ಅಡಿಕೆ ಬೆಳೆಗಾರರು ಮತ್ತು ವರ್ತಕರ ಮೇಲೆ ನಿರಂತರ ದೌರ್ಜನ್ಯ: SDPI ಖಂಡನೆ; ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ ರಾಜ್ಯದ ಲಾರಿಗಳ ಬಿಡುಗಡೆಗೆ ಆಗ್ರಹ 

0

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ವರ್ತಕರು ಕಳೆದ ಹಲವು ವರ್ಷಗಳಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣಿಕೆಯ ಲಾರಿಗಳನ್ನು ತಡೆಹಿಡಿದಿರುವ ಕ್ರಮವು ಅತೀಹೇಯಾ ಹಾಗೂ ಖಂಡನೀಯ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡಿಕೆ ವರ್ತಕರು ಅತೀ ದೊಡ್ಡಮಟ್ಟದಲ್ಲಿ GST ಕಟ್ಟುವ ಮೂಲಕ ಸರ್ಕಾರಕ್ಕೆ ತೆರಿಗೆ ಪಾವತಿಯನ್ನು ಮಾಡುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಈ ನಿಲುವಿನಿಂದ ಕರ್ನಾಟಕ ರಾಜ್ಯ ಹಾಗೂ ಕೇಂದ್ರದ ಬೊಕ್ಕಸಕ್ಕೂ ಪೆಟ್ಟು ಬಿದ್ದಂತಾಗಿದೆ. ಅಡಿಕೆ...

ಬೆಳ್ತಂಗಡಿ; ಬೆಳಾಲಿನಲ್ಲಿ ಬೈಕ್ ಗಳ ನಡುವೆ ಅಪಘಾತ ಮೂವರಿಗೆ ಗಾಯ

0

ಬೆಳ್ತಂಗಡಿ; ಬೆಳಾಲು ಗ್ರಾಮದ‌ ಕಾಡಂಡ‌ ಸಮೀಪ ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡದ ಘಟನೆ ಬುಧವಾರ ಸಂಭವಿಸಿದೆ.ಗಾಯಾಳುಗಳು ಇಳಂತಿಲ ಗ್ರಾಮದ ನಿವಾಸಿ ಸಿಯಾನ್(18), ಖಲಂದರ್ ಶಾಫಿ, ಹಾಗೂ ಮತ್ತೊಂದು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅತಿಶ್ ಎಂಬವರು ಗಾಯಗೊಂಡಿದ್ದಾರೆ.ಇಳಂತಿಲದಿಂದ ಉಜಿರೆಕಡೆಗೆ ಬರುತ್ತಿದ್ದ ಖಲಂದರ್ ಶಾಫಿ ಚಲಾಯಿಸುತ್ತಿದ್ದ ಬೈಕ್ ಗೆ ಉಜಿರೆ ಕಡೆಯಿಂದ ಬಂದ ಅತಿಶ್ ಚಲಾಯಿಸುತ್ತಿದ್ದ ಬೈಕಿಗೆ ನೇರವಾಗಿ ಡಿಕ್ಕಿಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಬಿದ್ದು ಗಾಯಗೊಂಡ ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಂಭೀರವಾಗಿ...

ದ.ಕ ಸೇರಿದಂತೆ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್

0

ಬೆಳ್ತಂಗಡಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವರಾಗಿರುವ ಮಂಗಳೂರು ಶಾಸಕ ಯು.ಟಿ.ಖಾದರ್ ಅವರಿಗೆ ದ.ಕ. ಜಿಲ್ಲಾ ಉಸ್ತುವಾರಿ ಸ್ಥಾನ ನೀಡಲಾಗಿದೆ. ಜತೆಗೆ ಕೊಡಗು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಸಿದ್ದರಾಮಯ್ಯ ಸರಕಾರದಲ್ಲಿ ಸ್ಪೀಕ‌ರ್ ಅಗಿದ್ದ ಖಾದರ್ ಅವರು ಇದೀಗ ಸಚಿವರಾಗಿದ್ದಾರೆ.

