ಬೆಳ್ತಂಗಡಿಯ ವ್ಯಕ್ತಿ ಉಡುಪಿಯಲ್ಲಿ ರೈಲಿನಿಂದ ಬಿದ್ದು ಸಾವು

0

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಹೊರಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತರ ಬಳಿ ಪತ್ತೆಯಾದ ಮತದಾರರ ಗುರುತಿನ ಚೀಟಿಯಲ್ಲಿ ದಿನೇಶ್ ಎಂಬ ಹೆಸರು ಹಾಗೂ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಎಂಬ ವಿಳಾಸ ನಮೂದಾಗಿದೆ. ದಿಲ್ಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್‌ ಸಂಖ್ಯೆ 12284 ನಿಝಾಮುದ್ದೀನ್ ಎಕ್ಸ್ ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಹೊರಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್ಪಿಎಫ್ ಸಿಬ್ಬಂದಿಯು ಸಮಾಜಸೇವಕ...

ಮಂಗಳೂರಿನಲ್ಲಿ ಸುಮುದ್ರಕ್ಕೆ ಈಜಲು ಹೋದ ಬೆಳ್ತಂಗಡಿ ಬಾಲಕ ನೀರುಪಾಲು

0

ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ (15ವರ್ಷ) ಮಂಗಳೂರು ಪಣಂಬೂರು ಸುಮುದ್ರಕ್ಕೆ ಈಜಲು ಹೋಗಿ ನೀರು ಪಾಲಾದ ಘಟನೆ ಅ.4ರಂದು ಸಂಜೆ ನಡೆದಿದೆ. ಮೃತ ಬಾಲಕ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ರವರ ಪುತ್ರ ಎಂದು ಗುರುತಿಸಲಾಗಿದೆ.

ರಾಜ್ಯದಲ್ಲಿ ಎರಡು ದಿನ ಭಾರೀಮಳೆಯ ಮುನ್ಸೂಚನೆ ದ.ಕ‌‌‌ ಸೇರಿದಂತೆ‌ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

0

ಬೆಂಗಳೂರು;  ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ...

ಧರ್ಮಸ್ಥಳದಲ್ಲಿ ೨೮ ನೇ ವರ್ಷದ ಭಜನಾ ಕಮ್ಮಟ ಸಮಾರೋಪ  ಆರು ಸಾವಿರ ಭಜನಾಪಟುಗಳಿಂದ ಬೃಹತ್ ಶೋಭಾಯಾತ್ರೆ

0

ಉಜಿರೆ: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ೨೮ ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.ಭಗವಂತನ ಸಾಕ್ಷಾತ್ಕಾರಕ್ಕೆ ಹಲವಾರು ಮಾರ್ಗಗಳಿದ್ದರೂ ಶ್ರದ್ಧಾ-ಭಕ್ತಿಯಿಂದ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಭಜನೆ ಹಾಡಿದರೆ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು. ನಾಡಿನ ಅನೇಕ ಸಾಧು-ಸಂತರು, ಮೀರಾಬಾಯಿಯಂತಹ ಸಾಧಕರು ಭಕ್ತಿಯಿಂದ ತಮ್ಮನ್ನು...

ಮಂಗಳೂರಿನಲ್ಲಿ ಮನೆ ಕಳ್ಳತನ ನಡೆಸಿದ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ ₹18 ಲಕ್ಷ ಮೌಲ್ಯದ ಚಿನ್ನಾಭರಣ, ಸೊತ್ತು ವಶ

0

ಮಂಗಳೂರು: ಮಂಗಳೂರು ನಗರದಲ್ಲಿ ಮನೆಕಳ್ಳತನ ನಡೆಸಿ ರೈಲಿನಲ್ಲಿ ದೆಹಲಿಗೆ ಪರಾರಿಯಾಗುತ್ತಿದ್ದ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಗುಜರಾತ್‌ನ ವಡೋದರಾದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅರ್ಮಾನ್ ಖಾನ್ @ ಅಮನ್ ಸೋನಿ (34) ಹಾಗೂ ಸಂಜೀವ್ ಕುಮಾರ್ @ ಜಾನಿ (34) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿಯ ಮನೆಯೊಂದರ ಬಾಗಿಲಿನ ಕೊಂಡಿ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಿದ್ದರು....

