ಮಲವಂತಿಗೆ ಕಾಡಾನೆ ದಾಳಿ ನೂರಾರು ಅಡಿಕೆ ಮರಗಳು ನಾಶ

0

ಬೆಳ್ತಂಗಡಿ; ಮಲವಂತಿಗೆ ಗ್ರಾಮದ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕಾಡಾನೆಗಳ ಹಿಂಡು ಓಡಾಟ ನಡೆಸಿದ್ದು ವ್ಯಾಪಕವಾಗಿ ಕೃಷಿಗೆ ಹಾನಿಯುಂಟಾಗಿದೆ,ಆನೆಗಳು ಇಲ್ಲಿನ ನಿವಾಸಿ ಸದಾಶಿವ ಮಲೆಕುಡಿಯ ಎಂಬವರ ತೋಟಕ್ಕೆ ನುಗ್ಗಿದ್ದು ಸುಮಾರು 150 ಅಡಿಕೆ ಮರಗಳನ್ನು ಸಂಪೂರ್ಣವಾಗಿ ಮುರಿದು ಹಾಕಿದೆ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ಕಾಡಾನೆಗಳು ನೆಲಕ್ಕೆ ಉರುಳಿಸಿದೆ. ಇವರದ್ದೇ ಸುಮಾರು ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣವಾಗಿ ನಶಗೊಳಿಸಿದ್ದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ. ಆರಕ್ಕೂ...

ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ಶಿಕ್ಷಣಭೀಷ್ಮ ಪ್ರಶಸ್ತಿಯ ಗರಿ

0

ಬೆಳ್ತಂಗಡಿ; ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕುಂಭಶ್ರೀ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ರಾಷ್ಟ್ರೀಯ ವಿದ್ಯಾ ಗೌರವ್ ಚಿನ್ನದ ಪದಕ ಪ್ರಶಸ್ತಿ, ಪ್ರಬುದ್ಧ ಭಾರತ, ಸ್ಟಾರ್ ಆಫ್ ಏಷ್ಯಾ ಪ್ರಶಸ್ತಿಗಳು ಲಭಿಸಿವೆ. ಇದೀಗ ಕುಂಭಶ್ರೀ ವಿದ್ಯಾ ಸಂಸ್ಥೆ ಇಡೀ ಕರ್ನಾಟಕ ರಾಜ್ಯದಲ್ಲಿ ಬೆಳ್ತಂಗಡಿ ತಾಲೂಕಿನ ಅತ್ಯುತ್ತಮ ಶಾಲೆ ಎಂದು ಗುರುತಿಸಲ್ಪಟ್ಟು...

ಬದುಕು ಕಟ್ಟೋಣ ಬನ್ನಿ ತಂಡದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳ‌ ಭಾಗವಹಿಸುವಿಕೆಯಲ್ಲಿ ನೇಜಿ ನಾಟಿ ಕಾರ್ಯ

0

ಬೆಳ್ತಂಗಡಿ : ‘ಕೃಷಿ ನಮ್ಮ ಸಂಸ್ಕೃತಿ. ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ ಯಶೋವರ್ಮ ಹೇಳಿದರು. ಅವರು ಭಾನುವಾರ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ( ಸ್ವಾಯತ್ತ) ಉಜಿರೆ ಇದರ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್...

ಅ 31 ಬೆಳ್ತಂಗಡಿಯಲ್ಲಿ ದೋಸೆ ಹಬ್ಬ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ

0

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 31 ಗುರುವಾರ ದಂದು ನಡೆಯುವ5 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ ಪಕ್ಷದ ಕಚೇರಿಯಲ್ಲಿ ನಡೆಯಿತು.ಶಾಸಕರಾದ ಹರೀಶ್ ಪೂಂಜಾರವರು ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ,...

ವಿಧಾನ ಪರಿಷತ್ ಚುನಾವಣೆಗೆ ಸಿದ್ದತೆಗಳು ಪೂರ್ಣ; ತಹಶೀಲ್ದಾರ್ ಮಾಹಿತಿ

0

ಬೆಳ್ತಂಗಡಿ ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯು ಅಕ್ಟೋಬರ್ 21 ರ ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ, ಎಂದು ಚುನಾವಣಾಧಿಕಾರಿ ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಮಾಹಿತಿ ನೀಡಿದರು. ಅವರು ಅ 20 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಚುನಾವಣಾ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಚುನಾವಣೆ ಪಾರದರ್ಶಕವಾಗಿ ನಡೆಯಬೇಕು ಎಂಬ ನಿಟ್ಟಿನಲ್ಲಿ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡಿದೆ.ಬೆಳ್ತಂಗಡಿ ತಾಲೂಕಿನಲ್ಲಿ...

ಮದ್ದಡ್ಕ ಅಕ್ರಮ ದನ ಸಾಗಾಟ ಇಬ್ಬರ ಬಂಧನ

0

ಬೆಳ್ತಂಗಡಿ; ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಎಂಬವ ರಾಗಿದ್ದಾರೆ. ಯಾವುದೇ ಪರವಾನಿಗೆಯಿಲ್ಲದೆ ಗೋ ಸಾಗಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಮಧ್ದಡ್ಕದಲ್ಲಿ ಪರಿಶೀಲನೆ ನಡೆಸಿದಾಗ ಅಕ್ರಮ ಗೋ ಸಾಗಾಟ ಬೆಳಕಿಗೆ ಬಂದಿದೆ.ಕೆ.ಎ 16 ಡಿ 6960 ನಂಬರಿನ ಗೂಡ್ಸ್ ವಾಹನದಲ್ಲಿ ಎರಡು ದನಗಳು, ಒಂದು ಕರು, ಹಾಗೂ ಒಂದು ಹೋರಿಯನ್ನು ಹಿಂಸಾತ್ಮಕವಾಗಿ ಸಗಾಟ...

ಪ್ರಾಮಾಣಿಕತೆ, ಪೂರ್ವ ಸಿದ್ಧತೆಯೊಂದಿಗೆ ಅವಕಾಶಗಳನ್ನು ಬಳಸಿ; ಅಲೆಕ್ಸ್‌ ಸಿಕ್ವೆರಾ

0

ಬೆಳ್ತಂಗಡಿ; ಶಿಬಿರ ಮತ್ತು ತರಬೇತಿಗಳು ಸಾಕಷ್ಟು ನಡೆಯುತ್ತದೆ. ಆದರೆ ಅದರ ಕೊನೆಯಲ್ಲಿ ತರಬೇತಿಯ ಮೌಲ್ಯ ಮಾಪನ ಮಾಡಿದರೆ ಅದರ ಪರಿಣಾಮವನ್ನು ತಿಳಿಸುತ್ತದೆ. ರುಡ್‌ ಸೆಟ್‌ ಸಂಸ್ಥೆಯಲ್ಲಿ ನಡೆಯುವ. ನಿಮ್ಮ ತರಬೇತಿಯ ಶಿಬಿರಾರ್ಥಿಗಳ ಅನುಭವ ಕೇಳಿದರೆ ಇಲ್ಲಿಯ ತರಬೇತಿಯ ಗುಣಮಟ್ಟ ಎಷ್ಟು ವೈಶಿಷ್ಠಪೂರ್ಣ ಎಂಬುದು ತಿಳಿಯುತ್ತದೆ ಎಂದು ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ಪ್ರಾಶುಂಪಾಲರಾದ ಪ್ರೋ. ಅಲೆಕ್ಸ್‌ ಸಿಕ್ವೆರಾ ಅಭಿಪ್ರಾಯಪಟ್ಟರು. ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 45 ದಿನಗಳ ಕಾಲ ನಡೆದೆ * ಕಂಪ್ಯೂಟರ್‌ ಡಿಸೈನ್‌- ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ,...

ಧರ್ಮಸ್ಥಳದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

0

ಬೆಳ್ತಂಗಡಿ; ಧರ್ಮಸ್ಥಳ ನೇತ್ರಾವತಿ ನದಿಯ ಸೇತುವೆಯ ಬಳಿ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಅ.18 ರಂದು ಬೆಳಿಗ್ಗೆ ನಡೆದಿದೆ. ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಮೃತ ಮಹಿಳೆಯ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಠಾಣೆಯ ನ್ನು ಸಂಪರ್ಕಿಸಲು ಕೋರಲಾಗಿದೆ.

ವಿಧಾನ ಪರಿಷತ್ ಚುನಾವಣೆ ಪಕ್ಷದ ಗೆಲುವಿಗೆ ಶ್ರಮಿಸಿ ಮಂಜುನಾಥ ಭಂಡಾರಿ

0

ಬೆಳ್ತಂಗಡಿ; ಮುಂದಿನ ವಿಧನಾ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು.ಬೆಳ್ತಂಗಡಿಯ ಸಿ.ವಿ.ಸಿ ಸಭಾಂಗಣದಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಸಮಿತಿಗಳ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಬೆಂಬಲಿತ ಚುನಾಯಿತ ಸದಸ್ಯರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಬರುತ್ತಿದ್ದು ಅದನ್ನು ಎದುರಿಸಲು ಪಕ್ಷ ಸಂಘಟಿತ ಪ್ರಯತ್ನ ನಡೆಸಬೇಕಾಗಿದೆ ಎಂದರು.ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳ ಬಗ್ಗೆ ಸಮಗ್ರವಾದ ಅನುಭವವಿರುವ ಅಭ್ಯರ್ಥಿ...

ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಿಂದ ಮತಯಾಚನೆ

0

ಬೆಳ್ತಂಗಡಿ; ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಚುನಾಯಿತ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಕಿಯೋನಿಕ್ಸ್ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಮಂಡಲ‌ ಉಪಾಧ್ಯಕ್ಷರುಗಳಾದ ಚೆನ್ನಕೇಶವ ಮುಂಡಾಜೆ, ಕೊರಗಪ್ಪ ಗೌಡ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಂಚಾಯತ್...