ವೇಣೂರು ಠಾಣಾವ್ಯಪ್ತಿಯಲ್ಲಿ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕ ರಿಬ್ಬರಿಂದ ಲೈಂಗಿಕ ದೌರ್ಜನ್ಯ ಪ್ರಕರಣ‌ದಾಖಲು

0

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ವರ್ಷದ ಮಗುವಿನ ಮೇಲೆ ಎರಡು ಮಂದಿ ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಾರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. 2023 ರಲ್ಲಿ ಸಂತ್ರಸ್ತ ಬಾಲಕಿ 6 ವರ್ಷದ ಸಂದರ್ಭ ಈ ಕೃತ್ಯ ನಡೆದಿದ್ದು ಸಂತ್ರಸ್ತ ಮಗುವಿನ ಸಂಬಂಧಿ ಹಾಗೂ ಸ್ಥಳೀಯ ಬಾಲಕ ಜೊತೆಗೂಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ. ಆರೋಪಿಗಳಲ್ಲಿ ಒರ್ವನನ್ನು(16) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಅಪ್ರಾಪ್ತ ಬಾಲಕ(18) ಮುಂಬಯಿ...

ಬೆಳ್ತಂಗಡಿ; ಗ್ರಾಮ‌ಆಡಳಿತ ಅಧಿಕಾರಿಯಿಂದ ವ್ಯಕ್ತಿಯಿಂದ ಕೊಲೆ

0

ಬೆಳ್ತಂಗಡಿ : ಗ್ರಾಮಾಡಳಿತಾಧಿಕಾರಿ ಜಯಚಂದ್ರ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಜೂ.22 ರಂದು ನಡೆದಿದೆ. ಮಂಡ್ಯ ಜಿಲ್ಲೆಯ ಶೆಟ್ಟಿಹಳ್ಳಿ ನಿವಾಸಿಯಾಗಿರುವ ಹಿಂದೆ ಬೆಳ್ತಂಗಡಿ ಯಲ್ಲಿ ಕಾರ್ಯ ನಿರ್ವಹಿಸಿ ಈಗ ಪುತ್ತೂರಿನಲ್ಲಿ ಗ್ರಾಮ ಆಡಳಿತಾ ಧಿಕಾರಿಯಾಗಿರುವ ಜಯಚಂದ್ರ ಕೊಲೆ ಆರೋಪಿಯಾಗಿದ್ದು ಸಂಜೆ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದ ಗಣೇಶ್(42) ಜೊತೆ ಜಗಳ ತೆಗೆದು ಹಲ್ಲೆ ಮಾಡಿ, ಕೊಲೆ ಮಾಡಿದ ಆತ ಪರಾರಿಯಾಗಿರುವ ಬಗ್ಗೆ ಪ್ರಕರಣ...

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಫಾರ್ಮಾಸಿ ಅಧಿಕಾರಿ ಚಂದ್ರಶೇಖರ್ ಅಮಾನತು

0

ಬೆಳ್ತಂಗಡಿ:ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಮಹಿಳಾ ನೌಕರರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆಸ್ಪತ್ರೆಯ ಫಾರ್ಮಾಸಿ ಅಧಿಕಾರಿ ಚಂದ್ರಶೇಖರ್ ಅವರನ್ನು ಜೂ 23 ರಂದು ಅಮಾನತು ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಚಂದ್ರಶೇಖರ್ ಅವರು ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಜೂ. 11 ರಂದು ದೂರು ನೀಡಿದ್ದು, ಈ ಬಗ್ಗೆ ಅಂತರಿಕ ದೂರು ಸಮಿತಿ ಸಭೆ ನಡೆಸಿ ಫಾರ್ಮಸಿ ಅಧಿಕಾರಿ ಚಂದ್ರ ಶೇಖರ್ ವಿರುದ್ಧ ಕಾನೂನು ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳು ಕೋರಿದ್ದು...

