ಬೆಳಾಲು ಕೊಲೆ ಪ್ರಕರಣ ಆರೋಪಿಗಳಿಬ್ಬರ ಬಂಧನ
ಬೆಳ್ತಂಗಡಿ: ಬೆಳಾಲಿನ ಎಸ್ ಪಿ ಬಿ ಕಾಂಪೌ ಆವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್(83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು,ಮೃತ ಬಾಲಕೃಷ್ಣ ಭಟ್ ಅವರ ಕುಟುಂಬದ ಹತ್ತಿರದ ಸಂಬಂಧಿಗಳಾಗಿರುವ ಕೇರಳ ಕಾಸರಗೋಡಿನ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಒಬ್ಬ ಆರೋಪಿ ಕೇರಳದಲ್ಲಿ ಈ ಹಿಂದೆ ಅಪರಾಥ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನಲೆಯಿದೆ ಎಂದು ತಿಳಿದು ಬಂದಿದೆ ಅಪರಾಥ ಪ್ರಕರಣ ದಾಲ್ಲಿ ಪೊಲೀಸರು ಇಬ್ಬರು...
ಶಾಸಕ ಹರೀಶ್ ಪೂಂಜರಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಮಧ್ಯಂತರ ತಡೆ ಆದೇಶ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: 'ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ' ಎಂಬ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿರುವ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ. 'ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು' ಎಂದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿಯನ್ನು, 'ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ...
ಬೆಳ್ತಂಗಡಿ : ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಅಧ್ಯಕ್ಷ, ಅಧಿಕಾರಿಗಳಿಂದ ಕರ್ತವ್ಯ ಲೋಪ ಲೋಕಾಯುಕ್ರ ವರದಿ
ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದುಇಂದಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಆನಂದ ಇಂಜಿನಿಯರ್ ಗಳು ಹಾಗೂ ಅಂದಿನ ಅಭಿವೃದ್ಧಿ ಅಧಿಕಾರಿಯವರು ಕರ್ತವ್ಯ ಲೋಪ ಎಸಗಿರುವುದಾಗಿ ವರದಿ ನೀಡಿದೆ.ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 15 ನೇ ಹಣಕಾಸಿನ ಯೋಜನೆಯ 2021-22 ರಲ್ಲಿ ನಡೆದ ವಿವಿಧ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಬಂಗಾಡಿ ನಿವಾಸಿ ಜಯರಾಮ.ಕೆ ಅವರು ಲೋಕಾಯುಕ್ತಕ್ಕೆ ದೂರು...
ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ರಕ್ಷಿತ್ ಶಿವರಾಂ ಅವರಿಂದ ಮನವಿ
ಬೆಳ್ತಂಗಡಿ; ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ,ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಕ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಅನುದಾನ ಒದಗಿಸುವಂತೆ ಮಾಡಿದರು.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು,ಕಲ್ಮಂಜ ಗ್ರಾಮದ ನಿಡಿಗಲ್,ಬಂದಾರು ಗ್ರಾಮದ ಬುಳೇರಿ,ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಅನಿದಾನ ಒದಗಿಸುವಂತೆ ಮನವಿಯನ್ನು ಸಲ್ಲಿಸಿದರು.ಮನವಿ ಸ್ವೀಕರಿಸಿದ ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.
ಮುಂಡ್ರುಪ್ಪಾಡಿ ಶಾಲೆಯಲ್ಲಿ ವಾಲಿಬಾಲ್ ಪಂದ್ಯಾಟ
ಬೆಳ್ತಂಗಡಿ; ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ನಿಡ್ಲೆ, ಕೊಕ್ಕಡ, ಮತ್ತು ಪೆರ್ಲ ಕ್ಲಸ್ಟರ್ ಗಳ ತಂಡಗಳ ತಂಡಗಳು ಭಾಗವಹಿಸಿದ್ದವು. ವಾಲಿಬಾಲ್ ಪಂದ್ಯಾಟವನ್ನು ಯಶಸ್ವಿಯಾಗಿ ನಡೆಸಲು ಹಳೆ ವಿದ್ಯಾರ್ಥಿ ಸಂಘ, ಗೆಳೆಯರ ಬಳಗ ಮುಂಡ್ರುಪ್ಪಾಡಿ, ಹಾಗೂ ಊರಿನ ಹಿರಿಯ ಗಣ್ಯರು, ಹಳೆ ವಿದ್ಯಾರ್ಥಿಗಳು ಎಸ್.ಡಿ.ಎಂ ಸಿ ಸದಸ್ಯರು, ಪಾಲಕ ಪೋಷಕರು, ಊರಿನ ಪರವೂರಿನ ದಾನಿಗಳು, ಗ್ರಾಮಪಂಚಾಯತು ಸದಸ್ಯರುಗಳು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.ವಾಲಿಬಾಲ್ ಪಂದ್ಯಾಟದಲ್ಲಿ ಕೆಮ್ಮಟೆ ತಂಡ ಪ್ರಥಮ ಸ್ಥಾನವನ್ನು ಹಾಗೂ ಎಸ್.ಡಿ.ಎಂ ಕನ್ನಡ ಮಾದ್ಯಮಶಾಲೆ ಧರ್ಮಸ್ಥಳ ದ್ವಿತೀಯ ಸ್ಥಾನವನ್ನು...
ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಯ ವಾರ್ಷಿಕ ಸಮ್ಮೇಳನ
ಬೆಳ್ತಂಗಡಿ: ಸ್ವ-ಉದ್ಯೋಗದಿಂದ ಆರ್ಥಿಕ ಪ್ರಗತಿಯೊಂದಿಗೆ ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಗುರುವಾರ ಧರ್ಮಸ್ಥಳದಲ್ಲಿ ದೇಶದಾದ್ಯಂತ ಇರುವ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ತರಬೇತಿ ಪಡೆದವರು ಸ್ಥಳೀಯ ಸಂಪನ್ಮೂಲ ಹಾಗೂ ಬೇಡಿಕೆಗಳಿಗೆ ಅನುಗುಣವಾಗಿ ಸ್ವ-ಉದ್ಯೋಗ ಪ್ರಾರಂಭಿಸಿ, ಸಾಲದ ಹಣವನ್ನು ಸದುಪಯೋಗ ಮಾಡಿ, ಕೌಲಾಭಿವೃದ್ಧಿಯೊಂದಿಗೆ ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸುವಂತೆ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಸಕಾಲಿಕ ಮಾಹಿತಿ, ಮಾರ್ಗದರ್ಶನ ಮತ್ತು ಪ್ರೇರಣೆ ನೀಡಬೇಕು. ಯಾವುದೇ ಸಮಸ್ಯೆಗಳು, ಸವಾಲುಗಳು...
ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಅಲ್ಪೋನ್ಸ್ ಫ್ರಾಂಕೊ ಖಂಡನೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ ಎಂದು ಕರ್ನಾಟಕ ಕ್ರೈಸ್ತ ಸಂಘದ (KCS) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಓರ್ವ ಜನಪ್ರತಿನಿಧಿಯನ್ನೇ ಗುರಿಯಾಗಿಸಿ ಇಂತಹ ಕೃತ್ಯ ನಡೆಸುವುದರಲ್ಲಿ ಫ್ಯಾಸಿಸ್ಟರ ಇಂತಹ ಕೃತ್ಯ ಸಮಾಜಕ್ಕೆ ಮಾರಕವಾಗಿದೆ.ಈ ದೇಶದಲ್ಲಿ ಕಾನೂನು ಎಲ್ಲರಿಗೂ ಅನ್ವಯ.ನೇರ ಎದುರಿಸಲು ತಯಾರಿಲ್ಲದ ಸಂಘ ಪರಿವಾರದ ಮನಸ್ಥಿತಿಯ ಜನರು...
ರಬ್ಬರ್ ಕೃಷಿಕರು ಆತ್ಮವಿಶ್ವಾಸ ಕಳೆದುಕೊಳ್ಳದೆ ಮುಂದುವರಿಯಿರಿ; ಶ್ರೀಧರ ಜಿ ಭಿಡೆ
ಬೆಳ್ತಂಗಡಿ; ಪ್ರಸಕ್ತ ವರ್ಷ ರಬ್ಬರ್ ಬೆಳೆಗೆ ಬೆಲೆ ಏರಿಳಿತಗಳನ್ನು ಕಂಡಿದ್ದರೂ, ರಬ್ಬರ್ ಬೆಳೆಗಾರರು ಭರವಸೆ ಆತ್ಮವಿಶ್ವಾಸ ಕಳೆದುಕೊಳ್ಳುವ ಅಗತ್ಯವಿಲ್ಲ, ರಬ್ಬರ್ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ" ಎಂದು ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ.ಭಿಡೆ ಹೇಳಿದರುಅವರು ಗುರುವಾರ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯ ಲ್ಲಿ ಮಾತನಾಡಿದರು.ರಬ್ಬರ್ ಗೆ ಉತ್ತಮ ಬೇಡಿಕೆ ಇದ್ದು, ಪ್ರಸ್ತುತ ಉತ್ಪಾದನೆ ಕಡಿಮೆ ಇದೆ. ಈ ಕಾರಣದಿಂದ ಮುಂದಿನ ಕೆಲವು ವರ್ಷ ದರ ತೀರಾ ಕುಸಿಯುವ ಸಾಧ್ಯತೆ...
ವೇಣೂರು ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ : ನಿಟ್ಟಡೆ ಗ್ರಾಮದ ಬೂತೆರ್ ಎಂಬಲ್ಲಿನ ನಿವಾಸಿ ಸತೀಶ್ ಪೂಜಾರಿ (36) ಎಂಬವರು ಬುಧವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಟೆಸುತ್ತಿದ್ದಾರೆ.ಮೃತರು ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬೆಳಾಲು ನಿವೃತ್ತ ಶಿಕ್ಷಕನ ಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ಕು ತಂಡಗಳ ರಚನೆ, ಹಿರಿಯ ಅಧಿಕಾರಿಗಳ ಭೇಟಿ
ಬೆಳ್ತಂಗಡಿ : ಬೆಳಾಲಿನಲ್ಲಿ ಮನೆಗೆ ನುಗ್ಗಿ ನಿವೃತ್ತ ಶಿಕ್ಷಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದಲ್ಲಿ ತನಿಖೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಬುಧವಾರ ಪಶ್ಚಿಮ ವಲಯ ಐಜಿಪಿ ಅಮೀತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ಪಡೆದು ಕೊಂಡರು. ಘಟನೆ ನಡೆದು 24ಗಂಟೆಗಳು ಕಳೆದಿದ್ದರೂ ಆರೋಪಿಗಳ ಬಗ್ಗೆ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ.ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ.ಕಾಂಪೌಂಡ್ ನ ನಿವೃತ್ತ ಶಿಕ್ಷಕ ಎಸ್.ಪಿ.ಬಾಲಕೃಷ್ಣ ಭಟ್ (83)...














