ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ ನ ನವೀಕೃತ ಸ್ಮಶಾನ ಉದ್ಘಾಟನೆ, ನೂತನ ಬಿಷಪ್ ಅವರಿಗೆ ಸನ್ಮಾನ

0

ಬೆಳ್ತಂಗಡಿ; ಧರ್ಮಸ್ಥಳ ಸೈಂಟ್ ಜೋಸೆಫ್ ಫೊರೋನಾ ಚರ್ಚ್ ನ ನವೀಕೃತ ಸ್ಮಶಾನದ ಉದ್ಘಾಟನಾ ಕಾರ್ಯಕ್ರಮ ಡಿ.5 ಸೋಮವಾರ ನಡೆಯಿತು.ಉದ್ಘಾಟನೆಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ನೆರವೇರಿಸಿ ಮಾತನಾಡಿ ಅತ್ಯುತ್ತಮವಾದ ಸ್ಮಶಾನವನ್ನು ನಿರ್ಮಿಸಿರುವ ಬಗ್ಗೆ ಅಭಿನಂದನೆ ಸಲ್ಲಿಸಿದರು. ಬೆಳ್ತಂಗಡಿ ಧರ್ಮಪ್ರಾಂತ್ಯದ ಚಾನ್ಸಲರ್ ಫಾ ಲಾರೆನ್ಸ್ ಅವರು ಮಾತನಾಡಿ ಶುಭ ಹಾರೈಸಿದರು.ಧರ್ಮಸ್ಥಳ ಚರ್ಚ್ ನ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರುಈ ಸಂದರ್ಭದಲ್ಲಿ ಧರ್ಮಸ್ಥಳ ಸೈಂಟ್ ಜೋಸೆಫ್ ಫೊರೋನಾ ಚರ್ಚಿನ ಪರವಾಗಿ ನೂತನ ಧರ್ಮಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ...

ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ

0

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.ಪುತ್ತೂರು ಉಪ ವಿಭಾಗಾಧಿಕಾರಿಗಳು 2025ರ ಡಿಸೆಂಬರ್ 17ರಂದು ಹೊರಡಿಸಿರುವ ಆದೇಶ ರದ್ದುಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸೋಮವಾರ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟ‌ರ್ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದ್ದು, ಅರ್ಜಿಯು...

ಬೆಳ್ತಂಗಡಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನ ಮಾದಕ ವಸ್ತು ಜೊತೆ ಓರ್ವ ಆರೋಪಿ ಬಂಧನ

0

ಬೆಳ್ತಂಗಡಿ : ಅಕ್ರಮವಾಗಿ ಮಾರಾಟ ಮಾಡಲು ಕಾರಿನಲ್ಲಿ ಮಾದಕವಸ್ತು ಎಮ್.ಡಿ.ಎಮ್.ಎ ಸಂಗ್ರಹಿಸಿಟ್ಟದ್ದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಓರ್ವ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ರಸ್ತೆಯಲ್ಲಿ ಜ.3 ರಂದು ಸಂಜೆ 5:45 ಕ್ಕೆ ಬೆಳ್ತಂಗಡಿ ಸಬ್‌ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ರೌಡ್ಸ್ ನಲ್ಲಿರುವಾಗ ಅನುಮಾನಸ್ಪದವಾಗಿ ರಸ್ತೆ ಪಕ್ಕದಲ್ಲಿ ನಿಂತಿದ್ದ KA-19-MG-4669 ನಂಬರಿನ ಐ20 ಕಾರನ್ನು ಪರಿಶೀಲನೆ ಮಾಡಿದಾಗ ಸದ್ರಿ ಕಾರಿನ ಒಳಗಡೆ ಮಾದಕ ವಸ್ತು ಎಮ್.ಡಿ.ಎಮ್.ಎ ಪತ್ತೆಯಾಗಿದೆ. ಕಾರಿನೊಳಗಡೆ ಖಾಲಿ ಸಿಗರೇಟ್ ಪ್ಯಾಕ್...

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

0

ಬೆಳ್ತಂಗಡಿ;  ಮಲವಂತಿಗೆ ಗ್ರಾಮದ ಕಜಕ್ಕೆ ನಿಸರ್ಗ ಮನೆ ನಿವಾಸಿ ವೀರೇಶ್ವರ ಮರಾಠೆ (68) ಅಲ್ಪಕಾಲದ ಅಸೌಖ್ಯದಿಂದ ಜ‌.4 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ.ಕೃಷಿಕರಾಗಿದ್ದ ಅವರು ತಾಳ ಮದ್ದಳೆ ಅರ್ಥಧಾರಿ ಯಾಗಿ,ಬಂಗಾಡಿ ಸಿಎ ಬ್ಯಾಂಕ್,ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಶಿರಾಡಿ ದೈವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿ ಹಾಗೂ ಕಜಕ್ಕೆ ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟಿ ಯಾಗಿ ಸೇವೆ ಸಲ್ಲಿಸಿದ್ದರು.

