಿಲಾಯಿಲ ಜಿಲ್ಲಾ ಪಂಚಾಯತ್ನಾರಾಯಣ ಗೌಡ ದೇವಸ್ಯಉಜಿರೆ ಜಿಲ್ಲಾ ಪಂಚಾಯತ್ನಮಿತಾ ಪೂಜಾರಿಧರ್ಮಸ್ಥಳ ಜಿಲ್ಲಾ ಪಂಚಾಯತ್ಸೆಬಾಸ್ಟಿಯನ್ ಪಿ.ಟಿಕಣಿಯೂರು ಜಿಲ್ಲಾ ಪಂಚಾಯತ್ಕೆ.ಕೆ ಶಾಹುಲ್ ಹಮೀದ್ಕುವೆಟ್ಟು ಜಿಲ್ಲಾ ಪಂಚಾಯತ್ಸುಭಾಶ್ ಚಂದ್ರ ರೈರವರನ್ನು ನೇಮಕ ಮಾಡಲಾಗಿದೆ.
ಧರ್ಮಸ್ಥಳ: ಉದ್ಯಮಿ ಎ.ಜೆ ಆಂಟನಿ ನಿಧನ
ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಗುರುವಾರ ನಿಧನರಾಗಿದ್ದಾರೆ.ಧರ್ಮಸ್ಥಳ ಗ್ರಾಮಪಂಚಾಯತು ಮಾಜಿ ಸದಸ್ಯರಾದ ಎ ಜೆ ಆಂಟನಿ ಅವರು ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಸಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಧಾನ ಪರಿಷತ್ ಚುನಾವಣೆ; ಎಸ್. ರಾಜು ಪೂಜಾರಿ ಅವರಿಗೆ ಕಾಂಗ್ರೆಸ್ ಟಿಕೇಟ್, ಇಂದು ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ; ಉಡುಪಿ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಸಹಕಾರಿ ಧುರೀಣ ಬೈಂದೂರಿನ ಎಸ್.ರಾಜು ಪೂಜಾರಿ ಅವರು ರಾಜ್ಯ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾದಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.58 ವರ್ಷ ಪ್ರಾಯದ ಬಿ.ಕಾಂ ಪದವೀಧರ ರಾಜು ಪೂಜಾರಿ ಅವರು 1987ರಲ್ಲಿ ಎನ್‌ಎಸ್‌ಯುಐನ ಪದಾಧಿಕಾರಿ ಯಾಗುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದ್ದು, ಕಾಂಗ್ರೆಸ್‌ನ ವಿವಿಧ ಸಂಘಟನೆಗಳಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ ಬಳಿಕ ಸದ್ಯ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ.ಬೈಂದೂರು ತಾಲೂಕು ಮರವಂತೆಯ...
ಮದ್ದಡ್ಕದಲ್ಲಿ ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ: ಕಾರ್ಗಿಲ್ ಯುದ್ಧದ ವಿಜಯದ ಬಳಿಕ ನಮ್ಮ ದೇಶವನ್ನು ಕಾಯುವ ವೀರ ಯೋಧರನ್ನು ಗುರುತಿಸಿ ಗೌರವಿಸುವ ನಾಗರಿಕ ಪ್ರಜ್ಞೆ ಹೆಚ್ಚಾಗಿದೆ ಎಂದು ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರುಅವರು ಅಕ್ಟೋಬರ್ 2ರಂದು ಮದ್ದಡ್ಕದ ವೀರಯೋಧ ಏಕನಾಥ ಶೆಟ್ಟಿ ಸಭಾ ವೇದಿಕೆಯಲ್ಲಿ ನಾಗರಿಕ ಅಭಿನಂದನಾ ಸಮಿತಿಯಿಂದ ಕುವೆಟ್ಟು ಹಾಗೂ ಓಡಿಲ್ನಾಳ ಗ್ರಾಮದ 35 ಸಂಘ ಸಂಸ್ಥೆಗಳು ಒಟ್ಟು ಸೇರಿ ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಸರಕಾರಿ...
ಪಡ್ಡಂದಡ್ಕದಲ್ಲಿ ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ.
ವೇಣೂರು; ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ,ರಾಷ್ಟೀಯ ಸೇವಾ ಯೋಜನೆ,ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದ್ರಿ ರಾಷ್ಟೀಯ ಸೇವಾ ಯೋಜನೆ ಘಟದ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ಪಡ್ಡಂದಡ್ಕ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.ಪ್ರಗತಿಪರ ಕೃಷಿಕ ಬಾಲ್ಯ ಶಂಕರ್ ಭಟ್ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತಾಡಿ ಈ ಶಿಬಿರವು ವಿದ್ಯಾರ್ಥಿಗಳಿಗೆ ಜೀವನಕ್ಕೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡುತ್ತೆ ಮತ್ತು ಜನಸಾಮಾನ್ಯರೊಂದಿಗೆ ಬೆರೆಯುವ ಅವರ ಸಮಸ್ಯೆಯನ್ನು ಅರಿಯುವ ಅವಕಾಶ ಈ ಶಿಬಿರ ನೀಡುತ್ತೆ ಎಂದರುಅತಿಥಿಯಾಗಿ ಆಗಮಿಸಿದ ಉದ್ಯಮಿ...














