ಉಜಿರೆ ವಿಮುಕ್ತಿ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ

0

ಬೆಳ್ತಂಗಡಿ: ಸಂಸಾರ ವೆಂಬ ರಥದಲ್ಲಿ ಪುರುಷ ಮಹಿಳೆ ಎರಡು ಚಕ್ರಗಳಿದ್ದಂತೆ. ಇಬ್ಬರೂ ಸರಿಸಮಾನವಾಗಿ ಹೆಜ್ಜೆ ಹಾಕಿದರೆ ಸಂಸಾರದ ಹಾದಿ ಸುಗಮವಾಗಿ ಸಾಗುವುದು. ಅಂತೆಯೇ ದೇಶ, ಸಮಾಜದ ಅಭಿವೃದ್ಧಿಯ ದೃಷ್ಟಿಯಲ್ಲಿ ಜತೆಯಾಗಿ ಸಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ನ 23 ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಬೆಳ್ತಂಗಡಿ ಲಾಯಿಲದ ವಿಮುಕ್ತಿ ಸ್ವಸಹಾಯ ಸಂಘಗಳ ಟ್ರಸ್ಟ್ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗೃಹ ನಿರ್ವಹಣೆಯಲ್ಲಿಮಹಿಳೆಯರಿಗಿರುವಷ್ಟು ಶಕ್ತಿ ಪುರುಷರಿಗಿಲ್ಲ. ಮಹಿಳೆಯರು ಸಮಾಜದ ಬದಲಾವಣೆಗೆ ಶಕ್ತಿ ನೀಡಿದೆ. ಸರಕಾರದ ಮಹಿಳಾ...

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

0

ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮವು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಶಾದಿ ಮಹಲ್ ಗುರುವಾಯನಕೆರೆಯಲ್ಲಿ ಶುಕ್ರವಾರ ನಡೆಯಿತು.ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕರಾಳವಾದ ಹೊಸ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಸಮುದಾಯದ ನಾಯಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಕ್ಫ್ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಇಲ್ಯಾಸ್ ತುಂಬೆ ಮಾತನಾಡಿ ಧಾರ್ಮಿಕ ಕಾರ್ಯಕ್ಕೆ, ದಾನ ಅಥವಾ ಪರೋಪಕಾರಿ ಉದ್ದೇಶಕ್ಕಾಗಿ ಶಾಶ್ವತವಾಗಿ...

ಬೆಳ್ತಂಗಡಿ ಪಂಚಾಯಿತಿ ಉಪಚುನಾವಣೆ; ಶಾಂತಿಯುತ ಮತದಾನ

0

ಬೆಳ್ತಂಗಡಿ: ತಾಲೂಕಿನಲ್ಲಿ ಶನಿವಾರ ನಡೆದ ಪಂಚಾಯಿತಿ ಉಪಚುನಾವಣೆಗೆ ಮತದಾರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಒಟ್ಟು ಮೂರು ಕಡೆ ಮತದಾನ ನಡೆದಿದ್ದು ಉಜಿರೆ 8ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ 2036 ಮತದಾರರ ಪೈಕಿ 953 ಮತದಾರರು ಮತ ಚಲಾಯಿಸಿದ್ದು 46.83ಶೇ. ಮತದಾನ ದಾಖಲಾಗಿದೆ.ಕುವೆಟ್ಟಿನಲ್ಲಿ ಒಂದನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ 1,410 ಮತದಾರರ ಪೈಕಿ 257 ಮಂದಿ ಮತ ಚಲಾಯಿಸಿದ್ದು 18.23ಶೇ. ಮತದಾನವಾಗಿದೆ.ಇಳಂತಿಲದ ಒಂದನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ1,257 ಮತದಾರರ ಪೈಕಿ 782 ಮಂದಿ ಮತ ಚಲಾಯಿಸಿದ್ದು 62.21ಶೇ. ಮತದಾನ ದಾಖಲಾಗಿದೆ.

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

0

ಬೆಳ್ತಂಗಡಿ; ಉಪಚುನಾವಣೆಯ ಮೂಲಕ ಮತದಾರರು ಕಾಂಗ್ರೆಸ್ ಗೆ ಗೆಲುವಿನ ಗ್ಯಾರಂಟಿ ನೀಡಿದ್ದಾರೆಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ಚುನಾವಣಾ ಫಲಿತಾಂಶದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ.ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ.ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌'ಗೆ ಗೆಲುವಿನ ಗ್ಯಾರಂಟಿಯನ್ನು ಜನತೆ ನೀಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ...

