ಕಲ್ಮಂಜದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯ ನಗರ ಎಂಬಲ್ಲಿ ತನಿಯ (67) ಎಂಬ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.ಇವರ ಪತ್ನಿ ಮೂರು ತಿಂಗಳ ಹಿಂದೆ ನಿಧನರಾಗಿದ್ದರು. ಎಂದು ತಿಳಿದು ಬಂದಿದೆ.
ದಯಾ ವಿಶೇಷ ಶಾಲೆಯಲ್ಲಿ ಉಚಿತ ವೈಧ್ಯಕೀಯ ಶಿಬಿರ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಜ್ಯೋತಿ ಆಸ್ಪತ್ರೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು. ಆಸ್ಪತ್ರೆಯ ಆಡಳಿತಾಧಿಕಾರಿಯವರಾದ ಸಿಸ್ಟರ್.ಮೆರಿಟ್, ಡಾ.ಸಿಸ್ಟರ್.ಜೆನಿಫರ್, ವೈದ್ಯಾಧಿಕಾರಿಗಳು, ಡಾ.ನವ್ಯಾ ಪೌಲ್, ವೈದ್ಯಾಧಿಕಾರಿಗಳು, ಶ್ರೀಮತಿ. ಜೆಸಿಂತಾ ತೌರೋ, ಲೆಕ್ಕಿಗರು, ಸಿಸ್ಟರ್. ಡಾನಿಶಾ, ಶುಶ್ರೂಷಕಿ, ಹಾಗೂ .ರಂಜಿತ್, ಪಿ.ಆರ್.ಒ ಮುಂತಾದವರು ಭಾಗವಹಿಸಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿಕೊಟ್ಟರು.ದಯಾ ಶಾಲೆಯ ಸಂಚಾಲಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಆಗಮಿಸಿದ ವೈದ್ಯಕೀಯ ತಂಡವನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಈ ಶಿಬಿರದಲ್ಲಿ ಶಾಲೆಯ 82 ಮಕ್ಕಳು ಭಾಗವಹಿಸಿ ಸೂಕ್ತ ಚಿಕಿತ್ಸೆ ಹಾಗೂ...
ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ, ಶಾಸಕ ಹರೀಶ್ ಪೂಂಜ ಭಾಗಿ
ಬೆಳ್ತಂಗಡಿ; ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶ ಗಳ ಶಾಸಕರುಗಳು ಭಾಗವಹಿಸಿದ್ದರು. ಸಮಾಲೋಚನಾ ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ಬೆಳ್ತಂಗಡಿ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.
ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದ ಸಮೀಪ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ18 ರಂದು ಪತ್ತೆಯಾಗಿದೆ.ನದಿ ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡುದ್ದಾರೆಸುಮಾರು 45ರಿಂದ50 ವರ್ಷ ಪ್ರಯದ ವ್ಯಕ್ತಿಯ ಮೃತದೇಹ ಇದಾಗಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಂತೆ ಕಂಡು ಬರುತ್ತಿದ್ದು ಮೃತನ ಯಾವುದೇ ಗುರುತುಗಳು ಪತ್ತೆಯಾಗಿಲ್ಲ ವಾರಿಸುದಾರರು ಇದ್ದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ ಗೊಳಿಸಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಯವರು
ಮಂಗಳೂರು; ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ ಕಾರ್ಯಕ್ರಮ ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆಯಿತು.ಶ್ರೀ ಶ್ರೀ ಶ್ರೀ . ಧರ್ಮಪಾಲನಾಥ ಸ್ವಾಮೀಜಿ ಯವರು ಲೋಗೋವನ್ನು ಲೋಕಾರ್ಪಣೆಗೊಳಿಸಿ ಮಾರ್ಗದರ್ಶನ ನೀಡಿದರು.ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘ ( ರಿ ) ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರುಗಳಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ರಾಜ್ ಗೌಡ ವಳಂಬ್ರ,...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ
ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಪದಾಧಿಕಾರಿಗಳೊಂದಿಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ವಾಸಿಸುತ್ತಿರುವ ಬುಡಕಟ್ಟು ಕುಟುಂಬದ ಹಲವಾರು ಸಮಸ್ಯೆಗಳ ಬಗ್ಗೆ ವಿದ್ಯುತ್ ,ರಸ್ತೆ ,ಭೂ ಒಡೆತನದ ,ಬಗ್ಗೆ ಸಂವಾದ ವನ್ನು ನಡೆಸಿ.ಮುಂದಿನ ದಿನದಲ್ಲಿ ಬೆಳ್ತಂಗಡಿ ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶವನ್ನು ನಡೆಸಿ ಈ ಎಲ್ಲಾ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಮಂತ್ರಿಗಳನ್ನು ಕರೆಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತದೆ.ಎಂದರು. ಪರಿಶಿಷ್ಟ ಪಂಗಡದಿಂದ...
