ಬೆಳ್ತಂಗಡಿ; ಕುಪ್ಪೆಟ್ಟಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ
ಬೆಳ್ತಂಗಡಿ; ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ವಿರುವ ಉಪ್ಪನಂಗಡಿ ಪೊಲೀಸರು ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ.ಕುಪ್ಪೆಟ್ಟಿಯಲ್ಲಿ ಗೂಡ್ಸ್ ವಾಹನದಲ್ಲಿ ಜಾನುವಾರ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಪತ್ತೆ ಹಚ್ವಿದ್ದು ವಾಹನದಲ್ಲಿ ಯಾವುದೇ ದಾಖಲೆಗಳಿಲ್ಲದೆ ನಾಲ್ಕು ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು.ಈ ಹಿನ್ನಲೆಯಲ್ಲಿ ವಾಹನ ಚಾಲಕ ಜಯಂತ್ ಗೌಡ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಬೇಕಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದ್ದು ಘಟನೆಗೆ ಸಂಬಂಧಿಸಿದಂತೆ...
ತಾಲೂಕಿನ ಜನತೆಗೆ ಅವಮಾನ ಮಾಡಿದ ಶಾಸಕ ಪೂಂಜರ ವಿರುದ್ದ ಕ್ರಮಕ್ಕೆ ಸಿಪಿಐಎಂ ಆಗ್ರಹ
ಬೆಳ್ತಂಗಡಿ;ತೆಕ್ಕಾರು ಹಿಂದುಗಳ ಪವಿತ್ರ ಕ್ಷೇತ್ರದ ಭ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿರುವಾಗಲೇ ಧಾರ್ಮಿಕ ವೇದಿಕೆಯನ್ನು ದುರುಪಯೋಗಪಡಿಸಿ ಹಿಂದು ಧರ್ಮಕ್ಕೆ ಕಳಂಕ ಬರುವಂತೆ ಮಾತಾಡಿದ ಶಾಸಕ ಹರೀಶ್ ಪೂಂಜರ ನಡೆಯನ್ನು ಸಿಪಿಐಎಂ ಖಂಡಿಸಿದೆ ಅವರ ವಿರುದ್ದ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದುಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.ಈ ರೀತಿ ಕಾನೂನು ಬಾಹಿರವಾಗಿ ನಡಕೊಂಡ ಶಾಸಕ ಹರೀಶ್ ಪೂಂಜರ ಮೇಲೆ ಸೂಕ್ತ ಕಠಿಣ ಕಲಂಗಳಡಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರಧಾನವಾಗಿ ಅವರನ್ನು ತಕ್ಷಣ ಬಂದಿಸಬೇಕು ಎಂದು ಸಿಪಿಐಎಂ...
ಕೋಮು ಪ್ರಚೋದನ ಕಾರಿ ಭಾಷಣ ಮಾಡಿದ ಹರೀಶ್ ಪೂಂಜ ವಿರುದ್ದ ಕ್ರಮ ಕೈಗೊಳ್ಳಿ; ಎಸ್.ಡಿ.ಪಿ.ಐ ಅಧ್ಯಕ್ಷ ಅಕ್ಬರ್ ಒತ್ತಯಾ
ಬೆಳ್ತಂಗಡಿ; ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಂದ ಕೋಮು ಪ್ರಚೋದನಕಾರಿ ಭಾಷಣ ಮಾಡಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ತೀವ್ರವಾಗಿ ಖಂಡಿಸಿದ್ದಾರೆ.ತೆಕ್ಕಾರಿನ ಕಂಟ್ರಿ ಬ್ಯಾರಿಗಳು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹಾಕಿದ ಟ್ಯೂಬ್ ಲೈಟನ್ನು ಹೊಡೆದು ಹಾಕುತ್ತಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ಊರಿನ ಮುಸ್ಲಿಮರ ವಿರುದ್ದ ಅವಹೇಳನಕಾರಿ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಘಟನೆ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ನಡೆದಿದೆ. ಪ್ರಚೋದನಕಾರಿ ಭಾಷಣವನ್ನೆ ತನ್ನ ರಾಜಕೀಯ ಬಂಡವಾಳವನ್ನಾಗಿ ಉಪಯೋಗಿಸುವ ಶಾಸಕ ಹರೀಶ್...
ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ – ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ
ಕೊಕ್ಕಡ; ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ದೇವರ ಪ್ರಸಾದ ನೀಡಿ ಆಶೀರ್ವಾದ ಮಾಡಿದರು.ಈ ಸಂದರ್ಭ ಮಾಜಿ ಎಂಎಲ್ ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾಂಗ್ರೆಸ್ ಮುಖಂಡರಾದ ವಿಶ್ವನಾಥ ಕೊಲ್ಲಾಜೆ, ದಯಾನೀಶ್, ಗಣೇಶ್ ಕಾಶಿ...
