ಕುತ್ಲೂರಿಗೆ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಪ್ರಶಸ್ತಿ ಪ್ರಧಾನ
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅನ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ತೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಸೆ.27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಉಪರಾಷ್ಟ್ರಪತಿ ಜಗದೀಪ್ ಧನ್ಮರ್ ಭಾಗವಹಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಡಾಕ್ಯುಮೆಂಟರಿ ತಯಾರಿಸಿದಕುತ್ಲೂರಿನ ಹರೀಶ್ ಪೂಜಾರಿ, ಹಾಗೂ ಶಶಿರಾಜ್ ಪ್ರಶಸ್ತ ಸ್ವೀಕರಿಸಿದರು, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಶ್ರೀನಿವಾಸ್ ಇದ್ದರು.
ಧರ್ಮಸ್ಥಳ: ಗದ್ದೆಗೆ ಕಾಡಾನೆ ದಾಳಿ ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ:ಧರ್ಮಸ್ಥಳ ಸಮೀಪದ ಮುಳಿಕ್ಕಾರು ಎಂಬಲ್ಲಿ ಕಳೆದ ಎರಡು ದಿನಗಳಿಂದ ದಾಳಿ ನಡೆಸುತ್ತಿರುವ ಕಾಡಾನೆಗಳು ಭತ್ತದ ಪೈರನ್ನು ನಾಶ ಮಾಡಿವೆ.ಇಲ್ಲಿನ ಶೀನ ಬಾಜಿದಡಿ ಎಂಬವರ ಮನೆ ಹಾಗೂ ಪರಿಸರದ ಗದ್ದೆಗೆ ಕಾಡಾನೆಗಳು ಲಗ್ಗೆ ಇಟ್ಟಿದ್ದು ಕಟಾವಿನ ಹಂತಕ್ಕೆ ಬಂದಿದ್ದ ಪೈರನ್ನು ನಾಶ ಮಾಡಿವೆ. ಆನೆಗಳು ಗದ್ದೆಯಲ್ಲಿ ಓಡಾಟ ನಡೆಸಿದ ಕಾರಣ ಬೆಳೆದು ನಿಂತಿರುವ ಪೈರಿಗೆ ಸಾಕಷ್ಟು ಹಾನಿ ಉಂಟಾಗಿದೆ.ಮುಳಿಕ್ಕಾರು ಪರಿಸರದಲ್ಲಿ ಮರಿಯಾನೆ ಸಹಿತ ಕಾಡಾನೆಗಳು ಆಗಾಗ ಕಂಡುಬರುತ್ತಿದ್ದು ಕಳೆದ ಕೆಲವು ದಿನಗಳಿಂದ ಪರಿಸರದಲ್ಲಿ ಓಡಾಟ ನಡೆಸುತ್ತಿದ್ದು, ಇಲ್ಲಿನ ತೋಟಗಳಲ್ಲಿ ಸಾಕಷ್ಟು ಹಾನಿ ಉಂಟು ಮಾಡುತ್ತಿವೆ.
ಬೆಳ್ತಂಗಡಿಯಲ್ಲಿ ಡಿಸೆಂಬರ್ 16 ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ
ಬೆಳ್ತಂಗಡಿ; ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿದ್ದು70ರ ದಶಕದ ಆರಂಭದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ ನಾಯಕತ್ವ ಮತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಎಂಬ ಹೆಸರಿನಲ್ಲಿರಾಜ್ಯದಲ್ಲಿ ಜನ್ಮ ತಾಳಿದ ದಲಿತ ಚಳುವಳಿಗೆ ಇದೀಗ ಅರ್ಧ ಶತಮಾನತುಂಬುತ್ತಿದೆ.ಈ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ 'ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ'ಎಂಬ ಕಾರ್ಯಕ್ರಮವನ್ನುಬೆಳ್ತಂಗಡಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಆಚರಣಾ ಸಮಿತಿಯ ಅಧ್ಯಕ್ಷ ಬಿ.ಕೆ ವಸಂತ ಮಾಹಿತಿ ನೀಡಿದರು.ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರುಈ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಪಕ್ಷ,...
ಮುಡಾ ಪ್ರಕರಣ ಬಿಜೆಪಿಯ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ; ರಕ್ಷಿತ್ ಶಿವರಾಂ
ಬೆಳ್ತಂಗಡಿ.ಮುಡ ಪ್ರಕರಣ ಇದು ಬಿಜೆಪಿಯ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ ಎಂದು ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.ಕೇಂದ್ರದ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ಭಾಗ ಇದಾಗಿದೆ. ಬಿಜೆಪಿ, ಜೆಡಿಎಸ್ ಪಕ್ಷದ ಈ ಸೇಡಿನ ರಾಜಕೀಯದ...
ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣವಾಗಿ “ಕುತ್ಲೂರು” ಆಯ್ಕೆ
ಬೆಳ್ತಂಗಡಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ "ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ" ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋಧ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಫಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವ್ಯಾಪ್ತಿಯ ಕುತ್ತೂರು ನಿವಾಸಿಗಳಾದ ಹರೀಶ್ ಡಿ. ಸಾಲ್ಯಾನ್ ಹಾಗೂ ಶಿವರಾಜ್...
