ತಾಲೂಕಿನಲ್ಲಿ ಮಳೆಹಾನಿಯಾದ ಪ್ರದೇಶಗಳಿಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು.ತಾಲೂಕಿನ ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿದ ಅವರು ಅಲ್ಲಿ ಮಳೆ ಹಾಗೂ ಭೂಕುಸಿತದಿಂದಾಗಿ ಸಂಭವಿಸಿರುವ ಅನಾಹುತಗಳನ್ನು ವೀಕ್ಷಿಸಿದರು. ನೆರಿಯ ಗ್ರಾಮದಲ್ಲಿ ಭಾರೀ ಗಾಳಿ ಮಳೆಗೆ ದೊಡ್ಡ ಪ್ರಮಾಣದಲ್ಲಿ ಹಾನಿಗಳಾಗಿದ್ದು ಈ ಪ್ರದೇಶಗಳಿಗೆ ಭೇಟಿ ನೀಡಿದರು. ಮನೆಗಳಿಗೆ ಆಗಿರುವ ಹಾನಿಯನ್ನು ಪರಿಶೀಲಿಸಿದ ಅವರು ಕೃಷಿ ಹಾನಿಯ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಅವರೊಂದಿಗೆ ಮಾತುಕತೆ ನಡೆಸಿ ಮಳೆಯಿಂದಾಗಿ ಹಾನಿಗೀಡಾಗಿರುವವರಿಗೆ...
ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ ಮೃತರ ಯಾವುದೇ ಗುರುತು ಪರಿಚಯ ಪತ್ತೆಯಾಗಿಲ್ಲ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ನೆರಿಯದಲ್ಲಿ ಬಿರುಗಳಿಗೆ ವ್ಯಾಪಕ ಹಾನಿ, ಜನಜೀವನ ಅಸ್ತವ್ಯಸ್ತ
ಬೆಳ್ತಂಗಡಿ: ತಾಲೂಕಿನ ನೆರಿಯ ಸೇರಿದಂತೆ ವಿವಿದೆಡೆ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.ನೆರಿಯ ಗ್ರಾಮದಲ್ಲಿ ರಾತ್ರಿ ಬೀಸಿದ ಭಾರೀ ಗಾಳಿಗೆ ಅತಿ ಹೆಚ್ಚಿನ ಹಾನಿಗಳು ಸಂಭವಿಸಿರುವುದಾಗಿ ತಿಳಿದು ಬಂದಿದೆ. ಅಣಿಯೂರಿನಿಂದ ನೆರಿಯ ಗ್ರಾಮಪಂಚಾಯತಿನ ವರೆಗೆ ರಸ್ತೆನದಿಯಲ್ಲಿದ್ದ ಮರಗಳು ಧರೆಗೆ ಉರುಳಿದೆ. ಪೆರಿಯಡ್ಕ ರಸ್ತೆಯಲ್ಲಿಯೂ ಐದಕ್ಕೂ ಅಧಿಕ ಮರಗಳು ಉರುಳಿ ಬಿದ್ದಿದೆ, ಅಣಿಯೂರು ಬೀಟಿಗೆ ರಸ್ತೆ, ಅಪ್ಪಿಲ ಕುಕ್ಕೆಜಾಲು ರಸ್ತೆ, ಸೇರಿದಂತೆ ವಿವಿದೆಡೆ ರಸ್ತೆಗಳಿಗೆ ಮರಗಳು ಮುರಿದು ಬಿದ್ದಿದ್ದು ವಾಹನ ಸಂಚಾರ ಬಹುತೇಕ ಸ್ಥಗಿತಗೊಂಡಿದೆ.ಪ್ರಾಥಮಿಕ ಮಾಹಿತಿಯಂತೆ ಸುಮಾರು 50ಕ್ಕೂ ಅಧಿಕ...
ಕೇಂದ್ರ ಸರ್ಕಾರದ ಬಜೆಟ್ ನಿರಾಶದಾಯಕ: ರಕ್ಷಿತ್ ಶಿವರಾಂ
ಬೆಳ್ತಂಗಡಿ; ಕೇಂದ್ರ ದ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ಮಂಡಿಸಿರುವ ಬಹೆಟ್ ನಿರಾಶದಾಯಕ ಕರನಾಟಕವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಕಡಗಣಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡನೆ ಮಾಡಿದ ಬಜೆಟ್ ನಿರಾಶದಾಯಕ. ಇದು ಪೇಪರ್ ನಲ್ಲಿ ಮಾತ್ರ ಘೋಷಣೆ ಎಂಬ ಆಯವ್ಯಯ. ಕರ್ನಾಟಕ ದಿಂದ ರಾಜ್ಯಸಭೆ ಗೆ ಹೋಗಿದ್ದರು ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡಿರುವ ಹಣಕಾಸು...
ಗುರುವಾಯನಕೆರೆ ವರಕಬೆಯಲ್ಲಿ ಲಾರಿಯ ಮೇಲೆ ಉರುಳಿದ ವಿದ್ಯುತ್ ಕಂಬ
ಬೆಳ್ತಂಗಡಿ; ಗುರುವಾಯನ ಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಕಂಬ ರಸ್ತೆಗೆ ಬಿದ್ದು ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.ಗುರುವಾಯನಕೆರೆ ವರಕಬೆ ಸಮೀಪ ಭಾರೀ ಮಳೆಗೆ ಮರವೊಂದು ವಿದ್ಯುತ್ ಕಂಬದ ಮೇಲೆ ಮುರಿದು ಬಿದ್ದಿದೆ ವಿದ್ಯುತ್ ಕಂಬ ರಸ್ತೆಗೆ ಬಿದ್ದಿದೆ. ಈ ಸಂದರ್ಭದಲ್ಲಿ ವಿದ್ಯುತ್ ಲೈನ್ ಲಾರಿಯೊಂದರ ಮೇಲೆ ಬಿದ್ದಿದೆ ಆದರೆ ಈ ವೇಳೆಗೆ ವಿದ್ಯುತ್ ಸ್ಥಗಿತಗೊಂಡಿದ್ದ ಕಾರಣ ದೊಡ್ಡ ಅನಾಹುತ ತಪ್ಪಿತ್ತು. ಇಲಾಖಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಮರ ಹಾಗೂ ವಿದ್ಯುತ್...
ಬಜೆಟ್ ನಲ್ಲಿ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿದ್ದು ಮತ್ತದೇ ಚೊಂಬು. ಸಿದ್ದರಾಮಯ್ಯ
ಬೆಂಗಳೂರು; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ.ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಕೇಂದ್ರ ಬಜೆಟ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಜೆಟ್ ನಲ್ಲಿ ಏಳು...
ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ – ಹರೀಶ್ ಪೂಂಜ
ಬೆಳ್ತಂಗಡಿ: ಕೇಂದ್ರ ವಿತ್ತ ಸಚಿವರಾದ ಶ್ರೀ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಿದ ನರೇಂದ್ರ ಮೋದಿ ಸರಕಾರದ ಮೂರನೇ ಅವಧಿಯ ಪ್ರಥಮ ಮುಂಗಡ ಪತ್ರವು ಜನಪರ ಕಾಳಜಿಯ, ವಿಕಸಿತ ಭಾರತದ ವಿಶ್ವಾಸನೀಯ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ನವ ಭಾರತದ ಕಲ್ಪನೆಯಂತೆ ನವ (9) ಆದ್ಯತೆಗಳನ್ನು ನಿಗದಿ ಪಡಿಸಿದ ಹಣಕಾಸು ಸಚಿವರ ಮುಂಗಡ ಪತ್ರದಿಂದ ಕೃಷಿ ಹಾಗೂ ಆಹಾರ ಉತ್ಪನ್ನಗಳ ಉತ್ಪಾದನೆ ಹೆಚ್ಚಿ, ಸಂರಕ್ಷಣೆಯೊಂದಿಗೆ ಉತ್ತಮ ಮಾರುಕಟ್ಟೆಯೂ ಒದಗಿ ರೈತಾಪಿ ವರ್ಗಕ್ಕೆ ನೆರವಾಗಲಿದೆ. ಕೃಷಿ ವಲಯದಲ್ಲಿ 1...