ಕಡಿರುದ್ಯಾವರ; ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 20ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು, ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ-2 ಪೋಕ್ಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ.ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ನಿವಾಸಿ ಸುಧೀರ್ ಶಿಕ್ಷೆಗೊಳಗಾದ ಅಪರಾಧಿ. 2021ರ ಡಿಸೆಂಬರ್‌ನಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ತನ್ನ ಮನೆಯ ಹತ್ತಿರದ ಆರೋಪಿಯ ಮನೆಗೆ ಟಿವಿ ನೋಡಲು ಹೋಗಿದ್ದಳು. ಈ ವೇಳೆ ಆರೋಪಿ, ಅಂಗಡಿಗೆ ಹೋಗೋಣ ಎಂದು...

ಧರ್ಮಸ್ಥಳ ನಿವಾಸಿ ಸ್ಟಾನಿ ಜೋಸೆಫ್ ನಿಧನ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ (50) ಅಲ್ಪಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಖ್ಯಾತ ವಾಲಿಬಾಲ್ ಆಟಗಾರರಾಗಿದ್ದ ಇವರು, ಕ್ರೀಡಾಪಟುವಾಗಿ ಜಿಲ್ಲಾ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು.ಮೃತರು ಪತ್ನಿ ಇಬ್ಬರು ಮಕ್ಕಳು ತಂದೆ ಸಹೋದರ ಸಹೋದರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಬೆಳ್ತಂಗಡಿ;ಯುವಕನ ಪ್ಯಾಂಟ್ ಗೋಣಿ ಹೊಲಿಯುವ ಚೀಲದಿಂದ ಹೊಲಿದ ವೀಡಿಯೋ ಸಾಮಾಜಿಕ ಜಾಲತಣಗಳಲ್ಲಿ ವೈರಲ್; ಆತ್ಮಹತ್ಯೆಗೆ ಯತ್ನಿಸಿದ ಯುವಕ,ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಯುವಕರ ಪುಂಡಾಟ

0

ಬೆಳ್ತಂಗಡಿ : ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್‌ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು.ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ‌ನೆ.ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21)...

ಕಲ್ಮಂಜ; ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯನಗರ ನಿವಾಸಿರಿಕ್ಷಾ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಮೋದ್ (37) ಎಂಬವರಾಗಿದ್ದಾರೆ. ಗುರುವಾರ ತಡರಾತ್ರಿ ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಇವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಅವಿವಾಹಿತರಾಗಿದ್ದ ಅವರಿಗೆ ತಂದೆ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.

ಧರ್ಮಸ್ಥಳ; ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿ ಮೃತದೇಹ ಇದಾಗಿದ್ದುನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ನ.21 ರಂದು ಮೃತದೇಹ ಪತ್ತೆಯಾಗಿದೆ. ಮೃತದೇಹ ವ್ಯಕ್ತಿ BIG HIT ಎಂದು ಬರೆದಿರುವ ಕಪ್ಪು ಬಣ್ಣದ ಒಳಚಡ್ಡಿ ಮಾತ್ರ ಧರಿಸಿಕೊಂಡಿದ್ದು, ಎಡಕಾಲಿನ ಪಾದದ ಬಳಿ ಹಳೆಯ ಗಾಯವಿರುತ್ತದೆ. ಮೃತದೇಹನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ,ನದಿಯಲ್ಲಿದ್ದ ಮೃತದೇಹವನ್ನು ಮೇಲೆತ್ತಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸಹಕರಿಸಿದರು.ಘಟನೆಯ ಬಗ್ಗೆ ಧರ್ಮಸ್ಥಳ...

ಶಿಶಿಲ; ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಬೈಕ್  ಮೇಲೆ ಕಾಡಾನೆ ದಾಳಿ

0

ಶಿಶಿಲ; .ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ನಡೆದಿದ್ದು ಜನರಲ್ಲಿ ಆತಂಕ ಮೂಡಿಸಿದೆ.ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ನ.21 8.30ರ ಸುಮಾರಿಗೆ ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಭಯದಿಂದ ತನ್ನ ಬೈಕ್ ಅನ್ನು ಸಡನ್ನಾಗಿ ಬ್ರೇಕ್ ಹಾಕಿ ನಿಲ್ಲಿಸಿದಾಗ ಬೈಕಿಂದ ಬಿದ್ದು ವಸಂತ ಗೌಡ ಮತ್ತು ಮಕ್ಕಳಾದ ಲಾವ್ಯ, ಹಾಗೂ ಅದ್ವಿತ್ ಗೆ ಮೊಣಕಾಲು ಮತ್ತು...