ಬೆಳ್ತಂಗಡಿ : ಕೋಳಿ ಅಂಕದ ಮೇಲೆ ವೇಣೂರು ಪೊಲೀಸರ ದಾಳಿ 17 ವಾಹನಗಳು ವಶಕ್ಕೆ 27 ಮಂದಿ ವಿರುದ್ದ ಪ್ರಕರಣ ದಾಖಲು

0

ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ, ನಾಲ್ಕು ಹುಂಜ ಕೋಳಿಗಳು ಹಾಗೂ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಕಿರಿಂಬಿ ಎಂಬಲ್ಲಿ ನಡೆದಿದೆ. ವೇಣೂರು ಠಾಣೆ ಪಿಎಸ್‌ಐ ಅಕ್ಷಯ್ ಡವಗಿ ಅವರು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪಿನಲ್ಲಿ ಕರಿಮಣೇಲು, ಹೊಸಂಗಡಿ, ಬಡಕೋಡಿ ಭಾಗದಲ್ಲಿ ಸೆ.20 ರಂದು ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಬೀಟ್ ಸಿಬ್ಬಂದಿ ಪುಂಡಲಿಕಪ್ಪ ಅವರಿಗೆ ಬಡಕೋಡಿ ಗ್ರಾಮದ ಕಿರಿಂಬಿ ಬಳಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ...

ಸೌಜನ್ಯ ಪ್ರಕರಣ ಮರುತನಿಖೆ ಸುಪ್ರೀಂ ಕೋರ್ಟ್ ಆದೇಶ ಶ್ರೀಕ್ಷೇತ್ರ ಧರ್ಮಸ್ಥಳದಿಂದ ತನಿಖೆಗೆ ಸ್ವಾಗತ

0

ಬೆಳ್ತಂಗಡಿ : ಸರ್ವೋಚ್ಚ ನ್ಯಾಯಾಲಯ ಕು. ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ.ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ...

ಬೆಳ್ತಂಗಡಿ; ತೆರೆದ ಬಾವಿಗೆ ಬಿದ್ದ ಚಿರತೆಯ ರಕ್ಷಣೆ

0

ಬೆಳ್ತಂಗಡಿ: ತಾಲೂಕಿನ ಕರಿಮಣೇಲು ಗ್ರಾಮದ ಬಕ್ಯರಡ್ಡ ನಿವಾಸಿ ಅಶೋಕ ಪೂಜಾರಿ ಅವರಿಗೆ ಸೇರಿದ ತೆರೆದ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಸುಮಾರು 30 ಅಡಿ ಆಳವಿರುವ ಬಾವಿಯಲ್ಲಿ ಸುಮಾರು 6 ಅಡಿ ನೀರಿದ್ದು, ಆಹಾರ ಅರಸಿ ಸಂಚರಿಸುತ್ತಿದ್ದ ವೇಳೆ ಚಿರತೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿತ್ತು. ಈ ವಿಚಾರ ಸೋಮವಾರ ಬೆಳಿಗ್ಗೆ ಮನೆಯವರ ಗಮನಕ್ಕೆ ಬಂದಿತ್ತು. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಕುಂದಾಪುರ ವಿಭಾಗದ ಡಿಎಫ್‌ ಒ ರುತ್ರನ್ ಹಾಗೂ ಮೂಡುಬಿದಿರೆ ಎಸಿಎಫ್...

ಬೆಳ್ತಂಗಡಿ : ಕಾಡುಹಂದಿ ಬೇಟೆಯಾಡಿ ಮಾಂಸ ದಾಸ್ತಾನು- ಓರ್ವ ಆರೋಪಿ ಬಂಧನ

0

ಬೆಳ್ತಂಗಡಿ: ನೆರಿಯ ಗ್ರಾಮದ ಮುಚ್ಚರಾಳಿ ಎಂಬಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮಾಂಸ ಮಾಡಿ ಮನೆಯ ಫ್ರೀಜ್ಜ್ ನಲ್ಲಿ ದಾಸ್ತಾನು ಮಾಡಿಟ್ಟಿದ್ದ ಪ್ರಕರಣವನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಪತ್ತೆಹಚ್ಚಿದೆ. ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಸೆ.20 ರಂದು ಮಧ್ಯಾಹ್ನ ಸುಮಾರು 2:30 ರ ಸಮಯಕ್ಕೆ ನಡೆಸಿದ ಕಾರ್ಯಾಚರಣೆಯಲ್ಲಿ ಕಾಡುಹಂದಿ ಬೇಟೆಯಾಡಿದ ಆರೋಪದ ಮೇಲೆ ನೆರಿಯ ಗ್ರಾಮದ ಮುಚ್ಚಳ್ಳಿ ನಿವಾಸಿಕುಕ್ಕಪ್ಪ ಗೌಡ ಮಗ ಸುರೇಶ್ ಎಂ.ಕೆ. (38) ಎಂಬಾತನನ್ನು ಬಂಧನ ಮಾಡಲಾಗಿದೆ. ಬೇಟೆ ಮಾಡಿದ 6 ಕೆ.ಜಿ 100 ಗ್ರಾಂ ಕಾಡುಹಂದಿ ಮಾಂಸ, ಒಂದು ಕೋವಿ, ಕತ್ತಿ, ತೂಕ...

ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

0

ಹೊಸದಿಲ್ಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ. ಪ್ರಕರಣ ನಡೆದು 14 ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಒಂದು ಮಹತ್ವದ ಬೆಳವಣಿಗೆಯಾಗಿದೆ. 2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆಗೀಡಾಗಿದ್ದರು. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ...

ವೇಣೂರು: ಶಾಸಕ ಹರೀಶ್ ಪೂಂಜರಿಂದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ, ಸಾರ್ವಜನಿಕ ರಿಕ್ಷಾ ತಂಗುದಾಣದ ಉದ್ಘಾಟನೆ

0

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ ವಿಶೇಷ ಅನುದಾನಗಳಡಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ನೆರವೇರಿಸಿದರು. ವೇಣೂರು ಸ್ವಸ್ತಿಕ ನಗರದಲ್ಲಿ ರೂ. ೨.೩೦ ಲಕ್ಷ ಮತ್ತು ಬಜಿರೆ ಗ್ರಾಮದ ಮುದ್ದಾಡಿ ಬಳಿ ರೂ. ೧.೭೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರಿಟ್ ರಸ್ತೆಗೆ ಶಿಲಾನ್ಯಾಸ ಮತ್ತು ಬಜಿರೆಯ ಮುದ್ದಾಡಿಯಲ್ಲಿ ರೂ. ೧.೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಾರ್ವಜನಿಕ ರಿಕ್ಷಾ ತಂಗುದಾಣದ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ಸುರೇಶ್ ಆರಿಗ ಪೆರ್ಮಾಣುಗುತ್ತು, ಉದ್ಯಮಿ...

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

0

ಬೆಳ್ತಂಗಡಿ : ಗುಂಡೂರಿ ಗ್ರಾಮದ ಕಜೆ, ಸಜಂಕಬೆಟ್ಟು ಪಲ್ಗುಣಿ ನದಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವೇಣೂರು ಠಾಣೆ ಪಿಎಸ್‌ಐ ಅಕ್ಷಯ್ ಡವಗಿ ಅವರು ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪಿನಲ್ಲಿ ಹೊಸಂಗಡಿ, ಆರಂಬೋಡಿ ಹಾಗೂ ಪಡ್ಯಾರಬೆಟ್ಟು ಭಾಗಗಳಲ್ಲಿ ಸೆ.12ರಂದು ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ಪಲ್ಗುಣಿ ನದಿಯಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.ಮಾಹಿತಿ ಆಧರಿಸಿ ಪೊಲೀಸರು ಪಂಚರೊಂದಿಗೆ ಸಂಜೆ 4...

ಶೇಖರ ಕುಕ್ಕೇಡಿ ರಾಜೀನಾಮೆ ಹಿಂಪಡೆಯಲು ಮುಖಂಡರುಗಳ ಒತ್ತಡ ಮನವೊಲಿಕೆಗೆ ಯತ್ನ

0

ಬೆಳ್ತಂಗಡಿ;  ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಸೇರಿದಂತೆ ದಲಿತ , ಆದಿವಾಸಿ ಸಮುದಾಯದ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷದ ಮುಖಂಡರು ಸೇರಿದಂತೆ ಸಚಿವರುಗಳು ರಾಜೀನಾಮೆ ನಿರ್ಧಾರದಲ್ಲಿ ಮುಂದುವರಿದ ವರಿಯದಂತೆ ಒತ್ತಡ ಹೇರುತ್ತಿದ್ದಾರೆ. ಕಳೆದ ಎರಡುವರೆ ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ , ಜಿಲ್ಲಾ ಪಂಚಾಯತ್ ಸದಸ್ಯರಾಗಿ , ಗ್ಯಾರಂಟಿ...

ಪೋಕ್ಸೋ ಪ್ರಕರಣ ಗುರುವಾಯನಕೆರೆಯ ಅಬ್ದುಲ್ ಲತೀಫ್ ಗೆ  20 ವರ್ಷ ಕಠಿಣ ಶಿಕ್ಷೆ

0

ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್‌ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80,000 ದಂಡ ವಿಧಿಸಿ ಮಂಗಳೂರಿನ FTSC-2 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 141/2025ರ ಪ್ರಕರಣದಲ್ಲಿ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಸೆ.19ರಂದು ಶಿಕ್ಷೆ ಪ್ರಕಟಿಸಿದರು.ಸರ್ಕಾರಿ ಅಭಿಯೋಜಕಿ...

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜೀನಾಮೆ ನೀಡಿದ ಶೇಖರ ಕುಕ್ಕೇಡಿ

0

ಬಳ್ತಂಗಡಿ; ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ದ.ಕ ಜಿಲ್ಲೆಯ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಸ್ಥಾನಕ್ಕೆ ಜಿ.ಪಂ. ಮಾಜಿ ಸದಸ್ಯ ಸದಸ್ಯ ಶೇಖರ ಕುಕ್ಕೇಡಿ ರಾಜೀನಾಮೆ ನೀಡಿದ್ದಾರೆ.ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್‌ ಆ‌ರ್. ಪೂಜಾರಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಎರಡುವರೆ ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಕಳೆದ 3 ದಶಕಗಳಿಂದ ಡಿಸಿ ಮನ್ನಾ ಜಮೀನು ಅರ್ಹ ಫಲಾನುಭವಿಗಳಿಗೆ ಹಂಚಿಕೆಗಾಗಿ ಹೋರಾಟ ಸಂಘಟಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯ ಕಾಂಗ್ರೆಸ್...