ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಒತ್ತಯಾ
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲಿಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್ ಆಗ್ರಹಿಸಿದ್ದಾರೆ.ರಾತ್ರಿ ಹೊತ್ತು ತನ್ನ ಸ್ನೇಹಿತರ ಜೊತೆ ಬರುತ್ತಿದ್ದ ಸುಹಾಸ್ ಶೆಟ್ಟಿಯವರನ್ನು ದುಷ್ಕರ್ಮಿಗಳ ತಂಡ ರಸ್ತೆಯಲ್ಲಿ ಮಾರಾಕಾಯುಧಗಳಿಂದ ಹಲ್ಲೆ ನಡೆಸಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಒಬ್ಬ ಹಿಂದೂ ಕಾರ್ಯಕರ್ತನನ್ನು ವಿನಾಕಾರಣ ಹತ್ಯೆ ಮಾಡಿರುವಂತಹದ್ದು ಖಂಡಿತ ಹಿಂದೂ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಎನ್.ಐ.ಎ ಗೆ ಒಪ್ಪಿಸಿ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯಕ್ಕೆ ನೇರ ಪೊಲೀಸ್ ಇಲಾಖೆ ಹಾಗೂ ಕಾಂಗ್ರೆಸ್ ಸರ್ಕಾರ ಕಾರಣ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಒತ್ತಾಯಿಸಿದ್ದಾರೆ. ಸುಹಾಸ್ ಮತ್ತು ಸಂಗಡಿಗರ ವಾಹನವನ್ನು ಪ್ರತೀ ನಿತ್ಯ ತಪಾಸಣೆಯನ್ನು ಮಾಡಿ, ಅವರಲ್ಲಿ ಯಾವುದೇ ರೀತಿಯಾದಂತಹ ಆತ್ಮ ರಕ್ಷಣೆಗಾಗಿ ಬೇಕಾದಂತಹ ವಸ್ತುವನ್ನು ಇಡದ ರೀತಿಯಲ್ಲಿ ಪೊಲೀಸ್ ಇಲಾಖೆ ಕಳೆದ ಒಂದು ತಿಂಗಳಿನಿಂದ...
ಮಂಗಳೂರು: ಜಿಲ್ಲೆಯಲ್ಲಿ ಮದ್ಯದಂಗಡಿಗಳು ಬಂದ್; ಜಿಲಾಧಿಕಾರಿ ಆದೇಶ
ಸುಹಾಸ್ ಶೆಟ್ಟಿ ಕೊಲೆ ಹ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 3ರ ಬೆಳಗ್ಗೆ 6 ಗಂಟೆಯ ವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಕೊಲೆಯಾದ ಸುಹಾಸ್ ಶೆಟ್ಟಿ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿದ್ದಾರೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದೆ. ಆದ್ದರಿಂದ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು...
ಕೊಲೆ ಸಮರ್ಥನೀ ಯವೂ ಅಲ್ಲ, ಅನುಕರಣೀಯವೂ ಅಲ್ಲ. ರಕ್ಷಿತ್ ಶಿವರಾಂ
ಬೆಳ್ತಂಗಡಿ. ಮಂಗಳೂರಿನ ಬಜ್ಪೆ ಪಟ್ಟಣದಲ್ಲಿ ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು,ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕೆಪಿಸಿಸಿ ಪ್ರಾಧನಾ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಮೇ5ರ ವರೆಗೆ ನಿಷೇಧಾಜ್ಞೆ ; ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ; ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಮದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 5 ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ಪದಗ್ರಹಣ ಸಮಾರಂಭ ದ ಆಮಂತ್ರಣ ಪತ್ರಿಕೆ ಬಿಡುಗಡೆ.
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ಪದಗ್ರಹಣ ಸಮಾರಂಭ, ಆಂಬುಲೆನ್ಸ್ ಲೋಕಾರ್ಪಣೆ, ಆಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಬೆಳ್ತಂಗಡಿಯು ಸಿವಿಸಿ ಹಾಲ್ನಲ್ಲಿ ನಡೆಯಿತು.ಈ ಪದಗ್ರಹಣ ಸಮಾರಂಭದಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠ, ಕಾವೂರು ಮಂಗಳೂರು ಇವರು ದೀಪಪ್ರಜ್ವಲನೆ ಮಾಡಿ ಆಶೀರ್ವಚನವನ್ನು ನೀಡಲಿದ್ದಾರೆ. ಒಕ್ಕಲಿಗ ಗೌಡ ಸಮಾಜದ ಅನೇಕ ಗಣ್ಯಾತಿಗಣ್ಯರು ಅಥಿತಿಗಳಾಗಿ ಭಾಗವಹಿಸಲಿದ್ದಾರೆ.ಸಮಾರಂಭ ಮೇ 25 ನೇ ತಾರೀಕು ಆದಿತ್ಯವಾರ ಬೆಳ್ತಂಗಡಿಯ ಶ್ರೀ...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಶುಕ್ರವಾರ ಜಿಲ್ಲಾ ಬಂದ್
ಮಂಗಳೂರು: ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ. ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಅವರು ಸುಹಾಸ್ ಶೆಟ್ಟಿ ಹಾಗೂ ಇತರ ಐದು ಜನ ಕಾರ್ಯಕರ್ತರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಪೂರ್ವ ಯೋಜಿತವಾಗಿ ದಾಳಿ ನಡೆಸಿ ಸುಹಾಸ್ ಅವರನ್ನು ಕೊಲೆ ಮಾಡಿದ್ದಾರೆ. ಇದರ ಹಿಂದೆ ನಿಷೇಧಿತ ಸಂಘಟನೆ ಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮಂಗಳೂರು; ತಲವಾರಿನಿಂದ ಕಡಿದು ಯುವಕನ ಭೀಕರ ಕೊಲೆ
ಮಂಗಳೂರು: ಸುರತ್ಕಲ್ ನ ಮಹಮ್ಮದ್ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಸಾರ್ವಜನಿಕರ ಎದುರೇ ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬಜ್ಜೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.ಲಭ್ಯ ಮಾಹಿತಿಗಳ ಪ್ರಕಾರ ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕಪ್ ಮತ್ತು ಸುಹಾಸ್ ಶೆಟ್ಟಿಯ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರು ಸಮೀಪದ ಅಂಗಡಿಗೆ ನುಗ್ಗಿತ್ತು. ಬಳಿಕ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ ಇದಾದ ಬಳಿಕ ಹೊಡೆದಾಟ ನಡೆದಿರುವುದಾಗಿ ಹೇಳಲಾಗಿದೆ. ಇದೇವೇಳೆ ನಾಲ್ವರು...
