ಬೆಳ್ತಂಗಡಿ : ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ; ರಸ್ತೆ ದಾಟುತ್ತಿದ್ದ ಬಾಲಕನಿಗೆ ಗಾಯ
ಬೆಳ್ತಂಗಡಿ: ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಮೋಟಾರ್ ಸೈಕಲ್ ಡಿಕ್ಕಿಯಾಗಿ 14 ವರ್ಷದ ಬಾಲಕ ಗಾಯಗೊಂಡ ಘಟನೆ ಆಗಸ್ಟ್ 15ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮುಂಡಾಡಿ ಮನೆ ನಿವಾಸಿ ಜಗನ್ನಾಥ ಶೆಟ್ಟಿ (40) ರಿಕ್ಷಾ ಚಾಲಕರಾಗಿದ್ದು, ಆಗಸ್ಟ್ 15 ರಂದು ಬೆಳಗ್ಗೆ ಸುಮಾರು 10.30ಕ್ಕೆ ಕ್ಷಿತಿಜ್ (14) ಎಂಬಾತನನ್ನು ಆಟೋರಿಕ್ಷಾದಲ್ಲಿ ಆತನ ಮನೆಗೆ ಬಿಡಲು ಮಾಲಾಡಿ–ಗರ್ಡಾಡಿ ಡಾಮಾರು ರಸ್ತೆಯಲ್ಲಿ ತೆರಳುತ್ತಿದ್ದರು. ಬರ್ನ ತಲುಪಿದಾಗ ಕ್ಷಿತಿಜ್‌ನನ್ನು ರಿಕ್ಷಾದಿಂದ ಇಳಿಸಿ, ಆತ ರಸ್ತೆ ದಾಟುತ್ತಿದ್ದ ವೇಳೆ ಅಪ್ರಾಪ್ತ ಚಾಲಕನೊಬ್ಬ ಸಹಸವಾರನನ್ನು ಕುಳ್ಳಿರಿಸಿಕೊಂಡು ಬಂದ ಮೋಟಾರ್...
ರೆಖ್ಯಅರಣ್ಯ ಸಮಸ್ಯೆಗೆ ಪರಿಹಾರಕ್ಕೆ ಅರಣ್ಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ರೆಖ್ಯ ಗ್ರಾಮದ ಸರ್ವೆ ನಂಬರ್ 62ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ರೆಖ್ಯ ಗ್ರಾಮಸ್ಥರ ಹಾಗೂ ಇತರರು ಇದ್ದರು. ಕಳೆದ ಹಲವು ವರ್ಷಗಳಿಂದ ಇರುವ ಈ ಸಮಸ್ಯೆ ಬಗ್ಗೆ ಸಚಿವರಿಗೆ ಪೂರ್ಣ ಮಾಹಿತಿಗಳನ್ನು ನೀಡಿ ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಚಿವರಲ್ಲಿ ಒತ್ತಾಯಿಸಲಾಯಿತು
ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ
ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 15ರಂದು ಬೆಳಗ್ಗೆ 9.45 ರ ಸುಮಾರಿಗೆ ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ KA-21-B-0593 ನೋಂದಣಿ ಸಂಖ್ಯೆಯ ಮಹೇಂದ್ರ ಬೊಲೆರೋ ಪಿಕ್‌ಅಪ್ ವಾಹನವನ್ನು ನಿಲ್ಲಿಸಲು ಸೂಚಿಸಲಾಗಿದೆ. ಈ ವೇಳೆ ಚಾಲಕ ವಾಹನವನ್ನು ನಿಲ್ಲಿಸಿ ಕೆಳಗಿಳಿದು ಪರಾರಿಯಾಗಿದ್ದಾನೆ. ವಾಹನವನ್ನು ಪರಿಶೀಲಿಸಿದಾಗ ಹಿಂಬದಿ ಬಾಡಿಯಲ್ಲಿ ಸುಮಾರು 30 ಬುಟ್ಟಿಯಷ್ಟು ಮರಳು ಪತ್ತೆಯಾಗಿದೆ. ಯಾವುದೇ ಇಲಾಖಾ ಅನುಮತಿ ಪಡೆಯದೆ ಹಾಗೂ...
ಬೆಳ್ತಂಗಡಿ; ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಪೊಲೀಸ್ ದಾಳಿ ಒಬ್ಬನ ಬಂಧನ,ಎರಡು ಟಿಪ್ಪರ್ ಹಾಗೂ ಮರಳು ವಶಕ್ಕೆ
ಬೆಳ್ತಂಗಡಿ: ಇಂದಬೆಟ್ಟು ಬೊಳೂರು ಬೈಲ್ ನಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಎರಡು ಟಿಪ್ಪರ್ ಲಾರಿಗಳನ್ನು ಹಾಗೂ ಮರಳನ್ನು ವಶಕ್ಕೆ ಪಡೆದಿದ್ದಾರೆ. ಆ.18ರಂದು ಬೆಳಗಿನ ಜಾವ ಸುಮಾರು 4.45ರ ವೇಳೆಗೆ ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ, ಬೊಳ್ಳೂರುಬೈಲು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟಕ್ಕಾಗಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಾಳಿನಡೆಸಿದ್ದರು. ಸ್ಥಳದಲ್ಲಿ ಸುಮಾರು...
