ದಿಡುಪೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತ

0

ಬೆಳ್ತಂಗಡಿ; ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ ಬಿದ್ದಾಗ ರಸ್ತೆಯಲ್ಲಿ ಯಾವುದೇ ವಾಹನಗಳಿರದಿದ್ದ ಕಾರಣ ಅನಾಹುತ ತಪ್ಪಿದೆ.

ಬೆಳ್ತಂಗಡಿ;  ಸವಣಾಲು ಹಿತ್ತಲಪೇಲ ನದಿಯಲ್ಲಿ ಕೊಚ್ಚಿ ಹೋದ ಬೈಕ್ ಸವಾರರು. ಪವಾಡ ಸದೃಶ ಪಾರು

0

ಬೆಳ್ತಂಗಡಿ;  ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ. ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ...

ಸುಲ್ಕೇರಿ; ಮಳೆಹಾನಿ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0

ಬೆಳ್ತಂಗಡಿ; ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ‌ ಮಳೆಗೆ ಸುಲ್ಕೇರಿ ಗ್ರಾಮದ ಮುಳ್ಳಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಭಾವಣಿಗೆ ಹಾನಿಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಂತ್ರಸ್ತರಿಗೆ ವೈಯಕ್ತಿಕ ಸಹಾಯ ನೀಡಿದರು,ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು

ನೆಲ್ಯಾಡಿ ಲಾವತ್ತಡ್ಕದಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿ ಓರ್ವ ಸಾವು ಹಲವರಿಗೆ ಗಾಯ

0

ಬೆಳ್ತಂಗಡಿ; ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ...

ರೆಖ್ಯ; ಮನೆಯಲ್ಲಿ ಇರಿಸಲಾಗಿದ್ದ 2.60ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

0

ಬೆಳ್ತಂಗಡಿ : ಮನೆಯ ಕಪಾಟಿನಲ್ಲಿಟ್ಟಿದಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ಬೆಳ್ತಂಗಡಿಯ ರೆಖ್ಯಾದಲ್ಲಿ ಬೆಳಕಿಗೆ ಬಂದಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ,ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದು.ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.ಚಿನ್ನ ಕಳೆದುಕೊಂಡಿರುವ ಕುಸುಮರವರು ತನ್ನ ಗಂಡ ಅಣ್ಣಿ @ ಆನಂದ ಗೌಡ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಕಟ್ಟೆ ಎಂಬಲ್ಲಿ ವಾಸವಿದ್ದು ಇಬ್ಬರು ದಿನಾ...

ಭಾರೀ ಮಳೆ ಹಿನ್ನಲೆ ದ.ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16 ಸೋಮವಾರ ರಜೆ

0

ಬೆಳ್ತಂಗಡಿ ಜಿಲ್ಲೆಯಾದ್ಯತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್‌16 ಸೋಮವಾರ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.ಆರಂಭದಲ್ಲಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ನೀಡಲಾಗಿತ್ತಿ. ಇಂದು ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿಯವರು ಪರಿಷ್ಕೃತ ಆದೇಶ ಹೊರಡಿಸಿದ್ದು ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ; ಜಿಲ್ಲಾಧಿಕಾರಿ ಘೋಷಣೆ. ಬೆಳ್ತಂಗಡಿ ಗಿಲ್ಲ ರಜೆ

0

ಬೆಳ್ತಂಗಡಿ; ಭಾರೀ ಮಳೆ ಹಿನ್ನಲೆಯಲ್ಲಿ ದ.ಕ ಜಿಲ್ಲೆಯ ಐದು ತಾಲೂಕುಗಳಿಗೆ ರಜೆ ನೀಡಿ ಜಿಲ್ಲಾಧಿ ಕಾರಿಯವರು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿಲ್ಲ.ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕುಗಳ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಕೋಟಿ ಗೋಲ್ಮಾಲ್ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

0

ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದಲ್ಲಿ 18-02-2022 ರಿಂದ 25-03-2025 ನೇ ಅವಧಿಯ ಸಂದರ್ಭದಲ್ಲಿ ಎರಡು ಕೋಟಿಯ ಹನ್ನೆರಡು ಲಕ್ಷದ ಎಂಟು ಸಾವಿರದ ಮುನ್ನೂರ ಇಪ್ಪತ್ತೆಂಟು ರೂಪಾಯಿ ಹದಿನೈದು ಪೈಸೆ (2,12,08,328,15) ಹಣವನ್ನು ಸಿಬ್ಬಂದಿಗಳಾದ...

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ; ಉಜಿರೆ ದುರ್ಗಾ ಲಾಡ್ಜ್ ನಲ್ಲಿ ಓರ್ವ ಯುವತಿಯ ರಕ್ಷಣೆ ;ಇಬ್ಬರ ಬಂಧನ

0

ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ. ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ...

ಬೆಳ್ತಂಗಡಿ; ಭಾನುವಾರ ಭಾರೀ ಮಳೆ ಸುರಿಯುವ ನಿರೀಕ್ಷೆ ರೆಡ್ ಅಲರ್ಟ್ ಘೋಷಣೆ

0

ಮಂಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾನುವಾರವೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಶನಿವರಾ ರಾತ್ರಿಯೂ ಭಾರೀ ಮಳೆ ಸುರಿದಿದ್ದು ಭಾನುವಾರವೂ ಇದು ಮುಂದುವರಿದಿರುವುದು ಆತಂಕ ಮೂಡಿಸಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.