ಧರ್ಮಸ್ಥಳ; ಹತ್ತನೇ ತರಗತಿ ವಿಧ್ಯಾರ್ಥಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಹತ್ತನೇ ತರಗತಿಯ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಬಾಲಕ ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16ವ) ಎಂಬಾತನಾಗಿದ್ದಾನೆ.ಮೇ 4 ಭಾನುವಾರದು ಮಧ್ಯಾಹ್ನದ ವೇಳೆ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸಮಾಜಿಕಜಾಲತಾಣದಲ್ಲಿ ಕೋಮುಪ್ರಚೋದನೆ ಯುವಕನ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ. ಧನುಷ್, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ ಧಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ದಿನಾಂಕ:04-05-2025 ರಂದು ಆತನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1) (A), 353(1)(C) BNS-2023 3 ರಂತೆ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ 163 ಸೆಕ್ಷನ್ ಇರುವಾಗಲೇ ದ್ವೇಷ ಭಾಷಣ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು
ಉಪ್ಪಿನಂಗಡಿ: ತೆಕ್ಕಾರಿನ ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜ ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ಷೇಷ ಭಾಷಣವನ್ನು ಮಾಡಿದ್ದಾರೆ ಎಂದು ಆರೋಪಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು ಪೊಲೀಸರು ಶಾಸಕ ಹರೀಶ್ ಪೂಂಜವಿರುದ್ದ ಪ್ರಕರಣದಾಖಲಿಸಿಕೊಂಡಿದ್ದಾರೆ.ದ್ವೇಷ ಭಾಷಣ ಸಂಬಂಧ ಸ್ಥಳೀಯ ಮುಸ್ಲಿಂ ಮುಖಂಡ ಎಸ್ ಎಂ ಎಸ್ ಇಬ್ರಾಹಿಂ ಮುಸ್ಲಯಾರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು, ದೂರಿನ ಅನ್ವಯಬಿಎನ್ ಎಸ್ ಕಾಯ್ದೆ ಕಲಂ 196, 353(2) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ತೆಕ್ಕಾರು...
ಸುಹಾಸ್ ಕೊಲೆ ಪ್ರಕರಣ; ಫಾಜಿಲ್ ಸಹೋದರ ಸೇರಿ ಎಂಟು ಮಂದಿ ಬಂಧನ
ಮಂಗಳೂರು: ಬಜಪೆಯ ಸುಹಾಸ್ ಶೆಟ್ಟಿ ಕೊಲೆಗೆ ಈ ಹಿಂದೆ ಹತ್ಯೆಯಾಗಿದ್ದ ಫಾಜಿಲ್‌ನ ಸಹೋದರ ಸಹಾಯ ಮಾಡಿದ್ದ ಎಂಬ ವಿಚಾರವನ್ನು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬಹಿರಂಗಪಡಿಸಿದ್ದಾರೆ. ಮೇ 1ರ ರಾತ್ರಿ ಆರು ಜನ ಸೇರಿ ಸುಹಾಸ್ ಶೆಟ್ಟಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಹತ್ಯೆಯ ಪ್ರಮುಖ ಆರೋಪಿ ಸಫ್ವಾನ್. ಆತನ ಮೇಲೆ 2023ರಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು, ಇದರ ಪ್ರತೀಕಾರಕ್ಕೆ ಫಾಜಿಲ್ ನ ತಮ್ಮನ ಸಹಾಯ ಪಡೆದು ಸುಹಾಸ್ ನ ಕೊಲೆ ಮಾಡಿದ್ದ ಎಂದರು. ಪೇಜಾವರ ಶಾಂತಿಗುಡ್ಡೆ ನಿವಾಸಿ, ಬಜಪೆ ಕಿನ್ನಿಪದವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಡ್ರೈವರ್...
ನಂದ ಸ್ಟುಡಿಯೋ ಮಾಲಕ ನಂದಕುಮಾರ್ ನಿಧನ
ಉಜಿರೆ : ಉಜಿರೆ ನಂದ ಸ್ಟುಡಿಯೋ ಮಾಲಕ ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ (52 ವರ್ಷ )ಅಲ್ಪ ಕಾಲದ ಅಸೌಖ್ಯದಿಂದ ಮೇ 3 ರಂದು ನಿಧನರಾದರು. ಇವರು ಉಜಿರೆ ಹಳೆಪೇಟೆ ನಿವಾಸಿ ಯಾಗಿದ್ದು ಕಳೆದ ಕೆಲವು ವರ್ಷದ ಹಿಂದೆ ಉಜಿರೆ ಬಾಕ್ರೋಟ್ಟು ಎಂಬಲ್ಲಿ ಮನೆ ಕಟ್ಟಿ ವಾಸವಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಬೆಳ್ತಂಗಡಿ: ತಾಲೂಕಿನಲ್ಲಿ ಬಂದ್ ಗೆ ಜನಜೀವನ ಅಸ್ತವ್ಯಸ್ತ, ಬಸ್ಸಿಗೆ ಕಲ್ಲು, ಟಯರ್ ಗೆ ಬೆಂಕಿ
ಬೆಳ್ತಂಗಡಿ; ತಾಲೂಕಿನಲ್ಲಿ ಬಂದ್ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ತಾಲೂಕಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಿದ್ದು ಖಾಸಗಿ ವಾಹನಗಳು ಎಂದಿನಂತೆ ಓಡಾಟ ನಡೆಸಿದವು.ತಾಲೂಕಿನಲ್ಲಿ ಹಲವೆಡೆ ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಬಂದ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಕಕ್ಕಿಂಜೆ, ಮುಂಡಾಜೆ, ಹಾಗೂ ಗೇರುಕಟ್ಟೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿದ್ದಾರೆ.ಬಸ್ಸಿಗೆ ಕಲ್ಲು;ಗುರುವಾಯನಕೆರೆ ಜೈನ್ ಪೇಟೆ ಸಮೀಪ ಖಾಸಗಿ ಬಸ್ಸಿಗೆ ಕಲ್ಲು ಹೊಡೆಯಲಾಗಿದ್ದು ಬಸ್ಸಿನ ಮುಂದಿನ ಗಾಜು ಸಂಪೂರ್ಣ ಒಡೆದು ಹೋಗಿದೆ.ಉಳಿದಂತೆ ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ, ಮಡಂತ್ಯಾರು, ಅಳದಂಗಡಿ, ಕೊಕ್ಕಡ ಧರ್ಮಸ್ಥಳ ಸೇರಿದಂತೆ ಬಹುತೇಕ ಪ್ರದೇಶ...