ಶಿವಮೊಗ್ಗದ ವ್ಯಕ್ತಿಯ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈತ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಬಸ್ ನಿಲ್ದಾಣದ ಸಮೀಪ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕದ ಮೂಡಿಸಿತ್ತು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ
ಬೆಳ್ತಂಗಡಿ : ವಾಲ್ಮೀಕಿ ನಿಗಮದ ಲೂಟಿಯ ರೂವಾರಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಭ್ರಷ್ಟ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವೖಫಲ್ಯಗಳ ವಿರುದ್ಧ ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಪ್ರತಿಫಟಾನ ಧರಣಿ ಸತ್ಯಾಗ್ರಹ ಆ. 18 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ವಠಾರದಲ್ಲಿ ನಡೆಯಿತು. ಧರಣಿಯೂ ಮೊದಲು ವಂದಿಪನೆ ಗಣನಾಥ ಭಜನೆಯ ಮೂಲಕ ಪ್ರಾರಂಭಗೊಂಡಿತು… ಮಾಜಿ ವಿ. ಪ. ಸದಸ್ಯ ಪ್ರತಾಪಸಿಂಹ ನಾಯಕ್ಬೆ, ಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಬಿಜೆಪಿ ನಾಯಕರಾದ ಜಯಂತ್ ಕೋಟ್ಯಾನ್, ಜಯಾನಂದ...
ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ; ಕಂದಾಯ, ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ಭೇಟಿಗೆ ದಲಿತ ನಾಯಕರ ಸಭೆಯಲ್ಲಿ ನಿರ್ಧಾರ
ಬೆಳ್ತಂಗಡಿ; ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯ ಕಂದಾಯ ಸಚಿವರು , ದ.ಕ ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಶೀಘ್ರದಲ್ಲಿ ಭೇಟಿಗೆ ತಾಲೂಕಿನ ದಲಿತ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ . ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸಭೆ ಸೇರಿದ ದಲಿತ ನಾಯಕರು ಡಿಸಿ ಮನ್ನಾ ಜಮೀನು ಹಂಚಿಕೆ ಕಾರ್ಯತಂತ್ರದ ತೀರ್ಮಾನ ಕೈಗೊಂಡರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ...
ಮಾಲಾಡಿ ಸೋನಂದೂರು ಶಕ್ತಕೇಂದ್ರದ ವತಿಯಿಂದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನೆ
ಬೆಳ್ತಂಗಡಿ; ಮಾಲಾಡಿ ಮತ್ತು ಸೋನಂದೂರು ಶಕ್ತಿ ಕೇಂದ್ರದ ವತಿಯಿಂದ ಬೆಸ್ಟ್ MLA ಪುರಸ್ಕಾರ ಪಡೆದ ಬೆಳ್ತಂಗಡಿಯ ಅಭಿವೃದ್ಧಿಯ ಹರಿಕಾರ ಶ್ರೀ ಯುತ ಹರೀಶ ಪೂಂಜರಿಗೆ ಗೌರಾವಾಭಿನಂದನೆ:ಆ 16 ರಂದು ಬೆಸ್ಟ್ MLA ಪುರಸ್ಕಾರ ಪಡೆದ ಬೆಳ್ತಂಗಡಿಯ ಜನಪ್ರಿಯ ಶಾಸಕರಾದ. ಹರೀಶ ಪೂಂಜರನ್ನು ಮಾಲಾಡಿ ಸೋನಂದೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಅವರ ಮನೆಗೆ ತೆರಳಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಲಾಡಿ ಸೋನಂದೂರು ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು,ಕಾರ್ಯದರ್ಶಿಗಳು,ಸದಸ್ಯರು ಮತ್ತು...
ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಮತ್ತೊಬ್ಬನಿಗೆ ಗಂಭೀರ ಗಾಯ
ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ಘಟ್ಟದಳ್ಳ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಗೋಪಾಲ್(44) ಮೃತ ವ್ಯಕ್ತಿ. ಮತ್ತೊಬ್ಬ ಕಾರ್ಮಿಕ ಜಾದವ್(26) ಗಂಭೀರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಹತ್ತಕ್ಕೂ ಹೆಚ್ಚು ಕಾರ್ಮಿಕರು ಕಾಫಿ ಟದಲಿ ಕೆಲಸ ನಿರ್ವಹಿಸುತ್ತಿರಸಂದರ್ಭ ಅರಣದಂಚಿನಿಂದ ಬಂದಸಂದರ್ಭ ಕಾಡಾನೆ ಕಾರ್ಮಿಕರ ಮೇಲೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಇತರ ಕಾರ್ಮಿಕರು ಸ್ಥಳದಿಂದ ಓಡಿ...
ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ
ಬೆಳ್ತಂಗಡಿ, ಆ.16: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಾವೂರು ಗ್ರಾಮ ಸಮಿತಿ ವತಿಯಿಂದ “ಕೆಸರಲ್ಲಿ ಜೊತೆಯಾಗಿ ಸಂಭ್ರಮ” ಎಂಬ ಘೋಷವಾಕ್ಯದಡಿ ಸಾರ್ವಜನಿಕ ಕ್ರೀಡಾಕೂಟ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ನಾವೂರು ದುಗಳಚ್ಚಿಲ್ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. SDPI ನಾವೂರು ಬ್ರಾಂಚ್ ಅಧ್ಯಕ್ಷ ಸಾದಿಕ್ ಕಿರ್ಣಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯಂಗ್ ಡೆಮಾಕ್ರಟ್ಸ್ ಕರ್ನಾಟಕ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಶ್ ಅಲಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಖಾದರ್ ನಾವೂರು ಸ್ವಾಗತಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಯಂಗ್ ಡೆಮಾಕ್ರಟ್ಸ್...















