ಉಕ್ಕಿ ಹರಿದ ಕಪಲಾ ನದಿ ಶಿಶಿಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

0

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ ದೇವಸ್ಥಾನಕ್ಕೆ ನುಗ್ಗಿದ ನೀರುಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಮದ್ಯಾಹ್ನದಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ....

ಲಾಯಿಲದಲ್ಲಿ ಭಾರೀ ಮಳೆಗೆ ಮನೆ ಕುಸಿತ

0

ಬೆಳ್ತಂಗಡಿ; ತಾಲೂಕಿನಲ್ಲಿ ಮಳೆ‌ನಿರಂತರವಾಗಿ ಮುಂದುವರಿದಿದ್ದು ಲಾಯಿಲದಲ್ಲಿ ಮನೆಯೊಂದರ ಹಿಂಬದಿಯ ಗೋಡೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ.ಲಾಯಿಲ ಪುಳಿತ್ತಡಿ ನಿವಾಸಿ ಸಂಜೀವ ಎಂಬವರ ಮನೆಯ ಹಿಂಬದಿಯ ಗೋಡೆ ಕುಸಿದ್ದಿದ್ದು ಮನೆ ಕುಸಿಯುವ ಅಪಾಯ ಎದುರಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಂದಾರು; ಪೆರ್ಲ ಬೈಪಾಡಿ ರಸ್ತೆಯಲ್ಲಿ ಭೂ ಕುಸಿತ

0

ಬೆಳ್ತಂಗಡಿ; ಬಂದಾರು ಗ್ರಾಮದ ಮೈರೋಳ್ತಡ್ಕ - ಪೆರ್ಲ ಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ಸೇತುವೆಯ ಸಮೀಪವೇ ಭಾರೀ ಪ್ರಮಾಣದಲ್ಲಿ ಭೂಕುಸಿತವಾಗಿದ್ದು ವಾಹನಸಂಚಾರ ಸ್ಥಗಿತಗೊಂಡಿದೆ.ರಾತ್ರಿ ಸುರಿದ ಭಾರೀ ಮಳೆಗೆ ಇಲ್ಲಿ ಭೂ ಕುಸಿತವಾಗಿದೆ‌. ಕಳೆದ ತಿಂಗಳಲ್ಲಿಯೂ ಇಲ್ಲಿ ಭೂಕುಸಿತವಾಗಿತ್ತು.ರಸ್ತೆಯಲ್ಲಿ ಭಾರೀ ಪ್ರಮಾಣದ‌ಮಣ್ಣು ಬುದ್ದಿದ್ದು ವಾಹನ ಸಂಚಾರಕ್ಕೆ ತೊಡಕಾಗಿದೆ.ಸ್ಥಳಕ್ಕೆ ಬಂದಾರು ಗ್ರಾಮಪಂಚಾಯತು ಅಧ್ಯಕ್ಷರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನರ ನಡೆಸಿದ್ದು ಮಣ್ಣನ್ನು ತೆರವು ಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ಇಲ್ಲಿ ಇನ್ನಷ್ಟು ಭೂ ಕುಸಿತವಾಗುವ ಅಪಾಯವಿದೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ

0

ಬೆಳ್ತಂಗಡಿ; ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳ ಶಾಲೆಗಳಿಗೆ ಜು.18ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ.ಬುಧವಾರ ಸಂಜೆಯ ವೇಳೆ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾದ ಹಿನ್ನಲೆಯಲ್ಲಿ ರಜೆ ನೀಡದಿರಲು ನಿರ್ಧರಿಸಲಾಗಿತ್ತು ಈ ಗುರುವಾರದಿಂದ ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಲಿದೆ ಎಂದಿದ್ದರು ಈ ತಾಲೂಕುಗಳಲ್ಲಿ ಭರೀ ಮಳೆ ಮುಂದುವರಿಯುತ್ತಿರುವ ಕಾರಣ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ

ಪಂಚೆ ಧರಿಸಿದ ಕಾರಣಕ್ಕೆ ಮಾಲ್ ನ ಒಳಗೆ ಪ್ರವೇಶ ನಿರಾಕರಿಸಿದ ರೈತನನ್ನು ಕರೆದು ಸನ್ಮಾನಿಸಿದ ಮಾಲ್ ನ ಆಡಳಿತ ಮಂಡಳಿ