ಮಂಗಳೂರು 21 ಕೆ.ಜಿ ಗಾಂಜಾ ವಶಕ್ಕೆ ಇಬ್ಬರ ಬಂಧನ

0

ಮಂಗಳೂರು: ಗಾಂಜಾ ದಾಸ್ತಾನಿರಿಸಿದ್ದ ಆರೋಪದಲ್ಲಿ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿ, 21 ಕೆಜಿ 450 ಗ್ರಾಂ ಗಾಂಜಾವನ್ನು ಶನಿವಾರ ಚೊಕ್ಕಬೆಟ್ಟು, ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಉಳಾಯಿಬೆಟ್ಟು ಗ್ರಾಮದ ಪ್ರದೀಪ್ ಪೂಜಾರಿ (32), ಬೈಕಂಪಾಡಿ ಚಿತ್ರಾಪುರ ನಿವಾಸಿ ವಸಂತ (42) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಅಂದಾಜು 10,72,500 ರೂ. ಮೌಲ್ಯದ 21.450 ಕೆಜಿ ಗಾಂಜಾ, 7 ಸಾವಿರ ರೂ. ಮೌಲ್ಯದ ಮೂರು ಮೊಬೈಲ್ಫೋನ್ ಗಳು, ಸಾಗಾಟಕ್ಕೆ ಬಳಸಿದ್ದ 3 ಲಕ್ಷ ರೂ. ಮೌಲ್ಯದ ಕಾರು, ಗಾಂಜಾ ತುಂಬಿಸಿಟ್ಟಿದ್ದ ಮೂರು ಸಾವಿರ ರೂ. ಮೌಲ್ಯದ...

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಅರ್ಜಿ ಮನ್ನಿಸಲು ನಿರಾಕರಣೆ, ಮಧ್ಯಂತರ ವರದಿ ತಟಸ್ಥಗೊಳಿಸಿದ ಬೆಳ್ತಂಗಡಿ ನ್ಯಾಯಾಲಯ

0

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ವಿರುದ್ದ ಕ್ರಮ ಕೈಗೊಳ್ಳಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸಲು ನಿರಾಕರಿಸಿದ ನ್ಯಾಯಾಲಯ ಈಗ ಎಸ್.ಐ.ಟಿ ನೀಡಿರುವ ಮಧ್ಯಂತರ ವರದಿಯನ್ನು ತಟಸ್ಥವಾಗಿರಿಸಿದ್ದು ಪೂರ್ಣ ವರದಿಯನ್ನು ಎಸ್.ಐ.ಟಿ ಸಲ್ಲಿಸಿದ ಬಳಿಕ ಪ್ರಕರಣವನ್ನು ಕೈಗೆತ್ತಿಗೊಳ್ಳುವುದಾಗಿ ತಿಳಿಸಿದೆ. ಉಳಿದ ವಿಚಾರಗಳ ಬಗ್ಗೆ ಜ‌ 23 ರಕ್ಕೆ ವಿಚಾರಣೆಯನ್ನು ಮುಂದೂಡಿ ಜ3 ರಂದು ಆದೇಶ ಹೊರಡಿಸಿದೆ.ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ ಎಸ್.ಐ.ಟಿ ಮಹೇಶ್ ಶೆಟ್ಟಿ ಸೇರಿದಂತೆ ಆರು ಮಂದಿಯ ವಿರುದ್ದ ಕ್ರಮ ಕೈಗೊಳ್ಳಲು ಅನುಮತಿ...

ಉಜಿರೆ ವಿಜಯ ಗೋಪುರ ನಿರ್ಮಾಣಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಜ್ಷ ಸುಮಂತ್ ಕುಮಾರ್ ಅವರಿಂದ ದೇಣಿಗೆ ಹಸ್ತಾಂತರ

0

ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಸಮಿತಿಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ಅವರು ಜ.3 ರಂದು ಸಂಜೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮೊಕ್ತೇಸರರಾದ ಶರತ್ ಕೃಷ್ಣ ಪಟುವೆಟ್ನಾಯ ಅವರಿಗೆ ಮೂರು ಲಕ್ಷ ರೂಪಾಯಿ ದೇಣಿಗೆಯನ್ನು ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವತಿಯಿಂದ ಸುಮಂತ್ ಜೈನ್ ಅವರಿಗೆ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು.

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಜ.5 ರಂದು ಬೆಳ್ತಂಗಡಿಗೆ

0

ಬೆಳ್ತಂಗಡಿ;  ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ರವರು ಜನವರಿ 5 ರಿಂದ 8 ರವರೆಗೆ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು , ಬೆಳ್ತಂಗಡಿ ತಾಲೂಕಿಗೆ ಜನವರಿ 6 ರಂದು ಆಗಮಿಸಲಿದ್ದಾರೆ. ಜನವರಿ 5 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಜನವರಿ 6 ರಂದು ಬೆಳಗ್ಗೆ 10 ಘಂಟೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಮಲೆಕುಡಿಯ ಸಮುದಾಯದ ಕಾಲನಿಗೆ ಭೇಟಿ ನೀಡಿ ಅಲ್ಲಿ ಜನರ ಕುಂದುಕೊರತೆಗಳನ್ನು...

ಮಾರ್ಚ್ 1 ರಿಂದ 9ರವರೆಗೆ ನಾರಾವಿ  ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಮುಜರಾಯಿ ಸಚಿವರ ಭೇಟಿಯಾದ ಆಳಿತ ಸಮಿತಿ

0

ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ರವರನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ,ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗಡೆ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ...

ಧರ್ಮಸ್ಥಳ ಪ್ರಕರಣ  ಹಿರಿಯ ನ್ಯಾಯವಾದಿ ದೊರೆ ರಾಜು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ

0

ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಶನಿವಾರ ಹಾಜರಾಗಲಿದ್ದಾರೆ.ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಲು ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದಾರೆ.ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸದ್ದು ಆವರದಿಯಲ್ಲಿ ‌ಸೌಜನ್ಯ ಪರ‌ಹೋರಾಟಗಾರರಾದ ಮಹೇಶ್ ಶೆಟ್ಟಿ ತರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದು ಇದರ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ...