ಧರ್ಮಸ್ಥಳ; ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು ಅಪಾಯದಿಂದ ಪಾರಾದ ರಿಕ್ಷಾ ಚಾಲಕ
ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದೆ.. ರಿಕ್ಷಾವನ್ನು ಹುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ...
ಬೆಳ್ತಂಗಡಿ : ಮದ್ದಡ್ಕದಲ್ಲಿ ಅಬಕಾರಿ ದಳದ ಕಾರ್ಯಾಚರಣೆ; ಗಾಂಜಾ ವಶಕ್ಕೆ; ಆರೋಪಿ ಮಹಮ್ಮದ್ ರಫೀಕ್ ಪರಾರಿ
ಬೆಳ್ತಂಗಡಿ : ಅಬಕಾರಿ ಉಪ ಅಧೀಕ್ಷಕರಾದ ಸಂತೋಷ ಮೋಡಗಿ ನೇತೃತ್ವದಲ್ಲಿ ಮದ್ದಡ್ಕ ಎಂಬಲ್ಲಿನ ಮನೆಯೊಂದರ ಮೇಲೆ ಜೂ.3 ರಂದು ರಾತ್ರಿ 8 ಗಂಟೆಗೆ ಅಬಕಾರಿ ದಳ ದಾಳಿ ಮಾಡಿ ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈದಾಳಿ ವೇಳೆ ಆರೋಪಿ ಮಹಮ್ಮದ್ ರಫೀಕ್ ಎಂಬಾತ ಪರಾರಿ ಆಗಿರುತ್ತಾನೆ. ಆರೋಪಿಯ ವಿರುದ್ಧ NDPS ಕಾಯ್ದೆ 1985 ರ ಕಲಂ 8C, 20(2)a ಹಾಗೂ 25 ರನ್ವಯ ಜೂ.3 ದಂದು ಪ್ರಕರಣ ದಾಖಲಿಸಿ...
ದ್ವೇಷ ಭಾಷಣ; ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ; ಕಡಬ ಪೊಲೀಸ್ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿರುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಜೂನ್ 4ರಂದು ಕಡಬ ಠಾಣೆಯ ಎದುರು ನಡೆದ ಪ್ರತಿಭಟನೆಯಲ್ಲಿ ನವೀನ್ ನೆರಿಯ ಅವರು ಮಾಡಿದ ಭಾಷಣದಿಂದ ಅಲ್ಲಿ ಸೇರಿದ್ದ ಸಾರ್ವಜನಿಕರು ಅನ್ಯಧರ್ಮದ ವಿರುದ್ದ ದ್ವೇಷ ಭಾವನೆ ಹುಟ್ಟುವಂತೆ ಮಾಡಿರುತ್ತಾರೆ. ಎಂದು ಠಾಣಾ ಎಸ್.ಐ ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಲ್ತುಳಿತಾ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ – ಹರೀಶ್ ಪೂಂಜ ಆರೋಪ
ಬೆಳ್ತಂಗಡಿ ಜೂನ್ : ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತಾ ಬಗ್ಗೆ ಬೆಳ್ತಂಗಡಿ ಶಾಸಕ ಅತೀವ ದುಃಖ ವ್ಯಕ್ತಪಡಿಸಿದ್ದು ಈ ಘಟನೆ ನಿಜಕ್ಕೂ ಹೃದಯ ವಿದ್ಯಾವಕ ಆಘಾತವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಯಾವುದೇ ಪೂರ್ವ ತಯಾರಿ ನಡೆಸದೆ ಸಂಬಂಧಪಟ್ಟ ಇಲಾಖೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾ ಏಕಿಯಾಗಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಭ್ರಮಾಚರಣೆ ಆಯೋಜಿಸಿದ್ದು ರಾಜ್ಯ ಸರ್ಕಾರದ ಬೇಜವಾಬ್ದಾರಿಯಾಗಿದ್ದು. ಈ ದುರಂತದ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಹೊರಬೇಕೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲಾಯಿಲ; ಅಕ್ರಮ ಮರಳು ಸಾಗಾಟ ಪತ್ತೆ; ಪಿಕಪ್ ವಾಹನ ವಶಕ್ಕೆ
ಬೆಳ್ತಂಗಡಿ; ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರತಕರಣ ದಾಖಲಿಸಿಕೊಂಡಿದ್ದಾರೆ.ಲಾಯಿಲದಲ್ಲಿ ಬೆಳ್ತಂಗಡಿ ಠಾಣಾ ಉಪ ನಿರೀಕ್ಷಕರಾದ ಯಲ್ಲಪ್ಪ ಹಚ್ ಅವರು ಜೂನ್ 2ರಂದು ರೌಡ್ಸ್ ನಲ್ಲಿದ್ದಗಾ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಗಮನಿಸಿದ್ದು ಪರಿಶೀಲಿಸಿದಾಗ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.ಪಿಕಪ್ ವಾಹನ ಹಾಗೂ ಅದರಲ್ಲಿದ್ದ ಮರಳನ್ನು ವಶಪಡಿಸಿಕೊಳ್ಳಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬದನಾಜೆ ಶಾಲೆಯಲ್ಲಿ ಎಲ್.ಕೆ.ಜಿ ತರಗತಿ ಉದ್ಘಾಟನೆ
ಬೆಳ್ತಂಗಡಿ; ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಧನಾಜೆಯಲ್ಲಿ ಎಲ್ ಕೆಜಿ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಎಲ್ ಕೆ ಜಿ ತರಗತಿಯನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ಕಲಿಕೆಯೊಂದಿಗೆ ಸಂಸ್ಕಾರವನ್ನು ನೀಡಿ , ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸರ್ಕಾರಿ ಶಾಲೆಯ ಬಗ್ಗೆ ತಾತ್ಸಾರ ಮನೋಭಾವ ಹೊಂದದೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂಬ ಕಿವಿ ಮಾತನ್ನು ಪೋಷಕರಿಗೆ ತಿಳಿಸಿದರು .ಅಂತೆಯೇ ತಾನು ಶಾಲೆಯ ಸಭಾಂಗಣಕ್ಕೆ...
ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ರೆಜಿಸ್ಟರ್ಡ್ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ 4000 ಉಚಿತ ನೋಟ್ ಬುಕ್ ವಿತರಣೆ.
ಬೆಳ್ತಂಗಡಿ: ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಳೆoಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಡುಜಾರು ಶಾಲೆಗಳಿಗೆ ಹಾಗೂ ಪುತ್ತೂರು, ಕಡಬ ತಾಲೂಕಿನ ಸುಮಾರು 12 ಸರಕಾರಿ ಶಾಲೆಗಳಿಗೆ ನೋಟ್ ಬುಕ್ ಗಳನ್ನು ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ನ ಟ್ರಸ್ಟ್ ವತಿಯಿಂದ ಇದರ ಉಪಾಧ್ಯಕ್ಷರು ಅದ ರಂಜಿತ್ ಪೂವತಿಂಗಲ್ ಮತ್ತು ಸದಸ್ಯರು ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳು ಹಳೆ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು,...
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪೋಲಿಸ್ ನಿರೀಕ್ಷಕ ಬಿ.ಜಿ ಸುಬ್ಬಾಪುರಮಠ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಜಿ ಸುಬ್ಬಾಪುರಮಠ್ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯನ್ನು ಕದಡುವವರ ವಿರುದ್ಧ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದ ಅವರು ಬಕ್ರೀದ್ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಜಿಲ್ಲಾ ಪೋಲಿಸ್ ಇಲಾಖೆ ಕೈಗೊಂಡ ಸೂಚನೆಗಳನ್ನು ಸಭೆಯ ಮುಂದಿಟ್ಟರು. ಸಾರ್ವಜನಿಕರು ಮಾತನಾಡಿ ಸಮಾಜದ ಸ್ವಾಸ್ಥ್ಯ ಕೊಡುವವರು , ದ್ವೇಷ ಭಾಷಣ ಮಾಡುವವರ ವಿರುದ್ಧ ಹಾಗೂ...
ಬೆಳ್ತಂಗಡಿ ದಯಾ ವಿಶೇಷ ಶಾಲಾ ಪ್ರಾರಂಭೋತ್ಸವ
ಬೆಳ್ತಂಗಡಿ; ದಯಾ ವಿಶೇಷ ಶಾಲೆಯಲ್ಲಿ ದಿನಾಂಕ 02.06.2025 ರಂದು 2025-2026 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕಪುಚಿನ್ ಗುರುಗಳಾದ ವಂ.ಫಾ.ರೋಶನ್ ಕೋರ್ಡೇರೋ ರವರು ಉಪಸ್ಥಿತರಿದ್ದು, ಸಂಸ್ಥೆಯು ತಾಲೂಕಿನ ವಿಶೇಷ ಮಕ್ಕಳಿಗಾಗಿ ಕೈಗೊಂಡಿರುವ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿ, ಮಕ್ಕಳು ನಿರಂತರವಾಗಿ ಶಾಲೆಗೆ ಆಗಮಿಸಿ, ಈ ಶಾಲೆಯಲ್ಲಿ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು, ಉತ್ತಮ ಹಾಗೂ ಆರೋಗ್ಯವಂತ ಪ್ರಜೆಗಳಾಗಿ ಬಾಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರು ಮಾತನಾಡಿ, ಇಂದು ಶಾಲೆಯು ಮರುಪ್ರಾರಂಭವಾಗುತ್ತಿದೆ. ಇದು ನಮಗೂ,...
ಕೊಕ್ಕಡದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತ: ಯುವ ಚಾಲಕ ಶರತ್ ಕುಮಾರ್ ಅಕಾಲಿಕ ನಿಧನ
ಬೆಳ್ತಂಗಡಿ; ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಚಾಲನೆಯಲ್ಲೇ ಇದ್ದ ವೇಳೆ ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು( ಜೂ.3) ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ಮರುಪಯಣದಲ್ಲಿ ತಮ್ಮ ಸ್ವಂತ ಆಟೋ ರಿಕ್ಷಾ ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು.ಸ್ಥಳೀಯರು ಕೂಡಲೇ ವಿಷಯವನ್ನು ಗಮನಿಸಿ ಶರತ್‌ರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು....