ರಾಜ್ಯ ಮಟ್ಟದ ಕ್ರೀಡಾಕೂಟ; ಮುಂಡಾಜೆಯ ತೇಜಲ್ ಅವರಿಗೆ 110ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕ
ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ ಆರ್ ಅವರು 20ವರ್ಷ ವಯೋಮಿತಿಯ ವಿಭಾಗದಲ್ಲಿ 110ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದುಕೊಂಡು ಪಾಂಡಿಚೇರಿಯಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಮುಂಡಾಜೆ ನಿವಾಸಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿದ್ದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ದಂಪತಿಯರ ಪುತ್ರನಾಗಿರುವ ತೇಜಲ್ ಕೆ.ಆರ್ ಅವರು ಆಳ್ವಾಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಯಾಗಿದ್ದಾರೆ. ತೇಜಲ್ ಅವರು 2022ರಲ್ಲಿ ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ 16 ವಯೋಮಾನದ ವಿಭಾಗದಲ್ಲಿ...
ರಾಜ್ಯಮಟ್ಟದ ಕ್ರೀಡಾಕೂಟ ಲಾಯಿಲದ ಚಂದ್ರಿಕಾ ಗೆ 400ಮೀ ಹಡಲ್ಸ್ ನಲ್ಲಿ ಬೆಳ್ಳಿ ಪದಕ
ಬೆಳ್ತಂಗಡಿ; ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ನಲ್ಲಿ ಉಜಿರೆ ಎಸ್.ಡಿಎಂ ಕಾಲೇಜ್ ನ ವಿಧ್ಯಾರ್ಥಿನಿ ಚಂದ್ರಿಕಾ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮೋಹನ್ ಪೂಜಾರಿ ಮತ್ತು ಯಶೋಧ ದಂಪತಿಗಳ ಪ್ರಥಮ ಪುತ್ರಿ ಚಂದ್ರಿಕಾ ಇವರು ಪ್ರಾಥಮಿಕ ಶಾಲಾ ಹಂತದಲ್ಲಿಯೇ ಹಲವಾರು ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು 2022-23 ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ...
ರೆಖ್ಯ ಗುಡ್ಡ ಕುಸಿತದಿಂದ ಹಾನಿಗೀಡಾದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಸದರು, ಶಾಸಕರ ಭೇಟಿ ಪರಿಶೀಲನೆ
ಬೆಳ್ತಂಗಡಿ; ತಾಲೂಕಿನ ರೆಖ್ಯಾ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನದ ಗರ್ಭಗುಡಿಗೆ ಹಾನಿಯಾಗಿದ್ದು ಮಂಗಳವಾರ.ಲ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಹಾಗೂಶಾಸಕ ಹರೀಶ್ ಫೂಂಜ ಸ್ಥಳಕ್ಕೆ ಭೇಟಿ ನೀಡಿ ಹಾನಿಯನ್ನು ವೀಕ್ಷಿಸಿದರು, ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಪ್ರಧಾನಿ ಜನ್ಮದಿನ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವ ಮೋರ್ಚಾ ಮುಖಂಡರು ಭಾಗಿ
ಬೆಳ್ತಂಗಡಿ : 74 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿಜೀ ಯವರ ಹುಟ್ಟುಹಬ್ಬದ ಸಲುವಾಗಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಈ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ನೇತೃತ್ವದ ತಂಡ ಭಾಗವಹಿಸಿ ರಕ್ತದಾನ ಮಾಡಿದರು.