ಬೆಳ್ತಂಗಡಿ; ನಗರದಲ್ಲಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ; ನಗರದ ಹಳೆಕೋಟೆ ಎಂಬಲ್ಲಿ ಮನೆಯಿಂದ ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ನಗದನ್ನು ಕಳ್ಳರು ಅಲಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇಲ್ಲಿನ ನಿವಾಸಿ ಪ್ರಸನ್ನ ಕುಮಾರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಇದೇವರ್ಷ ಫೆಬ್ರವರಿ 13ರಿಂದ ಸೆಪ್ಟೆಂಬರ್ 24ರ ಅವಧಿಯಲ್ಲಿ ಮನೆಯ ಹಾಲ್ ನಲ್ಲಿ ಟಿ.ವಿ ಸ್ಟ್ಯಾಂಡ್ ಮೇಲೆ ಇಟ್ಟಿದ್ದ 5,05,000 ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ನಗದನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು...
ಎಸ್ ಡಿ ಎಮ್ ಪ.ಪೂ ಕಾಲೇಜಿನಲ್ಲಿ ಸಿಎ ಮಾಹಿತಿ ಕಾರ್ಯಕ್ರಮ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಸಿ.ಎ ಕೋರ್ಸಿನ ಮಾಹಿತಿ ಕಾರ್ಯಕ್ರಮವನ್ನು ಎಸ್ ಡಿ. ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಅವರು ಉದ್ಘಾಟಿಸಿದರು. ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಮಂಗಳೂರು ವಿಭಾಗದ ಸಿ.ಎ ಗೌತಮ್ ಮತ್ತು ಸಿ.ಎ ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿಸಿ.ಎ ಕೋರ್ಸಿನ ಮಹತ್ವ , ಅಧ್ಯಯನ ಹಾಗೂ ಅವಕಾಶಗಳ ಬಗ್ಗೆ ಮಾತನಾಡಿದರು. ಎಸ್ ಡಿ ಎಂ ಸ್ವಾಯತ್ತ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್...
ಬೆಳ್ತಂಗಡಿ; ಉದ್ಯಮಿ ರಂಜನ್ ರಾವ್ ನಿಧನ
ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು.ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.ಮೃತರು ಪತ್ನಿ ಉಮಾ ರಾವ್, ಇಬ್ಬರು ಪುತ್ರರಾದ ರಾಹುಲ್ ರಾವ್, ರತೀಶ್ ರಾವ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಎಸ್.ಬಿ.ಐ ಲೈಫ್ ಕಾರ್ಕಳ ಬ್ರಾಂಚ್ ಬೆಳ್ತಂಗಡಿ ಘಟಕದ ಮಂಜುನಾಥ ಗುಡಿಗಾರ್ ಅವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್
ಬೆಳ್ತಂಗಡಿ: ಎಸ್‌ಬಿಐ ಲೈಫ್ ಕಾರ್ಕಳಬ್ರಾಂಚಿನ ಬೆಳ್ತಂಗಡಿ ಘಟಕದ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮಾನ್ಯರಿಗೆ ಲೈಫ್ ಇನ್ಸುರೆನ್ಸ್, ಮ್ಯೂಚ್ಚಲ್ ಫಂಡ್, ಎಸ್ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಈ ಸಂದರ್ಭಕ್ಕಾಗಿ ಕಾರ್ಕಳ ಎಸ್‌ಬಿಐ ಲೈಫ್ ಬ್ರಾಂಚ್ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆಪ್ಟೆಂಬರ್ 23ರಂದು ನಡೆದ ಸಮಾರಂಭದಲ್ಲಿ...
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಿ.ಕೆ ವಿಟ್ಲ ಹಾಗೂ ನಿವೃತ್ತ ಸೈನಿಕ ಮಂಜುನಾಥ ಅವರಿಗೆ ಅ.2ರಂದು ಅಭಿನಂದನಾ ಸಮಾರಂಭ
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿಸುದೀರ್ಘ 24 ವರ್ಷ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ತಾಡಿಗೆ ಆಗಮಿಸುತ್ತಿರುವ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ, "ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ" ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ (ವಿ.ಕೆ. ವಿಟ್ಲ) ರವರಿಗೆ ನಾಗರಿಕ ಅಭಿನಂದನಾ ಸಮಿತಿಯಿಂದ ಕುವೆಟ್ಟು ಹಾಗೂ ಓಡಿಲ್ನಾಳ ಗ್ರಾಮದ 35 ಸಂಘ ಸಂಸ್ಥೆಗಳು ಒಟ್ಟು ಸೇರಿ ಅ.2 ರಂದು ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷರು, ನಾಗರಿಕ ಅಭಿನಂದನಾ ಸಮಿತಿ ಅಧ್ಯಕ್ಷ ಸಂಪತ್ ಬಿ...