ಬೆಳಾಲು; ಚಲಿಸುತ್ತಿದ್ದ  ಸ್ಕೂಟರ್ ಹೊತ್ತಿ ಉರಿದ ವೇಳೆ ಬೆಂಕಿಯಿಂದ ಗಾಯಗೊಂಡಿದ್ದ ಬಾಲಕ ಮೃತ್ಯು

0

ಬೆಳ್ತಂಗಡಿ:ಬೆಳಾಲು ಗ್ರಾಮದಮಿನಂದೇಲು ಬಳಿ ಸ್ಕೂಟಿಯೊಂದು ಜೂ.12ರಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆಯಲ್ಲಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಬೆಳಾಲು ನಿವಾಸಿ ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರ ಪುತ್ರ ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರ ವಿದ್ಯಾರ್ಥಿ ದಿಯಾನ್ (7) ಮೃತಪಟ್ಟ ಬಾಲಕ.ಮೋಹನ್ ಗೌಡ ಅವರು ದಿಯಾನ್ ನನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಬೆಂಕಿ ಹತ್ತಿಕೊಂಡು ಬಾಲಕನಿಗೆ ತೀವ್ರತರದ ಸುಟ್ಟ ಗಾಯಗಳು ಉಂಟಾಗಿತ್ತು.ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ...

ಜೂ 30 ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಅವರಿಗೆ ಬೀಳ್ಕೊಡುಗೆ

0

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದಲ್ಲಿ ಸುಧೀರ್ಘ ಅವಧಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಶ್ರೀ ರಾಜು ಶೆಟ್ಟಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಜೂ. 30ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ ಹೇಳಿದರು.ಅವರು ಜೂ. 24ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. ರಾಜು ಶೆಟ್ಟಿ ಇವರು ತಾ. 24.06.1989ರಂದು ಸಂಘದಲ್ಲಿ ಸೇವೆಗೆ ನೇಮಕ ಹೊಂದಿ ದಿನಾಂಕ .01.02.1995ರಿಂದ ಇಲ್ಲಿಯವರೆಗೆ...

ಪೆರಿಯಶಾಂತಿಯಲ್ಲಿ ಭೀಕರ ಬೈಕ್ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

0

ಬೆಳ್ತಂಗಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ  ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್.ವಿ (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಬೈಕ್ ಸವಾರನನ್ನು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಹಾಗೂ ಸಂಗಮ್ ಪಿಕಪ್ ವಾಹನ ಚಾಲಕ ಗಿರೀಶ್ ಎಂದು ಗುರುತಿಸಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಗಿರೀಶ್ ಅವರು ಗುಂಡ್ಯದಿಂದ ಕೊಕ್ಕಡ...

ಗಿರೀಶ್ ಮಟ್ಟಣ್ಣನವರ್ ವಿರದ್ದ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ FIR ರದ್ದುಪಡಿಸಿದ ಹೈಕೋರ್ಟ್

0

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮಾನ್ಯ ಹೈ ಕೋರ್ಟ್ ರದ್ದುಗೊಳಿಸಿ ಪ್ರಕರಣ ಮುಕ್ತಾಯಗೊಳಿಸಿ ಜೂ.23 ರಂದು ಆದೇಶ ಹೊರಡಿಸಿದೆ. ವ್ಯಕ್ತಿ ವಿರುದ್ಧ Mud ಸ್ಲಾಗಿಂಗ್, ವ್ಯಂಗ್ಯ ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವ ರೀತಿಯಲ್ಲಿ ಆರೋಗ್ಯಕರ ಟೀಕೆ ಮಾಡುವುದು ಒಳ್ಳೆಯದು.ವ್ಯಕ್ತಿಗಳ ವಿರುದ್ಧ ಆರೋಗ್ಯ ಟೀಕೆಗಳಿಗೆ ಅಭ್ಯಂತರ ಇಲ್ಲ ಎಂದು ನ್ಯಾಯಾಲಯ ಗಿರೀಶ್ ಮಟ್ಟಣ್ಣನವರ್ ಅವರಿಗೆ ಬುದ್ಧಿವಾದ ಹೇಳಿದೆ. ಮಾನ್ಯ ನ್ಯಾಯಾಲಯದ ಸೂಚನೆಗೆ ಗೌರವ ನೀಡಿ ಅರ್ಜಿದಾರ ಮತ್ತು ಹೋರಾಟಗಾರ ಗಿರೀಶ್ ಮಟ್ಟಣ್ಣವರ್...