ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ
ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಪ್ರಕರಣದತನಿಖೆಯನ್ನು ಎನ್.ಐ.ಎ ಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿರುವುದಾಗಿ ತಿಳಿದು ಬಂದಿದೆ. ತನಿಖೆಗೆ ಆದೇಶ ಹೊರಡಿಸಿರುವ ಬಗ್ಗೆ ಎ.ಎನ್.ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ; ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿ ಆಟೋ ರಿಕ್ಷಾವನ್ನು ಜಖಂ ಗೊಳಿಸಿದ ಘಟನೆ ನಡೆದ ಧರ್ಮಸ್ಥಳ ಗ್ರಾಮದ ಬೋಳಿಯಾರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಶನಿವಾರ ಭೇಟಿ ನೀಡಿದರು. ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಆಟೋ ಚಾಲಕ ದಿನೇಶ್ ಮತ್ತು ಕುಟುಂಬಸ್ಥರನ್ನು ಭೇಟಿಯಾದ ಅವರು ಘಟನೆಯ ಬಗ್ಗೆ ಮಾಹಿತಿ ತಿಳಿದುಕೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೇವಸ್ಯ ಟಿ.ವಿ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಮಹಿಳೆಯ ಮಾನಭಂಗಕ್ಕೆ ಯತ್ನ ; ತೋಟತ್ತಾಡಿ ನಿವಾಸಿ ಆರೋಪಿ ಬಂಧನ
ಬೆಳ್ತಂಗಡಿ; ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ ಮಹಿಳೆಯೊಬ್ಬರು ಜೂ.6 ರಂದು ಸಂಜೆ ತನ್ನ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವಕನೊಬ್ಬ ಹಿಂಬಾಲಿಸಿಕೊಂಡು ಬಂದು ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಬಗ್ಗೆ ನೊಂದ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಧರ್ಮಸ್ಥಳ ಪೊಲೀಸರು BNS 74,78(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪ್ರಕರಣ...
ಕಾಡಾನೆ ದಾಳಿಯಿಂದ ರಿಕ್ಷಾ ಹಾನಿ; ಕಿರಣ್ ಚಂದ್ರ ಪುಷ್ಪ ಗಿರಿ ಅವರಿಂದ ಸಹಾಯ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ನಡೆದ ಆನೆ ದಾಳಿಗೆ ಚಾಲಕ ದಿನೇಶ್ ಎಂಬವರ ರಿಕ್ಷಾ ಸಂಪೂರ್ಣ ದಾಳಿಗೆ ತುತ್ತಾಗಿದ್ದು ಈ ಬಗ್ಗೆ ಮಾಹಿತಿ ತಿಳಿದು ಇವರ ಮನೆಗೆ ಸಾಮಾಜಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ಕುಶಲೋಪರಿ ವಿಚಾರಿಸಿ ಆರ್ಥಿಕ ಸಹಾಯ ಮಾಡಿದರು.
ಧರ್ಮಸ್ಥಳ; ಆಟೋರಿಕ್ಷಾ ಮೇಲೆ ಕಾಡಾನೆ ದಾಳಿ; ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ
ಬೆಳ್ತಂಗಡಿ; ಶುಕ್ರವಾರ ಬೆಳಗಿನ ಜಾವ ಧರ್ಮಸ್ಥಳ ಸಮೀಪದ ಬೊಳಿಯಾರಿನಲ್ಲಿ ಕಾಡಾನೆ ರಿಕ್ಷಾ ಮೇಲೆ ದಾಳಿ ಮಾಡಿದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂ ಆದ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್ ಎಫ್ ಒ ತ್ಯಾಗರಾಜು ಟಿ.ಎನ್.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯಿಂದ ಸಿಗುವ ಪರಿಹಾರ ಒದಗಿಸುವ ಕುರಿತು ಭರವಸೆ ನೀಡಿದರು.ಡಿಆರ್ ಎಫ್ ಒ ಕಮಲಾ,ರಿಕ್ಷಾ ಮಾಲೀಕ ದಿನೇಶ್ ಉಪಸ್ಥಿತರಿದ್ದರು.
ಕಾಜೂರಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ; ಪವಿತ್ರ ದಿನವು ಸೌಹಾರ್ದ, ಸಮೃದ್ಧಿ ಮತ್ತು ಶಾಂತಿಯ ಸಂದೇಶವನ್ನು ಪಸರಿಸಲಿ; ಸಯ್ಯದ್ ಕಾಜೂರು ತಂಗಳ್
ಬೆಳ್ತಂಗಡಿ; ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್...
ಗುಂಡ್ಯ; ಖಾಸಗಿ ಬಸ್ ಪಲ್ಟಿ 16 ಮಂದಿಗೆ ಗಾಯ
ಬೆಳ್ತಂಗಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಬದಿಗೆ ಉರುಳಿದ್ದು, 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯ ವೇಳೆಗೆ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಹೆಚ್ಚಿನವರು ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಪ್ರಯಾಣಿಕರು...
ಬೆಳ್ತಂಗಡಿ : ಪ್ರವಾಸಿ ತಾಣಗಳಾದ ಗಡಾಯಿಕಲ್ಲು &ಜಲಪಾತಗಳು ನಾಳೆಯಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ
ಬೆಳ್ತಂಗಡಿ : ಗಡಾಯಿಕಲ್ಲು ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7 ರಿಂದ ಎಂದಿನಂತೆ ಪ್ರವೇಶ ಮಾಡಲು ಅನುಮತಿ ನೀಡಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದ್ದರಿಂದ ಜಲಪಾತ ಪ್ರದೇಶದ ಸುತ್ತಮುತ್ತ ತೀರಾ ಕಡಿದಾದ ಕಲ್ಲು ಬಂಡೆಗಳಿದ್ದು, ಘಾಟಿ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದು, ಎಲ್ಲಾ ನದಿ ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಒಳ ಹರಿವು ಜಾಸ್ತಿ ಇರುವುದರಿಂದ ಪ್ರವಾಸಿಗರ ಚಾರಣಕ್ಕೆ ಮೇ.31 ರಂದು ಮುಂದಿನ...
ಧರ್ಮಸ್ಥಳ; ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು ಅಪಾಯದಿಂದ ಪಾರಾದ ರಿಕ್ಷಾ ಚಾಲಕ
ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದೆ.. ರಿಕ್ಷಾವನ್ನು ಹುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ...
ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್ ಪರಾರಿ
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈದಾಳಿ ವೇಳೆ ಆರೋಪಿ ಮಹಮ್ಮದ್ ರಫೀಕ್ ಎಂಬಾತ ಪರಾರಿ ಆಗಿರುತ್ತಾನೆ. ಆರೋಪಿಯ ವಿರುದ್ಧ NDPS ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಜೂ.3 ದಂದು ಪ್ರಕರಣ ದಾಖಲಿಸಿ...