ಮಳೆಯಿಂದಾಗಿ ಹದಗೆಟ್ಟಿರುವ ಕರಾವಳಿಯ ರಸ್ತೆಗಳ ದುರಸ್ತಿಗೆ ಪ್ರತ್ಯೇಕ ಪ್ಯಾಕೇಜ್ ಒದಗಸಲು ವಿಧಾನ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ
ಬೆಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಕೆಟ್ಟು ಹೋಗಿದೆ. ಆದರೆ ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಅನುದಾನ ಬಂದಿಲ್ಲ ಸರಕಾರ ಕೂಡಲೇ ಕರಾವಳಿ ಹಾಗೂ ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಧಾನ ಸಭೆಯಲ್ಲಿ ಒತ್ತಾಯಿಸಿದ್ದಾರೆ.ವಿಧಾನ ಸಭೆಯಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಅನುದಾನ ಹಂಚಿಕೆಯ ಪಟ್ಟಿಯನ್ನು ನೋಡಿದಾಗ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ತೀವ್ರ ಅನ್ಯಾಯ ಮಾಡಿರುವುದು ಕಂಡು ಬರುತ್ತದೆ. ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.ಈ...
ಬಂಗಾಡಿ; ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ನದಿಯಲ್ಲಿ ಪತ್ತೆ
ಬೆಳ್ತಂಗಡಿ :ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿಮನೆಯಿಂದ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಇಂದು ನದಿಯಲ್ಲಿ ಪತ್ತೆಯಾಗಿದೆ.ಬೆದ್ರಬಟ್ಟು ನಿವಾಸಿ ಬಾಬು ಮಡಿವಾಳ ಎಂಬವರ ಪತ್ನಿ ಮೋಹಿನಿ (60) ಎಂಬವರು ತೋಡಿಗೆ ಬಿದ್ದು ನೀರಲ್ಲಿ ಕೊಚ್ಚಿ ಹೀಗಿ ಮೃತಪಟ್ಟ ಮಹಿಳೆಯಾಗಿದ್ದಾರೆ. ಭಾನುವಾರ ಸಂಜೆ ಕೆಲಸ ಮುಗಿಸಿ ಅಂಗಡಿಗೆ ಹೋದವರು ಮನೆಗೆ ಹಿಂತಿರುಗಿರಲಿಲ್ಲ ಈ ಹಿನ್ನಲೆಯಲ್ಲಿ ಮನೆಯವರು ಹುಡುಕಾಡಿದ್ದು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಬಂಗಾಡಿ ಸಹಸ್ರ ನಾಗಬನ ದೇವಸ್ಥಾನ ಬಳಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೋಹಿನಿ ಅವರು ಅಂಗಡಿಗೆ ಹೋಗುವ ದಾರಿ ಮಧ್ಯೆ ಬೆದ್ರಬೆಟ್ಟು...
ಬಾರ್ಯ: ಸ್ಮಶಾನದ ಜಾಗ ಗಡಿಗುರುತಿನ ವೇಳೆ ಗ್ರಾ.ಪಂ ಅಧ್ಯಕ್ಷರಿಗೆ ಜೀವ ಬೆದರಿಕೆ ಪೊಲೀಸರಿಗೆ ದೂರು
ಬೆಳ್ತಂಗಡಿ; ಬಾರ್ಯ ಗ್ರಾಮಪಂಚಾಯತು ವ್ಯಾಪ್ತಿಯ ಪುತ್ತಿಲ ಗ್ರಮದಲ್ಲಿ ಸ್ಮಶಾನಕ್ಕೆಂದು ಗುರುತಿಸಿರುವ ಜಾಗದ ಗಡಿ ಗುರುತು ಮಾಡಲು ಸರ್ಎ ನಡೆಸುವ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಿಗೆ ಹಾಗೂ ಇತರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ಬಾರ್ಯ ಗ್ರಾ.ಪಂ ಅಧ್ಯಕ್ಷ ಪಿ ಕೆ ಉಸ್ಮಾನ್ ದೂರು ನೀಡಿದ್ದಾರೆ.ಪುತ್ತಿಲ ಗ್ರಾಮದ ಸಂ, ನಂ 73/2a ಯಲ್ಲಿ 20ಸೆನ್ಸ್ ಪರಿಶಿಷ್ಟ ಜಾತಿಯವರಿಗೆ ಹಾಗೂ 20ಸೆನ್ಸ್ ಪರಿಶಿಷ್ಟ ಪಂಗಡದವರಿಗೆ ಹಾಗೂ ಸ ನಂ 66/1p ಯಲ್ಲಿ 40 ಸೆನ್ಸ್ ಹಿಂದೂ ರುದ್ರಭೂಮಿಗೆ ಮೀಸಲಿರಿಸಿದ ಜಮೀನಿದೆ. ದಶಕಗಳ...














