ಬೆಳ್ತಂಗಡಿ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ

0

ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ಉಮೇಶ್...

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ

0

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು.ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು.ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.ವಿಧಾನಸಭೆ ಸ್ಪೀಕರ್. ಉಪಮುಖ್ಯಮಂತ್ರಿ,...

ಕೌಕ್ರಾಡಿ ಮನೆ ತೆರವು ಪ್ರಕರಣ; ಆರೋಪಿಗಳ ವಿರುದ್ದ ಕ್ರಮಕ್ಕೆ ಒತ್ತಾಯ

0

ಬೆಳ್ತಂಗಡಿ; ಬಡ ದಲಿತ ವೃದ್ದೆ ರಾಧಮ್ಮ ಅವರ ಮನೆ ದ್ವಂಸ ಮಾಡಿದ ಕಡಬ ತಹಶೀಲ್ದಾರ್ ಪ್ರಭಾಕರ ಕಜೂರೆ, ಮತ್ತು ರಾಧಮ್ಮನ ಗಂಡ ಮುತ್ತು ಸ್ವಾಮಿ ಮೇಲೆ ಹಲ್ಲೆ ನಡೆಸಿದ ಕೌಕ್ರಾಡಿ ಗ್ರಾಮ ಆಡಳಿತಾದಿಕಾರಿ ಸಿದ್ದುಲಿಂಗು ಜಂಗಮ ಶೆಟ್ಟಿ ಅವರ ಮೇಲೆ ಕಾನೂನು ಬದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ, ಅವರುಗಳನ್ನು ಅಮಾನತ್ತು ಮಾಡಿ ಬಂಧಿಸಲು ದಲಿತ ಹಕ್ಕು ಸಮಿತಿ ಒತ್ತಾಯಿಸುತ್ತದೆ ಎಂದು ದಲಿತ ಹಕ್ಕು ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಈಶ್ವರಿ ಶಂಕರ್ ಹೇಳಿದರು.ಅವರು ಸೋಮವಾರ ಡಿ.ಎಚ್.ಎಸ್. ಮತ್ತು ಡಿ.ವೈ.ಎಫ್.ಐ. ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರ್...

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

0

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷರ ಅನುಮೋದನೆ ಮೇರೆಗೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಇಸುಬು ಯು.ಕೆ ನೇಮಕ ಇವರನ್ನು ನೇಮಕ ಮಾಡಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ ಎಲ್ಲ ಸ್ಥಾನಗಳಲ್ಲಿಯೂ ಸಹಕಾರ ಭಾರತಿಗೆ ಗೆಲುವು

0

ಬಂಗಾಡಿ : ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಡಿ. 8 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಮತಗಳ ಅಂತರದಲ್ಲಿ ವಿಜಯಶಾಲಿಯಾಗಿದ್ದಾರೆ. ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ಸಾಲಗಾರ ಹಿಂದುಳಿದ ವರ್ಗ ಎ ಕ್ಷೇತ್ರದಿಂದ ರಮೇಶ್ ಕೆಂಗಾಜೆ, ಸಾಲಗಾರ...

ಬೆಳ್ತಂಗಡಿ; ತಾಲೂಕಿನ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ 6 ಕೋಟಿ 25 ಲಕ್ಷ ಅನುದಾನ ಮಂಜೂರು; ರಕ್ಷಿತ್ ಶಿವರಾಮ್

0

ಬೆಳ್ತಂಗಡಿ; ತಾಲೂಕಿನವಿವಿಧ ರಸ್ತೆಗಳ ಸೇತುವೆಗಳ ನಿರ್ಮಾಣಕ್ಕೆ ರೂ 6.25 ಕೋಟಿ ಅನುದಾನ ಮಂಜೂರಾ ಗಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ...

ವಗ್ಗದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ; ಪಡಂಗಡಿ ನಿವಾಸಿ ಸಾವು

0

ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ನಿವಾಸಿ ರಾಜೇಂದ್ರಪೂಜಾರಿ (45) ಎಂಬವ ರಾಗಿದ್ದಾರೆ. ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಮೃತಪಟ್ಟಿದ್ದಾರೆ.

ಆದಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಕಾಣುವಂತೆ ಗೃಹ ಸಚಿವರಿಗೆ ಶೇಖರ ಲಾಯಿಲ ಮನವಿ

0

ಬೆಳ್ತಂಗಡಿ; ಜಿಲ್ಲೆಯ ಮೂಲನಿವಾಸಿವಾದಿವಾಸಿಗಳು ಹಕವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೂಗೊಳ್ಳುವಂತೆ ರಾಜ್ಯ ಸರಕಾರದ ಗೃಹಸಚಿವರಾದ ಡಾ.ಜಿ ಪರಮೇಶ್ವರ್ ಅವರಿಗೆ ಆದಿವಾಸಿ ಹಕ್ಕುಗಳ ಸಮಿತಿ ಸಂಚಾಲಕ ಶೇಖರ ಲಾಯಿಲ ಅವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಮನವಿ ಸಲ್ಲಿಸಲಾಯಿತು.ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ವಾಸಿಸುತ್ತಿರುವ ಮೂಲನಿವಾಸಿಗಳು ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿದ್ದಾರೆ ಈ ಕುಟುಂಬಗಳಿಗೆ ಕೂಡಲೇ ರಸ್ತೆ, ವಿದ್ಯುತ್, ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು,ನೆರಿಯ ಗ್ರಾಮದ ಬಾಂಜಾರು ಮಲೆ ನುವಾಸಿಗಳ ಜಮೀನಿನ ಮೇಲೆ ನ್ಯಾಯಾಲಯದಲ್ಲಿ ಸರಕಾರ ಹಾಕಿರುವ ವ್ಯಾಜ್ಯವನ್ನು...

ಧರ್ಮಸ್ಥಳ ಕಲ್ಲೇರಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

0

ಬೆಳ್ತಂಗಡಿ; ಧರ್ಮಸ್ಥಳ ಕಲ್ಲೇರಿಯಲ್ಲಿಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಕಲ್ಲೇರಿ ನಿವಾಸಿ ಸುರೇಶ್ ಗೌಡ 52ಎಂಬವರಾಗಿದ್ದರೆ.ಇವರ ಕಳೆದ ಕೆಲ ದಿನಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದುವ ನ 26 ರಿಂದ ನಾಪತ್ತೆಯಾಗಿದ್ದರು.ಶುಕ್ರವಾರ ಬೆಳಗ್ಗೆ ಇವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.  ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮೃತದೇಹವನ್ನು ಬಾವಿಯಿಂದ ಮೇಲೆತ್ತಲು ಸಹಕರಿಸಿದರು ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

0

ಬೆಳ್ತಂಗಡಿ; ಕರಾವಳಿ‌ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿ‌ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ ಸತ್ಕಾರ್ಯಗಳ ವೇದಿಕೆಯನ್ನು ಮಾದರಿಯಾಗಿಸೋಣ ಎಂದು ಸುನ್ನೀ ಯುವಜನ ಸಂಘದ (ಎಸ್‌ವೈಎಸ್) ಕಾರ್ಕಳ ಝೋನ್ ಕಾರ್ಯದರ್ಶಿ ಮೌಲಾನಾ ಹುಸೈನ್ ಸ‌ಅದಿ ಹೊಸ್ಮಾರ್ ಅಭಿಪ್ರಾಯಪಟ್ಟರು. ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ರಿ. ಇದರ ವತಿಯಿಂದ ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಭಾಂಗಣದಲ್ಲಿ ನ.28 ರಂದು ನಡೆದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ ಮತ್ತು...