ಬೈಕ್ ಗಳನಡುವೆ ಅಪಘಾತ ಒಬ್ಬ ಸಾವು ಹಲವರಿಗೆ ಗಾಯ
ಬೆಳ್ತಂಗಡಿ: ಬೈಕ್‌ಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತುರ್ಕಳಿಕೆ ಎಂಬಲ್ಲಿ ಜು.20ರ ರಾತ್ರಿ ನಡೆದಿದೆ. ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಮತ್ತು ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರುಗಡೆಯಿಂದ ಕರೀಂ ಎಂಬವರು ಬೈಕ್ ಚಲಾಯಿಸಿಕೊಂಡು ಬಂದಿದ್ದು, ಈ ಸಂದರ್ಭ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು ಈ ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು, ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಿಂದ ಧನಂಜಯ, ರವಿ, ಅಸ್ಕಾನ್ ಹಾಗೂ...
ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜುಲೈ 20 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.ಮೊಂಟ್ ಫೋರ್ಟ್ ಕಾಲೇಜು ಬೆಂಗಳೂರು, ಎಂ.ಎಸ್.ಸಿ ಮನೋವಿಜ್ಞಾನ ವಿಭಾಗದ ವಿಧ್ಯಾರ್ಥಿ ವಂದನೀಯ ಫಾದರ್ ಜೋಸೆಫ್ ಚೀರನ್ ಇವರು ಆಗಮಿಸಿ, ನವಜೀವನ ಆರೈಕೆ ಮತ್ತು ಬೆಂಬಲ ಕಾರ್ಯಕ್ರಮದ ಮೂಲಕ ಲಭಿಸುವ ಪ್ರೇರಣಾ ಪಡೆದುಬದುಕನ್ನು ಯಶಸ್ಸುಗೊಳಿಸೋಣ ಎಂದು ತಿಳಿಸಿ, ಪೌಷ್ಟಿಕ ಆಹಾರ ವಿತರಿಸಿದರು. ಪುಷ್ಪರಾಜ್ ರವರು...
ತೆಕ್ಕಾರಿನಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ; ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು. 75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.
ಚಾರ್ಮಾಡಿ ಘಾಟಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭೇಟಿ,ರಸ್ತೆ ಪರಿಶೀಲನೆ
ಬೆಳ್ತಂಗಡಿ: ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ' ಚಾರ್ಮಾಡಿ ಘಾಟ್ ನಲ್ಲಿ ತಡೆಗೋಡೆ ಕುಸಿತ,ಬಿರುಕು ಮತ್ತಿತರ ಸಮಸ್ಯೆ ಗಮನಕ್ಕೆ ಬಂದಿದ್ದು,ಅದನ್ನು ಪರಿಶೀಲಿಸಲು ಬಂದಿದ್ದೇವೆ.ಹಾಗೆಯೇ ಮಡಿಕೇರಿ,ಸಕಲೇಶಪುರ ಮಾರ್ಗದಲ್ಲಿ ಗುಡ್ಡ ಕುಸಿತದ ಹಿನ್ನಲೆಯಲ್ಲಿ ಈ ರಸ್ತೆ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಂಡು ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಿದ್ದೇವೆ.ಹಗಲಿನಲ್ಲಿಯೇ ಹೆಚ್ಚು ವಾಹನ ಬಿಡಲು ಕ್ರಮಕೈಗೊಳ್ಳಲಾಗುವುದು.ಈಗಾಗಲೇ...