ಫಾರಂ 7 ಅರ್ಜಿಗಳ ಸಲ್ಲಿಕೆಯಲ್ಲಿ‌ ಭಾರೀ ಅಕ್ರಮದ ಆರೋಪ; ಸಮಗ್ರ ತನಿಖೆಗೆ SDPI ಆಗ್ರಹ

0

ಬೆಳ್ತಂಗಡಿ, ಅ.3: SIR ಪ್ರಕ್ರಿಯೆಯಡಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಪಟ್ಟಣ ಪಂಚಾಯತ್, ಉಜಿರೆ, ಕಾಶಿಪಟ್ನ ಪೆರಾಡಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಸಲ್ಲಿಕೆಯಾಗಿರುವ ಫಾರಂ -7 ಅರ್ಜಿಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ತಹಶೀಲ್ದಾರ್‌ಗೆ ದೂರು ಸಲ್ಲಿಸಲಾಯಿತು. Form-7 ಅರ್ಜಿಗಳ ಸಲ್ಲಿಕೆ ಹಾಗೂ ಪರಿಶೀಲನಾ ಪ್ರಕ್ರಿಯೆಯಲ್ಲಿ ಯಾವುದೇ ನಿಯಮಬಾಹಿರತೆ ನಡೆದಿದೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಬೇಕು. ಅರ್ಜಿದಾರರ ವಿವರಗಳು, ಮತದಾರರ ಅನುಮತಿ ಹಾಗೂ ಅರ್ಜಿಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು SDPI ದೂರಿನಲ್ಲಿ ಒತ್ತಾಯಿಸಿದೆ. ಅರ್ಹ ಮತದಾರರ ಹೆಸರುಗಳನ್ನು ಯಾವುದೇ...

ಯುವ ಸಂಗಮ ವೇಣೂರು ಇದರ ಆಂಬುಲೆನ್ಸ್ ಲೋಕಾರ್ಪಣೆ ಮಾಡಿದ ಶಾಸಕ ಹರೀಶ್ ಪೂಂಜ

0

ವೇಣೂರು; ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ರಿಜಿಸ್ಟರ್ ವೇಣೂರು ಈ ಸಂಸ್ಥೆಗೆ ನಮ್ಮ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜಾ ರವರ ಶಿಫಾರಸಿನ ಮೇರೆಗೆ ಎಂ ಆರ್ ಪಿ ಎಲ್ ಮಂಗಳೂರು ನವರು ಕೊಡುಗೆಯಾಗಿ ನೀಡಿದ ಆಂಬುಲೆನ್ಸ್ ಅನ್ನು ಶಾಸಕರು ಲೋಕಾರ್ಪಣೆ ಮಾಡಿದರು ಈ ಕಾರ್ಯಕ್ರಮದಲ್ಲಿ ವೈದ್ಯರಾದ ಶಾಂತಿಪ್ರಸಾದ್ ಪಲ್ಗುಣಿ ಸೇವಾ ಸಂಘದ ಸ್ಥಾಪಕರಾಗಿರುವ ಜಯರಾಜ್ ವಿ ಎಸ್ ಭಾರತೀಯ ಜನತಾ ಪಾರ್ಟಿಯ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ವೇಣೂರು ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಹೆಗ್ಡೆ ಭಾಜಪ ಬೆಳ್ತಂಗಡಿ...

ಕುತ್ಲುರು ಸರಕಾರಿ ಶಾಲೆಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

0

ಬೆಳ್ತಂಗಡಿ: ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್ ಬಂಗೇರಾ ಹಾಗೂ ಗ್ಲೋಬಲ್ ಸಿಂಪತಿ ಫೌಂಡೇಶನ್ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಪರಿಸರ ಪ್ರೇಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆವರಣ ದಲ್ಲಿರುವ ಫ್ರೂಟ್ಸ್ ಪಾರ್ಕ್ ನಲ್ಲಿ ರಂಬೂಟಾನ್ ಗಿಡಗಳನ್ನು ನೆಟ್ಟು ಶುಭಕೋರಿದರು.ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ...

ವಿದ್ವತ್ ಪಿಯು ಕಾಲೇಜಿನಲ್ಲಿ ಗಾಂಧೀಜಿ–ಶಾಸ್ತ್ರೀಜಿ ದಿನಾಚರಣೆ

0

ಬೆಳ್ತಂಗಡಿ: ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ ಮತ್ತು ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಅವರ ಜೀವನವನ್ನು ಅರ್ಥೈಸಿದಾಗ ಅವರಲ್ಲಿದ್ದ ಸರಳತೆ, ಶಿಸ್ತು, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ದೇಶದ ಮೇಲಿನ ಅಪಾರ ಪ್ರೀತಿ ನಮಗೆ ಆದರ್ಶಪ್ರಾಯವಾಗಿದೆ ಎಂದು ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ.ಮಂಡಗಳಲೆ ಹೇಳಿದರು. ಗುರವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ಸೆ.2 ರಂದು ಹಮ್ಮಿಕೊಂಡ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ದಿನಾಚರಣೆ ನಡೆಸಿ ಬಳಿಕ ವಿಶೇಷ ಉಪನ್ಯಾಸ ನೀಡಿ...

ಮಾಡೂರು ಯುಸೂಫ್ ಹತ್ಯೆ ಪ್ರಕರಣ ಐವರು ಆರೋಪಿಗಳಿಗೆ‌ ಶಿಕ್ಷೆ‌ ವಿಧಿಸಿದ ನ್ಯಾಯಾಲಯ

0

ಮಂಗಳೂರು; 2015ರಲ್ಲಿ ಮಂಗಳೂರು ಕಾರಾಗೃಹದಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. 2015ರ ನವೆಂಬರ್ 2ರಂದು ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ಕಾರಾಗೃಹದಲ್ಲಿ ಮಾಡೂರು ಯುಸೂಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್‌. ಅವರು ಅ.1ರಂದು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 776 ಸಾವಿರ...