ರಾಷ್ಟ್ರೀಯ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುವಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಅಭಿನಂದನೆ

0

ಬೆಳ್ತಂಗಡಿ; ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ (81 K G ವಿಭಾಗದ) ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳುವ ಉಜಿರೆ ಎಸ್ ಡಿ ಎಮ್ ಪ್ರಥಮ ವರ್ಷದ ವಿದ್ಯಾರ್ಥಿನಿ ಬಂದಾರು ಗ್ರಾಮದ ಕೆ ತೇಜಸ್ವಿನಿ ಪೂಜಾರಿ ಯವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಇಂದು ಆರ್ಥಿಕ ನೆರವನ್ನು ನೀಡಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯವೀಕ್ರಮ್ ಕಲ್ಲಾಪು,ಉಪಾಧ್ಯಕ್ಷರಾದ ಸುಂದರ ಪೂಜಾರಿ ,ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್,ಕೋಶಾದಿಕಾರಿ ಪ್ರಶಾಂತ್ ಮಚ್ಚಿನ ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು,ವಿದ್ಯಾರ್ಥಿನಿ ತಂದೆ ಕೆ...

ಯಮತೋ ಶೋಟೋಕಾನ್ ಕರಾಟೆ ಎಸೋಸಿಯೇಷನ್ ಬೆಳ್ತಂಗಡಿ ಇದರ 9 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯು ಎಸ್ ಡಿ ಎಂ ಸಮಗ್ರ ಶಾಲೆ ವಾಮಂಜೂರು ಇಲ್ಲಿ ನಡೆದಿದ್ದು ವಿವಿಧ ವಿಭಾಗಗಳಲ್ಲಿ 44 ವಿದ್ಯಾರ್ಥಿಗಳು ಜಿಲ್ಲೆಯಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಅದರಲ್ಲಿ ಯಮತೋ ಶೋಟೋಕಾನ್ ಕರಾಟೆ ಎಸೋಸಿಯೇಷನ್ ಬೆಳ್ತಂಗಡಿ ಇದರ 9 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರು ಕರಾಟೆ ಶಿಕ್ಷಕ ಅಶೋಕ ಆಚಾರ್ಯ ಹಾಗೂ ಕೋಚ್ ಮಿಥುನ್ ರಾಜ್ ಇವರಿಂದ ತರಬೇತಿ ನೀಡಿದರು

ತಾಲೂಕಿನಲ್ಲಿ ಭಾರೀ ಮಳೆ ಸಿಡಿಲು ಬಡಿದು ಹಾನಿ

0

ಬೆಳ್ತಂಗಡಿ; ತಾಲೂಕಿನಲ್ಲಿ ಸೋಮವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದೆ.ತಾಲೂಕಿನ ತೋಟತ್ತಾಡಿ ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಭಾರೀ ಮಳೆಗೆ ಕುಸಿದು ಬಿದ್ದಿದೆ, ಅದೇ ರೀತಿ ಉರುವಾಲು ಗ್ರಾಮದ ತಾರಿದಡಿ ಎಂಬಲ್ಲಿ ಮನೆಗೆ ಸಿಡಿಲು ಬಡಿದು ಮನೆಗೆ ಹಾನಿ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದವೇಳೆ ಸಿಡಿಲು ಬಡಿದಿದ್ದು ಮನೆಯವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಮನೆಯ ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಯ ವಯರಿಂಗ್ ಗೆ ಹಾನಿ ಸಂಭವಿಸಿದೆ.

ಹೊಸ್ಮಾರು ಸಮೀಪ ಭೀಕರ ಅಪಘಾತ ವೇಣೂರು ನಿವಾಸಿಗಳಾದ‌ ಒಂದೇ ಕುಟುಂಬದ ನಾಲ್ವರು ಸಾವು

0

ಬೆಳ್ತಂಗಡಿ: ನಾರಾವಿ ಸಮೀಪ ಹೊಸ್ಮಾರ್ ನಲ್ಲಿ ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ‌ ಸೋಮವಾರ ಸಂಭವಿಸಿದೆ.ಹೊಸ್ಮಾರು ಗ್ರಾಮದ ಪಾಜಿ ಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್‌ನಡುವೆ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರು ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ‌ನಿವಾಸಿಗಳಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

0

ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು . ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ ದ.ಕ.ಜಿ .ಹಿ ಪ್ರಾಥಮಿಕ ಮುಗುಳಿ ಶಾಲೆಯಲ್ಲಿ. ನಡೆಯಿತು.ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ರಾಜ ಕೇಸರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿಯ ವಹಿಸಿಕೊಂಡಿದ್ದರು.ರಾಜ ಕೇಸರಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕೊಲ್ಯ....

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೇಸ್ ಸೇರ್ಪಡೆ

0

ಬೆಳ್ತಂಗಡಿ ವಕೀಲರ ಸಂಘದ ಮಾಜಿ ಅಧ್ಯಕ್ಷ, ಆಲ್ ಇಂಡಿಯಾ ಕ್ಯಾಥೋಲಿಕ್ ಅಸೋಸಿಯೇಷನ್ ನ ಕರ್ನಾಟಕ ರಾಜ್ಯ ಸಮಿತಿ ನಿಕಟಪೂರ್ವಧ್ಯಕ್ಷ ಮತ್ತು ಬೆಳ್ತಂಗಡಿ ಸಿರೋ ಮಲಬಾರ್ ಅಸೋಸಿಯೇಷನ್ ಸ್ಥಾಪಕಾಧ್ಯಕ್ಷ ನ್ಯಾಯವಾದಿ ಸೇವಿಯರ್ ಪಾಲೇಲಿ ಯವರು ಇಂದು ಕಾಂಗ್ರೇಸ್ ಪಕ್ಷವನ್ನು ಸೇರಿದರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪಕ್ಷದ ದ್ವಜ ಮತ್ತು ಶಾಲು ಹಾಕಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು. ಇದೇ ಸಂಧರ್ಭದಲ್ಲಿ ಸೇವಿಯರ್ ಪಾಲೇಲಿ ಯವರ ಮಗ ಕಾನೂನು ವಿದ್ಯಾರ್ಥಿ ಅವಿಶ್...

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

0

ಉಜಿರೆ : ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ "ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024" ದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಎರಡೂ ವಿಭಾಗಗಳಲ್ಲಿ ಪ್ರತ್ಯೇಕವಾಗಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಲ್ಟಿಪರ್ಪಸ್ ಅಗ್ರಿ ಟ್ರಾಲಿಯನ್ನು ವಿನ್ಯಾಸಗೊಳಿಸಲಾಗಿದೆ ಆಧುನಿಕ ಕೃಷಿ ಪದ್ಧತಿಗೆ ಅನುಕೂಲವಾಗುವಲ್ಲಿ ಇದುಸಹಕಾರಿಯಾಗಿದೆ. ಈ ಟ್ರಾಲಿಯನ್ನು ಬೈಕ್...

ಡಿ. ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

0

ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಸೆಪ್ಟೆಂಬರ್ 28 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ,ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.ತೆರಿಗೆ ಸಲಹೆಗಾರರಾದ ಸಿನು ಅಬ್ರಹಾಂ ಬೆಳ್ತಂಗಡಿಇವರು ಆಗಮಿಸಿ, ಜೀವನದಲ್ಲಿ ಯಾವುದೇ ಸಮಸ್ಯೆಯನ್ನು ಧೈರ್ಯದಿಂದ ಎದುರಿಸುವಾಗ ಯಶಸ್ಸನ್ನುಗಳಿಸಲು ಸಾಧ್ಯಎಂದು ಮಾತನಾಡಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.ಬಂಗಾಡಿ ಮರಿಯಂಬಿಕ ಚರ್ಚ್ ಇದರ ಮಾತೃವೇದಿ ಘಟಕದ ಅಧ್ಯಕ್ಷರಾದ ಆನಿಮೋಲ್ ಹಾಗೂ ಘಟಕದ ಪದಾಧಕಾರಿಗಳ ನೇತೃತ್ವದಲ್ಲಿ ಪೌಷ್ಟಿಕ ಆಹಾರದ ಕಿಟ್...

ಸುವರ್ಣ ಸಂಭ್ರಮ ರಥಯಾತ್ರೆಗೆ ಉಜಿರೆಯಲ್ಲಿ ಸ್ವಾಗತ

0

ಉಜಿರೆ: ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡ 50ನೇ ವರ್ಷ ಸುವರ್ಣ ಕರ್ನಾಟಕವೆಂಬ ಪ್ರಯುಕ್ತ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿ ರಾಜ್ಯಾದ್ಯಂತ ಸಂಚರಿಸಲಿರುವ ಸುವರ್ಣ ಸಂಭ್ರಮ ರಥಯಾತ್ರೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ಸಂದರ್ಭದಲ್ಲಿ ಉಜಿರೆಯ ಮುಖ್ಯ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಬೆಳ್ತಂಗಡಿ ತಹಸೀಲ್ದಾರ್ ಪ್ರಥ್ವಿ ಸಾನಿಕಮ್ ರಥದಲ್ಲಿ ಅಳವಡಿಸಲಾದ ಭವ್ಯ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲೆಗೆ ಬರಮಾಡಿಕೊಳ್ಳಲಾಯಿತು. ಚಿಕ್ಕಮಗಳೂರು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಥಯಾತ್ರೆಯನ್ನು ತಹಸೀಲ್ದಾರ್ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು...

ಏಕೀಕೃತ ಪಿಂಚಣಿ ವ್ಯವಸ್ಥೆ ಕೈಬಿಡಿರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ಮನವಿ ಸಲ್ಲಿಕೆ.

0

ಬೆಳ್ತಂಗಡಿ;ಕೇಂದ್ರ ಸರಕಾರದ ಏಕೀಕೃತ ಪಿಂಚಣಿ(ಯುಪಿಎಸ್) ವ್ಯವಸ್ಥೆ ಕೈಬಿಡಬೇಕು ಹಾಗೂ ರಾಜ್ಯ ಸರಕಾರ ನುಡಿದಂತೆ ನಡೆದು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಹಳೆ ಪಿಂಚಣಿ ವ್ಯವಸ್ಥೆ(ಓಪಿಎಸ್) ಜಾರಿ ಮಾಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ರ ಮೂಲಕ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು."No-NPS No-UPS. Only OPS" ಎಂಬ ಘೋಷವಾಕ್ಯದಡಿ ರಾಜ್ಯಾದ್ಯಂತ ಏಕಕಾಲದಲ್ಲಿ ಸೆಪ್ಟೆಂಬರ್26 ರಂದು ಮನವಿ ಸಲ್ಲಿಕೆ ಅಭಿಯಾನದಡಿ ಈ ಮನವಿ ನೀಡಲಾಯಿತು.ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ...