ಸವಣಾಲು ಕೋಳಿ ಆಂಕಕ್ಕೆ ದಾಳಿ

0

ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ಆ ವೇಳೆ ಕೋಳಿ ಅಂಕದಲ್ಲಿ ಭಾಗವಹಿಸಿದ್ದವರು ಓಡಿ ಹೋಗಿದ್ದು, ಸ್ಥಳದಲ್ಲಿದ್ದ ಕಾಲಿಗೆ ಕತ್ತಿಯನ್ನು ಕಟ್ಟಲಾಗಿದ್ದ ಎರಡು ಕೋಳಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ಇತ್ತೀಚೆಗಷ್ಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕೋಳಿ ಅಂಕಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

ವೇಣೂರಿನಲ್ಲಿ ಮಹಾ ಮಸ್ತಕಾಭಿಷೇಕ ಸಮಾಲೋಚನಾ ಸಭೆ

0

ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ ಶಾಸಕರು ಸಿದ್ದತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆ ಆಗದಂತೆ ಅಗತ್ಯಕ್ರಮ ಕೈಗೊಳ್ಳುವಂತೆ, ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸುವಂತೆ ಕುಡಿಯುವ ನೀರಿನ, ಶೌಚಾಕಯದ ವ್ಯವಸ್ಥೆ ಗಳನ್ನು ಗಮನಿಸುವಂತೆ ಆದಿಕಾರಿಗಳಿಗೆ ಅವರು ಸೂಚಿಸಿದರು. ಬೆಟ್ಟದ ಸುತ್ತಲಿನ ರಸ್ತೆಯ ಡಾಮರೀಕರಣಕ್ಕರ...

ಗುರುವಾಯನಕೆರೆಯಲ್ಲಿ ಹಾಡ ಹಗಲೇ ಕಳ್ಳತನ

0

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ.31ರಂದು ಮಧ್ಯಾಹ್ನ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಇವರ ಮನೆಯಿಂದ ಈ ಕಳ್ಳತನ ನಡೆದಿದೆ. ರಾಘವೇಂದ್ರ ಆಚಾರ್ಯ ಅವರು ಬೆಳ್ತಂಗಡಿಯಲ್ಲಿ ಚಿನ್ನಾಭರಣ ತಯಾರಿ ಕೆಲಸವನ್ನು ಮಾಡುತ್ತಿದ್ದು ಬೆಳಿಗ್ಗೆ ಅಲ್ಲಿಗೆ ಹೋಗಿದ್ದರು. ಪತ್ನಿ ಖಾಸಗಿಯಾಗಿ ಕೆಲಸಕ್ಕೆ ಹೋಗಿದ್ದು, ಮಕ್ಕಳು ಶಾಲೆಗೆ...

ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸಾಮಾನ್ಯ ಸಭೆ

0

ಬೆಳ್ತಂಗಡಿ; ಪಟ್ಟಣದ ವ್ಯಾಪ್ತಿಯಲ್ಲಿ ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾಯೋಜನೆಗೆ ಕಡೆಗೂ ತಾತ್ಕಾಲಿಕವಾಗಿ ಪಟ್ಟಣ ಪಂಚಾಯತು ಅನುಮೋದನೆ ನೀಡಿದೆ.ಫೆ.1 ರಂದು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪರವಿರೋಧ ಚರ್ಚೆಯ ನಡಯವೆಯೂ ಕಡೆಗೂ ತಾತ್ಕಾಲಿಕವಾಗಿ ಮಹಾಯೋಜನೆಯನ್ನು ಮಂಜೂರು ಮಾಡಲಾಯಿತು‌.ಭವಿಷ್ಯದಲ್ಲಿ ಪಟ್ಟಣಕ್ಕೆ ವ್ಯವಸ್ಥಿತ ಸವಲತ್ತು ಒದಗಿಸುವ ದೃಷ್ಟಿಕೋನದಡಿ ನಗರದಂತೆ ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಗೂ ಮಹಾ ಯೋಜನೆ ಜಾರಿಗೊಳಿಸುವ ಸಲುವಾಗಿ ಮಂಗಳೂರು ಯೋಜನಾ ಪ್ರಾಧಿಕಾರದಿಂದ ನೀಲಿ ನಕಾಶೆ ತಯಾರಿಸಲಾಗಿತ್ತು. ಆದರೆ ಜನರಿಗೆ ಇದರಿಂದ ಸಮಸ್ಯೆ...

ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಸಮಾಲೋಚನಾ ಸಭೆ

0

ಬೆಳ್ತಂಗಡಿ: ವೇಣೂರಿನಲ್ಲಿ ಫೆ ೨೨ ರಿಂದ ಮಾ 1ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕದ ಸಿದ್ದತೆಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬುಧವಾರ ನಡೆಯಿತು.ಸಭೆಯಲ್ಲಿ ಶಾಸಕರು ಸಿದ್ದತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು.ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಟ್ರಾಫಿಕ್ ಸಮಸ್ಯೆ ಆಗದಂತೆ ಅಗತ್ಯಕ್ರಮ ಕೈಗೊಳ್ಳುವಂತೆ, ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಒದಗಿಸುವಂತೆ ಕುಡಿಯುವ ನೀರಿನ, ಶೌಚಾಕಯದ ವ್ಯವಸ್ಥೆ ಗಳನ್ನು ಗಮನಿಸುವಂತೆ ಆದಿಕಾರಿಗಳಿಗೆ ಅವರು ಸೂಚಿಸಿದರು. ಬೆಟ್ಟದ ಸುತ್ತಲಿನ ರಸ್ತೆಯ ಡಾಮರೀಕರಣಕ್ಕರ...

ಕುಕ್ಕೇಡಿ ಸ್ಪೋಟ ಪ್ರಕರಣ ಮುಂದುವರಿದ ತನಿಖೆ

0

ಬೆಳ್ತಂಗಡಿ; ವೇಣೂರು ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಯಂಗಡಿಯ ಕಡ್ತ್ಯಾರು ಎಂಬಲ್ಲಿ ಭಾನುವಾರ ಸುಡುಮದ್ದು ಘಟಕ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಹಾಗೂ ಇತರ ಇಲಾಖೆಯಿಂದ ಮಾಹಿತಿ ಸಂಗ್ರಹ ಕಾರ್ಯ ನಡೆದಿದ್ದು ಇನ್ನೂ ಕೆಲವೊಂದು ವಿಚಾರಗಳ ತನಿಖೆ ಮುಂದುವರಿದಿದೆ.ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ...

ಹರೀಶ್ ಕುಮಾರ್ ಅವರಿಂದ ಸ್ಥಳ ಪರಿಶೀಲನೆ

0

ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ ಬಗ್ಗೆ ಮಾತನಾಡಿದ ಸಂದರ್ಭ. ಸರಕಾರಕ್ಕೆ ವರದಿ ನೀಡಿ ಪರಿಹಾರದ ಭರವಸೆಯನ್ನು ನೀಡಲಾಯಿತು.