ಬೆಂಗಳೂರಿನಲ್ಲಿ ಅಪಘಾತ; ಬೆಳ್ತಂಗಡಿಯ ಯುವಕ ಮೃತ್ಯು
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.ತುಷಾರ್ ರವರು ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.
ಬೆಳ್ತಂಗಡಿ : ಧರ್ಮಸ್ಥಳ ಅಜಿಕುರಿ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆ ದಾಳಿ; ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಬೆಳಗ್ಗೆ ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆ ನಡೆಯುತ್ತಿರುವುದು ಕಂಡುಬಂದಿದ್ದು ಮರಳುಗಾರಿಕೆಗೆ ಬಳಸಲಾಗುತ್ತಿದ್ದ ನಾಲ್ಕು ಬೋಟುಗಳನ್ನು ವಶಕ್ಕೆ ಪಡೆದಿದ್ದು ಇವುಗಳ ಮೌಲ್ಯ 6 ಲಕ್ಷ ರೂ ಅಗಿದ್ದು.ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ 25,000...
ಸೌತಡ್ಕ ದೇವಸ್ಥಾನಕ್ಕೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟಿಗೂ ಸಂಬಂಧವಿಲ್ಲ; ಟ್ರಸ್ಟ್ ಕಾನೂನು ಬದ್ದವಾಗಿ ಕಾರ್ಯನಿರ್ವಹಿಸುತ್ತಿದೆ ಅಧ್ಯಕ್ಷರಿಂದ ಸ್ಪಷ್ಟನೆ
ಬೆಳ್ತಂಗಡಿ; ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಕಾನೂನು ಬದ್ದವಾಗಿ ಕಾರ್ಯ ನಿರ್ವಹಿಸುತ್ತಿದೆ. ಟ್ರಸ್ಟ್ ಹಾಗೂ ದೇವಸ್ಥಾನಕ್ಕೆ ಯಾವುದೇ ಸಂಬಂಧವಿಲ್ಲ. ಟ್ರಸ್ಟ್ ನ ಆದಾಯವನ್ನು ಅದರ ರಚನೆಯ ಮೂಲ ಉದ್ದೇಶದಂತೆ ವ್ಯಯ ಮಾಡಲಾಗುತ್ತಿದೆ. ಟ್ರಸ್ಟಿಗೆ ಮೂವರು ವ್ಯಕ್ತಿಗಳು ಟ್ರಸ್ಟ್ ಡೀಡ್ ಬರೆದು ಕೊಟ್ಟ ಜಮೀನನ್ನು ಟ್ರಸ್ಟ್ ಉಪಯೋಗಿಸುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಮಾಹಿತಿ ನೀಡಿದರು. ಬೆಳ್ತಂಗಡಿ ಯಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಮಿತಿಯ ಹೆಸರಿನಲ್ಲಿ ಟ್ರಸ್ಟಿನ ಮೇಲೆ ಹಲವಾರು ಆರೋಪಗಳನ್ನು ಮಾಡುತ್ತಿದ್ದು ಅದು...
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿಕನ್ನಡ ರಾಜ್ಯೋತ್ಸವ - 2024ವಿವಿಧ ಕ್ಷೇತ್ರದ ಗಣ್ಯರಿಗೆ ಮತ್ತು ಜಿಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷರಾದ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂಟು ಮಂದಿ ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದ್ದು,...
ಕಕ್ಕಿಂಜೆ; ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ಬುಧವಾರ ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು.ಸ್ಥಳೀಯರು ಲಾರಿಯನ್ನು ರಸ್ತೆಯಿಂದ ಸ್ಥಳಾಂತರಿಸಲು ಸಹಕರಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.
ವಿಷ ಸೇವಿಸಿ ವಿದ್ಯಾರ್ಥಿ ನಿ ಆತ್ಮಹತ್ಯೆ
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ - ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ'ಸೋಜ(19) ಮೃತಪಟ್ಟ ಯುವತಿ. ಪ್ರಿಯಾಂಕ 8 ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನ.5ರಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ...
ಭಜನೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಭಜನಾ ಪರಿಷತ್ ನೇತೃತ್ವದಲ್ಲಿ ಭಜಕರ ಸಮಾವೇಶ, ಕ್ರಮಕ್ಕೆ ಒತ್ತಾಯ
ಬೆಳ್ತಂಗಡಿ : ಭಜನಾ ಪರಿಷತ್ ಬೆಳ್ತಂಗಡಿ,ಕುಣಿತ ಭಜನಾ ತರಬೇತಿದಾರರ ಸಂಘ, ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನ ಬಳಿಯಿಂದ ಖಂಡನಾ ಮೆರವಣಿಗೆ ಮತ್ತು ಬೆಳ್ತಂಗಡಿ ಆಡಳಿತ ಸೌಧದ ಆವರಣದಲ್ಲಿ ಭಜಕರ ಸಮಾವೇಶವು ನ.4 ರಂದು ನಡೆಯಿತು.ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸುಬ್ರಹ್ಮಣ್ಯ ಅಗರ್ತ, ಧನಂಜಯ ರಾವ್ ಬಿ.ಕೆ, ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಗಿರಿಜ ಭಟ್ ಮಾತನಾಡಿ, ಭಜಕರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವ...
ಲಾಯಿಲ ನಿವಾಸಿ ಯುವಕ ಆತ್ಮಹತ್ಯೆ
ಬೆಳ್ತಂಗಡಿ; ಮೀನು ವ್ಯಾಪಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಾಯಿಲದಲ್ಲಿ ನಡೆದಿದೆ.ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆ
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆಯಾದ ಘಟನೆ ಭಾನುವಾರದಂದು ನಡೆದಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ಭಾನುವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿದೆ.ಮೃತ ದಂಪತಿಗಳನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61) ಈಶ್ವರಮ್ಮ (52) ಎಂದು ಗುರುತಿಸಲಾಗಿದೆ.ಅಕ್ಟೋಬರ್ 31 ರಂದು ದಂಪತಿಗಳು ಮನೆಯಿಂದ ನಾಪತ್ತೆಯಾಗಿದ್ದು. ಈ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹುಡುಕಿಕೊಂಡು ಧರ್ಮಸ್ಥಳಕ್ಕೆ ಬಂದಿದ್ದಾರೆ. ಇವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ ಶೌರ್ಯ...
ಭಾರೀ ಮಳೆಗೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ
ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಕಕ್ಕಿಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.ಮನೆ ಕುಸಿದ ವೇಳೆ ಮನೆಯವರು ಯಾರೂ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಮನೆ ಬಹುತೇಕ ಕುಸಿದು ಬಿದ್ದಿದೆ