ಬೆಳ್ತಂಗಡಿ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ದಿನಾಚರಣೆ
ಬೆಳ್ತಂಗಡಿ; ಕಾರ್ಮಿಕರು ಒಂದಿ ದಿನವನ್ನು 8 ಗಂಟೆ ಕೆಲಸ, 8 ಗಂಟೆ ಮನೋರಂಜನೆ, 8 ಗಂಟೆ ವಿಶ್ರಾಂತಿ ಎಂಬ ಮೂರು ವಿಬಾಗ ಮಾಡಿಸುವ ಬೇಡಿಕೆಯೊಂದಿಗೆ ತ್ಯಾಗಬಲಿದಾನಗಳಿಂದ ಹೋರಾಡಿ ಗೆದ್ದ ದಿನವೇ ಮೇ ದಿನ. ಅದುವೇ ಕಾರ್ಮಿಕರ ದಿನ ಹೋರಾಟದ ಮೂಲಕ ಗೆದ್ದ ಈ ಅವಕಾಶಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು ಇದರ ವಿರುದ್ದ ಕಾರ್ಮಿಕರು ಸಂಘಟಿತರಾಗಬೇಕಾದ ಅಗತ್ಯವಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು ಹೇಳಿದರು.ಬೆಳ್ತಂಗಡಿಯ ಮಿನಿ ವಿಧಾನ ಸೌಧ ಎದುರು ಸಿಐಟಿಯು ನೇತೃತ್ವದಲ್ಲಿ ನಡೆದ ಮೇ ದಿನಾಚರಣೆಯ ರ‍್ಯಾಲಿಯನ್ನು ಉದ್ಘಾಟಿಸಿ...
ಬೆಳ್ತಂಗಡಿ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿಯಿಂದ ಸಭೆ; ಮೇ 9 ಕ್ಕೆ ಪ್ರಮುಖ ಸಾದಾತುಗಳ ಹಾಗೂ ಉಮರಾ ನಾಯಕರ ನೇತೃತ್ವದಲ್ಲಿ ಪ್ರತಿಭಟನಾ ಸಭೆಗೆ ನಿರ್ಧಾರ. ಪೋಸ್ಟರ್ ಬಿಡುಗಡೆ
ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಬೆಳ್ತಂಗಡಿಯಲ್ಲಿ ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ 2025 ನೇ ಮೇ 9 ರಂದು ಶುಕ್ರವಾರ ಮದ್ಯಾಹ್ನ 2:30 ಗಂಟೆಗೆ ಬೆಳ್ತಂಗಡಿಯ ಬಸ್ಸು ನಿಲ್ದಾಣದ ಬಳಿಯಲ್ಲಿ ಶಾಂತಿಯುತ ಪ್ರತಿಭಟನಾ ಸಭೆಯನ್ನು ಪ್ರಮುಖ ಸಾದಾತುಗಳ ಮತ್ತು ಉಮರಾ ನಾಯಕರ ನೇತೃತ್ವದಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು. ಕಳೆದ ಸಭೆಯಲ್ಲಿ ತೀರ್ಮಾನಿಸಿದಂತೆ ಪ್ರಮುಖ ಸಾದಾತುಗಳನ್ನು ಬೇಟಿ ಮಾಡಿದ ಬಗ್ಗೆ ಮತ್ತು ತಾಲೂಕಿನಲ್ಲಿ ಪ್ರಸಕ್ತ ನಡೆಯುತ್ತಿರುವ ವಿವಿದ ಪ್ರಕರಣಗಳ ಬಗ್ಗೆ ಸಮುದಾಯವನ್ನು ಟಾರ್ಗೆಟ್ ಮಾಡಿ ಶಾಂತಿ ಭಂಗದಂತಹ ಘಟನೆಗಳನ್ನು ಪೋಲಿಸ್...















