ಗುರುವಾಯನಕೆರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ಬೆಳ್ತಂಗಡಿ: ಗುರುವಾಯನಕೆರೆ ಪೇಟೆಯಲ್ಲಿ ಅಂಗಡಿಯ ಸಮೀಪ ನಿಲ್ಲಿಸಿ ಹೋಗಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ವೇಣೂರು ಕರಿಮಣೇಲು ನಿವಾಸಿ ಸಂತೋಷ್ ಕುಮಾರ್ ಎಂಬವರು ಸೆ.20ರಂದು ತಮ್ಮ ಬೈಕ್ ಅನ್ನು ಗುರುವಾಯನ ಕೆರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದರು ಸಂಜೆ ಹಿಂತಿರುಗಿ ಬಂದು ನೋಡಿದಾಗ ಬೈಕ್ ಕಳ್ಳತನವಾಗಿತ್ತು. ಕಳ್ಳತನವಾದ ಬೈಕಿನ ಮೌಲ್ಯ ಸುಮಾರು 68 ಸಾವಿರ ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಳ್ತಂಗಡಿ, ದೈವ ನರ್ತಕರ ನಿಂದನೆ ಆರೋಪ ನಲಿಕೆ ಸಮಾಜದ ಮುಖಂಡರಿಂದ ಪೊಲೀಸರಿಗೆ ದೂರು
ಬೆಳ್ತಂಗಡಿ; ಕಲ್ಲಿಗೆ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಸೆ 22. ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಓಡಿಳ್ಳಾಳ, ಸಂಘದ ಸದಸ್ಯರಾದ ಸಂತೋಷ್ ನಾರಾವಿ, ಮಾಜಿ ಅಧ್ಯಕ್ಷರಾದ...
ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ, 2022ರ ಅ.9ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿಎಸ್.ಸಿ-೨ ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ. ಆರೋಪಿ ಸದಾಶಿವ ಎಂಬಾತ 2022ರ ಅ.9ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಸಮೀಪದಲ್ಲಿರುವ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಮನೆಗೆ ತೆರಳಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು 2022 ಅ 10ರಂದು ಮತ್ತೆ ಫೇಸ್‌ಬುಕ್ ಸಂದೇಶ ಹಾಕಿದ್ದ ಆರೋಪಿ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧಿಸಿದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯ ಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಬಂದಿತ ಆರೋಪಿ ಕೇರಳ ಕಾಸರಗೋಡು ಜಿಲ್ಲೆಯ ನಿವಾಸಿ ಡೆನ್ನಿ ಜೋಸೆಫ್ ಯಾನೆ ಅಂತೋನಿ ಎಂಬಾತನಾಗಿದ್ದಾನೆ2014 ರಲ್ಲಿ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಆರೋಪಿಯಾಗಿರುವ ಈತ ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದಈತ ಉಜಿರೆಯಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆಂಜ 309 ಸರ್ವೆ ನಂಬರ್ ನಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ಐವಾನ್ ಡಿ ಸೋಜ ಅವರಿಗೆ ಮನವಿ
ಬೆಳ್ತಂಗಡಿ; ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಿದರು.ಕಳೆಂಜ ಗ್ರಾಮದ 309 ಸರ್ವೆ ನಂಬರ್ ನಲ್ಲಿ ದಶಕಗಳಿಂದ ವಾಸಿಸುತ್ತಾ ಬಂದಿರುವ ಜನರು ಜಮೀನು ಹಕ್ಕು ಪತ್ರ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಈ ಹಿಂದೆ ಅಂದು ಶಾಸಕರಾಗಿದ್ದ ವಸಂತ ಬಂಗೇರ ಅವರು ಕೆಲವು ಕುಟುಂಬಗಳಿಗೆ ಅಕ್ರಮ ಸಕ್ರಮ ಸಮಿತಿಯಲ್ಲಿ ಜಮೀನು ಮಂಜೂರು ಮಾಡಿದ್ದರೂ...
ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರಾಜೆಕ್ಟ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ
ಬೆೆಳ್ತಂಗಡಿ: ಮೂಡಬಿದ್ರೆಯ ಎಸ್ ಎನ್ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜರಗಿದ ನವತ್ವಂ- 2024 ಎಂಬ ಅಂತರ್ ಕಾಲೇಜು ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಕಾಲೇಜು ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ ಪಡೆದಿರುತ್ತದೆ" ಎಂದು ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಿನ್ಸಿಪಾಲ್ ಸಂತೋಷ್ ಹೇಳಿದರು.ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು"ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ 2008ರಲ್ಲಿ ಕಾಲೇಜು ಸ್ಥಾಪನೆಗೊಂಡಿದ್ದು ಶ್ರೀ ಧಮಂ ಎಜುಕೇಶನ್ ಸೊಸೈಟಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಿದೆ.ಕಾಲೇಜು ನವದೆಹಲಿಯ ಎಐಸಿಟಿಇ ಮಾನ್ಯತೆ ಹಾಗೂ ಡಿಟಿಇ ಬೆಂಗಳೂರು ಇವರಿಂದ...
ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ವಿದ್ಯಾರ್ಥಿನಿಗೆ ಶಾಸಕ ಹರೀಶ್ ಪೂಂಜ ಅವರಿಂದ ಅಭಿನಂದನೆ
ಲಾಯಿಲ :ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ದಿ. ಮೋಹನ್ ಪೂಜಾರಿ ಮತ್ತು ಯುಶೋಧಾ ದಂಪತಿಗಳ ಪುತ್ರಿ ಚಂದ್ರಿಕಾ ಇವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರು ಸನ್ಮಾನಿಸಿದರು ಲಾಯಿಲ :ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ . ಮೋಹನ್ ಪೂಜಾರಿ ಮತ್ತು ಯುಶೋಧಾ...
ಮಡಂತ್ಯಾರಿನಲ್ಲಿ ಇಸ್ಪೀಟು ಅಡ್ಡೆಗೆ ದಾಳಿ 23ಮಂದಿ ವಶಕ್ಕೆ
ಬೆಳ್ತಂಗಡಿ; ಮಡಂತ್ಯಾರು ಪೇಟೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23ಮಂದಿ ಆರೋಪಿಗಳನ್ನು ಬಂಧಿಸಿ ನಗದು ಹಣ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದ ಹಿಂಭಾಗದಲ್ಲಿರುವ ಶೆಡ್ ನಲ್ಲಿ ಕಾನೂನು ಬಾಹಿರವಾಗಿ ಇಸ್ಪೀಟ್ ಅಡ್ಡೆಯನ್ನು ನಡೆಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಪಿಎಸ್.ಐ ನಂದಕುಮಾರ್ ಹಾಗೂ ತಂಡ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ಅಂದರ್ ಬಾಹರ್ ಆಟದಲ್ಲಿ ನಿರತರಾಗಿದ್ದ 23 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಿಂದ ಸುಮಾರು 36,729 ಮೌಲ್ಯದ ನಗದು ಹಾಗೂ ವಸ್ತುಗಳನ್ನು...
ಸವಣಾಲನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ; ಒಂದೇ ತಿಂಗಳಿನಲ್ಲಿ ಎರಡು ಚಿರತೆಗಳ ಸೆರೆ
ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ.ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಹಾವಳಿಯಿಂದ ಕೋಳಿ ಸೇರಿದಂತೆ ಸಾಕು ಪ್ರ್ರಾಣಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನ್ ಆಳವಡಿಸಿದ್ದರು. ಸುಮಾರು 3 ತಿಂಗಳ ನಂತರ ಸೆಪ್ಟೆಂಬರ್ 1 ರ...
ಬೆಳ್ತಂಗಡಿಯಲ್ಲಿ ಕೆ.ಆರ್‌ಎಸ್ ಪಕ್ಷದ ನೂತನ ಸಮಿತಿ ಅಸ್ತಿತ್ವಕ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್ ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ ಎಂದು ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಹೇಳಿದರು.ಅವರು ಸೆ.20ರಂದು ಬೆಳ್ತಂಗಡಿ ಶ್ರೀಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 2016ರಲ್ಲಿ ಕೃಷ್ಣರೆಡ್ಡಿಯವರ ನೇತೃತ್ವದಲ್ಲಿ ಈ ಪಕ್ಷ ಸ್ಥಾಪನೆಯಾಗಿದ್ದು, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಮೂಲಕ ರಾಜ್ಯದ ನೂರಾರು ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಭಿಯಾನ ನಡೆಸುತ್ತಿದೆ....