ದ.ಕ ಜಿಲ್ಲೆಯಲ್ಲಿ ಜು 20 ರಂದು ಶಾಲೆಗಳಿಗೆ ರಜೆ
ಬೆಳ್ತಂಗಡಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಜು20 ಶನಿವಾರ 12ನೆಯ ತರಗತಿಯ ವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಭಾರೀ ಮಳೆ ಶುಕ್ರವಾರವೂ ಮುಂದುವರಿದಿದೆ ಈ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ
ಜಾಹೀರಾತು ನೋಡಿ ಟ್ರೇಡಿಂಗ್ ನಲ್ಲಿ ಹಣತೊಡಗಿಸಿ ರೂ 22 ಲಕ್ಷ ಕಳೆದುಕೊಂಡ ಪುತ್ತೂರಿನ ವ್ಯಕ್ತಿ
ಬೆಳ್ತಂಗಡಿ; ಫೇಸ್ ಬುಕ್ ನಲ್ಲಿ ಟ್ರೇಡಿಂಗ್ ಬಗ್ಗೆ ಬಂದ ಜಾಹೀರಾತನ್ನು ನೋಡಿ ಅದರಲ್ಲಿ ಬಂದ ಸೂಚನೆಯಂತೆ ಹಣ ತೊಡಗಿಸಿದ ಪುತ್ತೂರಿನ ವ್ಯಕ್ತಿಯೋರ್ವ 22 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ಸಂಭವಿಸಿದ್ದು ಈ ಬಗ್ಗೆ ಮಂಗಳೂರಿನ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪುತ್ತೂರು ನಿವಾಸಿ ಜಾನ್ ಪ್ರವೀಣ್ ಎಂಬವರೇ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ.ಇವರು ಫೇಸ್ ಬುಕ್ ನಲ್ಲಿ ಬಂದ ಟ್ರೇಡಿಂಗ್ ಬಗೆಗಿನ ಜಾಹೀರಾತನ್ನು ನೋಡಿ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರಿದರು ಬಳಿಕ ಅವರ ಸೂಚನೆಯಂತೆACVVL online APP ಅನ್ನು ಇನ್ಟಾಲ್ ಮಾಡಿದ್ದಾರೆ ಬಳಿಕ...
ಪೂಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ ಒಬ್ಬ ಸಾವು ಹಲವರಿಗೆ ಗಾಯ
ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬವರೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂದಿರದ ಬಳಿಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ.ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ...
ಭಾರೀ ಮಳೆಗೆ ಕಾಜೂರಿನಲ್ಲಿ ಮನೆಯ ಗೋಡೆ ಕುಸಿತ
ಬೆಳ್ತಂಗಡಿ; ಭಾರೀ ಮಳೆಗೆ ಕಾಜೂರು ನೆಲ್ಲಿಗುಡ್ಡೆಯಲ್ಲಿ ವಾಸದ ಮನೆಯ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಎ.ಬಿ ಫಾರೂಕ್ ಎಂಬವರ ಮನೆಯ ಹಿಂಬದಿಯ ಗೋಡೆ ಗುರುವಾರ ಸಂಜೆಯ ವೇಳೆ ಕುಸಿದು ಬಿದ್ದಿದೆ. ಗೋಡೆ ಕುಸಿದಾಗ ಮನೆಯವರೆಲ್ಲರೂ ಮನೆಯಿಂದ ಹೊರಗಡೆ ಹೋಗಿದ್ದರು ಇದರಿಂದಾಗಿ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ.ರಾತ್ರಿಯೇ ಇವರು ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ನಿರಂತರ ಮಳೆಗೆ ಬಂದಾರಿನಲ್ಲಿ ರಸ್ತೆಗೆ ಕುಸಿದ ಗುಡ್ಡ, ವಾಹನ ಸಂಚಾರಕ್ಕೆ ಅಡಚಣೆ
ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರು ಭೇಟಿ ನೀಡಿದರುತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ಅಧಿಕಾರಿಗಳು ತಿಳಿಸಿದ್ದದಾರೆ. ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು...
ಬೆಳ್ತಂಗಡಿ ಸೇರಿದಂತೆ ಐದು ತಾಲೂಕುಗಳಲ್ಲಿ ಜು19ರಂದು ಶಾಲೆಗಳಿಗೆ ರಜೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಕಡಬ ತಾಲೂಕಿನ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರವಾರ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮುಲ್ಕಿ ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.