0

ಬೆಂಗಳೂರು : ಪಂಚೆ ಧರಿಸಿದ್ದಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಮಾಲ್‍ನೊಳಗೆ ಪ್ರವೇಶಕ್ಕೆ ಅನುಮತಿ ನೀಡದೆ ರೈತನಿಗೆ ಅಪಮಾನ ಮಾಡಿದ್ದ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ವತಃ ಮಾಲ್ ಆಡಳಿತ ಮಂಡಳಿ ಎಚ್ಚೆತ್ತುಕೊಂಡು ರೈತನನ್ನು ಸನ್ಮಾನಿಸಿದ ಅಪರೂಪದ ಘಟನೆ ಜರುಗಿದೆ. ನಿನ್ನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‍ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಿಸಲು ಆಗಮಿಸಿತ್ತು. ಇದೇ ವೇಳೆ ಅವರ ಜೊತೆಗೆ ಫಕೀರಪ್ಪ ಎಂಬ ರೈತರು ಕೂಡ ಬಂದಿದ್ದರು. ಅಲ್ಲಿನ ಭದ್ರತಾ ಸಿಬ್ಬಂದಿ ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕಾಗಿ ಅವರನ್ನು ಮಾಲ್...

ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

0

ಮಂಗಳೂರು; ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಆದರೆ ಪ್ರತಿದಿನವೂ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಡಿಸಿ ಅವರ ನಕಲಿ ಆದೇಶ ಪ್ರತಿ ರವಾನೆಯಾಗುತ್ತದೆ. ಇದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು...

ದ.ಕ ಉಡುಪಿ ಜಿಲ್ಲೆಗಳಲ್ಲಿ ಜು.18,19 ರೆಡ್ ಅಲರ್ಟ್

0

ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.ಬುಧವಾರವೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ.ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಬೆಳ್ತಂಗಡಿಯಲ್ಲಿ ಬಿಜೆಪಿ ವತಿಯಿಂದ ಸನ್ಮಾನ

0

ಬೆಳ್ತಂಗಡಿ: ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅದ್ದೂರಿ ಸ್ವಾಗತ ನೀಡಲಾಯಿತು. ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿಸಚಿವ ವಿ ಸೋಮಣ್ಣ ಅವರನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಸನ್ಮಾನಿಸಲಾಯಿತು. ಕೇಂದ್ರ ಸಚಿವ ವಿ.ಸೋಮಣ್ಣರವರು ಮಾತನಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರಿಗೆ ದೊಡ್ಡ ಭವಿಷ್ಯವಿದೆ. ಕೇವಲ ಐದಾರು ವರ್ಷದಲ್ಲಿ ಬಹಳ ಎತ್ತರಕ್ಕೆ ಬೆಳೆಯುತ್ತೀರ....

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ; ವ್ಯಾಪಕ ಕೃಷಿ ಹಾನಿ

0

ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್ ವಿಶ್ವನಾಥ ಪ್ರಭು, ಮಹೇಶ ಭಟ್, ನೀಲಯ್ಯ ಗೌಡ ರಾಮಚಂದ್ರ ಗೌಡ, ಪ್ರವೀಣ ಹಾಗೂ ಇನ್ನಿತರರ ತೋಟಗಳಿಗೆ ನುಗ್ಗಿದ ಸಲಗ ನೂರಾರು ಅಡಕೆ ಮರ ಬಾಳೆ ಗಿಡಗಳನ್ನು ಪುಡಿಗೈದಿದೆ.ಹಲಸಿನ ಮರದಲ್ಲಿದ್ದ ಹಲಸಿನ ಹಣ್ಣುಗಳನ್ನು ತೆಗೆದುಹಾಕಿ ದಾಂಧಲೆ ಎಬ್ಬಿಸಿದ ಕಾಡಾನೆ ಶಂಕರ ಭಟ್ ಅವರು ತೋಟದ ಬದಿಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಶೆಡ್...

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

0

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವೇಣೂರು ವೇಣೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿದ ಕರ್ನಾಟಕ ಸರ್ಕಾರಕ್ಕೆ ಮತ್ತು ಈ ಜಮೀನು ಮಂಜೂರಾತಿಗಾಗಿ ಸರ್ಕಾರದ ಅಂತಿಮ ಅನುಮೋದನೆ ಗಾಗಿ ಅವಿರತ ಪ್ರಯತ್ನ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ವೇಣೂರುಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಿರ್ದೇಶಕರು ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರಾದ...