ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿ; ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ.) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ನಡೆಯಲಿರುವ ಡೆನ್ನಾನ ಡೆನ್ನನ 2024 ಯುವವಾಹಿನಿ ಅಂತರ್'ಘಟಕ ಸಾಂಸ್ಕೃತಿಕ ಸ್ಪರ್ದೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗುರಿಪಳ್ಳದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘಗುರಿಪಳ್ಳದ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು,ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷರಾದ ಜಯ ವಿಕ್ರಮ ಕಲ್ಲಾಪು ಮಾತನಾಡಿ ಬಿಲ್ಲವ...
ಹಿರಿಯ ಕಾಂಗ್ರೆಸ್ ಮುಖಂಡ ಇ.ಸುಂದರ ಗೌಡ ನಿಧನ
ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ಮುಖಂಡ ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಜಿರೆ ನಿವಾಸಿ ಇಚ್ಚಿಲ ಸುಂದರ ಗೌಡ (78) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಆರಂಭದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಸುಂದರ ಗೌಡ ಅವರು ಜಿಲ್ಲಾ ಪಂಚಾಯತು ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು ದಶಕಗಳ ಕಾಲ ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಗಳನ್ನು ನಿರ್ವಹಿಸಿದ್ದರು.
ತಣ್ಣೀರುಪಂತ; ಕತ್ತು ಕೊಯ್ದುಕೊಂಡ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ತಣ್ಣೀರು ಪಂತ ಗ್ರಾಮದ ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಮನೆಯ ಹಿಂಬದಿ ಬಾಗಿಲಲ್ಲಿ ಬಿದ್ದ ರೀತಿ ಶನಿವಾರ ಪತ್ತೆಯಾಗಿದೆ.ಮೃತ ವ್ಯಕ್ತಿ ಸ್ಥಳೀಯ ನಿವಾಸಿ ರಾಜೀವ ಪೂಜಾರಿ (72) ಎಂಬವರಾಗಿದ್ದಾರೆ.ಮನೆಯ ಹಿಂಬಾಗಿಲ ಸಮೀಪ ಮೃತದೇಹ ಪತ್ತೆಯಾಗಿದೆ. ಕತ್ತಿಯಿಂದ ಕುತ್ತಿಗೆ ಕೊಯ್ದಿರುವ ರೀತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಪೂಂಜಾಲಕಟ್ಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ರಾಜೀವ ಪೂಜಾರಿ ಅವರ ಪತ್ನಿ ನಿಧನರಾದ ಬಳಿಕ ಅವರು ಮಾನಸಿಕ ಸ್ಥಿಮಿತ...
ದಸರಾ ಕವಿ ಗೋಷ್ಟಿ ಗೆ ಬಂದಾರು ಚಂದ್ರಹಾಸ ಕುಂಬಾರ ಆಯ್ಕೆ
ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.
ಲಾಯಿಲ ಕಾಂಗ್ರೆಸ್ ಮುಖಂಡ ರೋಹಿತ್ ನಿಧನ
ಬೆಳ್ತಂಗಡಿ; ಲಾಯಿಲ ಗ್ರಾಮದ ಒಂದನೇ ವಾರ್ಡ್ ನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ , ಯುವ ನಾಯಕ ರೋಹಿತ್ ರಾಯನ್ ಡಿಸೋಜ(38) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಅವಿವಾಹಿತರಾಗಿದ್ದು , ಪಿಡ್ಲೂಡಿ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ದಿವಂಗತ ಅಲ್ಪೋನ್ಸ್ ಡಿಸೋಜ ಅವರ ಪುತ್ರ. ಮೃತರು ಸಹೋದರಿ , ವಿದೇಶದಲ್ಲಿ ಉದ್ಯೋಗದಲ್ಲಿರುವ ರೇಷ್ಮಾ ಡಿಸೋಜ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಧರ್ಮಸ್ಥಳದಲ್ಲಿ ಮುಂದುವರಿದ ಕಾಡಾನೆ ದಾಳಿ ಕೃಷಿ ನಾಶ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದೆ.ಶುಕ್ರವಾರ ರಾತ್ರಿಯ ವೇಳೆ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಕೃಷ್ಣಪ್ಪ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಮರಗೆಣಸಿನ ಗಿಡಗಳನ್ನು ನಾಶಗೊಳಿಸಿದೆ. ತೋಟದಲ್ಲಿದ್ದ ಬಾಳೆಗಿಡಗಳನ್ನು ಸಂಪೂರ್ಣವಾಗಿ ಮುರಿದು ಹಾಕಿದ್ದು ಮನೆಯ ಸಮೀಪವೇ ಆನೆಗಳು ಓಡಾಟ ನಡೆಸಿದ್ದು ಜನರಲ್ಲಿ ಭಯಮೂಡಿಸಿದೆ. ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ನಿವಾಸಿ ಕ್ಸೇವಿಯರ್ ಎಂಬವರ ತೋಟಕ್ಕೆ ನುಗ್ಗಿದ ಕಾಡನೆಗಳು ಭಾರೀ ಪ್ರಮಾಣದಲ್ಲಿ ಅಡಿಕೆ ಕೈಷಿಗೆ ಹಾನಿಯುಂಟು ಮಾಡಿದೆ. ಫಸಲು ಬರುವ ಸುಮಾರು ಹತ್ತಕ್ಕೂ ಅಧಿಕ...
ಪುದುವೆಟ್ಟು ಅಕ್ರಮ ಮರಳು ಗಣಿಗಾರಿಕೆಗೆ ಪೊಲೀಸ್ ದಾಳಿ
ಬೆಳ್ತಂಗಡಿ : ಯಾವುದೇ ಪರವಾನಿಗೆ ಪಡೆಯದೆಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಶುಕ್ರವಾರ ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ...
ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ನಾರಾಯಣ ಆಚಾರ್ ನಿಧನ
ಬೆಳ್ತಂಗಡಿ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ, ಕುವೆಟ್ಟು ನಿವಾಸಿನಾರಾಯಣ ಆಚಾರ್ (55ವ) ಅವರು ಶುಕ್ರವಾರ ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನುಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.ಮೃತರು ತಂದೆ, ತಾಯಿ,ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ನವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ
ಧರ್ಮಸ್ಥಳ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಗುರುವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕುಮಾರಿ ಸುಪ್ರೀತಾ ಧರ್ಮಸ್ಥಳ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.ಮೃದಂಗ ವಾದಕರಾಗಿ ವಿದ್ವಾನ್ ಪುತ್ತೂರು ನಿಕ್ಷಿತ್ ಮತ್ತು ಮಾ. ವರ್ಚಸ್ ಧರ್ಮಸ್ಥಳ, ವಯಲಿನ್ ವಾದಕರಾಗಿ ವಿದ್ವಾನ್ ನಿಶಾಂತ್ ರಾವ್, ಬೆಂಗಳೂರು, ಘಟವಾದಕರಾಗಿ ವಿದ್ವಾನ್ ಫಣೀಂದ್ರ ಬೆಂಗಳೂರು ಹಾಗೂ ಖಂಜಿರದಲ್ಲಿ ಅತ್ಯುಲ್ಯತೇಜ, ವೇಣೂರು ಸಹಕರಿಸಿದರು.ಕಂಚಿಮಾರು ಟೈಗರ್ಸ್ ತಂಡದವರಿಂದ ಹುಲಿವೇಷ ಪ್ರದರ್ಶನ ನಡೆಯಿತು.
ಪುದುವೆಟ್ಟು ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದಿದ್ದಾರೆ. ತಕ್ಷಣ ಅಲ್ಲಿದ್ದವರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅದರೆ ಆವೇಳೆಗೆ ಅವರು ಮೃತ ಪಟ್ಟಿದ್ದಾರೆ. ಮೃತರಿಗೆ ಮದುವೆಯಾಗಿದ್ದು ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.ಘಟನೆಯ...















